1 ಪೂರ್ವಕಾಲವೃತ್ತಾ 27 : 1 (ERVKN)
ಸೈನಿಕ ತಂಡಗಳು ಅರಸನ ಸೈನ್ಯದಲ್ಲಿ ಸೇವೆಮಾಡಿದವರ ಪಟ್ಟಿ. ಒಂದೊಂದು ತಂಡದವರು, ಇಸ್ರೇಲಿನ ಸೈನ್ಯಾಧಿಕಾರಿಗಳು, ಸಹಸ್ರಾಧಿಪತಿಗಳು ಮತ್ತು ಇತರ ಅಧಿಕಾರಿಗಳು ವರ್ಷದ ಆಯಾ ತಿಂಗಳಲ್ಲಿ ತಮ್ಮ ತಂಡದ ಸರದಿಯ ಪ್ರಕಾರ ಅರಸನ ವಿವಿಧ ಸೇವೆಮಾಡುತ್ತಿದ್ದರು. ಸೈನ್ಯದ ಪ್ರತಿಯೊಂದು ತಂಡದಲ್ಲಿ ಇಪ್ಪತ್ನಾಲ್ಕು ಸಾವಿರ ಪುರುಷರಿದ್ದರು.
1 ಪೂರ್ವಕಾಲವೃತ್ತಾ 27 : 2 (ERVKN)
ಮೊದಲನೆಯ ತಿಂಗಳಲ್ಲಿ ಕಾರ್ಯಾಚರಣೆಯಲ್ಲಿರಬೇಕಾದ ತಂಡಕ್ಕೆ ಯಾಷೊಬ್ಬಾಮನು ಮುಖ್ಯಸ್ತನಾಗಿದ್ದನು. ಇವನು ಜಬ್ದೀಯೇಲನ ಮಗನಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.
1 ಪೂರ್ವಕಾಲವೃತ್ತಾ 27 : 3 (ERVKN)
ಯಾಷೊಬ್ಬಾಮನು ಪೆರೆಚನ ಸಂತತಿಯವನಾಗಿದ್ದನು. ಇವನು ವರ್ಷದ ಮೊದಲನೆಯ ತಿಂಗಳಲ್ಲಿ ಸೇವೆಮಾಡುವ ಸೈನ್ಯಾಧಿಕಾರಿಯಾಗಿದ್ದನು.
1 ಪೂರ್ವಕಾಲವೃತ್ತಾ 27 : 4 (ERVKN)
ಎರಡನೆಯ ತಿಂಗಳಿನ ಸೈನ್ಯಾಧಿಕಾರಿ ಅಹೋಹೀಯನಾದ ದೋದೈ. ಮಿಕ್ಲೋತ್ ಎಂಬವನು ಈ ತಂಡದ ನಾಯಕನಾಗಿದ್ದನು. ಒಟ್ಟು ಇಪ್ಪತ್ತನಾಲ್ಕು ಸಾವಿರ ಮಂದಿ ದೋದೈನ ತಂಡದಲ್ಲಿದ್ದರು.
1 ಪೂರ್ವಕಾಲವೃತ್ತಾ 27 : 5 (ERVKN)
ಮೂರನೆಯ ಸೈನ್ಯಾಧಿಪತಿಯು ಬೆನಾಯ. ಇವನು ಯೆಹೋಯಾದನ ಮಗನಾಗಿದ್ದನು. ಇವನು ಮಹಾಯಾಜಕನಾಗಿದ್ದನು. ಇವನೊಂದಿಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಕಾಲಾಳುಗಳು ಇದ್ದರು.
1 ಪೂರ್ವಕಾಲವೃತ್ತಾ 27 : 6 (ERVKN)
ಮೂವತ್ತು ವೀರರಲ್ಲಿ ಒಬ್ಬನಾದ ಬೆನಾಯನೇ ಇವನು. ಬೆನಾಯನು ಅವರ ನಾಯಕನಾಗಿದ್ದನು. ಬೆನಾಯನ ಮಗ ಅಮ್ಮೀಜಾಬಾದನು ಬೆನಾಯನ ತಂಡದ ಅಧಿಪತಿಯಾಗಿದ್ದನು.
1 ಪೂರ್ವಕಾಲವೃತ್ತಾ 27 : 7 (ERVKN)
ನಾಲ್ಕನೆಯ ಸೇನಾಪತಿಯು ಅಸಾಹೇಲ. ಇವನು ವರ್ಷದ ನಾಲ್ಕನೆಯ ತಿಂಗಳಿನಲ್ಲಿ ರಾಜ್ಯದ ಸೈನ್ಯದ ಅಧಿಪತಿಯಾಗಿದ್ದನು. ಇವನು ಯೋವಾಬನ ಸೋದರ. ಇವನ ನಂತರ ಅಸಾಹೇಲನ ಮಗನಾದ ಜೆಬದ್ಯನು ಸೈನ್ಯಾಧಿಕಾರಿಯಾದನು. ಅಸಾಹೇಲನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.
1 ಪೂರ್ವಕಾಲವೃತ್ತಾ 27 : 8 (ERVKN)
ಐದನೆಯ ಸೈನ್ಯಾಧಿಕಾರಿಯು ಶಮ್ಹೂತ. ಇವನು ಇಜ್ರಾಹ್ಯನ ಸಂತತಿಯವನಾಗಿದ್ದನು. ವರ್ಷದ ಐದನೆಯ ತಿಂಗಳಿನ ಸೈನ್ಯದ ಮುಖ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
1 ಪೂರ್ವಕಾಲವೃತ್ತಾ 27 : 9 (ERVKN)
ಆರನೆಯ ಸೈನ್ಯಾಧಿಪತಿಯು ಐರನು. ಇವನು ವರ್ಷದ ಆರನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನು ತೆಕೋವನದ ಇಕ್ಕೇಷನ ಮಗ. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
1 ಪೂರ್ವಕಾಲವೃತ್ತಾ 27 : 10 (ERVKN)
ಹೆಲೆಚನು ಏಳನೆಯ ಸೈನ್ಯಾಧಿಕಾರಿ. ವರ್ಷದ ಏಳನೆಯ ತಿಂಗಳಲ್ಲಿ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನು ಎಫ್ರಾಯೀಮ್ ಸಂತತಿಯ ಪೆಲೋನ್ಯನಾಗಿದ್ದನು. ಇವನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
1 ಪೂರ್ವಕಾಲವೃತ್ತಾ 27 : 11 (ERVKN)
ಎಂಟನೆಯ ಸೇನಾಧಿಪತಿಯ ಹೆಸರು ಸಿಬ್ಬಕೈ. ಇವನು ಹುಷ ಊರಿನ ಜೆರಹನ ಸಂತತಿಯವನು. ವರ್ಷದ ಎಂಟನೆಯ ತಿಂಗಳಿನ ಸೇನಾಧಿಪತಿ. ಇವನ ಕೈ ಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
1 ಪೂರ್ವಕಾಲವೃತ್ತಾ 27 : 12 (ERVKN)
ಒಂಭತ್ತನೆಯ ಸೇನಾಪತಿ ಅಬೀಯೆಜೆರ್. ಇವನು ಅನತೋತ್ ಊರಿನ ಬೆನ್ಯಾಮೀನ್ ಕುಲದವನು. ವರ್ಷದ ಒಂಭತ್ತನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
1 ಪೂರ್ವಕಾಲವೃತ್ತಾ 27 : 13 (ERVKN)
ಹತ್ತನೆಯ ಸೇನಾಪತಿ ಮಹರೈ. ಇವನು ನೆಟೋಫದ ಜೆರಹನ ಸಂತತಿಯವನು. ವರ್ಷದ ಹತ್ತನೆಯ ತಿಂಗಳಿಗೆ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
1 ಪೂರ್ವಕಾಲವೃತ್ತಾ 27 : 14 (ERVKN)
ಹನ್ನೊಂದನೆಯ ಸೇನಾಪತಿ ಪಿರ್ರಾತೋನ್ಯನಾದ ಬೆನಾಯ. ಇವನು ಎಫ್ರಾಯೀಮ್ ಕುಲದ ಪಿರ್ರಾತೋನ್ ಎಂಬಲ್ಲಿಂದ ಬಂದವನು. ವರ್ಷದ ಹನ್ನೊಂದನೆಯ ತಿಂಗಳಿಗೆ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.
1 ಪೂರ್ವಕಾಲವೃತ್ತಾ 27 : 15 (ERVKN)
ಹನ್ನೆರಡನೆಯ ಸೇನಾಪತಿ ಹೆಲ್ದೈ. ಇವನು ನೆಟೋಫ ಊರಿನ ಒತ್ನೀಯೇಲನ ಸಂತತಿಯವನು. ವರ್ಷದ ಹನ್ನೆರಡನೆಯ ತಿಂಗಳಿನಲ್ಲಿ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.
1 ಪೂರ್ವಕಾಲವೃತ್ತಾ 27 : 16 (ERVKN)
ಕುಲಪ್ರಧಾನರು ಇಸ್ರೇಲ್ ಕುಲಗಳ ನಾಯಕರು ಯಾರೆಂದರೆ: ರೂಬೇನ್ಯರಲ್ಲಿ ಜಿಕ್ರೀಯ ಮಗ ಎಲೀಯೆಜರ್. ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಫಟ್ಯ.
1 ಪೂರ್ವಕಾಲವೃತ್ತಾ 27 : 17 (ERVKN)
ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ. ಆರೋನ್ಯರಲ್ಲಿ ಚಾದೋಕ್.
1 ಪೂರ್ವಕಾಲವೃತ್ತಾ 27 : 18 (ERVKN)
ಯೆಹೂದ್ಯರಲ್ಲಿ ಎಲೀಹು (ದಾವೀದನ ಅಣ್ಣಂದಿರಲ್ಲೊಬ್ಬನು.) ಇಸ್ಸಾಕಾರರಲ್ಲಿ ಮೀಕಾಯೇಲನ ಮಗ ಒಮ್ರಿ.
1 ಪೂರ್ವಕಾಲವೃತ್ತಾ 27 : 19 (ERVKN)
ಜೆಬೂಲೂನ್ಯರಲ್ಲಿ ಓಬದ್ಯನ ಮಗನಾದ ಇಷ್ಮಾಯ. ನಫ್ತಾಲ್ಯರಲ್ಲಿ ಅಜ್ರೀಯೇಲನ ಮಗನಾದ ಯೆರೀಮೋತ್.
1 ಪೂರ್ವಕಾಲವೃತ್ತಾ 27 : 20 (ERVKN)
ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯನು. ಪಶ್ಚಿಮ ಮನಸ್ಸೆಯವರಲ್ಲಿ ಪೆದಾಯನ ಮಗ ಯೋವೇಲ್.
1 ಪೂರ್ವಕಾಲವೃತ್ತಾ 27 : 21 (ERVKN)
ಪೂರ್ವ ಮನಸ್ಸೆಯವರಲ್ಲಿ ಜೆಕರ್ಯನ ಮಗ ಇದ್ದೋ. ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗ ಯಗಸೀಯೇಲ್.
1 ಪೂರ್ವಕಾಲವೃತ್ತಾ 27 : 22 (ERVKN)
ದಾನ್ಯರಲ್ಲಿ ಯೆರೋಹಾಮನ ಮಗ ಅಜರೇಲ್. ಇವರು ಇಸ್ರೇಲ್ ಗೋತ್ರಪ್ರಧಾನರು.
1 ಪೂರ್ವಕಾಲವೃತ್ತಾ 27 : 23 (ERVKN)
ದಾವೀದನು ಇಸ್ರೇಲರನ್ನು ಲೆಕ್ಕಿಸಿದ್ದು ದೇವರು ಇಸ್ರೇಲರನ್ನು ಆಕಾಶದ ನಕ್ಷತ್ರದಷ್ಟು ಹೆಚ್ಚಿಸುವೆನೆಂದು ವಾಗ್ದಾನ ಮಾಡಿದ್ದ ಪ್ರಕಾರ ಇಸ್ರೇಲರ ಸಂಖ್ಯೆ ಅಪರಿಮಿತವಾಗಿತ್ತು. ಆದ್ದರಿಂದ ದಾವೀದನು ಇಪ್ಪತ್ತು ವರ್ಷ ಪ್ರಾಯದ ಮೇಲ್ಪಟ್ಟ ಗಂಡಸರನ್ನು ಮಾತ್ರ ಲೆಕ್ಕಿಸುವ ಆಲೋಚನೆ ಮಾಡಿದನು.
1 ಪೂರ್ವಕಾಲವೃತ್ತಾ 27 : 24 (ERVKN)
ಚೆರೂಯಳ ಮಗನಾದ ಯೋವಾಬನು ಲೆಕ್ಕಿಸುವ ಕಾರ್ಯ ಪ್ರಾರಂಭಿಸಿದನು. ಆದರೆ ಅವನು ಪೂರ್ಣಗೊಳಿಸಲಿಲ್ಲ. ದೇವರು ಇಸ್ರೇಲರ ಮೇಲೆ ಕೋಪಗೊಂಡನು. ಇದರಿಂದಾಗಿ ಇಸ್ರೇಲರ ಜನಸಂಖ್ಯೆಯನ್ನು ದಾವೀದನ ಚರಿತ್ರಾ ಪುಸ್ತಕದಲ್ಲಿ ದಾಖಲೆ ಮಾಡಲಿಲ್ಲ.
1 ಪೂರ್ವಕಾಲವೃತ್ತಾ 27 : 25 (ERVKN)
ಅರಸನ ಆಡಳಿತ ವರ್ಗದವರು ಅರಸನ ಆಸ್ತಿಗೆ ಜವಾಬ್ದಾರರಾಗಿದ್ದವರ ಪಟ್ಟಿ: ಅದೀಯೇಲನ ಮಗನಾದ ಅಜ್ಮಾವೆತ್ ರಾಜನ ಉಗ್ರಾಣಗಳ ಅಧಿಕಾರಿಯಾಗಿದ್ದನು. ಉಜ್ಜೀಯನ ಮಗನಾದ ಯೋನಾತಾನ್ ಚಿಕ್ಕ ಊರುಗಳಲ್ಲಿ, ಹಳ್ಳಿಗಳಲ್ಲಿ, ಹೊಲಗಳಲ್ಲಿ ಮತ್ತು ಗೋಪುರಗಳಲ್ಲಿ ಇದ್ದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.
1 ಪೂರ್ವಕಾಲವೃತ್ತಾ 27 : 26 (ERVKN)
ಕೆಲೂಬನ ಮಗನಾದ ಎಜ್ರೀಯು ರಾಜನ ವ್ಯವಸಾಯಗಾರರಿಗೆ ಅಧಿಕಾರಿಯಾಗಿದ್ದನು.
1 ಪೂರ್ವಕಾಲವೃತ್ತಾ 27 : 27 (ERVKN)
ರಾಮಾದ ಶಿಮ್ಮೀಯು ರಾಜನ ದ್ರಾಕ್ಷಿತೋಟಗಳ ಅಧಿಕಾರಿಯಾಗಿದ್ದನು. ಶಿಪ್ಮೀಯದ ಜಬ್ದೀಯು ರಾಜನ ದ್ರಾಕ್ಷಿತೋಟಗಳಿಂದ ದೊರಕಿದ ದ್ರಾಕ್ಷಾರಸದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.
1 ಪೂರ್ವಕಾಲವೃತ್ತಾ 27 : 28 (ERVKN)
ಗೆದೆರಿನ ಬಾಳ್ಹಾನಾನ್ ಪಶ್ಚಿಮದ ಬೆಟ್ಟಪ್ರದೇಶದಲ್ಲಿ ಆಲಿವ್ ಮರಗಳ ಮತ್ತು ಸಿಖಮೊರ್ ಮರಗಳ ತೋಪುಗಳಿಗೆ ಅಧಿಕಾರಿಯಾಗಿದ್ದನು. ಯೋವಾಷನು ಆಲಿವ್ ಎಣ್ಣೆಯ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.
1 ಪೂರ್ವಕಾಲವೃತ್ತಾ 27 : 29 (ERVKN)
ಶಾರೋನಿನ ಶಿಟ್ರೈಯು ಶಾರೋನಿನ ಸುತ್ತಮುತ್ತಲಿದ್ದ ರಾಜನ ಕುರಿದನಗಳ ಹಿಂಡುಗಳ ಅಧಿಕಾರಿಯಾಗಿದ್ದನು. ಅದ್ಲ್ಯೆಯ ಮಗನಾದ ಶಾಫಾಟನುತಗ್ಗು ಪ್ರದೇಶಗಳಲ್ಲಿದ್ದ ರಾಜನ ಪಶುಗಳ ಹಿಂಡುಗಳಿಗೆ ಅಧಿಕಾರಿಯಾಗಿದ್ದನು.
1 ಪೂರ್ವಕಾಲವೃತ್ತಾ 27 : 30 (ERVKN)
ಇಷ್ಮಾಯೇಲ್ಯನಾದ ಓಬೀಲನು ಒಂಟೆಗಳ ಮೇಲೆ ಅಧಿಕಾರಿಯಾಗಿದ್ದನು. ಮೇರೊನೋತ್ಯನಾದ ಯೆಹ್ದೆಯು ರಾಜನ ಕತ್ತೆಗಳ ಹಿಂಡಿಗೆ ಅಧಿಕಾರಿಯಾಗಿದ್ದನು.
1 ಪೂರ್ವಕಾಲವೃತ್ತಾ 27 : 31 (ERVKN)
ಹಗ್ರೀಯನಾದ ಯಾಜೀಜನು ರಾಜನ ಕುರಿಹಿಂಡುಗಳ ಮೇಲೆ ಅಧಿಕಾರಿಯಾಗಿದ್ದನು. ಇವರೆಲ್ಲರೂ ರಾಜನ ಆಸ್ತಿಪಾಸ್ತಿಗಳ ಮೇಲ್ವಿಚಾರಕರಾಗಿದ್ದರು.
1 ಪೂರ್ವಕಾಲವೃತ್ತಾ 27 : 32 (ERVKN)
ದಾವೀದನ ಚಿಕ್ಕಪ್ಪನಾದ ಯೋನಾತಾನನು ಉತ್ತಮ ಸಲಹೆಗಾರನಾಗಿದ್ದನು. ಹಕ್ಮೋನಿಯ ಮಗನಾದ ಯೆಹೀಯೇಲನು ರಾಜನ ಗಂಡುಮಕ್ಕಳನ್ನು ಪಾಲನೆ ಮಾಡುತ್ತಿದ್ದನು.
1 ಪೂರ್ವಕಾಲವೃತ್ತಾ 27 : 33 (ERVKN)
ಅಹೀತೋಫೆಲನು ರಾಜನ ಮಂತ್ರಾಲೋಚಕನಾಗಿದ್ದನು. ಹೂಷೈ ರಾಜನ ಮಿತ್ರನಾಗಿದ್ದನು. ಇವನು ಅರ್ಕೀಯ ಜನರಿಗೆ ಸೇರಿದವನಾಗಿದ್ದನು.
1 ಪೂರ್ವಕಾಲವೃತ್ತಾ 27 : 34 (ERVKN)
ಬೆನಾಯನ ಮಗನಾದ ಯೆಹೋಯಾದವನೂ ಎಬ್ಯಾತಾರನೂ ಅಹೀತೋಫೆಲನ ತರುವಾಯ ರಾಜನ ಮಂತ್ರಾಲೋಚಕರಾದರು. ರಾಜನ ಸೈನ್ಯಕ್ಕೆ ಯೋವಾಬನು ಪ್ರಧಾನಸೇನಾಪತಿಯಾಗಿದ್ದನು.
❮
❯