1 ಸಮುವೇಲನು 8 : 1 (KNV)
ಸಮುವೇಲನು ವೃದ್ಧನಾದಾಗ ಆಗಿದ್ದೇನಂದರೆ ತನ್ನ ಕುಮಾರರನ್ನು ಇಸ್ರಾ ಯೇಲಿಗೆ ನ್ಯಾಯಾಧಿಪತಿಗಳಾಗಿರುವದಕ್ಕೆ ಇಟ್ಟನು.
1 ಸಮುವೇಲನು 8 : 2 (KNV)
ಅವನ ಚೊಚ್ಚಲ ಮಗನ ಹೆಸರು ಯೋವೇಲ್‌, ಎರಡನೇ ಮಗನ ಹೆಸರು ಅಬೀಯ; ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.
1 ಸಮುವೇಲನು 8 : 3 (KNV)
ಆದರೆ ಅವನ ಮಕ್ಕಳು ಅವನ ಮಾರ್ಗದಲ್ಲಿ ನಡೆಯದೆ ಲೋಭಕ್ಕಾಗಿ ಮಾರ್ಗತಪ್ಪಿ ಲಂಚವನ್ನು ತಕ್ಕೊಂಡು ನ್ಯಾಯವನ್ನು ತಪ್ಪಿಸಿದರು.
1 ಸಮುವೇಲನು 8 : 4 (KNV)
ಆಗ ಇಸ್ರಾಯೇಲ್‌ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿರುವ ಸಮುವೇಲನ ಬಳಿಗೆ ಬಂದು
1 ಸಮುವೇಲನು 8 : 5 (KNV)
ಅವನಿಗೆ-- ಇಗೋ, ನೀನು ವೃದ್ಧನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವದಿಲ್ಲ. ಈಗ ನ್ಯಾಯತೀರಿಸು ವದಕ್ಕೆ ಸಮಸ್ತ ಜನಾಂಗಗಳ ಹಾಗೆ ನಮಗೆ ಒಬ್ಬ ಅರಸನನ್ನು ನೇಮಿಸು ಅಂದರು.
1 ಸಮುವೇಲನು 8 : 6 (KNV)
ಆದರೆ--ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು ಎಂದು ಅವರು ಹೇಳಿದ ವಾರ್ತೆಯು ಸಮುವೇಲನಿಗೆ ಮನ ನೋಯಿಸುವಂತದ್ದಾಗಿತ್ತು. ಅವನು ಕರ್ತನಿಗೆ ಪ್ರಾರ್ಥನೆ ಮಾಡಿದನು.
1 ಸಮುವೇಲನು 8 : 7 (KNV)
ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
1 ಸಮುವೇಲನು 8 : 8 (KNV)
ನಾನು ಅವರನ್ನು ಐಗುಪ್ತದಿಂದ ಬರ ಮಾಡಿದ ದಿನ ಮೊದಲುಗೊಂಡು ಈ ದಿನದ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿ ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡು ತ್ತಾರೆ.
1 ಸಮುವೇಲನು 8 : 9 (KNV)
ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.
1 ಸಮುವೇಲನು 8 : 10 (KNV)
ಆಗ ಸಮುವೇಲನು ಅರಸನನ್ನು ಕೇಳಿದ ಜನ ರಿಗೆ ಕರ್ತನ ವಾಕ್ಯಗಳನ್ನೆಲ್ಲಾ ಹೇಳಿದನು.
1 ಸಮುವೇಲನು 8 : 11 (KNV)
ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
1 ಸಮುವೇಲನು 8 : 12 (KNV)
ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು.
1 ಸಮುವೇಲನು 8 : 13 (KNV)
ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು.
1 ಸಮುವೇಲನು 8 : 14 (KNV)
ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು.
1 ಸಮುವೇಲನು 8 : 15 (KNV)
ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು.
1 ಸಮುವೇಲನು 8 : 16 (KNV)
ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು.
1 ಸಮುವೇಲನು 8 : 17 (KNV)
ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ.
1 ಸಮುವೇಲನು 8 : 18 (KNV)
ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
1 ಸಮುವೇಲನು 8 : 19 (KNV)
ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರು--ಹಾಗಲ್ಲ; ನಮ್ಮ ಮೇಲೆ ಅರಸನು ಇರಬೇಕು; ನಾವು ಸಕಲ ಜನಾಂಗಗಳ ಹಾಗೆ ಇರಬೇಕು;
1 ಸಮುವೇಲನು 8 : 20 (KNV)
ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು.
1 ಸಮುವೇಲನು 8 : 21 (KNV)
ಸಮುವೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಕರ್ತನಿಗೆ ಹೇಳಿದನು.ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್‌ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.
1 ಸಮುವೇಲನು 8 : 22 (KNV)
ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್‌ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: