1 ಪೂರ್ವಕಾಲವೃತ್ತಾ 21 : 1 (ERVKN)
ಇಸ್ರೇಲರನ್ನು ಲೆಕ್ಕಿಸಿ ದಾವೀದನು ಪಾಪಮಾಡಿದನು ಸೈತಾನನು ಇಸ್ರೇಲರಿಗೆ ವಿರುದ್ಧವಾಗಿದ್ದನು. ಅವನು ಇಸ್ರೇಲರನ್ನು ಲೆಕ್ಕಿಸುವಂತೆ ದಾವೀದನನ್ನು ಪ್ರೇರೇಪಿಸಿದನು.
1 ಪೂರ್ವಕಾಲವೃತ್ತಾ 21 : 2 (ERVKN)
ದಾವೀದನು ಯೋವಾಬನನ್ನೂ ಇಸ್ರೇಲರ ಇತರ ಅಧಿಪತಿಗಳನ್ನೂ ಕರೆದು ಅವರಿಗೆ, “ದೇಶದೊಳಕ್ಕೆ ಹೋಗಿ ಇಸ್ರೇಲರೆಲ್ಲರನ್ನು ಲೆಕ್ಕಿಸಿರಿ. ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣ ತನಕ ಎಲ್ಲಾ ಊರುಗಳನ್ನು ಸಂಚರಿಸಿ ಜನರನ್ನು ಲೆಕ್ಕಿಸಿರಿ. ಆಗ ನನಗೆ ನನ್ನ ರಾಜ್ಯದ ಜನಸಂಖ್ಯೆಯು ತಿಳಿಯುವದು” ಅಂದನು.
1 ಪೂರ್ವಕಾಲವೃತ್ತಾ 21 : 3 (ERVKN)
ಅದಕ್ಕೆ ಉತ್ತರವಾಗಿ ಯೋವಾಬನು, “ಯೆಹೋವನು ತನ್ನ ಜನಾಂಗವನ್ನು ನೂರುಪಟ್ಟು ಅಭಿವೃದ್ಧಿಪಡಿಸಲಿ. ಅರಸನೇ, ನೀನು ಈ ಕಾರ್ಯವನ್ನು ಯಾಕೆ ಮಾಡಿಸಬೇಕು? ಹೀಗೆ ಮಾಡಿದರೆ ನೀನು ಎಲ್ಲಾ ಇಸ್ರೇಲರನ್ನು ಪಾಪದಲ್ಲಿ ಬೀಳುವಂತೆ ಮಾಡುತ್ತಿರುವೆ” ಎಂದು ಹೇಳಿದನು.
1 ಪೂರ್ವಕಾಲವೃತ್ತಾ 21 : 4 (ERVKN)
ಆದರೆ ಅರಸನಾದ ದಾವೀದನು ತನ್ನ ನಿರ್ಧಾರವನ್ನು ಬದಲಿಸಲಿಲ್ಲ. ದಾವೀದನು ಹೇಳಿದಂತೆಯೇ ಯೋವಾಬನು ಮಾಡಬೇಕಾಯಿತು. ಯೋವಾಬನು ದೇಶದ ಎಲ್ಲಾ ಕಡೆಗಳಿಗೆ ಹೋಗಿ ಜನರನ್ನು ಲೆಕ್ಕಿಸಿ ಜೆರುಸಲೇಮಿಗೆ ಬಂದನು.
1 ಪೂರ್ವಕಾಲವೃತ್ತಾ 21 : 5 (ERVKN)
ಅರಸನಿಗೆ ಜನಗಣತಿಯ ಲೆಕ್ಕ ಒಪ್ಪಿಸಿದನು. ಇಸ್ರೇಲಿನಲ್ಲಿ ಒಟ್ಟು ಹನ್ನೊಂದು ಲಕ್ಷ ಮಂದಿ ಖಡ್ಗ ಉಪಯೋಗಿಸುವವರು ಇದ್ದರು. ಯೆಹೂದದಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಖಡ್ಗ ಉಪಯೋಗಿಸುವವರಿದ್ದರು.
1 ಪೂರ್ವಕಾಲವೃತ್ತಾ 21 : 6 (ERVKN)
ಯೋವಾಬನು ಲೇವಿ ಕುಲದವರನ್ನು ಮತ್ತು ಬೆನ್ಯಾಮೀನನ ಕುಲದವರನ್ನು ಜನಗಣತಿಯಲ್ಲಿ ಸೇರಿಸಲಿಲ್ಲ; ಯಾಕೆಂದರೆ ದಾವೀದನ ಆಜ್ಞೆಯು ಅವನಿಗೆ ಸರಿಕಾಣಲಿಲ್ಲ;
1 ಪೂರ್ವಕಾಲವೃತ್ತಾ 21 : 7 (ERVKN)
ದೇವರ ದೃಷ್ಟಿಯಲ್ಲಿ ದಾವೀದನು ದೊಡ್ಡ ತಪ್ಪು ಕೆಲಸವನ್ನು ಮಾಡಿದನು. ಆದ್ದರಿಂದ ದೇವರು ಇಸ್ರೇಲನ್ನು ಶಿಕ್ಷಿಸಿದನು.
1 ಪೂರ್ವಕಾಲವೃತ್ತಾ 21 : 8 (ERVKN)
ಇಸ್ರೇಲಿಗೆ ದೇವರ ದಂಡನೆ ದಾವೀದನು ದೇವರಿಗೆ, “ನಾನು ಕೇವಲ ಹುಚ್ಚು ಕೆಲಸ ಮಾಡಿದೆನು. ಇಸ್ರೇಲರ ಜನಗಣತಿ ಮಾಡಿ ಪಾಪಮಾಡಿದೆನು. ಈಗ ನಿನ್ನ ಸೇವಕನಾದ ನನ್ನ ಪಾಪವನ್ನು ನಿರ್ಮೂಲ ಮಾಡು” ಎಂದು ಬೇಡಿಕೊಂಡನು.
1 ಪೂರ್ವಕಾಲವೃತ್ತಾ 21 : 9 (ERVKN)
(9-10) ಗಾದನು ದಾವೀದನ ಪ್ರವಾದಿಯಾಗಿದ್ದನು. ಯೆಹೋವನು ಗಾದನಿಗೆ, “ನೀನು ದಾವೀದನಿಗೆ ಹೀಗೆ ಹೇಳು: ‘ಇದು ಯೆಹೋವನ ನುಡಿ. ನಾನು ನಿನಗೆ ಕೊಡಲಿರುವ ಮೂರು ಶಿಕ್ಷೆಯಲ್ಲಿ ಒಂದನ್ನು ಆರಿಸಿಕೊಳ್ಳಬೇಕು. ನೀನು ಆರಿಸಿಕೊಂಡ ಪ್ರಕಾರವೇ ನಾನು ನಿನ್ನನ್ನು ಶಿಕ್ಷಿಸುವೆನು’ ” ಅಂದನು.
1 ಪೂರ್ವಕಾಲವೃತ್ತಾ 21 : 10 (ERVKN)
1 ಪೂರ್ವಕಾಲವೃತ್ತಾ 21 : 11 (ERVKN)
(11-12) ಗಾದನು ದಾವೀದನ ಬಳಿಗೆ ಹೋಗಿ, “ಯೆಹೋವನು ಹೀಗೆನ್ನುತ್ತಾನೆ: ‘ನೀನು ಸಹಿಸಿಕೊಳ್ಳಬಲ್ಲ ಶಿಕ್ಷೆಯನ್ನು ಆರಿಸಿಕೊ. ಮೂರು ವರ್ಷಗಳ ಬರಗಾಲ; ಅಥವಾ ನಿನ್ನ ವೈರಿಗಳಿಗೆ ಮೂರು ತಿಂಗಳು ಶರಣಾಗುವಿಕೆ; ಅಥವಾ ಮೂರು ದಿವಸ ಕಾಲ ಭಯಂಕರ ಕಾಯಿಲೆಯು ನಿನ್ನ ರಾಜ್ಯವೆಲ್ಲಾ ಹಬ್ಬುವದು; ಯೆಹೋವನ ದೂತನು ಇಡೀ ಇಸ್ರೇಲನ್ನು ದಾಟಿ ಸಿಕ್ಕಿದವರನ್ನೆಲ್ಲಾ ಹತಿಸಿಬಿಡುವನು.’ ದಾವೀದನೇ, ನನ್ನನ್ನು ನಿನ್ನ ಬಳಿಗೆ ದೇವರೇ ಕಳುಹಿಸಿರುತ್ತಾನೆ. ನೀನು ಯಾವ ಶಿಕ್ಷೆಯನ್ನು ಆರಿಸಿಕೊಳ್ಳುವಿ ಎಂಬುದನ್ನು ನನಗೆ ತಿಳಿಸು.”
1 ಪೂರ್ವಕಾಲವೃತ್ತಾ 21 : 12 (ERVKN)
1 ಪೂರ್ವಕಾಲವೃತ್ತಾ 21 : 13 (ERVKN)
ಆಗ ಗಾದನಿಗೆ ದಾವೀದನು, “ನಾನು ಈಗ ಕಷ್ಟದಲ್ಲಿ ಬಿದ್ದಿದ್ದೇನೆ! ನನ್ನ ಶಿಕ್ಷೆಯನ್ನು ಮನುಷ್ಯನು ನಿರ್ಧರಿಸಬಾರದು. ಯೆಹೋವನು ಕರುಣೆಯುಳ್ಳವನು. ಆದ್ದರಿಂದ ಆತನೇ ನಿರ್ಧರಿಸಲಿ.”
1 ಪೂರ್ವಕಾಲವೃತ್ತಾ 21 : 14 (ERVKN)
ಆಗ ಯೆಹೋವನು ಇಸ್ರೇಲರ ಮೇಲೆ ಬಹು ಘೋರವಾದ ವ್ಯಾಧಿಯನ್ನು ಕಳುಹಿಸಿದ್ದರಿಂದ ಎಪ್ಪತ್ತು ಸಾವಿರ ಜನರು ಸತ್ತುಹೋದರು.
1 ಪೂರ್ವಕಾಲವೃತ್ತಾ 21 : 15 (ERVKN)
ದೇವರು ಜೆರುಸಲೇಮಿನ ಜನರನ್ನು ನಾಶನ ಮಾಡುವುದಕ್ಕೆ ದೂತನನ್ನು ಕಳುಹಿಸಿದನು. ಯೆಹೋವನು ಅದನ್ನು ನೋಡಿ ದುಃಖಗೊಂಡು ಜನರನ್ನು ನಾಶಮಾಡಲು ಬಂದಿದ್ದ ದೂತನಿಗೆ, “ಸಾಕು, ಇನ್ನು ನಿಲ್ಲಿಸು” ಅಂದನು. ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತುಕೊಂಡಿದ್ದನು.
1 ಪೂರ್ವಕಾಲವೃತ್ತಾ 21 : 16 (ERVKN)
ದಾವೀದನು ಮೇಲಕ್ಕೆ ನೋಡಿದಾಗ ಯೆಹೋವನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನು ಕಂಡನು. ದೇವದೂತನು ತನ್ನ ಖಡ್ಗವನ್ನು ಜೆರುಸಲೇಮಿನ ಮೇಲೆ ಚಾಚಿದ್ದನು. ಆಗ ದಾವೀದನೂ ಅವನೊಂದಿಗಿದ್ದ ಹಿರಿಯರೂ ಬಗ್ಗಿ ನೆಲದ ಮೇಲೆ ಮುಖಗಳನ್ನಿಟ್ಟು ನಮಸ್ಕರಿಸಿದರು. ಅವರು ಶೋಕವಸ್ತ್ರಗಳನ್ನು ಧರಿಸಿದ್ದರು.
1 ಪೂರ್ವಕಾಲವೃತ್ತಾ 21 : 17 (ERVKN)
ದಾವೀದನು ದೇವರಿಗೆ, “ಪಾಪಮಾಡಿದವನು ನಾನು. ಜನಗಣತಿಯನ್ನು ಮಾಡಲು ಆಜ್ಞಾಪಿಸಿದವನು ನಾನೇ. ನಾನು ತಪ್ಪು ಮಾಡಿದೆ! ಆದರೆ ಇಸ್ರೇಲರು ಏನೂ ತಪ್ಪು ಮಾಡಲಿಲ್ಲ. ದೇವರಾದ ಯೆಹೋವನೇ, ನನ್ನನ್ನೂ ನನ್ನ ಪರಿವಾರದವರನ್ನೂ ಶಿಕ್ಷಿಸು. ನಿನ್ನ ಜನರನ್ನು ಸಾಯಿಸುವ ವ್ಯಾಧಿಯನ್ನು ನಿಲ್ಲಿಸು” ಎಂದು ಬೇಡಿಕೊಂಡನು.
1 ಪೂರ್ವಕಾಲವೃತ್ತಾ 21 : 18 (ERVKN)
ಆಗ ಯೆಹೋವನ ದೂತನು ಗಾದನೊಂದಿಗೆ ಮಾತನಾಡಿ, “ದಾವೀದನು ಒಂದು ಯಜ್ಞವೇದಿಕೆಯನ್ನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ಕಟ್ಟಿ ಯೆಹೋವನನ್ನು ಆರಾಧಿಸಲಿ” ಎಂದು ಹೇಳಿದನು.
1 ಪೂರ್ವಕಾಲವೃತ್ತಾ 21 : 19 (ERVKN)
ಗಾದನು ದಾವೀದನಿಗೆ ಇದನ್ನು ತಿಳಿಸಿದ ಕೂಡಲೇ ಅವನು ಒರ್ನಾನನ ಕಣಕ್ಕೆ ಹೋದನು.
1 ಪೂರ್ವಕಾಲವೃತ್ತಾ 21 : 20 (ERVKN)
ಒರ್ನಾನನು ಗೋಧಿಯನ್ನು ತನ್ನ ಕಣದಲ್ಲಿ ಬಡಿಯುತ್ತಾ ತಿರುಗಿನೋಡಿದಾಗ ದೇವದೂತನನ್ನು ಕಂಡನು. ಅವನ ನಾಲ್ಕು ಮಂದಿ ಗಂಡುಮಕ್ಕಳು ಓಡಿಹೋಗಿ ಅವಿತುಕೊಂಡರು.
1 ಪೂರ್ವಕಾಲವೃತ್ತಾ 21 : 21 (ERVKN)
ದಾವೀದನು ಒರ್ನಾನನ ಬಳಿಗೆ ಬೆಟ್ಟ ಹತ್ತಿಕೊಂಡು ಬರುತ್ತಿರುವುದನ್ನು ಒರ್ನಾನನು ಕಂಡು ಅವನನ್ನು ಎದುರುಗೊಂಡು ಬಗ್ಗಿ ನಮಸ್ಕರಿಸಿದನು.
1 ಪೂರ್ವಕಾಲವೃತ್ತಾ 21 : 22 (ERVKN)
ದಾವೀದನು ಒರ್ನಾನನಿಗೆ, “ನಿನ್ನ ಕಣವನ್ನು ನನಗೆ ಕ್ರಯಕ್ಕೆ ಮಾರಿಬಿಡು. ನಾನು ಇಲ್ಲಿ ಯಜ್ಞವೇದಿಕೆಯನ್ನು ಕಟ್ಟಿ ದೇವರನ್ನು ಆರಾಧಿಸಬೇಕು. ಆಗ ಈ ಭಯಂಕರ ವ್ಯಾಧಿಯು ನಿಂತುಹೋಗುವುದು” ಅಂದನು.
1 ಪೂರ್ವಕಾಲವೃತ್ತಾ 21 : 23 (ERVKN)
ಆಗ ಒರ್ನಾನನು, “ನೀನು ನನ್ನ ಒಡೆಯನೂ ಅರಸನೂ ಆಗಿರುವಿ. ಈ ಕಣವನ್ನು ನೀನೇ ತೆಗೆದುಕೋ. ನೀನು ಏನು ಬೇಕಾದರೂ ಮಾಡು. ಸರ್ವಾಂಗಹೋಮಕ್ಕೆ ಬೇಕಾದ ಕಟ್ಟಿಗೆಗಾಗಿ ನೇಗಿಲುಗಳನ್ನೂ ಧಾನ್ಯಾರ್ಪಣೆಗೆ ಬೇಕಾದ ಗೋಧಿಯನ್ನೂ ಪಶುವನ್ನೂ ನಾನು ಕೊಡುತ್ತೇನೆ” ಅಂದನು.
1 ಪೂರ್ವಕಾಲವೃತ್ತಾ 21 : 24 (ERVKN)
ಅದಕ್ಕೆ ದಾವೀದನು, “ನೋಡು, ನಾನು ಅವಕ್ಕೆಲ್ಲಾ ಪೂರ್ಣಕ್ರಯ ಕೊಡುತ್ತೇನೆ. ನಿನ್ನಿಂದ ನಾನು ಪುಕ್ಕಟೆಯಾಗಿ ತೆಗೆದುಕೊಂಡದ್ದನ್ನು ದೇವರಿಗೆ ಸಮರ್ಪಿಸುವುದಿಲ್ಲ. ಧರ್ಮಾರ್ಥವಾಗಿ ದೊರೆತದ್ದನ್ನು ದೇವರಿಗೆ ಕಾಣಿಕೆಯಾಗಿ ಕೊಡುವದಿಲ್ಲ” ಎಂದನು.
1 ಪೂರ್ವಕಾಲವೃತ್ತಾ 21 : 25 (ERVKN)
ದಾವೀದನು ಒರ್ನಾನನಿಗೆ ಹದಿನೈದು ಪೌಂಡ್ ಬಂಗಾರವನ್ನು ಕೊಟ್ಟು ಆ ಸ್ಥಳವನ್ನು ಕೊಂಡುಕೊಂಡನು.
1 ಪೂರ್ವಕಾಲವೃತ್ತಾ 21 : 26 (ERVKN)
ಅಲ್ಲಿ ದೇವರನ್ನು ಆರಾಧಿಸಲು ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ದಾವೀದನು ಅದರ ಮೇಲೆ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿದನು. ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಪರಲೋಕದಿಂದ ಬೆಂಕಿಯನ್ನು ಕಳುಹಿಸುವುದರ ಮೂಲಕ ದಾವೀದನಿಗೆ ಉತ್ತರಿಸಿದನು. ಸರ್ವಾಂಗಹೋಮಗಳ ಯಜ್ಞವೇದಿಕೆಯ ಮೇಲೆ ಬೆಂಕಿಯು ಇಳಿದುಬಂದಿತು.
1 ಪೂರ್ವಕಾಲವೃತ್ತಾ 21 : 27 (ERVKN)
ಆಗ ದೇವರು ತನ್ನ ದೂತನಿಗೆ ಖಡ್ಗವನ್ನು ಒರೆಯಲ್ಲಿ ಹಾಕಲು ಆಜ್ಞಾಪಿಸಿದನು.
1 ಪೂರ್ವಕಾಲವೃತ್ತಾ 21 : 28 (ERVKN)
ದೇವರು ತನ್ನ ಪ್ರಾರ್ಥನೆಯನ್ನು ಕೇಳಿ ಉತ್ತರ ಕೊಟ್ಟದ್ದನ್ನು ಕಂಡು ದಾವೀದನು ಆತನಿಗೆ ಯಜ್ಞಗಳನ್ನು ಸಮರ್ಪಿಸಿದನು.
1 ಪೂರ್ವಕಾಲವೃತ್ತಾ 21 : 29 (ERVKN)
ಆಗ ಪವಿತ್ರ ಗುಡಾರವು ಮತ್ತು ಯಜ್ಞವೇದಿಕೆಯು ಗಿಬ್ಯೋನ್ ಪಟ್ಟಣದ ಎತ್ತರದ ಪ್ರದೇಶದಲ್ಲಿತ್ತು. ಇಸ್ರೇಲರು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿರುವಾಗ ಮೋಶೆಯು ಆ ಗುಡಾರವನ್ನು ಮಾಡಿಸಿದ್ದನು.
1 ಪೂರ್ವಕಾಲವೃತ್ತಾ 21 : 30 (ERVKN)
ದಾವೀದನು ದೇವರ ಸಂಗಡ ಮಾತನಾಡಲು ಭಯಪಟ್ಟದ್ದರಿಂದ ದೇವದರ್ಶನ ಗುಡಾರಕ್ಕೆ ಹೋಗಲಿಲ್ಲ. ಅವನು ಖಡ್ಗಧಾರಿಯಾಗಿದ್ದ ದೇವದೂತನಿಗೂ ಭಯಪಟ್ಟನು.
❮
❯