ನ್ಯಾಯಸ್ಥಾಪಕರು 2 : 1 (KNV)
ಕರ್ತನ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು--ನಾನು ನಿಮ್ಮನ್ನು ಐಗುಪ್ತ ದಿಂದ ಬರಮಾಡಿ ನಿಮ್ಮ ತಂದೆಗಳಿಗೆ ಆಣೆಯಿಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
ನ್ಯಾಯಸ್ಥಾಪಕರು 2 : 2 (KNV)
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
ನ್ಯಾಯಸ್ಥಾಪಕರು 2 : 3 (KNV)
ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
ನ್ಯಾಯಸ್ಥಾಪಕರು 2 : 4 (KNV)
ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
ನ್ಯಾಯಸ್ಥಾಪಕರು 2 : 5 (KNV)
ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
ನ್ಯಾಯಸ್ಥಾಪಕರು 2 : 6 (KNV)
ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ ಇಸ್ರಾಯೇಲ್ ಮಕ್ಕಳು ದೇಶವನ್ನು ಸ್ವಾಧೀನಮಾಡಿ ಕೊಳ್ಳುವದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.
ನ್ಯಾಯಸ್ಥಾಪಕರು 2 : 7 (KNV)
ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
ನ್ಯಾಯಸ್ಥಾಪಕರು 2 : 8 (KNV)
ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.
ನ್ಯಾಯಸ್ಥಾಪಕರು 2 : 9 (KNV)
ಅವನನ್ನು ಎಫ್ರಾಯಾಮಿನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ಹೆರೆಸ್ನಲ್ಲಿ ಹೂಣಿಟ್ಟರು.
ನ್ಯಾಯಸ್ಥಾಪಕರು 2 : 10 (KNV)
ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
ನ್ಯಾಯಸ್ಥಾಪಕರು 2 : 11 (KNV)
ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
ನ್ಯಾಯಸ್ಥಾಪಕರು 2 : 12 (KNV)
ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
ನ್ಯಾಯಸ್ಥಾಪಕರು 2 : 13 (KNV)
ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
ನ್ಯಾಯಸ್ಥಾಪಕರು 2 : 14 (KNV)
ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
ನ್ಯಾಯಸ್ಥಾಪಕರು 2 : 15 (KNV)
ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.
ನ್ಯಾಯಸ್ಥಾಪಕರು 2 : 16 (KNV)
ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
ನ್ಯಾಯಸ್ಥಾಪಕರು 2 : 17 (KNV)
ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.
ನ್ಯಾಯಸ್ಥಾಪಕರು 2 : 18 (KNV)
ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
ನ್ಯಾಯಸ್ಥಾಪಕರು 2 : 19 (KNV)
ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.
ನ್ಯಾಯಸ್ಥಾಪಕರು 2 : 20 (KNV)
ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
ನ್ಯಾಯಸ್ಥಾಪಕರು 2 : 21 (KNV)
ತಮ್ಮ ತಂದೆಗಳು ಕೈಕೊಂಡು ನಡೆದ ಕರ್ತನ ಮಾರ್ಗದಲ್ಲಿ ತಾವು ಕೈಕೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ
ನ್ಯಾಯಸ್ಥಾಪಕರು 2 : 22 (KNV)
ನಾನು ಸಹ ಇನ್ನು ಮೇಲೆ ಯೆಹೋಶುವನು ಸಾಯುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿ ಬಿಡುವದಿಲ್ಲ ಅಂದನು.
ನ್ಯಾಯಸ್ಥಾಪಕರು 2 : 23 (KNV)
ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23