ಯೆಹೋಶುವ 4 : 1 (KNV)
ಜನರೆಲ್ಲರು ಯೊರ್ದನನ್ನು ದಾಟಿ ಮುಗಿಸಿದಾಗ ಕರ್ತನು ಯೆಹೋಶುವ ನೊಂದಿಗೆ ಮಾತನಾಡಿ--
ಯೆಹೋಶುವ 4 : 2 (KNV)
ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಾಗಿ ಹನ್ನೆರಡು ಮಂದಿಯನ್ನು ತೆಗೆದು ಕೊಂಡು
ಯೆಹೋಶುವ 4 : 3 (KNV)
ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು.
ಯೆಹೋಶುವ 4 : 4 (KNV)
ಆಗ ಯೆಹೋಶುವನು ಇಸ್ರಾ ಯೇಲ್ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು.
ಯೆಹೋಶುವ 4 : 5 (KNV)
ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.
ಯೆಹೋಶುವ 4 : 6 (KNV)
ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ
ಯೆಹೋಶುವ 4 : 7 (KNV)
ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
ಯೆಹೋಶುವ 4 : 8 (KNV)
ಆಗ ಇಸ್ರಾಯೇಲ್ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು.
ಯೆಹೋಶುವ 4 : 9 (KNV)
ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
ಯೆಹೋಶುವ 4 : 10 (KNV)
ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ ಜನರಿಗೆ ಹೇಳಲು ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ್ದೆಲ್ಲಾ ತೀರುವ ವರೆಗೂ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ನಡುವೆ ನಿಂತರು; ಜನರು ತ್ವರೆಯಾಗಿ ದಾಟಿಹೋದರು.
ಯೆಹೋಶುವ 4 : 11 (KNV)
ಜನರೆಲ್ಲರೂ ದಾಟಿದ ಮೇಲೆ ಕರ್ತನ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.
ಯೆಹೋಶುವ 4 : 12 (KNV)
ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರವೂ ಮೋಶೆಯು ತಮಗೆ ಹೇಳಿದ ಹಾಗೆಯೇ ಯುದ್ಧಸನ್ನದ್ಧರಾಗಿ ಇಸ್ರಾಯೇಲ್ ಮಕ್ಕಳ ಮುಂದೆ ಹಾದುಹೋದರು.
ಯೆಹೋಶುವ 4 : 13 (KNV)
ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಕರ್ತನ ಎದುರಿನಲ್ಲಿ ಯುದ್ಧ ಮಾಡುವದಕ್ಕೆ ಯೆರಿಕೋವಿನ ಬೈಲುಗಳಿಗೆ ಹಾದು ಹೋದರು.
ಯೆಹೋಶುವ 4 : 14 (KNV)
ಆ ದಿನದಲ್ಲಿ ಕರ್ತನು ಯೆಹೋಶುವ ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಭಯಪಟ್ಟ ಹಾಗೆಯೇ ಅವನು ಬದುಕಿದ ದಿನಗಳಲ್ಲೆಲ್ಲಾ ಅವನಿಗೂ ಭಯಪಟ್ಟರು.
ಯೆಹೋಶುವ 4 : 15 (KNV)
ಕರ್ತನು ಯೆಹೋಶುವನ ಸಂಗಡ ಮಾತ ನಾಡಿ --
ಯೆಹೋಶುವ 4 : 16 (KNV)
ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲಕ್ಕೆ ಬರುವದಕ್ಕೆ ಆಜ್ಞಾಪಿಸು ಎಂದು ಹೇಳಿದನು.
ಯೆಹೋಶುವ 4 : 17 (KNV)
ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು.
ಯೆಹೋಶುವ 4 : 18 (KNV)
ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
ಯೆಹೋಶುವ 4 : 19 (KNV)
ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
ಯೆಹೋಶುವ 4 : 20 (KNV)
ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
ಯೆಹೋಶುವ 4 : 21 (KNV)
ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ
ಯೆಹೋಶುವ 4 : 22 (KNV)
ತಿಳಿಸಬೇಕಾದದ್ದೇನಂದರೆ--ಇಸ್ರಾ ಯೇಲ್ಯರು ಒಣಗಿದ ಭೂಮಿಯಲ್ಲಿ ಈ ಯೊರ್ದನನ್ನು ದಾಟಿ ಬಂದರು.
ಯೆಹೋಶುವ 4 : 23 (KNV)
ಭೂಮಿಯ ಜನರೆಲ್ಲಾ ಕರ್ತನ ಹಸ್ತವು ಬಲವುಳ್ಳದ್ದೆಂದು ತಿಳಿಯುವ ಹಾಗೆಯೂ ನೀವು ನಿರಂತರವೂ ನಿಮ್ಮ ಕರ್ತನಾದ ದೇವರಿಗೆ ಭಯಪಡುವ ಹಾಗೆಯೂ
ಯೆಹೋಶುವ 4 : 24 (KNV)
ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24