1 ಸಮುವೇಲನು 15 : 1 (KNV)
ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.
1 ಸಮುವೇಲನು 15 : 2 (KNV)
ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ.
1 ಸಮುವೇಲನು 15 : 3 (KNV)
ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
1 ಸಮುವೇಲನು 15 : 4 (KNV)
ಆಗ ಸೌಲನು ತೆಲಾಯಾಮಿನಲ್ಲಿ ಜನರನ್ನು ಕೂಡಿಸಿ ಲೆಕ್ಕ ಮಾಡಿದನು. ಇಸ್ರಾಯೇಲ್ಯರ ಕಾಲ್ಬಲವು ಎರಡು ಲಕ್ಷ ಜನವೂ ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.
1 ಸಮುವೇಲನು 15 : 5 (KNV)
ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು.
1 ಸಮುವೇಲನು 15 : 6 (KNV)
ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
1 ಸಮುವೇಲನು 15 : 7 (KNV)
ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
1 ಸಮುವೇಲನು 15 : 8 (KNV)
ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
1 ಸಮುವೇಲನು 15 : 9 (KNV)
ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
1 ಸಮುವೇಲನು 15 : 10 (KNV)
ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ.
1 ಸಮುವೇಲನು 15 : 11 (KNV)
ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
1 ಸಮುವೇಲನು 15 : 12 (KNV)
ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು.
1 ಸಮುವೇಲನು 15 : 13 (KNV)
ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು.
1 ಸಮುವೇಲನು 15 : 14 (KNV)
ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು.
1 ಸಮುವೇಲನು 15 : 15 (KNV)
ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು.
1 ಸಮುವೇಲನು 15 : 16 (KNV)
ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
1 ಸಮುವೇಲನು 15 : 17 (KNV)
ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
1 ಸಮುವೇಲನು 15 : 18 (KNV)
ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು.
1 ಸಮುವೇಲನು 15 : 19 (KNV)
ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
1 ಸಮುವೇಲನು 15 : 20 (KNV)
ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.
1 ಸಮುವೇಲನು 15 : 21 (KNV)
ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.
1 ಸಮುವೇಲನು 15 : 22 (KNV)
ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
1 ಸಮುವೇಲನು 15 : 23 (KNV)
ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
1 ಸಮುವೇಲನು 15 : 24 (KNV)
ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
1 ಸಮುವೇಲನು 15 : 25 (KNV)
ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.
1 ಸಮುವೇಲನು 15 : 26 (KNV)
ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.
1 ಸಮುವೇಲನು 15 : 27 (KNV)
ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.
1 ಸಮುವೇಲನು 15 : 28 (KNV)
ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
1 ಸಮುವೇಲನು 15 : 29 (KNV)
ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
1 ಸಮುವೇಲನು 15 : 30 (KNV)
ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು.
1 ಸಮುವೇಲನು 15 : 31 (KNV)
ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು.
1 ಸಮುವೇಲನು 15 : 32 (KNV)
ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು.
1 ಸಮುವೇಲನು 15 : 33 (KNV)
ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು.
1 ಸಮುವೇಲನು 15 : 34 (KNV)
ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.
1 ಸಮುವೇಲನು 15 : 35 (KNV)
ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35