1 ಸಮುವೇಲನು 20 : 1 (KNV)
ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು ಅವನ ಮುಂದೆ--ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣ ವನ್ನು ತೆಗೆಯುವ ಹಾಗೆ ನಾನು ಅವನಿಗೆ ಮಾಡಿದ ಪಾಪವೇನು ಅಂದನು.
1 ಸಮುವೇಲನು 20 : 2 (KNV)
ಅವನು ಇವನಿಗೆ--ಅದು ಆಗಬಾರದು; ನೀನು ಸಾಯುವದಿಲ್ಲ; ಇಗೋ, ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ ದೊಡ್ಡ ಕಾರ್ಯವನ್ನಾದರೂ ಮಾಡುವದಿಲ್ಲ. ಈ ಕಾರ್ಯವನ್ನು ಯಾಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು ಅಂದನು.
1 ಸಮುವೇಲನು 20 : 3 (KNV)
ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
1 ಸಮುವೇಲನು 20 : 4 (KNV)
ಆಗ ಯೋನಾತಾನನು ದಾವೀದನಿಗೆ--ನಿನ್ನ ಪ್ರಾಣವು ಆಶಿಸುವದನ್ನು ನಿನ ಗೋಸ್ಕರ ನಾನು ಮಾಡುವೆನು ಅಂದನು.
1 ಸಮುವೇಲನು 20 : 5 (KNV)
ದಾವೀ ದನು ಯೋನಾತಾನನಿಗೆ--ಇಗೋ, ನಾಳೆ ಅಮಾ ವಾಸ್ಯೆ; ಆದದರಿಂದ ನಾನು ಅರಸನ ಸಂಗಡ ಪಂಕ್ತಿ ಯಲ್ಲಿ ಊಟ ಮಾಡಲೇಬೇಕಾಗಿರುವದು. ನಾನು ಮೂರನೇ ದಿವಸದ ಸಾಯಂಕಾಲದ ವರೆಗೆ ಹೊಲ ದಲ್ಲಿ ಬಚ್ಚಿಟ್ಟುಕೊಂಡಿರಲು ನನ್ನನ್ನು ಹೋಗಗೊಡಿಸು.
1 ಸಮುವೇಲನು 20 : 6 (KNV)
ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವದನ್ನು ನೋಡಿ ಶ್ರದ್ಧೆಯಿಂದ ವಿಚಾರಿಸಿ--ಅವನು ಎಲ್ಲಿ ಎಂದು ಕೇಳಿದರೆ--ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವದಕ್ಕೆ ನನ್ನನ್ನು ಬಹಳವಾಗಿ ಬೇಡಿಕೊಂಡನು; ತನ್ನ ಎಲ್ಲಾ ಕುಟುಂಬಕ್ಕೋಸ್ಕರ ವರುಷದ ಯಜ್ಞಮಾಡುತ್ತಾರೆ ಎಂದು ಹೇಳು.
1 ಸಮುವೇಲನು 20 : 7 (KNV)
ಅದಕ್ಕೆ ಅವನು --ಒಳ್ಳೇದೆಂದು ಹೇಳಿದರೆ ನಿನ್ನ ಸೇವಕನಿಗೆ ಸಮಾಧಾನ ವಾಗಿರುವದು; ಅವನು ಬಹಳ ಕೋಪಮಾಡಿದರೆ ಅವನಿಂದ ಕೇಡು ಸ್ಥಿರಮಾಡಲ್ಪಟ್ಟಿತೆಂದು ತಿಳುಕೋ.
1 ಸಮುವೇಲನು 20 : 8 (KNV)
ಆದದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು; ಯಾಕಂದರೆ ಕರ್ತನ ಒಡಂಬಡಿಕೆ ಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀ ಯಲ್ಲಾ. ಆದಾಗ್ಯೂ ನನ್ನಲ್ಲಿ ಅಕ್ರಮವಿದ್ದರೆ ನೀನೇ ನನ್ನನ್ನು ಕೊಂದುಹಾಕು; ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವದು ಯಾಕೆ ಅಂದನು.
1 ಸಮುವೇಲನು 20 : 9 (KNV)
ಯೋನಾತಾನನು--ಅದು ನಿನಗೆ ದೂರವಾಗಿರಲಿ; ಯಾಕಂದರೆ ಕೇಡು ನಿನ್ನ ಮೇಲೆ ಬರುವಂತೆ ನನ್ನ ತಂದೆಯಿಂದ ನಿಷ್ಕರ್ಷೆ ಮಾಡಲ್ಪಟ್ಟಿತೆಂದು ನಿಜವಾಗಿ ತಿಳಿದಿದ್ದರೆ ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ ಅಂದನು.
1 ಸಮುವೇಲನು 20 : 10 (KNV)
ದಾವೀದನು ಯೋನಾತಾನನಿಗೆ--ನಿನ್ನ ತಂದೆಯು ನಿನಗೆ ಕಠಿಣವಾದ ಪ್ರತ್ಯುತ್ತರ ಹೇಳಿದರೆ ಅದನ್ನು ನನಗೆ ತಿಳಿಸುವವನು ಯಾರು ಅಂದನು.
1 ಸಮುವೇಲನು 20 : 11 (KNV)
ಯೋನಾತಾನನು ದಾವೀದನಿಗೆ--ನಾವು ಹೊಲಕ್ಕೆ ಹೋಗೋಣ ಬಾ ಅಂದನು. ಹಾಗೆಯೇ ಅವರಿಬ್ಬರು ಹೊಲಕ್ಕೆ ಹೊರಟುಹೋದರು.
1 ಸಮುವೇಲನು 20 : 12 (KNV)
ಯೋನಾತಾನನು ದಾವೀದನಿಗೆ--ಇಸ್ರಾಯೇ ಲ್ಯರ ದೇವರಾದ ಕರ್ತನೇ, ನಾನು ನಾಳೆನಾಡಿದ್ದರೊ ಳಗೆ ನನ್ನ ತಂದೆಯನ್ನು ವಿಚಾರಿಸಲು ಇಗೋ, ದಾವೀದನ ಮೇಲೆ ದಯವಾದರೆ ನಿನಗೆ ತಿಳಿಸುವ ಹಾಗೆ ಹೇಳಿ ಕಳುಹಿಸದೆ ಇದ್ದರೆ ಕರ್ತನು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.
1 ಸಮುವೇಲನು 20 : 13 (KNV)
ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.
1 ಸಮುವೇಲನು 20 : 14 (KNV)
ಕರ್ತನು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ. ಆದರೆ ನಾನು ಇನ್ನೂ ಬದುಕು ತ್ತಿರುವಾಗ ನಾನು ಸಾಯದ ಹಾಗೆ ನೀನು ಕರ್ತನ ದಯೆಯನ್ನು ನನ್ನ ಮೇಲೆ ತೋರಿಸಬೇಕಾದದ್ದಲ್ಲದೆ
1 ಸಮುವೇಲನು 20 : 15 (KNV)
ಕರ್ತನು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ ಎಂದಿಗೂ ನಿನ್ನ ಕೃಪೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು ಅಂದನು.
1 ಸಮುವೇಲನು 20 : 16 (KNV)
ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು.
1 ಸಮುವೇಲನು 20 : 17 (KNV)
ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
1 ಸಮುವೇಲನು 20 : 18 (KNV)
ಯೋನಾತಾನನು ದಾವೀದನಿಗೆ--ನಾಳೆ ಅಮಾ ವಾಸ್ಯೆ; ನೀನು ಅಲ್ಲಿ ಇಲ್ಲದಿರುವದರಿಂದ ನಿನ್ನ ಸ್ಥಳವು ಬರಿದಾಗಿರುವದು.
1 ಸಮುವೇಲನು 20 : 19 (KNV)
ನೀನು ಮೂರು ದಿವಸ ತಡೆದ ತರುವಾಯ ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರಿಗಿ ಬಂದು ಏಜಲ್‌ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು.
1 ಸಮುವೇಲನು 20 : 20 (KNV)
ಆಗ ನಾನು ಗುರಿ ಇಟ್ಟವನ ಹಾಗೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆಯುವೆನು.
1 ಸಮುವೇಲನು 20 : 21 (KNV)
ಇಗೋ, ಹುಡುಗ ನನ್ನು ಕಳುಹಿಸಿ--ಆ ಬಾಣಗಳನ್ನು ಹುಡುಕಿಕೊಂಡು ಬಾ ಎಂದು ಹೇಳುವೆನು. ಇಗೋ, ಆ ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ ಎಂದು ನಾನು ಹುಡುಗನಿಗೆ ಹೇಳಿದರೆ ನೀನು ಬರ ಬಹುದು. ಯಾಕಂದರೆ ಕರ್ತನಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವದು.
1 ಸಮುವೇಲನು 20 : 22 (KNV)
ಆದರೆ--ಇಗೋ, ಬಾಣ ಗಳು ಆಚೆ ಬಿದ್ದಿರುತ್ತವೆ ಎಂದು ಹುಡುಗನಿಗೆ ಹೇಳಿದರೆ ಹೊರಟುಹೋಗು; ಯಾಕಂದರೆ ಕರ್ತನು ನಿನ್ನನ್ನು ಕಳುಹಿಸಿದನು.
1 ಸಮುವೇಲನು 20 : 23 (KNV)
ನಾನೂ ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಇಗೋ, ಕರ್ತನು ನನಗೂ ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿ ಇರುವನು ಅಂದನು.
1 ಸಮುವೇಲನು 20 : 24 (KNV)
ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟು ಕೊಂಡಿದ್ದನು. ಅಮಾವಾಸ್ಯೆ ಆದಾಗ ಅರಸನು ಭೋಜನವನ್ನು ಮಾಡಲು ಕುಳಿತನು.
1 ಸಮುವೇಲನು 20 : 25 (KNV)
ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.
1 ಸಮುವೇಲನು 20 : 26 (KNV)
ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು.
1 ಸಮುವೇಲನು 20 : 27 (KNV)
ಅಮಾವಾ ಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡ್ರುವ ಸ್ಥಳವು ಹಾಗೆಯೇ ಬರಿದಾಗಿತ್ತು; ಆದದರಿಂದ ಸೌಲನುಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಕುಮಾರನಾದ ಯೋನಾ ತಾನನನ್ನು ಕೇಳಿದನು.
1 ಸಮುವೇಲನು 20 : 28 (KNV)
ಯೋನಾತಾನನು ಸೌಲನಿಗೆ ಪ್ರತ್ಯುತ್ತರವಾಗಿ--ಬೇತ್ಲೆಹೇಮಿನ ವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿ ಕೊಂಡನು.
1 ಸಮುವೇಲನು 20 : 29 (KNV)
ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು.
1 ಸಮುವೇಲನು 20 : 30 (KNV)
ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?
1 ಸಮುವೇಲನು 20 : 31 (KNV)
ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.
1 ಸಮುವೇಲನು 20 : 32 (KNV)
ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.
1 ಸಮುವೇಲನು 20 : 33 (KNV)
ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
1 ಸಮುವೇಲನು 20 : 34 (KNV)
ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.
1 ಸಮುವೇಲನು 20 : 35 (KNV)
ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ
1 ಸಮುವೇಲನು 20 : 36 (KNV)
ಹುಡುಗನಿಗೆ--ನೀನು ಓಡಿಹೋಗಿ ನಾನು ಹಾಕುವ ಬಾಣ ಗಳನ್ನು ಹುಡುಕಿಕೊಂಡು ಬಾ ಎಂದು ಹೇಳಿ, ಆ ಹುಡುಗನು ಓಡುವಾಗ ಅವನಿಗೆ ಆಚೆ ಹೋಗುವ ಹಾಗೆ ಬಾಣವನ್ನು ಎಸೆದನು.
1 ಸಮುವೇಲನು 20 : 37 (KNV)
ಯೋನಾತಾನನು ಹಾಕಿದ ಬಾಣಬಿದ್ದ ಸ್ಥಳದ ವರೆಗೆ ಹುಡುಗನು ಹೋದಾಗ--ಬಾಣವು ನಿನಗೆ ಆಚೆ ಇಲ್ಲವೋ ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು.
1 ಸಮುವೇಲನು 20 : 38 (KNV)
ನೀನು ಆಲಸ್ಯವಿಲ್ಲದೆ ತ್ವರೆಯಾಗಿ ಹೋಗು ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು ತನ್ನ ಯಜಮಾನನ ಬಳಿಗೆ ಬಂದನು.
1 ಸಮುವೇಲನು 20 : 39 (KNV)
ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ ದಾವೀದನೂ ಮಾತ್ರ ಆ ಸಂಗತಿ ಯನ್ನು ತಿಳುಕೊಂಡಿದ್ದರು.
1 ಸಮುವೇಲನು 20 : 40 (KNV)
ಆಗ ಯೋನಾತಾನನು ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ--ಅವುಗಳನ್ನು ಪಟ್ಟಣ ದೊಳಕ್ಕೆ ತೆಗೆದುಕೊಂಡು ಹೋಗು ಅಂದನು.
1 ಸಮುವೇಲನು 20 : 41 (KNV)
ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
1 ಸಮುವೇಲನು 20 : 42 (KNV)
ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42

BG:

Opacity:

Color:


Size:


Font: