1 ಯೋಹಾನನು 3 : 1 (KNV)
ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
1 ಯೋಹಾನನು 3 : 2 (KNV)
ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
1 ಯೋಹಾನನು 3 : 3 (KNV)
ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
1 ಯೋಹಾನನು 3 : 4 (KNV)
ಪಾಪಮಾಡುವವನು ನ್ಯಾಯಪ್ರಮಾಣವನ್ನು ವಿಾರುವವನಾಗಿದ್ದಾನೆ; ಯಾಕಂದರೆ ನ್ಯಾಯ ಪ್ರಮಾಣವನ್ನು ವಿಾರುವದೇ ಪಾಪ.
1 ಯೋಹಾನನು 3 : 5 (KNV)
ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
1 ಯೋಹಾನನು 3 : 6 (KNV)
ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ.
1 ಯೋಹಾನನು 3 : 7 (KNV)
ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
1 ಯೋಹಾನನು 3 : 8 (KNV)
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
1 ಯೋಹಾನನು 3 : 9 (KNV)
ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
1 ಯೋಹಾನನು 3 : 10 (KNV)
ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
1 ಯೋಹಾನನು 3 : 11 (KNV)
ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.
1 ಯೋಹಾನನು 3 : 12 (KNV)
ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.
1 ಯೋಹಾನನು 3 : 13 (KNV)
ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.
1 ಯೋಹಾನನು 3 : 14 (KNV)
ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
1 ಯೋಹಾನನು 3 : 15 (KNV)
ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
1 ಯೋಹಾನನು 3 : 16 (KNV)
ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
1 ಯೋಹಾನನು 3 : 17 (KNV)
ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
1 ಯೋಹಾನನು 3 : 18 (KNV)
ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು.
1 ಯೋಹಾನನು 3 : 19 (KNV)
ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
1 ಯೋಹಾನನು 3 : 20 (KNV)
ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
1 ಯೋಹಾನನು 3 : 21 (KNV)
ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.
1 ಯೋಹಾನನು 3 : 22 (KNV)
ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
1 ಯೋಹಾನನು 3 : 23 (KNV)
ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.
1 ಯೋಹಾನನು 3 : 24 (KNV)
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.

1 2 3 4 5 6 7 8 9 10 11 12 13 14 15 16 17 18 19 20 21 22 23 24