1 ಸಮುವೇಲನು 26 : 1 (KNV)
ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು--ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ ಅಂದರು.
1 ಸಮುವೇಲನು 26 : 2 (KNV)
ಆಗ ಸೌಲನು ಎದ್ದು ಜೀಫ್‌ ಅರಣ್ಯ ದಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿ ನಲ್ಲಿ ಆಯಲ್ಪಟ್ಟ ಮೂರು ಸಾವಿರ ಜನರ ಸಂಗಡ ಜೀಫ್‌ ಅರಣ್ಯಕ್ಕೆ ಹೋಗಿ ಯೆಷಿಮೋನಿಗೆ ಎದುರಾಗಿ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿದನು.
1 ಸಮುವೇಲನು 26 : 3 (KNV)
ಆದರೆ ಸೌಲನು ತನ್ನನ್ನು ಹಿಂದಟ್ಟಿ ಅರಣ್ಯಕ್ಕೆ ಬಂದ ದ್ದನ್ನು ನೋಡಿ ದಾವೀದನು ಅರಣ್ಯದಲ್ಲಿ ನಿಂತನು.
1 ಸಮುವೇಲನು 26 : 4 (KNV)
ದಾವೀದನು ಗೂಢಾಚಾರರನ್ನು ಕಳುಹಿಸಿ ಸೌಲನು ಬಂದದ್ದು ನಿಶ್ಚಯವೆಂದು ತಿಳುಕೊಂಡನು.
1 ಸಮುವೇಲನು 26 : 5 (KNV)
ದಾವೀ ದನು ಎದ್ದು ಸೌಲನು ಇಳುಕೊಂಡಿದ್ದ ಸ್ಥಳಕ್ಕೆ ಬಂದನು; ಸೌಲನೂ ಅವನ ದಂಡಿನ ನಾಯಕನಾಗಿ ರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಆದರೆ ಸೌಲನು ಮಧ್ಯದಲ್ಲಿ ಮಲಗಿದ್ದನು; ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.
1 ಸಮುವೇಲನು 26 : 6 (KNV)
ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
1 ಸಮುವೇಲನು 26 : 7 (KNV)
ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು.
1 ಸಮುವೇಲನು 26 : 8 (KNV)
ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
1 ಸಮುವೇಲನು 26 : 9 (KNV)
ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
1 ಸಮುವೇಲನು 26 : 10 (KNV)
ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
1 ಸಮುವೇಲನು 26 : 11 (KNV)
ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
1 ಸಮುವೇಲನು 26 : 12 (KNV)
ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.
1 ಸಮುವೇಲನು 26 : 13 (KNV)
ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಇರುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು ಜನರಿಗೂ ನೇರನ ಮಗನಾದ ಅಬ್ನೇರನಿಗೂ ಎದು ರಾಗಿ ಕೂಗಿ ಹೇಳಿದ್ದೇನಂದರೆ--
1 ಸಮುವೇಲನು 26 : 14 (KNV)
ಅಬ್ನೇರನೇ, ನೀನು ಪ್ರತ್ಯುತ್ತರ ಕೊಡುವದಿಲ್ಲವೋ ಅಂದನು. ಅದಕ್ಕೆ ಅಬ್ನೇರನು ಪ್ರತ್ಯುತ್ತರವಾಗಿ--ಅರಸನಿಗೆ ಎದುರಾಗಿ ಕೂಗುವ ನೀನು ಯಾರು ಅಂದನು.
1 ಸಮುವೇಲನು 26 : 15 (KNV)
ಆಗ ದಾವೀ ದನು ಅಬ್ನೇರನಿಗೆ ಹೇಳಿದ್ದೇನಂದರೆ -- ನೀನು ಪರಾಕ್ರಮಶಾಲಿ ಅಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಯಾಕಂದರೆ ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವದಕ್ಕೆ ಬಂದಿದ್ದನು.
1 ಸಮುವೇಲನು 26 : 16 (KNV)
ನೀನು ಮಾಡಿದ ಈ ಕಾರ್ಯ ಒಳ್ಳೇದಲ್ಲ. ಕರ್ತನ ಜೀವ ದಾಣೆ--ಕರ್ತನ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದರಿಂದ ಮರಣಕ್ಕೆ ನೀವು ಪಾತ್ರರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು ಅಂದನು.
1 ಸಮುವೇಲನು 26 : 17 (KNV)
ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.
1 ಸಮುವೇಲನು 26 : 18 (KNV)
ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
1 ಸಮುವೇಲನು 26 : 19 (KNV)
ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
1 ಸಮುವೇಲನು 26 : 20 (KNV)
ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
1 ಸಮುವೇಲನು 26 : 21 (KNV)
ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
1 ಸಮುವೇಲನು 26 : 22 (KNV)
ದಾವೀದನು ಪ್ರತ್ಯುತ್ತರ ವಾಗಿ--ಇಗೋ, ಅರಸನ ಈಟಿಯು ಇಲ್ಲಿ ಅದೆ. ಪ್ರಾಯದವರಲ್ಲಿ ಒಬ್ಬನು ಈ ಕಡೆಗೆ ಬಂದು ಅದನ್ನು ತಕ್ಕೊಂಡು ಹೋಗಲಿ.
1 ಸಮುವೇಲನು 26 : 23 (KNV)
ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.
1 ಸಮುವೇಲನು 26 : 24 (KNV)
ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
1 ಸಮುವೇಲನು 26 : 25 (KNV)
ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: