ಇಬ್ರಿಯರಿಗೆ 9 : 1 (KNV)
ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.
ಇಬ್ರಿಯರಿಗೆ 9 : 2 (KNV)
ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
ಇಬ್ರಿಯರಿಗೆ 9 : 3 (KNV)
ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
ಇಬ್ರಿಯರಿಗೆ 9 : 4 (KNV)
ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
ಇಬ್ರಿಯರಿಗೆ 9 : 5 (KNV)
ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
ಇಬ್ರಿಯರಿಗೆ 9 : 6 (KNV)
ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು.
ಇಬ್ರಿಯರಿಗೆ 9 : 7 (KNV)
ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
ಇಬ್ರಿಯರಿಗೆ 9 : 8 (KNV)
ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
ಇಬ್ರಿಯರಿಗೆ 9 : 9 (KNV)
ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
ಇಬ್ರಿಯರಿಗೆ 9 : 10 (KNV)
ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
ಇಬ್ರಿಯರಿಗೆ 9 : 11 (KNV)
ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
ಇಬ್ರಿಯರಿಗೆ 9 : 12 (KNV)
ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
ಇಬ್ರಿಯರಿಗೆ 9 : 13 (KNV)
ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
ಇಬ್ರಿಯರಿಗೆ 9 : 14 (KNV)
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
ಇಬ್ರಿಯರಿಗೆ 9 : 15 (KNV)
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ಇಬ್ರಿಯರಿಗೆ 9 : 16 (KNV)
ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.
ಇಬ್ರಿಯರಿಗೆ 9 : 17 (KNV)
ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ.
ಇಬ್ರಿಯರಿಗೆ 9 : 18 (KNV)
ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.
ಇಬ್ರಿಯರಿಗೆ 9 : 19 (KNV)
ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
ಇಬ್ರಿಯರಿಗೆ 9 : 20 (KNV)
ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು.
ಇಬ್ರಿಯರಿಗೆ 9 : 21 (KNV)
ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.
ಇಬ್ರಿಯರಿಗೆ 9 : 22 (KNV)
ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
ಇಬ್ರಿಯರಿಗೆ 9 : 23 (KNV)
ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
ಇಬ್ರಿಯರಿಗೆ 9 : 24 (KNV)
ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
ಇಬ್ರಿಯರಿಗೆ 9 : 25 (KNV)
ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
ಇಬ್ರಿಯರಿಗೆ 9 : 26 (KNV)
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
ಇಬ್ರಿಯರಿಗೆ 9 : 27 (KNV)
ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.
ಇಬ್ರಿಯರಿಗೆ 9 : 28 (KNV)
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
❮
❯