ಪ್ರಕಟನೆ 11 : 1 (KNV)
ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು.
ಪ್ರಕಟನೆ 11 : 2 (KNV)
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
ಪ್ರಕಟನೆ 11 : 3 (KNV)
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
ಪ್ರಕಟನೆ 11 : 4 (KNV)
ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.
ಪ್ರಕಟನೆ 11 : 5 (KNV)
ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.
ಪ್ರಕಟನೆ 11 : 6 (KNV)
ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
ಪ್ರಕಟನೆ 11 : 7 (KNV)
ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
ಪ್ರಕಟನೆ 11 : 8 (KNV)
ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್‌ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
ಪ್ರಕಟನೆ 11 : 9 (KNV)
ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.
ಪ್ರಕಟನೆ 11 : 10 (KNV)
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
ಪ್ರಕಟನೆ 11 : 11 (KNV)
ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
ಪ್ರಕಟನೆ 11 : 12 (KNV)
ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
ಪ್ರಕಟನೆ 11 : 13 (KNV)
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
ಪ್ರಕಟನೆ 11 : 14 (KNV)
ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ.
ಪ್ರಕಟನೆ 11 : 15 (KNV)
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ಪ್ರಕಟನೆ 11 : 16 (KNV)
ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು--
ಪ್ರಕಟನೆ 11 : 17 (KNV)
ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
ಪ್ರಕಟನೆ 11 : 18 (KNV)
ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
ಪ್ರಕಟನೆ 11 : 19 (KNV)
ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.

1 2 3 4 5 6 7 8 9 10 11 12 13 14 15 16 17 18 19

BG:

Opacity:

Color:


Size:


Font: