1 ಪೂರ್ವಕಾಲವೃತ್ತಾ 18 : 1 (ERVKN)
ಅನ್ಯಜನಾಂಗಗಳ ಮೇಲೆ ದಾವೀದನ ಜಯ ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತುಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು.
1 ಪೂರ್ವಕಾಲವೃತ್ತಾ 18 : 2 (ERVKN)
ಅನಂತರ ದಾವೀದನು ಮೋವಾಬ್ಯರ ಸಂಗಡ ಯುದ್ಧಮಾಡಿ ಸೋಲಿಸಿದನು. ಅವರು ದಾವೀದನ ಸೇವಕರಾಗಿ ಕಪ್ಪ ಕೊಡಬೇಕಾಯಿತು.
1 ಪೂರ್ವಕಾಲವೃತ್ತಾ 18 : 3 (ERVKN)
ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯದೊಡನೆ ಕಾದಾಡಿ ಅವರನ್ನು ಹಮಾತಿನ ತನಕ ಹಿಂದಟ್ಟಿದನು. ಹದದೆಜರನು ತನ್ನ ರಾಜ್ಯವನ್ನು ಯೂಫ್ರೇಟೀಸ್ ನದಿಯ ತನಕ ವಿಸ್ತರಿಸಲು ಪ್ರಯತ್ನಿಸುತ್ತಿದ್ದನು.
1 ಪೂರ್ವಕಾಲವೃತ್ತಾ 18 : 4 (ERVKN)
ಹದದೆಜರನಿಂದ ದಾವೀದನು ಒಂದು ಸಾವಿರ ರಥಗಳನ್ನೂ ಏಳು ಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ಹದದೆಜರನ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ಆ ಕುದುರೆಗಳು ರಥಗಳನ್ನು ಎಳೆಯದಂತೆ ಮಾಡಿದನು. ಆದರೆ ನೂರು ರಥಗಳನ್ನು ಎಳೆಯಲು ಬೇಕಾಗುವಷ್ಟು ಕುದುರೆಗಳನ್ನು ಉಳಿಸಿದನು.
1 ಪೂರ್ವಕಾಲವೃತ್ತಾ 18 : 5 (ERVKN)
ಹದದೆಜರನಿಗೆ ದಮಸ್ಕದಲ್ಲಿರುವ ಅರಾಮ್ಯರು ಸಹಾಯಕ್ಕೆ ಬಂದರು. ಆದರೆ ದಾವೀದನು ಅರಾಮ್ಯರ ಸೈನ್ಯವನ್ನು ಸೋಲಿಸಿ ಅವರ ಇಪ್ಪತ್ತೆರಡು ಸಾವಿರ ಮಂದಿ ಸೈನಿಕರನ್ನು ಕೊಂದನು.
1 ಪೂರ್ವಕಾಲವೃತ್ತಾ 18 : 6 (ERVKN)
ನಂತರ ಅರಾಮ್ಯರ ದಮಸ್ಕದಲ್ಲಿ ತನ್ನ ಕೋಟೆಯನ್ನು ಸ್ಥಾಪಿಸಿದನು. ಅರಾಮ್ಯರು ದಾವೀದನ ಸೇವಕರಾಗಿ ಅವನಿಗೆ ಕಪ್ಪಕಾಣಿಕೆಯನ್ನು ತಂದೊಪ್ಪಿಸುತ್ತಿದ್ದರು. ಹೀಗೆ ದಾವೀದನು ಹೋದ ಕಡೆಯಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.
1 ಪೂರ್ವಕಾಲವೃತ್ತಾ 18 : 7 (ERVKN)
ಹದದೆಜರನ ಸೇನಾಧಿಪತಿಗಳು ಉಪಯೋಗಿಸುತ್ತಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಜೆರುಸಲೇಮಿಗೆ ತಂದನು.
1 ಪೂರ್ವಕಾಲವೃತ್ತಾ 18 : 8 (ERVKN)
ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೊಮೋನನು ತಾಮ್ರದ ತೊಟ್ಟಿ, ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಾಗ್ರಿಗಳನ್ನು ಮಾಡಿಸಿದನು.
1 ಪೂರ್ವಕಾಲವೃತ್ತಾ 18 : 9 (ERVKN)
ದಾವೀದನು ಹದದೆಜರನನ್ನು ಸದೆಬಡಿದನೆಂದು ತಿಳಿದ ಹಮಾತಿನ ಅರಸನಾದ ತೋವನು
1 ಪೂರ್ವಕಾಲವೃತ್ತಾ 18 : 10 (ERVKN)
ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕೆಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು.
1 ಪೂರ್ವಕಾಲವೃತ್ತಾ 18 : 11 (ERVKN)
ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.
1 ಪೂರ್ವಕಾಲವೃತ್ತಾ 18 : 12 (ERVKN)
ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಒಮ್ಮೆ ಹದಿನೆಂಟು ಸಾವಿರ ಮಂದಿ ಎದೋಮ್ಯರನ್ನು ಕೊಂದುಹಾಕಿದನು.
1 ಪೂರ್ವಕಾಲವೃತ್ತಾ 18 : 13 (ERVKN)
ಅಬ್ಷೈಯು ಎದೋಮಿನಲ್ಲಿ ಕೋಟೆಯನ್ನು ಕಟ್ಟಿ ಎದೋಮ್ಯರೆಲ್ಲರನ್ನು ದಾವೀದನ ಸೇವಕರನ್ನಾಗಿ ಮಾಡಿದನು. ದಾವೀದನು ಹೋದಕಡೆಗಳಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.
1 ಪೂರ್ವಕಾಲವೃತ್ತಾ 18 : 14 (ERVKN)
ದಾವೀದನ ಮುಖ್ಯಾಧಿಕಾರಿಗಳು ಇಸ್ರೇಲರೆಲ್ಲರಿಗೆ ಅರಸನಾಗಿದ್ದ ದಾವೀದನು ಪಕ್ಷಪಾತವಿಲ್ಲದೆ ನ್ಯಾಯತೀರಿಸುತ್ತಿದ್ದನು.
1 ಪೂರ್ವಕಾಲವೃತ್ತಾ 18 : 15 (ERVKN)
ಚೆರೂಯಳ ಮಗನಾದ ಯೋವಾಬನು ಅವನ ಪ್ರಧಾನ ಸೇನಾಪತಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನಾಗಿದ್ದು ದಾವೀದನ ಚರಿತ್ರೆಯನ್ನು ಬರೆದಿಟ್ಟನು.
1 ಪೂರ್ವಕಾಲವೃತ್ತಾ 18 : 16 (ERVKN)
ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಬೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಲೇಖಕನಾಗಿದ್ದನು.
1 ಪೂರ್ವಕಾಲವೃತ್ತಾ 18 : 17 (ERVKN)
ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು.
❮
❯
1
2
3
4
5
6
7
8
9
10
11
12
13
14
15
16
17