1 ಯೋಹಾನನು 5 : 1 (KNV)
ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ.
1 ಯೋಹಾನನು 5 : 2 (KNV)
ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
1 ಯೋಹಾನನು 5 : 3 (KNV)
ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
1 ಯೋಹಾನನು 5 : 4 (KNV)
ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
1 ಯೋಹಾನನು 5 : 5 (KNV)
ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
1 ಯೋಹಾನನು 5 : 6 (KNV)
ಈತನೇ ಅಂದರೆ ಯೇಸು ಕ್ರಿಸ್ತನೇ ನೀರಿನಿಂದಲೂ ರಕ್ತದಿಂದಲೂ ಬಂದಾತನು; ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದನು; ಇದಕ್ಕೆ ಸಾಕ್ಷಿಕೊಡುವಾತನು ಆತ್ಮನೇ; ಯಾಕಂದರೆ ಆತ್ಮನು ಸತ್ಯವಾಗಿದ್ದಾನೆ.
1 ಯೋಹಾನನು 5 : 7 (KNV)
ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.
1 ಯೋಹಾನನು 5 : 8 (KNV)
ಆತ್ಮ ನೀರು ರಕ್ತ ಈ ಮೂವರು ಭೂಮಿಯ ಮೇಲೆ ಸಾಕ್ಷಿ ಹೇಳುತ್ತಾರೆ; ಈ ಮೂವರು ಒಂದೇಯಾಗಿ ಒಪ್ಪಿಕೊಳ್ಳುತ್ತಾರೆ.
1 ಯೋಹಾನನು 5 : 9 (KNV)
ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
1 ಯೋಹಾನನು 5 : 10 (KNV)
ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
1 ಯೋಹಾನನು 5 : 11 (KNV)
ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
1 ಯೋಹಾನನು 5 : 12 (KNV)
ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
1 ಯೋಹಾನನು 5 : 13 (KNV)
ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
1 ಯೋಹಾನನು 5 : 14 (KNV)
ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
1 ಯೋಹಾನನು 5 : 15 (KNV)
ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
1 ಯೋಹಾನನು 5 : 16 (KNV)
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
1 ಯೋಹಾನನು 5 : 17 (KNV)
ಅನೀತಿಯೆಲ್ಲವೂ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.
1 ಯೋಹಾನನು 5 : 18 (KNV)
ದೇವರಿಂದ ಹುಟ್ಟಿರುವವನು ಪಾಪಮಾಡುವವ ನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದ ವನು ತನ್ನನ್ನು ತಾನು ಕಾಪಾಡಿಕೊಳ್ಳುವನು; ಕೆಡುಕನು ಅವನನ್ನು ಮುಟ್ಟುವದಿಲ್ಲ.
1 ಯೋಹಾನನು 5 : 19 (KNV)
ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
1 ಯೋಹಾನನು 5 : 20 (KNV)
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.
1 ಯೋಹಾನನು 5 : 21 (KNV)
ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
❮
❯