ಯೆಹೋಶುವ 3 : 1 (KNV)
ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
ಯೆಹೋಶುವ 3 : 2 (KNV)
ಮೂರು ದಿವಸಗಳಾದ ಮೇಲೆ ಅಧಿಕಾರಿ ಗಳು ದಂಡಿನೊಳಗೆ ಹಾದು ಹೋಗಿ
ಯೆಹೋಶುವ 3 : 3 (KNV)
ಜನರಿಗೆ ಆಜ್ಞಾಪಿಸಿ--ಯಾಜಕರಾದ ಲೇವಿಯರು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವದನ್ನು ನೋಡುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.
ಯೆಹೋಶುವ 3 : 4 (KNV)
ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು. ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ. ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು.
ಯೆಹೋಶುವ 3 : 5 (KNV)
ಯೆಹೋಶುವನು ಜನರಿಗೆ--ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಾಳೆ ಕರ್ತನು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವನು ಅಂದನು.
ಯೆಹೋಶುವ 3 : 6 (KNV)
ಆಗ ಯೆಹೋಶುವನು ಯಾಜಕರಿಗೆ--ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹಾದುಹೋಗಿರಿ ಅಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋದರು.
ಯೆಹೋಶುವ 3 : 7 (KNV)
ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
ಯೆಹೋಶುವ 3 : 8 (KNV)
ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ--ಯೊರ್ದನಿನ ನೀರಿನ ಅಂಚಿಗೆ ಬಂದಾಗ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು ಅಂದನು.
ಯೆಹೋಶುವ 3 : 9 (KNV)
ಆಗ ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಕರ್ತನ ವಾಕ್ಯಗಳನ್ನು ಕೇಳಿರಿ ಅಂದನು.
ಯೆಹೋಶುವ 3 : 10 (KNV)
ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ
ಯೆಹೋಶುವ 3 : 11 (KNV)
ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು.
ಯೆಹೋಶುವ 3 : 12 (KNV)
ಆದದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ.
ಯೆಹೋಶುವ 3 : 13 (KNV)
ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
ಯೆಹೋಶುವ 3 : 14 (KNV)
ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು.
ಯೆಹೋಶುವ 3 : 15 (KNV)
ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.
ಯೆಹೋಶುವ 3 : 16 (KNV)
ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.
ಯೆಹೋಶುವ 3 : 17 (KNV)
ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.

1 2 3 4 5 6 7 8 9 10 11 12 13 14 15 16 17