1 ಸಮುವೇಲನು 16 : 1 (KNV)
ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
1 ಸಮುವೇಲನು 16 : 2 (KNV)
ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.
1 ಸಮುವೇಲನು 16 : 3 (KNV)
ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
1 ಸಮುವೇಲನು 16 : 4 (KNV)
ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.
1 ಸಮುವೇಲನು 16 : 5 (KNV)
ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
1 ಸಮುವೇಲನು 16 : 6 (KNV)
ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.
1 ಸಮುವೇಲನು 16 : 7 (KNV)
ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
1 ಸಮುವೇಲನು 16 : 8 (KNV)
ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
1 ಸಮುವೇಲನು 16 : 9 (KNV)
ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
1 ಸಮುವೇಲನು 16 : 10 (KNV)
ಅನಂತರ ಇಷಯನು ತನ್ನ ಏಳುಮಂದಿ ಕುಮಾರರನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಸಮುವೇಲನು ಇಷಯ ನಿಗೆ--ಕರ್ತನು ಇವರಲ್ಲಿ ಒಬ್ಬನನ್ನಾದರೂ ಆದುಕೊಳ್ಳ ಲಿಲ್ಲ ಅಂದನು.
1 ಸಮುವೇಲನು 16 : 11 (KNV)
ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು.
1 ಸಮುವೇಲನು 16 : 12 (KNV)
ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
1 ಸಮುವೇಲನು 16 : 13 (KNV)
ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
1 ಸಮುವೇಲನು 16 : 14 (KNV)
ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು;
1 ಸಮುವೇಲನು 16 : 15 (KNV)
ಕರ್ತನಿಂದ ಬಂದ ದುರಾತ್ಮವು ಅವ ನನ್ನು ಪೀಡಿಸಿತು. ಆಗ ಸೌಲನ ಸೇವಕರು ಅವ ನಿಗೆ--ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಬಾಧಿಸುತ್ತದೆ;
1 ಸಮುವೇಲನು 16 : 16 (KNV)
ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು.
1 ಸಮುವೇಲನು 16 : 17 (KNV)
ಸೌಲನು ತನ್ನ ಸೇವಕರಿಗೆ--ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬ ನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರಕೊಂಡು ಬನ್ನಿರಿ ಅಂದನು.
1 ಸಮುವೇಲನು 16 : 18 (KNV)
ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
1 ಸಮುವೇಲನು 16 : 19 (KNV)
ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು.
1 ಸಮುವೇಲನು 16 : 20 (KNV)
ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.
1 ಸಮುವೇಲನು 16 : 21 (KNV)
ಹಾಗೆಯೇ ಅವನು ಸೌಲನ ಬಳಿಗೆ ಬಂದು ಅವನ ಮುಂದೆ ನಿಂತನು. ಅವನು ದಾವೀದನನ್ನು ಬಹಳವಾಗಿ ಪ್ರೀತಿಮಾಡಿದನು. ಸೌಲನಿಗೆ ಇವನು ಆಯುಧ ಹೊರುವವನಾದನು.
1 ಸಮುವೇಲನು 16 : 22 (KNV)
ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ--ದಾವೀದನು ನನ್ನ ಸಮ್ಮುಖ ದಲ್ಲಿ ನಿಲ್ಲುವ ಹಾಗೆ ಕೇಳಿಕೊಳ್ಳುತ್ತೇನೆ; ಯಾಕಂದರೆ ನನ್ನ ಸಮ್ಮುಖದಲ್ಲಿ ಅವನಿಗೆ ದಯೆದೊರಕಿತು ಅಂದನು.
1 ಸಮುವೇಲನು 16 : 23 (KNV)
ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ತೆಗೆದು ಕೊಂಡು ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವದು.

1 2 3 4 5 6 7 8 9 10 11 12 13 14 15 16 17 18 19 20 21 22 23