1 ಪೂರ್ವಕಾಲವೃತ್ತಾ 15 : 1 (ERVKN)
ಜೆರುಸಲೇಮಿನಲ್ಲಿ ಒಡಂಬಡಿಕೆಯ ಮಂಜೂಷ ದಾವೀದನಗರದಲ್ಲಿ ದಾವೀದನು ತನಗಾಗಿ ಮನೆಗಳನ್ನು ಕಟ್ಟಿಸಿದನು. ಆಮೇಲೆ ಅವನು ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಲು ಒಂದು ಸ್ಥಳವನ್ನು ಏರ್ಪಡಿಸಿ ಗುಡಾರವನ್ನು ನಿರ್ಮಿಸಿದನು.
1 ಪೂರ್ವಕಾಲವೃತ್ತಾ 15 : 2 (ERVKN)
“ಲೇವಿಯರು ಮಾತ್ರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬರಬೇಕು. ಯೆಹೋವನು ಅವರನ್ನೇ ತನ್ನ ನಿರಂತರವಾದ ಸೇವೆಗಾಗಿ ನೇಮಿಸಿದ್ದಾನೆ” ಎಂದು ದಾವೀದನು ಹೇಳಿದನು.
1 ಪೂರ್ವಕಾಲವೃತ್ತಾ 15 : 3 (ERVKN)
ಎಲ್ಲಾ ಇಸ್ರೇಲರು ಜೆರುಸಲೇಮಿಗೆ ಬರಬೇಕೆಂದು ದಾವೀದನು ಪ್ರಕಟಿಸಿದನು. ಲೇವಿಯರು ಒಡಬಂಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ದಾವೀದನು ಸಿದ್ಧಪಡಿಸಿದ್ದ ಸ್ಥಳಕ್ಕೆ ತಂದರು.
1 ಪೂರ್ವಕಾಲವೃತ್ತಾ 15 : 4 (ERVKN)
ದಾವೀದನು ಆರೋನನ ಸಂತತಿಯವರನ್ನೂ ಲೇವಿಯರನ್ನೂ ಕರೆದನು.
1 ಪೂರ್ವಕಾಲವೃತ್ತಾ 15 : 5 (ERVKN)
ಕೆಹಾತ್ಯನ ಕುಲದವರಲ್ಲಿ ನೂರಿಪ್ಪತ್ತು ಮಂದಿ; ಊರಿಯೇಲ್ ಇವರ ಮುಖ್ಯಸ್ಥನು.
1 ಪೂರ್ವಕಾಲವೃತ್ತಾ 15 : 6 (ERVKN)
ಮೆರಾರೀಯ ಕುಲದವರಲ್ಲಿ ಇನ್ನೂರಿಪ್ಪತ್ತು ಮಂದಿ; ಇವರ ಮುಖ್ಯಸ್ಥನು ಅಸಾಯನು.
1 ಪೂರ್ವಕಾಲವೃತ್ತಾ 15 : 7 (ERVKN)
ಗೇರ್ಷೋಮನ ಕುಲದವರಲ್ಲಿ ನೂರಮೂವತ್ತು ಮಂದಿ; ಅವರ ನಾಯಕನು ಯೋವೇಲ್.
1 ಪೂರ್ವಕಾಲವೃತ್ತಾ 15 : 8 (ERVKN)
ಎಲೀಚಾಫಾನನ ಕುಲದವರಲ್ಲಿ ಇನ್ನೂರು ಮಂದಿ; ಅವರ ನಾಯಕನು ಶೆಮಾಯ.
1 ಪೂರ್ವಕಾಲವೃತ್ತಾ 15 : 9 (ERVKN)
ಹೆಬ್ರೋನಿನ ಕುಲದವರಲ್ಲಿ ಎಂಭತ್ತು ಮಂದಿ; ಎಲೀಯೇಲನು ಅವರ ನಾಯಕನು.
1 ಪೂರ್ವಕಾಲವೃತ್ತಾ 15 : 10 (ERVKN)
ಉಜ್ಜೀಯೇಲನ ಕುಲದವರಲ್ಲಿ ನೂರಹನ್ನೆರಡು ಮಂದಿ; ಅಮ್ಮೀನಾದ್ವಾನು ಅವರ ನಾಯಕ.
1 ಪೂರ್ವಕಾಲವೃತ್ತಾ 15 : 11 (ERVKN)
ದಾವೀದನು ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ಮಾತಾಡಿದ್ದು ನಂತರ ದಾವೀದನು ಯಾಜಕರಾದ ಚಾದೋಕನನ್ನು ಮತ್ತು ಎಬ್ಯಾತಾರನನ್ನು ಮತ್ತು ಕೆಳಕಂಡ ಲೇವಿಯರನ್ನು ಸಹ ಕರೆಸಿದನು: ಊರೀಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೇಲ್ ಮತ್ತು ಅಮ್ಮೀನಾದ್ವಾ್.
1 ಪೂರ್ವಕಾಲವೃತ್ತಾ 15 : 12 (ERVKN)
ದಾವೀದನು ಅವರಿಗೆ, “ನೀವು ಲೇವಿಕುಲದ ನಾಯಕರು. ನೀವೂ ಉಳಿದ ಲೇವಿಯರೂ ನಿಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಅನಂತರ ಇಸ್ರೇಲಿನ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ನಾನು ಅದಕ್ಕಾಗಿ ಸಿದ್ಧಮಾಡಿರುವ ಸ್ಥಳಕ್ಕೆ ತರಬೇಕು.
1 ಪೂರ್ವಕಾಲವೃತ್ತಾ 15 : 13 (ERVKN)
ಕಳೆದ ಸಲ, ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಹೇಗೆ ತೆಗೆದುಕೊಂಡು ಹೋಗಬೇಕೆಂದು ಯೆಹೋವನಲ್ಲಿ ವಿಚಾರಿಸಲಿಲ್ಲ. ಲೇವಿಯರಾದ ನೀವು ಅದನ್ನು ಹೊರಲಿಲ್ಲ. ಆದ್ದರಿಂದಲೇ ನಮ್ಮ ದೇವರಾದ ಯೆಹೋವನು ನಮ್ಮನ್ನು ಶಿಕ್ಷಿಸಿದನು” ಎಂದು ಹೇಳಿದನು.
1 ಪೂರ್ವಕಾಲವೃತ್ತಾ 15 : 14 (ERVKN)
ಆಗ ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಮಾಡಿಕೊಂಡರು. ಇಸ್ರೇಲರ ದೇವರಾದ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ತಮ್ಮನ್ನು ಸಿದ್ಧಪಡಿಸಿಕೊಂಡರು.
1 ಪೂರ್ವಕಾಲವೃತ್ತಾ 15 : 15 (ERVKN)
ಮೋಶೆಯು ಆಜ್ಞಾಪಿಸಿದ್ದ ಪ್ರಕಾರವೇ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಬೇಕಾದ ಕೋಲುಗಳನ್ನು ಲೇವಿಯರು ಸಿದ್ಧಪಡಿಸಿದರು. ಯೆಹೋವನು ಹೇಳಿದಂತೆಯೇ ಅವರು ಪೆಟ್ಟಿಗೆಯನ್ನು ಹೊತ್ತುಕೊಂಡು ಹೋದರು.
1 ಪೂರ್ವಕಾಲವೃತ್ತಾ 15 : 16 (ERVKN)
ಗಾಯಕರು ದಾವೀದನು ಲೇವಿಯರಿಗೆ ತಮ್ಮ ಸಹೋದರರಾದ ಗಾಯಕರನ್ನು ಕರೆದುಕೊಂಡು ಬರಲು ಹೇಳಿದನು. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ತಂದು ಆನಂದಗೀತೆಗಳನ್ನು ಹಾಡುವಂತೆ ಅವರಿಗೆ ತಿಳಿಸಿದನು.
1 ಪೂರ್ವಕಾಲವೃತ್ತಾ 15 : 17 (ERVKN)
ಲೇವಿಯರು ಹೋಗಿ ಹೇಮಾನನನ್ನೂ ಅವನ ಸಹೋದರರನ್ನೂ ಆಸಾಫನನ್ನೂ ಏತಾನನನ್ನೂ ಕರೆತಂದರು. ಹೇಮಾನನು ಯೋವೇಲನ ಮಗ. ಆಸಾಫನು ಬೆರೆಕ್ಯನ ಮಗ. ಏತಾನನು ಕೂಷಾಯನ ಮಗ. ಇವರೆಲ್ಲಾ ಮೆರಾರೀಯ ಸಂತತಿಯವರು.
1 ಪೂರ್ವಕಾಲವೃತ್ತಾ 15 : 18 (ERVKN)
ಲೇವಿಯರ ಇನ್ನೊಂದು ಗುಂಪು ಇತ್ತು. ಅವರು ಯಾರೆಂದರೆ: ಜೆಕರ್ಯ, ಬೇನ್, ಯಾಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ, ಮಾಸೇಯ, ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರೆಲ್ಲಾ ಲೇವಿಯರ ಕಾವಲುಗಾರರಾಗಿದ್ದರು.
1 ಪೂರ್ವಕಾಲವೃತ್ತಾ 15 : 19 (ERVKN)
ಗಾಯಕರಾದ ಹೇಮಾನ್, ಆಸಾಫ್ ಮತ್ತು ಏತಾನ್ ಕಂಚಿನ ತಾಳವನ್ನು ಬಾರಿಸಿದರು.
1 ಪೂರ್ವಕಾಲವೃತ್ತಾ 15 : 20 (ERVKN)
ಜೆಕರ್ಯ, ಅಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ ಮತ್ತು ಬೆನಾಯ ಇವರುಗಳು ಅಲಾಮೋತ್ ಹಾರ್ಪ್ ವಾದ್ಯಗಳನ್ನು ಬಾರಿಸಿದರು.
1 ಪೂರ್ವಕಾಲವೃತ್ತಾ 15 : 21 (ERVKN)
ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದೆದೋಮ್, ಯೆಗೀಯೇಲ್ ಮತ್ತು ಅಜಜ್ಯ ಇವರುಗಳು ಶೆಮೀನೀತ್ ಹಾರ್ಪ್ ವಾದ್ಯಗಳನ್ನು ಬಾರಿಸಿದರು. ಇದು ಇವರ ಖಾಯಂ ಕೆಲಸವಾಗಿತ್ತು.
1 ಪೂರ್ವಕಾಲವೃತ್ತಾ 15 : 22 (ERVKN)
ಲೇವಿಯರ ನಾಯಕನಾದ ಕೆನನ್ಯನು ಗಾಯಕರ ಮುಖಂಡನಾಗಿದ್ದನು. ಇವನು ತುಂಬಾ ಅನುಭವಶಾಲಿಯಾಗಿದ್ದನು.
1 ಪೂರ್ವಕಾಲವೃತ್ತಾ 15 : 23 (ERVKN)
ಬೆರಕ್ಯನು ಮತ್ತು ಎಲ್ಕಾನನು ಒಡಂಬಡಿಕೆ ಪೆಟ್ಟಿಗೆಯ ಕಾವಲುಗಾರರಾಗಿದ್ದರು.
1 ಪೂರ್ವಕಾಲವೃತ್ತಾ 15 : 24 (ERVKN)
ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಮತ್ತು ಎಲೀಯೆಜೆರ್ ಇವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವಾಗ ತುತ್ತೂರಿ ಊದುವ ಕೆಲಸವನ್ನು ಕೊಟ್ಟನು. ಓಬೇದೆದೋಮ್ ಮತ್ತು ಯೆಹೀಯ ಒಡಂಬಡಿಕೆಯ ಪೆಟ್ಟಿಗೆಗೆ ಕಾವಲುಗಾರರಾದರು.
1 ಪೂರ್ವಕಾಲವೃತ್ತಾ 15 : 25 (ERVKN)
ದಾವೀದನೂ ಇಸ್ರೇಲಿನ ಹಿರಿಯರೂ ಮುಖಂಡರೂ ಒಡಂಬಡಿಕೆಯ ಪೆಟ್ಟಿಗೆಯನ್ನು ತರಲು ಹೋದರು. ಅವರು ಅದನ್ನು ಓಬೇದೆದೋಮನ ಮನೆಯಿಂದ ಹೊರತಂದರು. ಎಲ್ಲರಿಗೂ ಸಂತೋಷವಾಯಿತು.
1 ಪೂರ್ವಕಾಲವೃತ್ತಾ 15 : 26 (ERVKN)
ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದನು. ಅಲ್ಲಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞ ಮಾಡಿದರು.
1 ಪೂರ್ವಕಾಲವೃತ್ತಾ 15 : 27 (ERVKN)
ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತ ಯಾಜಕರು ಉತ್ತಮವಾದ ನಾರಿನ ನಿಲುವಂಗಿಗಳನ್ನು ಧರಿಸಿದ್ದರು. ಕೆನನ್ಯನೂ ಅವನ ಜೊತೆಯಲ್ಲಿದ್ದ ಗಾಯಕರೆಲ್ಲರೂ ಉತ್ತಮವಾದ ನಾರಿನ ಬಟ್ಟೆಗಳನ್ನು ಧರಿಸಿದ್ದರು. ದಾವೀದನೂ ಉತ್ತಮವಾದ ನಾರಿನ ಬಟ್ಟೆ ಧರಿಸಿ, ಉತ್ತಮವಾದ ನಾರಿನಿಂದ ಮಾಡಿದ ಏಫೋದನ್ನು ಅದರ ಮೇಲೆ ಧರಿಸಿಕೊಂಡಿದ್ದನು.
1 ಪೂರ್ವಕಾಲವೃತ್ತಾ 15 : 28 (ERVKN)
ಹೀಗೆ ಎಲ್ಲಾ ಇಸ್ರೇಲರು ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡು ಬಂದರು. ಅವರು ಕೊಂಬುಗಳನ್ನೂ ತುತ್ತೂರಿಗಳನ್ನೂ ಊದಿದರು; ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸಿದರು; ಆನಂದದಿಂದ ಆರ್ಭಟಿಸಿದರು.
1 ಪೂರ್ವಕಾಲವೃತ್ತಾ 15 : 29 (ERVKN)
ದಾವೀದನ ನಗರದಲ್ಲಿ ಮೆರವಣಿಗೆಯು ಬಂದಾಗ ದಾವೀದನ ಹೆಂಡತಿಯಾದ ಮೀಕಲಳು ಕಿಟಿಕಿಯಿಂದ ನೋಡಿದಳು. (ಇವಳು ಸೌಲನ ಮಗಳು.) ದಾವೀದನು ಕುಣಿಯುತ್ತಾ ಹಾಡುವದನ್ನು ಆಕೆ ಕಂಡಳು. ತನ್ನ ಗಂಡನ ಮೇಲೆ ಆಕೆಗಿದ್ದ ಗೌರವವು ಕಡಿಮೆಯಾಯಿತು. ಯಾಕೆಂದರೆ ದಾವೀದನು ಒಬ್ಬ ಸಾಮಾನ್ಯ ವ್ಯಕ್ತಿಯಂತೆ ಬುದ್ಧಿ ಇಲ್ಲದ ಕೆಲಸ ಮಾಡುತ್ತಿರುವನೆಂದು ಆಕೆಯು ಅಂದುಕೊಂಡಳು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29