1 ಪೂರ್ವಕಾಲವೃತ್ತಾ 20 : 1 (ERVKN)
ವಸಂತಕಾಲದಲ್ಲಿ ರಾಜರುಗಳು ಯುದ್ಧಕ್ಕೆ ಹೊರಡುವ ಸಮಯ. ಯೋವಾಬನೂ ತನ್ನ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟನು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು. ಇಸ್ರೇಲಿನ ಸೈನ್ಯವು ಅಮ್ಮೋನ್ ದೇಶದೊಳಗೆ ನುಗ್ಗಿ ಅದನ್ನು ನಾಶಮಾಡಿದರು. ಆಮೇಲೆ ರಬ್ಬ ಪಟ್ಟಣಕ್ಕೆ ಮುತ್ತಿಗೆ ಹಾಕಿ ಸಂಪೂರ್ಣವಾಗಿ ನಾಶಮಾಡಿದರು.
1 ಪೂರ್ವಕಾಲವೃತ್ತಾ 20 : 2 (ERVKN)
ಅದರ ಅರಸನ ಕಿರೀಟವನ್ನು ದಾವೀದನು ತೆಗೆದುಕೊಂಡನು. ಅದು ಎಪ್ಪತ್ತೈದು ಪೌಂಡು ಭಾರವುಳ್ಳದ್ದಾಗಿತ್ತು ಮತ್ತು ಅಮೂಲ್ಯವಾದ ರತ್ನಗಳಿಂದ ಮಾಡಿದ್ದಾಗಿತ್ತು. ಆ ಕಿರೀಟವನ್ನು ದಾವೀದನು ತನ್ನ ತಲೆಯ ಮೇಲೆ ಇಟ್ಟು ಕೊಂಡನು. ಆ ಪಟ್ಟಣದಿಂದ ಇನ್ನೂ ಅನೇಕ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು.
1 ಪೂರ್ವಕಾಲವೃತ್ತಾ 20 : 3 (ERVKN)
ದಾವೀದನು ರಬ್ಬದ ಜನರನ್ನು ಸೆರೆಹಿಡಿದುಕೊಂಡು ಬಂದು ಅವರನ್ನು ಮರಕಡಿಯುವುದಕ್ಕೂ ಕೊಡಲಿ ಮತ್ತು ಹಾರೆಗಳಿಂದ ಕೆಲಸ ಮಾಡುವದಕ್ಕೂ ನೇಮಿಸಿದನು. ಇದೇ ಪ್ರಕಾರ ದಾವೀದನು ಅಮ್ಮೋನಿಯರ ಎಲ್ಲಾ ಪಟ್ಟಣಗಳಲ್ಲಿಯೂ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂತಿರುಗಿ ಬಂದನು.
1 ಪೂರ್ವಕಾಲವೃತ್ತಾ 20 : 4 (ERVKN)
ಇದಾದ ಬಳಿಕ ಇಸ್ರೇಲರು ಗೆಜೆರಿನಲ್ಲಿ ಫಿಲಿಷ್ಟಿಯರ ಜೊತೆಯಲ್ಲಿ ಯುದ್ಧಮಾಡಿದರು. ಹುಷಯದವನಾದ ಸಿಬ್ಬೆಕೈ ಎಂಬವನು, ದೈತ್ಯನ ಮಗನಾದ ಸಿಪ್ಪೈ ಎಂಬವನನ್ನು ಕೊಂದನು. ಇದರಿಂದಾಗಿ ಫಿಲಿಷ್ಟಿಯರು ಇಸ್ರೇಲರಿಗೆ ಸೇವೆಮಾಡುವವರಾದರು.
1 ಪೂರ್ವಕಾಲವೃತ್ತಾ 20 : 5 (ERVKN)
ಇನ್ನೊಂದು ಸಾರಿ, ಇಸ್ರೇಲರು ಫಿಲಿಷ್ಟಿಯರೊಂದಿಗೆ ತಿರುಗಿ ಯುದ್ಧಮಾಡುವಾಗ ಯಾಯೀರನ ಮಗನಾದ ಎಲ್ಹಾನಾನನು ಗೊಲ್ಯಾತನ ತಮ್ಮನಾದ ಲಹ್ಮೀಯನ್ನು ಕೊಂದನು. ಗೊಲ್ಯಾತನು ಗತ್ ಪಟ್ಟಣದವನಾಗಿದ್ದನು. ಲಹ್ಮೀಯ ಈಟಿಯು ಬಹು ಭಾರವಾಗಿತ್ತು. ಕೈಮಗ್ಗದ ದೊಡ್ಡ ಕುಂಟೆಯಂತಿತ್ತು.
1 ಪೂರ್ವಕಾಲವೃತ್ತಾ 20 : 6 (ERVKN)
ಇದಾದನಂತರ ಇನ್ನೊಂದು ಯುದ್ಧವನ್ನು ಇಸ್ರೇಲರು ಫಿಲಿಷ್ಟಿಯರೊಂದಿಗೆ ಗತ್ ಊರಿನಲ್ಲಿ ಮಾಡಿದರು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನಾಗಿದ್ದನು.
1 ಪೂರ್ವಕಾಲವೃತ್ತಾ 20 : 7 (ERVKN)
ಇವನು ಇಸ್ರೇಲರನ್ನು ಪರಿಹಾಸ್ಯ ಮಾಡಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.
1 ಪೂರ್ವಕಾಲವೃತ್ತಾ 20 : 8 (ERVKN)
ಗತ್ ಊರಿನ ರೆಫಾಯರನ್ನು ದಾವೀದನೂ ಅವನ ಜನರೂ ಕೊಂದುಹಾಕಿದರು.

1 2 3 4 5 6 7 8

BG:

Opacity:

Color:


Size:


Font: