1 ಪೂರ್ವಕಾಲವೃತ್ತಾ 7 : 1 (ERVKN)
ಇಸ್ಸಾಕಾರನ ಸಂತತಿಯವರು ಇಸ್ಸಾಕಾರನಿಗೆ ನಾಲ್ಕು ಮಂದಿ ಗಂಡುಮಕ್ಕಳು: ತೋಲ, ಪೂವ, ಯಾಶೂಬ್ ಮತ್ತು ಶಿಮ್ರೋನ್.
1 ಪೂರ್ವಕಾಲವೃತ್ತಾ 7 : 2 (ERVKN)
ತೋಲನ ಗಂಡುಮಕ್ಕಳು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರೆಲ್ಲಾ ಕುಲಪ್ರಧಾನರಾಗಿದ್ದರು. ಇವರೂ ಇವರ ಸಂತತಿಯವರೂ ರಣವೀರರಾಗಿದ್ದರು. ಅವರ ಸಂತತಿಯು ವೃದ್ಧಿಯಾದ ಕಾರಣ ಅರಸನಾದ ದಾವೀದನ ಸಮಯದಲ್ಲಿ ಅವರಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು ಮಂದಿ ಕಾಲಾಳುಗಳು ಯುದ್ಧಕ್ಕೆ ತಯಾರಾಗಿದ್ದರು.
1 ಪೂರ್ವಕಾಲವೃತ್ತಾ 7 : 3 (ERVKN)
ಉಜ್ಜೀಯ ಮಗನು ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು: ಮೀಕಾಯೇಲ್, ಓಬದ್ಯ, ಯೋವೇಲ್ ಮತ್ತು ಇಷ್ಷೀಯ. ಈ ಐದು ಮಂದಿಯೂ ತಮ್ಮ ಗೋತ್ರಗಳ ನಾಯಕರುಗಳಾಗಿದ್ದರು.
1 ಪೂರ್ವಕಾಲವೃತ್ತಾ 7 : 4 (ERVKN)
ಇವರ ಚರಿತ್ರೆಯ ಪ್ರಕಾರ ಇವರಲ್ಲಿ ಮೂವತ್ತಾರು ಸಾವಿರ ಮಂದಿ ಯುದ್ಧಕ್ಕೆ ಹೋಗಲು ಸಮರ್ಥರಾಗಿದ್ದರು. ಇವರಿಗೆಲ್ಲಾ ಅನೇಕ ಹೆಂಡತಿಯರು ಮತ್ತು ಮಕ್ಕಳು ಇದ್ದದ್ದರಿಂದ ಇವರ ಕುಲವು ದೊಡ್ಡದಾಗಿತ್ತು.
1 ಪೂರ್ವಕಾಲವೃತ್ತಾ 7 : 5 (ERVKN)
ಸಂತಾನದ ಚರಿತ್ರೆಯ ಪ್ರಕಾರ ಇಸ್ಸಾಕಾರ್ ಕುಲದವರಲ್ಲಿದ್ದ ಯುದ್ಧವೀರರು ಎಂಭತ್ತೇಳು ಸಾವಿರ ಮಂದಿ.
1 ಪೂರ್ವಕಾಲವೃತ್ತಾ 7 : 6 (ERVKN)
ಬೆನ್ಯಾಮೀನನ ಸಂತತಿಯವರು ಬೆನ್ಯಾಮೀನನಿಗೆ ಮೂರು ಮಂದಿ ಗಂಡುಮಕ್ಕಳು: ಬೆಳ, ಬೆಕೆರ್ ಮತ್ತು ಯೆದೀಯಯೇಲ್.
1 ಪೂರ್ವಕಾಲವೃತ್ತಾ 7 : 7 (ERVKN)
ಬೆಳನಿಗೆ ಐದು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ. ಇವರೆಲ್ಲಾ ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರಲ್ಲಿ ಸಿದ್ಧರಾಗಿದ್ದ ಯುದ್ಧವೀರರು ಇಪ್ಪತ್ತೆರಡು ಸಾವಿರದ ಮೂವತ್ನಾಲ್ಕು ಮಂದಿ.
1 ಪೂರ್ವಕಾಲವೃತ್ತಾ 7 : 8 (ERVKN)
ಬೆಕೆರನ ಮಕ್ಕಳು ಯಾರೆಂದರೆ: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಅಲೆಮೆತ್. ಇವರೆಲ್ಲಾ ಬೆಕೆರನ ಮಕ್ಕಳು.
1 ಪೂರ್ವಕಾಲವೃತ್ತಾ 7 : 9 (ERVKN)
ಅವರ ಕುಲಚರಿತ್ರೆಯಲ್ಲಿ ಅವರ ನಾಯಕರುಗಳು ಯಾರೆಂಬುದನ್ನು ಬರೆಯಲಾಗಿದೆ. ಅವರಲ್ಲಿ ಯುದ್ಧಕ್ಕೆ ಸಿದ್ಧರಾಗಿದ್ದ ಇಪ್ಪತ್ತು ಸಾವಿರದ ಇನ್ನೂರು ಮಂದಿ ಸೈನಿಕರಿದ್ದರು.
1 ಪೂರ್ವಕಾಲವೃತ್ತಾ 7 : 10 (ERVKN)
ಯೆದೀಯಯೇಲನ ಮಗನು ಬಿಲ್ಹಾನ್. ಇವನ ಮಕ್ಕಳು ಯಾರೆಂದರೆ: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ್, ಜೇತಾನ್, ತಾರ್ಷೀಷ್ ಮತ್ತು ಅಹೀಷೆಹರ್.
1 ಪೂರ್ವಕಾಲವೃತ್ತಾ 7 : 11 (ERVKN)
ಯೆದೀಯಯೇಲನ ಎಲ್ಲಾ ಗಂಡುಮಕ್ಕಳು ತಮ್ಮ ಗೋತ್ರಗಳಿಗೆ ಪ್ರಧಾನರಾಗಿದ್ದರು. ಅವರಲ್ಲಿ ಯುದ್ಧಕ್ಕೆ ಸಿದ್ಧರಾಗಿದ್ದ ಹದಿನೇಳು ಸಾವಿರದ ಇನ್ನೂರು ಮಂದಿ ಸೈನಿಕರಿದ್ದರು.
1 ಪೂರ್ವಕಾಲವೃತ್ತಾ 7 : 12 (ERVKN)
ಶುಪ್ಪೀಮರು ಮತ್ತು ಹುಪ್ಪೀಮರು ಈರನ ಸಂತತಿಯವರಾಗಿದ್ದರು. ಹುಶೀಮನು ಅಹೇರನ ಮಗ.
1 ಪೂರ್ವಕಾಲವೃತ್ತಾ 7 : 13 (ERVKN)
ನಫ್ತಾಲಿಯ ಸಂತತಿಯವರು ನಫ್ತಾಲಿಯ ಗಂಡುಮಕ್ಕಳು: ಯಹಚಿಯೇಲ್, ಗೂನೀ, ಯೇಚೆರ್ ಮತ್ತು ಶಲ್ಲೂಮ್. ಇವರೆಲ್ಲಾ ಬಿಲ್ಹಳ ಸಂತತಿಯವರು.
1 ಪೂರ್ವಕಾಲವೃತ್ತಾ 7 : 14 (ERVKN)
ಮನಸ್ಸೆ ಸಂತತಿಯವರು ಮನಸ್ಸೆಯ ಸಂತತಿಯವರು ಯಾರೆಂದರೆ: ಮನಸ್ಸೆ ಮತ್ತು ಅವನ ಅರಾಮ್ಯದ ದಾಸಿಯಲ್ಲಿ ಹುಟ್ಟಿದ ಮಗ ಅಷ್ರೀಯೇಲ್; ಅವರಿಗೆ ಮಾಕೀರ್ ಎಂಬ ಇನ್ನೊಬ್ಬ ಮಗನಿದ್ದನು. ಇವನು ಗಿಲ್ಯಾದನ ತಂದೆ.
1 ಪೂರ್ವಕಾಲವೃತ್ತಾ 7 : 15 (ERVKN)
ಮಾಕೀರನು ಹುಪ್ಪೀಮನ ಮತ್ತು ಶುಪ್ಪೀಮನ ಸಹೋದರಿಯನ್ನು ಮದುವೆಯಾದನು. ಆಕೆಯ ಹೆಸರು ಮಾಕ. ಗಿಲ್ಯಾದನ ಮೊಮ್ಮಗನ ಹೆಸರು ಚೆಲೋಫಾದ್. ಇವನಿಗೆ ಹೆಣ್ಣುಮಕ್ಕಳೇ ಹುಟ್ಟಿದವು.
1 ಪೂರ್ವಕಾಲವೃತ್ತಾ 7 : 16 (ERVKN)
ಮಾಕೀರನ ಹೆಂಡತಿಯಾದ ಮಾಕಳು ಒಂದು ಗಂಡುಮಗುವನ್ನು ಹೆತ್ತು ಅವನಿಗೆ ಪೆರೆಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಇವನ ಗಂಡುಮಕ್ಕಳು ಯಾರೆಂದರೆ: ಊಲಾಮ್ ಮತ್ತು ರೆಕೆಮ್.
1 ಪೂರ್ವಕಾಲವೃತ್ತಾ 7 : 17 (ERVKN)
ಊಲಾಮನ ಮಗನು ಬೆದಾನ್. ಇವರೆಲ್ಲಾ ಗಿಲ್ಯಾದನ ಸಂತತಿಯವರು; ಗಿಲ್ಯಾದನು ಮಾಕೀರನ ಮಗ. ಮಾಕೀರನು ಮನಸ್ಸೆಯ ಮಗ.
1 ಪೂರ್ವಕಾಲವೃತ್ತಾ 7 : 18 (ERVKN)
ಮಾಕೀರನ ತಂಗಿ ಹಮ್ಮೋಲೆಕೆತಳಿಗೆ ಈಜ್ಡೋದ್, ಅಬೀಯೆಜೆರ್ ಮತ್ತು ಮಹ್ಲ ಎಂಬ ಗಂಡುಮಕ್ಕಳಿದ್ದರು.
1 ಪೂರ್ವಕಾಲವೃತ್ತಾ 7 : 19 (ERVKN)
ಶೆಮೀದನ ಮಕ್ಕಳು ಯಾರೆಂದರೆ: ಅಹ್ಯಾನ್, ಶೆಕೆಮ್, ಲಕ್ಹೀ ಮತ್ತು ಅನೀಯಾಮ್.
1 ಪೂರ್ವಕಾಲವೃತ್ತಾ 7 : 20 (ERVKN)
ಎಫ್ರಾಯೀಮನ ಸಂತತಿಯವರು ಎಫ್ರಾಯೀಮನ ಸಂತತಿಯವರು: ಎಫ್ರಾಯೀಮನ ಮಗನು ಶೂತೆಲಹ. ಶೂತೆಲಹನ ಮಗನು ಬೆರೆದ್; ಬೆರೆದನ ಮಗನು ತಹತ್. ತಹತನ ಮಗನು ಎಲ್ಲಾದ. ಎಲ್ಲಾದನ ಮಗನು ತಹತ್.
1 ಪೂರ್ವಕಾಲವೃತ್ತಾ 7 : 21 (ERVKN)
ತಹತನ ಮಗನು ಜಾಬಾದ್ ಮತ್ತು ಜಾಬಾದನ ಮಕ್ಕಳು ಶೂತೆಲಹ, ಎಜೆರ್, ಎಲ್ಲಾದ್ ಎಂಬುವರು. ಗತ್ ನಗರದ ಮೂಲನಿವಾಸಿಗಳು ಎಜೆರನನ್ನು ಮತ್ತು ಎಲ್ಲಾದನನ್ನು ಕೊಂದುಹಾಕಿದರು. ಯಾಕೆಂದರೆ ಎಜೆರನು ಮತ್ತು ಎಲ್ಲಾದನು ಗತ್ ಊರಿನವರ ದನಕುರಿಗಳನ್ನು ಕದ್ದುಕೊಳ್ಳಲು ಹೋಗಿದ್ದರು.
1 ಪೂರ್ವಕಾಲವೃತ್ತಾ 7 : 22 (ERVKN)
ಎಜೆರನು ಮತ್ತು ಎಲ್ಲಾದನ ತಂದೆ ಎಫ್ರಾಯೀಮನು. ತನ್ನ ಮಕ್ಕಳು ಸತ್ತದ್ದಕ್ಕಾಗಿ ಬಹಳ ದಿನಗಳ ತನಕ ಅವನು ಗೋಳಾಡಿದನು. ಅವನ ಕುಟುಂಬದವರೆಲ್ಲಾ ಬಂದು ಅವನನ್ನು ಸಂತೈಸಿದರು.
1 ಪೂರ್ವಕಾಲವೃತ್ತಾ 7 : 23 (ERVKN)
ಅನಂತರ ಎಫ್ರಾಯೀಮನ ಹೆಂಡತಿಯು ಇನ್ನೊಂದು ಗಂಡುಮಗುವನ್ನು ಹೆತ್ತಳು. ತಮ್ಮ ಕುಟುಂಬದಲ್ಲಿ ನಡೆದ ದುರ್ಘಟನೆಯ ನೆನಪಿಗಾಗಿ ಇವನಿಗೆ “ಬೆರೀಯ” ಎಂದು ಹೆಸರಿಟ್ಟರು.
1 ಪೂರ್ವಕಾಲವೃತ್ತಾ 7 : 24 (ERVKN)
ಎಫ್ರಾಯೀಮನ ಮಗಳ ಹೆಸರು ಶೇರಾ. ಅವಳು ಕೆಳಗಿನ ಬೇತ್ಹೋರೋನ್ ಮತ್ತು ಮೇಲಿನ ಬೇತ್ಹೋರೋನ್ ಮತ್ತು ಕೆಳಗಿನ ಉಜ್ಜೇನ್ಶೇರ ಮತ್ತು ಮೇಲಿನ ಉಜ್ಜೇನ್ಶೇರ ಪಟ್ಟಣಗಳನ್ನು ಕಟ್ಟಿಸಿದಳು.
1 ಪೂರ್ವಕಾಲವೃತ್ತಾ 7 : 25 (ERVKN)
ರೆಫಹನು ಬೆರೀಯನ ಮಗನು. ರೆಫಹನ ಮಗನು ರೆಷೆಫ್. ರೆಷೆಫನ ಮಗನು ತೆಲಹ. ತೆಲಹನ ಮಗನು ತಹನ್.
1 ಪೂರ್ವಕಾಲವೃತ್ತಾ 7 : 26 (ERVKN)
ಲದ್ದಾನನು ತಹನನ ಮಗ. ಅಮ್ಮೀಹೂದನು ಲದ್ದಾನನ ಮಗ. ಎಲೀಷಾಮನು ಅಮ್ಮೀಹೂದನ ಮಗ.
1 ಪೂರ್ವಕಾಲವೃತ್ತಾ 7 : 27 (ERVKN)
ನೋನನು ಎಲೀಷಾಮನ ಮಗ. ಯೆಹೋಶುವನು ನೋನನ ಮಗ.
1 ಪೂರ್ವಕಾಲವೃತ್ತಾ 7 : 28 (ERVKN)
ಎಫ್ರಾಯೀಮನ ಸಂತತಿಯವರು ವಾಸಿಸಿದ ಪಟ್ಟಣಗಳು ಯಾವುವೆಂದರೆ: ಬೇತೇಲ್ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಪೂರ್ವದಲ್ಲಿ ನಾರಾನ್; ಪಶ್ಚಿಮದಲ್ಲಿ ಗೆಜೆರ್ ಪಟ್ಟಣ ಮತ್ತು ಅದರ ಪಕ್ಕದಲ್ಲಿದ್ದ ಹಳ್ಳಿಗಳು; ಶೆಕೆಮ್ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು, ಅಯ್ಯಾ ಪಟ್ಟಣ ಮತ್ತು ಅದರ ಸಮೀಪದಲ್ಲಿದ್ದ ಹಳ್ಳಿಗಳು;
1 ಪೂರ್ವಕಾಲವೃತ್ತಾ 7 : 29 (ERVKN)
ಮನಸ್ಸೆಯ ಗಡಿಗೆ ಸಮೀಪದಲ್ಲಿದ್ದ ಊರುಗಳಾದ ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಮತ್ತು ಅದರ ಹತ್ತಿರದಲ್ಲಿದ್ದ ಸಣ್ಣ ಊರುಗಳು. ಯೋಸೇಫನ ಸಂತತಿಯವರು ಈ ಊರುಗಳಲ್ಲಿ ವಾಸವಾಗಿದ್ದರು. ಯೋಸೇಫನು ಇಸ್ರೇಲನ ಮಗನಾಗಿದ್ದನು.
1 ಪೂರ್ವಕಾಲವೃತ್ತಾ 7 : 30 (ERVKN)
ಆಶೇರನ ಸಂತತಿಯವರು ಆಶೇರನ ಗಂಡುಮಕ್ಕಳು ಯಾರೆಂದರೆ: ಇಮ್ನ, ಇಷ್ವ, ಇಷ್ವೀ ಮತ್ತು ಬೆರೀಯ. ಅವರ ತಂಗಿ ಸೆರಹ.
1 ಪೂರ್ವಕಾಲವೃತ್ತಾ 7 : 31 (ERVKN)
ಬೆರೀಯನ ಗಂಡುಮಕ್ಕಳು: ಹೆಬೆರ್ ಮತ್ತು ಮಲ್ಕೀಯೇಲ್. ಮಲ್ಕೀಯೇಲನು ಬಿರ್ಜೈತನ ತಂದೆ.
1 ಪೂರ್ವಕಾಲವೃತ್ತಾ 7 : 32 (ERVKN)
ಹೆಬೆರನ ಗಂಡುಮಕ್ಕಳು ಯಾರೆಂದರೆ: ಯಫ್ಲೇಟ್, ಶೋಮೇರ್, ಹೋತಾಮ್ ಮತ್ತು ಅವರ ತಂಗಿ ಶೂವ.
1 ಪೂರ್ವಕಾಲವೃತ್ತಾ 7 : 33 (ERVKN)
ಯಫ್ಲೇಟನ ಗಂಡುಮಕ್ಕಳು ಯಾರೆಂದರೆ: ಪಾಸಾಕ್, ಬಿಮ್ಹಾಲ್ ಮತ್ತು ಅಶ್ವಾತ್.
1 ಪೂರ್ವಕಾಲವೃತ್ತಾ 7 : 34 (ERVKN)
ಶೆಮೆರನ ಗಂಡುಮಕ್ಕಳು ಯಾರೆಂದರೆ: ಅಹೀ, ರೊಹ್ಗ, ಹುಬ್ಬ ಮತ್ತು ಅರಾಮ್.
1 ಪೂರ್ವಕಾಲವೃತ್ತಾ 7 : 35 (ERVKN)
ಶೆಮೆರನ ತಮ್ಮನ ಹೆಸರು ಹೆಲೆಮ್. ಇವನ ಗಂಡುಮಕ್ಕಳು ಯಾರೆಂದರೆ: ಚೋಫಹ, ಇಮ್ನ, ಶೇಲೆಷ್ ಮತ್ತು ಆಮಾಲ್.
1 ಪೂರ್ವಕಾಲವೃತ್ತಾ 7 : 36 (ERVKN)
ಚೋಫಹನ ಗಂಡುಮಕ್ಕಳು ಯಾರೆಂದರೆ: ಸೂಹ, ಹರ್ನೆಫೆರ್, ಶೂಗಾಲ್, ಬೇರೀ, ಇಮ್ರ,
1 ಪೂರ್ವಕಾಲವೃತ್ತಾ 7 : 37 (ERVKN)
ಬೆಚೆರ್, ಹೋದ್, ಶಮ್ಮ, ಶಿಲ್ಷ, ಇತ್ರಾನ್ ಮತ್ತು ಬೇರ.
1 ಪೂರ್ವಕಾಲವೃತ್ತಾ 7 : 38 (ERVKN)
ಯೆತೆರನ ಗಂಡುಮಕ್ಕಳು ಯಾರೆಂದರೆ: ಯೆಫುನ್ನೆ, ಪಿಸ್ಪ ಮತ್ತು ಅರಾ.
1 ಪೂರ್ವಕಾಲವೃತ್ತಾ 7 : 39 (ERVKN)
ಉಲ್ಲನ ಗಂಡುಮಕ್ಕಳು ಯಾರೆಂದರೆ: ಆರಹ, ಹನ್ನೀಯೇಲ್ ಮತ್ತು ರಿಚ್ಯ.
1 ಪೂರ್ವಕಾಲವೃತ್ತಾ 7 : 40 (ERVKN)
ಇವರೆಲ್ಲರೂ ಆಶೇರನ ಸಂತತಿಯವರು. ಇವರೆಲ್ಲರೂ ಕುಲಪ್ರಧಾನರಾಗಿದ್ದರು. ಅವರು ಸೈನಿಕರೂ ನಾಯಕರುಗಳೂ ಆಗಿದ್ದರು. ಅವರ ಕುಲದ ಇತಿಹಾಸದ ಪ್ರಕಾರ, ಒಟ್ಟು ಇಪ್ಪತ್ತಾರು ಸಾವಿರ ಮಂದಿ ಯುದ್ಧಕ್ಕೆ ಸಿದ್ಧರಾಗಿದ್ದ ಸೈನಿಕರಿದ್ದರು.
❮
❯