1 ಪೂರ್ವಕಾಲವೃತ್ತಾ 26 : 1 (ERVKN)
ಕೋರಹಿಯ ವಂಶದವರಲ್ಲಿ ದ್ವಾರಪಾಲಕರು ಯಾರೆಂದರೆ: ಮೆಷೆಲೆಮ್ಯ ಮತ್ತು ಅವನ ಗಂಡುಮಕ್ಕಳು. (ಮೆಷೆಲೆಮ್ಯನು ಕೋರಹಿಯನ ಮಗ. ಕೋರಹಿಯನು ಆಸಾಫನ ಕುಲದವನಾಗಿದ್ದನು.)
1 ಪೂರ್ವಕಾಲವೃತ್ತಾ 26 : 2 (ERVKN)
ಜೆಕರ್ಯನು ಮೆಷೆಲೆಮ್ಯನ ಮೊದಲನೆಯ ಮಗ; ಎದೀಯಯೇಲನು ಎರಡನೆಯ ಮಗ; ಜೆಬದ್ಯನು ಮೂರನೆಯ ಮಗ; ಯತ್ನಿಯೇಲನು ನಾಲ್ಕನೆಯ ಮಗ;
1 ಪೂರ್ವಕಾಲವೃತ್ತಾ 26 : 3 (ERVKN)
ಏಲಾಮನು ಐದನೆಯ ಮಗ; ಯೆಹೋಹಾನನು ಆರನೆಯ ಮಗ; ಮತ್ತು ಎಲೈಹೋಯೇನೈ ಏಳನೆಯ ಮಗ.
1 ಪೂರ್ವಕಾಲವೃತ್ತಾ 26 : 4 (ERVKN)
ಓಬೇದೆದೋಮ್ ಮತ್ತು ಅವನ ಮಕ್ಕಳು: ಶೆಮಾಯನು ಚೊಚ್ಚಲಮಗ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ, ನಾಲ್ಕನೆಯವನು ಸಾಕಾರ್, ಐದನೆಯವನು ನೆತನೇಲ್;
1 ಪೂರ್ವಕಾಲವೃತ್ತಾ 26 : 5 (ERVKN)
ಆರನೆಯವನು ಅಮ್ಮೀಯೇಲ; ಏಳನೆಯವನು ಇಸ್ಸಾಕಾರ್; ಎಂಟನೆಯವನು ಪೆಯುಲ್ಲೆತೈ. ದೇವರು ಓಬೇದೆದೋಮನನ್ನು ಅತಿಯಾಗಿ ಆಶೀರ್ವದಿಸಿದನು.
1 ಪೂರ್ವಕಾಲವೃತ್ತಾ 26 : 6 (ERVKN)
ಶೆಮಾಯನಿಗೂ ಗಂಡುಮಕ್ಕಳಿದ್ದರು. ಅವರು ಧೈರ್ಯಶಾಲಿಗಳೂ ಬಲಶಾಲಿಗಳೂ ಆಗಿದ್ದದರಿಂದ ತಂದೆಯ ಕುಲದಲ್ಲಿ ನಾಯಕರಾಗಿದ್ದರು.
1 ಪೂರ್ವಕಾಲವೃತ್ತಾ 26 : 7 (ERVKN)
ಶೆಮಾಯನ ಮಕ್ಕಳು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್, ಎಲೀಹು, ಮತ್ತು ಸಮಕ್ಯ. ಎಲ್ಜಾಬಾದನ ಸಂಬಂಧಿಕರು ಕುಶಲ ಕರ್ಮಿಗಳು.
1 ಪೂರ್ವಕಾಲವೃತ್ತಾ 26 : 8 (ERVKN)
ಈ ಎಲ್ಲಾಜನರೂ, ಓಬೇದೆದೋಮನ ಸಂತತಿಯವರು. ಇವರೆಲ್ಲಾ ಬಲಶಾಲಿಗಳಾಗಿದ್ದರು. ಒಳ್ಳೆಯ ಅನುಭವಸ್ತ ದ್ವಾರಪಾಲಕರಾಗಿದ್ದರು. ಓಬೇದೆದೋಮನ ಸಂತತಿಯವರ ಒಟ್ಟು ಸಂಖ್ಯೆ ಅರವತ್ತೆರಡು ಮಂದಿ.
1 ಪೂರ್ವಕಾಲವೃತ್ತಾ 26 : 9 (ERVKN)
ಮೆಷೆಲೆಮ್ಯನ ಗಂಡುಮಕ್ಕಳು ಮತ್ತು ಸಂಬಂಧಿಕರು ಬಲಾಢ್ಯರಾಗಿದ್ದರು. ಅವನಿಗೆ ಒಟ್ಟು ಹದಿನೆಂಟು ಗಂಡುಮಕ್ಕಳು ಮತ್ತು ಸಂಬಂಧಿಕರು ಇದ್ದರು.
1 ಪೂರ್ವಕಾಲವೃತ್ತಾ 26 : 10 (ERVKN)
ಮೆರಾರೀ ಕುಲದವರ ದ್ವಾರಪಾಲಕರು ಯಾರೆಂದರೆ: ಹೋಸ ಮತ್ತು ಅವನ ಗಂಡುಮಕ್ಕಳಲ್ಲಿ ಆರಿಸಲ್ಪಟ್ಟ ಶಿಮ್ರಿ. (ಇವನು ಚೊಚ್ಚಲ ಮಗನಲ್ಲದಿದ್ದರೂ ತಂದೆಯು ಅವನನ್ನು ಪ್ರಧಾನನ್ನಾಗಿ ಆರಿಸಿದನು.)
1 ಪೂರ್ವಕಾಲವೃತ್ತಾ 26 : 11 (ERVKN)
ಅವನ ಎರಡನೆಯ ಮಗನು ಹಿಲ್ಕೀಯ; ಮೂರನೆಯವನು ಟೆಬಲ್ಯ. ನಾಲ್ಕನೆಯ ಮಗನು ಜೆಕರ್ಯ. ಹೀಗೆ ಒಟ್ಟು ಅವನಿಗೆ ಹದಿಮೂರು ಗಂಡುಮಕ್ಕಳೂ ಸಂಬಂಧಿಕರೂ ಇದ್ದರು.
1 ಪೂರ್ವಕಾಲವೃತ್ತಾ 26 : 12 (ERVKN)
ಇವರೆಲ್ಲಾ ದೇವಾಲಯದ ದ್ವಾರಪಾಲಕರಾಗಿದ್ದರು. ಅದರಲ್ಲಿ ಸೇವೆಮಾಡುತ್ತಿರುವ ಇತರರಂತೆಯೇ ಇವರೂ ದೇವಾಲಯದ ದ್ವಾರಗಳನ್ನು ಕಾಯುತ್ತಿದ್ದರು.
1 ಪೂರ್ವಕಾಲವೃತ್ತಾ 26 : 13 (ERVKN)
ಪ್ರತಿಯೊಂದು ಕುಟುಂಬಕ್ಕೆ ಒಂದೊಂದು ದ್ವಾರದ ಜವಾಬ್ದಾರಿಕೆಯನ್ನು ಚೀಟುಹಾಕಿ ಕೊಡಲಾಯಿತು.
1 ಪೂರ್ವಕಾಲವೃತ್ತಾ 26 : 14 (ERVKN)
ಶೆಲೆಮ್ಯನಿಗೆ ಪೂರ್ವದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು; ಅವನ ಮಗನಾದ ಜೆಕರ್ಯನಿಗೆ ಉತ್ತರ ದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು. ಇವನು ಒಳ್ಳೆಯ ಸಲಹೆಗಾರನಾಗಿದ್ದನು.
1 ಪೂರ್ವಕಾಲವೃತ್ತಾ 26 : 15 (ERVKN)
ಓಬೇದೆದೋಮನಿಗೆ ದಕ್ಷಿಣದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು. ಇವನ ಮಕ್ಕಳಿಗೆ ಬೆಲೆಬಾಳುವ ಸಾಮಾಗ್ರಿಗಳ ಉಗ್ರಾಣದ ಕೋಣೆಯನ್ನು ಕಾಯುವ ಕೆಲಸ ದೊರೆಯಿತು.
1 ಪೂರ್ವಕಾಲವೃತ್ತಾ 26 : 16 (ERVKN)
ಶುಪ್ಪೀಮ್ ಮತ್ತು ಹೋಸ ಎಂಬವರಿಗೆ ಪಶ್ಚಿಮದ ಬಾಗಿಲನ್ನು ಮತ್ತು ಮೇಲ್ದಾರಿಯಲ್ಲಿದ್ದ ಶೆಲ್ಲೆಕೆತ್ ಬಾಗಿಲನ್ನು ಕಾಯುವ ಕೆಲಸ ದೊರೆಯಿತು. ಕಾವಲುಗಾರರು ಪಕ್ಕಪಕ್ಕದಲ್ಲಿಯೇ ನಿಂತುಕೊಳ್ಳುತ್ತಿದ್ದರು.
1 ಪೂರ್ವಕಾಲವೃತ್ತಾ 26 : 17 (ERVKN)
ಪ್ರತಿದಿನ ಪೂರ್ವದಿಕ್ಕಿನ ಬಾಗಿಲಿನಲ್ಲಿ ಆರು ಮಂದಿ ಲೇವಿಯರು ಕಾವಲಿಗಿದ್ದರು; ಉತ್ತರದಿಕ್ಕಿನ ಬಾಗಿಲಿನಲ್ಲಿ ಪ್ರತಿದಿನ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ದಕ್ಷಿಣದ ಬಾಗಿಲಿನಲ್ಲಿ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ಇಬ್ಬರು ಲೇವಿಯರು ಬೆಲೆಬಾಳುವ ವಸ್ತುಗಳ ಕೋಣೆಗೆ ಕಾವಲಾಗಿದ್ದರು.
1 ಪೂರ್ವಕಾಲವೃತ್ತಾ 26 : 18 (ERVKN)
ಪಶ್ಚಿಮದ ಅಂಗಳದಲ್ಲಿ ನಾಲ್ಕು ಮಂದಿ ಕಾವಲುಗಾರರಿದ್ದರು.
1 ಪೂರ್ವಕಾಲವೃತ್ತಾ 26 : 19 (ERVKN)
ಅಂಗಳಕ್ಕೆ ಹೋಗುವ ದಾರಿಯನ್ನು ಕಾಯಲು ಇಬ್ಬರು ಕಾವಲುಗಾರರಿದ್ದರು. ಹೀಗೆ ಇವರೆಲ್ಲಾ ದ್ವಾರಪಾಲಕರ ತಂಡಗಳು. ಇವರು ಕೋರಹ ಮತ್ತು ಮೆರಾರೀಯ ವಂಶದವರು.
1 ಪೂರ್ವಕಾಲವೃತ್ತಾ 26 : 20 (ERVKN)
ಅಹೀಯನು ಲೇವಿ ಕುಲದವನಾಗಿದ್ದನು. ಇವನು ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಯಾಗಿದ್ದನು. ಅಲ್ಲದೆ ಪವಿತ್ರ ಸಾಮಾಗ್ರಿಗಳನ್ನು ಇಡುವ ಸ್ಥಳದ ಮೇಲೆಯೂ ಇವನು ಅಧಿಕಾರಿಯಾಗಿದ್ದನು.
1 ಪೂರ್ವಕಾಲವೃತ್ತಾ 26 : 21 (ERVKN)
ಲದ್ದಾನ್ಯನು ಗೇರ್ಷೋಮ್ ಕುಲದವನಾಗಿದ್ದನು. ಯೆಹೀಯೇಲೀಯು ಲದ್ದಾನ್ ಕುಲದ ನಾಯಕರಲ್ಲೊಬ್ಬನು.
1 ಪೂರ್ವಕಾಲವೃತ್ತಾ 26 : 22 (ERVKN)
ಯೆಹೀಯೇಲೀಯ ಗಂಡುಮಕ್ಕಳು: ಜೀತಾಮ್ ಮತ್ತು ಅವನ ತಮ್ಮನಾದ ಯೋವೇಲ. ಇವರು ಸಹ ದೇವಾಲಯದ ಬೆಲೆಬಾಳುವ ವಸ್ತುಗಳ ಅಧಿಕಾರಿಗಳಾಗಿದ್ದರು.
1 ಪೂರ್ವಕಾಲವೃತ್ತಾ 26 : 23 (ERVKN)
ಇವರಲ್ಲದೆ ಅಮ್ರಾಮ್, ಇಚ್ಹಾರ್, ಹೆಬ್ರೋನ್, ಮತ್ತು ಉಜ್ಜೀಯೇಲ್ ಇವರ ಕುಲಗಳಿಂದ ಬೇರೆ ನಾಯಕರನ್ನು ಆರಿಸಿಕೊಂಡರು.
1 ಪೂರ್ವಕಾಲವೃತ್ತಾ 26 : 24 (ERVKN)
ಶೆಬೂವೇಲನು ದೇವಾಲಯದ ಅಮೂಲ್ಯ ವಸ್ತುಗಳಿಗೆ ಅಧಿಕಾರಿಯಾಗಿದ್ದನು. ಇವನು ಗೇರ್ಷೋಮನ ಮಗ. ಗೇರ್ಷೋಮನು ಮೋಶೆಯ ಮಗ.
1 ಪೂರ್ವಕಾಲವೃತ್ತಾ 26 : 25 (ERVKN)
ಶೆಬೂವೇಲನ ಸಂಬಂಧಿಕರು ಯಾರೆಂದರೆ: ಎಲೀಯೆಜೆರನ ಮಗನಾದ ರೆಹಬ್ಯ; ರೆಹಬ್ಯನ ಮಗನಾದ ಯೆತಾಯ; ಯೆತಾಯನ ಮಗನಾದ ಯೋರಾವ್; ಯೋರಾವುನ ಮಗನಾದ ಜಿಕ್ರೀ; ಮತ್ತು ಜಿಕ್ರೀಯ ಮಗನಾದ ಶೆಲೋಮೋತ್.
1 ಪೂರ್ವಕಾಲವೃತ್ತಾ 26 : 26 (ERVKN)
ದಾವೀದನು ದೇವಾಲಯಕ್ಕೋಸ್ಕರ ಸಂಗ್ರಹಿಸಿದ ಎಲ್ಲಾ ವಸ್ತುಗಳಿಗೆ ಶೆಲೋಮೋತನೂ ಅವನ ಸಂಬಂಧಿಕರೂ ಅಧಿಕಾರಿಗಳಾಗಿದ್ದರು. ಸೈನ್ಯಾಧಿಕಾರಿಗಳು ದೇವಾಲಯವನ್ನು ಕಟ್ಟಲು ಸಾಮಾಗ್ರಿಗಳನ್ನು ಒದಗಿಸಿದರು.
1 ಪೂರ್ವಕಾಲವೃತ್ತಾ 26 : 27 (ERVKN)
ಯುದ್ಧದಲ್ಲಿ ಗೆದ್ದ ವಸ್ತುಗಳಲ್ಲಿ ಕೆಲವನ್ನು ದೇವಾಲಯ ಕಟ್ಟಲು ಎತ್ತಿಡಲು ತೀರ್ಮಾನಿಸಿದರು.
1 ಪೂರ್ವಕಾಲವೃತ್ತಾ 26 : 28 (ERVKN)
ಶೆಲೋಮೋತ್ ಮತ್ತು ಅವನ ಸಂಬಂಧಿಕರೂ ಪ್ರವಾದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂಯಳ ಮಗನಾದ ಯೋವಾಬನೂ ದೇವರಿಗೆಂದು ಕೊಟ್ಟಿದ್ದ ಪವಿತ್ರವಸ್ತುಗಳ ಮೇಲ್ವಿಚಾರಕರಾಗಿದ್ದರು.
1 ಪೂರ್ವಕಾಲವೃತ್ತಾ 26 : 29 (ERVKN)
ಕೆನನ್ಯನು ಇಚ್ಹಾರ್ಯ ವಂಶದವನಾಗಿದ್ದನು. ಕೆನನ್ಯನೂ ಅವನ ಮಕ್ಕಳೂ ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ ಇಸ್ರೇಲಿನ ಅನೇಕ ಕಡೆಗಳಲ್ಲಿ ಕೆಲಸ ಮಾಡಿದರು.
1 ಪೂರ್ವಕಾಲವೃತ್ತಾ 26 : 30 (ERVKN)
ಹಷಬ್ಯನು ಹೆಬ್ರೋನ್ ಸಂತಾನದವನಾಗಿದ್ದನು. ಇವನೂ ಇವನ ಸಂಬಂಧಿಕರೂ ಜೋರ್ಡನ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ಯೆಹೋವನ ಸೇವೆಗೂ ಅರಸನ ಕಾರ್ಯಕ್ಕೂ ಅಧಿಕಾರಿಗಳಾಗಿದ್ದರು. ಹಷಬ್ಯನ ವರ್ಗದಲ್ಲಿ ಒಟ್ಟು ಒಂದು ಸಾವಿರದ ಏಳುನೂರು ಮಂದಿ ಸಾಮರ್ಥ್ಯಶಾಲಿಗಳಿದ್ದರು.
1 ಪೂರ್ವಕಾಲವೃತ್ತಾ 26 : 31 (ERVKN)
ಹೆಬ್ರೋನ್ ಸಂತಾನದ ಚರಿತ್ರೆಗನುಸಾರವಾಗಿ ಯೆರೀಯನು ಅವರ ಅಧಿಪತಿಯಾಗಿದ್ದನು. ದಾವೀದನು ನಲವತ್ತು ವರುಷ ಇಸ್ರೇಲಿನ ಅರಸನಾಗಿದ್ದ ಕಾಲದಲ್ಲಿ ತನ್ನ ಜನರ ಚರಿತ್ರೆಯನ್ನು ಕಂಡುಹಿಡಿದು ದಾಖಲೆ ಮಾಡಲು ಆಜ್ಞೆಯಿತ್ತಿದ್ದನು. ಗಿಲ್ಯಾದಿನ ಯಾಜೇರ್ ಎಂಬಲ್ಲಿ ಹೆಬ್ರೋನ್ ಸಂತಾನಕ್ಕೆ ಸೇರಿದವರಲ್ಲಿ ಬಹಳ ಮಂದಿ ಅನುಭವಶಾಲಿಗಳಾದ ಕಾರ್ಮಿಕರು ದೊರಕಿದರು.
1 ಪೂರ್ವಕಾಲವೃತ್ತಾ 26 : 32 (ERVKN)
ಯೆರೀಯನಿಗೆ ಎರಡು ಸಾವಿರದ ಏಳುನೂರು ಮಂದಿ ಸಂಬಂಧಿಕರಿದ್ದರು. ಇವರೆಲ್ಲಾ ಬಲಾಢ್ಯರೂ ಕುಟುಂಬಕ್ಕೆ ನಾಯಕರುಗಳೂ ಆಗಿದ್ದರು. ದಾವೀದನು ಇವರೆಲ್ಲರಿಗೂ ರೂಬೇನ್, ಗಾದ್, ಅರ್ಧಮನಸ್ಸೆಯವರ ಪ್ರಾಂತ್ಯಗಳಲ್ಲಿ ಯೆಹೋವನಿಗೆ ಸಂಬಂಧಿಸಿದ ಕಾರ್ಯಗಳನ್ನು, ರಾಜನಿಗೆ ಸಂಬಂಧಿಸಿದ ಕಾರ್ಯಗಳನ್ನು ಮಾಡಲು ನೇಮಕ ಮಾಡಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32

BG:

Opacity:

Color:


Size:


Font: