1 ಕೊರಿಂಥದವರಿಗೆ 1 : 1 (ERVKN)
ಪೌಲನು ಬರೆಯುತ್ತಿರುವ ಪತ್ರ. ಕ್ರಿಸ್ತ ಯೇಸುವಿನ ಅಪೊಸ್ತಲನಾಗುವುದಕ್ಕೆ ನಾನು ದೇವರ ಚಿತ್ತಾನುಸಾರವಾಗಿ ಕರೆಯುಲ್ಪಟ್ಟೆನು. ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ಸೊಸ್ಥೆನನೊಂದಿಗೆ ಬರೆಯುತ್ತಿದ್ದೇನೆ.
1 ಕೊರಿಂಥದವರಿಗೆ 1 : 2 (ERVKN)
ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.
1 ಕೊರಿಂಥದವರಿಗೆ 1 : 3 (ERVKN)
ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ದೊರೆಯಲಿ.
1 ಕೊರಿಂಥದವರಿಗೆ 1 : 4 (ERVKN)
ದೇವರು ಕ್ರಿಸ್ತ ಯೇಸುವಿನ ಮೂಲಕ ನಿಮಗೆ ಕೊಟ್ಟಿರುವ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
1 ಕೊರಿಂಥದವರಿಗೆ 1 : 5 (ERVKN)
ಯೇಸುವಿನಲ್ಲಿ ಸಕಲ ಆಶೀರ್ವಾದಗಳನ್ನು ಹೊಂದಿರುವ ನೀವು ವಾಕ್ಚತುರರೂ ಜ್ಞಾನಸಂಪನ್ನರೂ ಆಗಿದ್ದೀರಿ.
1 ಕೊರಿಂಥದವರಿಗೆ 1 : 6 (ERVKN)
ಕ್ರಿಸ್ತನ ವಿಷಯವಾದ ಸತ್ಯವು ನಿಮ್ಮಲ್ಲಿ ನಿರೂಪಿಸಲ್ಪಟ್ಟಿದೆ.
1 ಕೊರಿಂಥದವರಿಗೆ 1 : 7 (ERVKN)
ಹೀಗಿರಲು, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಪುನರಾಗಮನವನ್ನು ಎದುರುನೋಡುತ್ತಿರುವ ನೀವು ದೇವರಿಂದ ಬರುವ ಪ್ರತಿಯೊಂದು ವರವನ್ನು ಹೊಂದಿದವರಾಗಿದ್ದೀರಿ.
1 ಕೊರಿಂಥದವರಿಗೆ 1 : 8 (ERVKN)
ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.
1 ಕೊರಿಂಥದವರಿಗೆ 1 : 9 (ERVKN)
ದೇವರು ನಂಬಿಗಸ್ತನಾಗಿದ್ದಾನೆ. ದೇವರ ಮಗನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಜೀವದಲ್ಲಿ ಪಾಲುಹೊಂದಬೇಕೆಂದು ನಮ್ಮನ್ನು ಕರೆದಿರುವಾತನು ದೇವರೇ.
1 ಕೊರಿಂಥದವರಿಗೆ 1 : 10 (ERVKN)
ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.
1 ಕೊರಿಂಥದವರಿಗೆ 1 : 11 (ERVKN)
ನನ್ನ ಸಹೋದರ ಸಹೋದರಿಯರೇ, ಖ್ಲೊಯೆಯ ಮನೆಯಿಂದ ಬಂದಿದ್ದ ಕೆಲವರು ನಿಮ್ಮ ಬಗ್ಗೆ ನನಗೆ ಹೇಳಿದರು. ನಿಮ್ಮ ಮಧ್ಯದಲ್ಲಿ ವಾಗ್ವಾದಗಳಿರುವುದಾಗಿ ನನಗೆ ತಿಳಿಯಿತು.
1 ಕೊರಿಂಥದವರಿಗೆ 1 : 12 (ERVKN)
ಅಂದರೆ, ನಿಮ್ಮಲ್ಲಿ ಒಬ್ಬನು, "ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, "ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, "ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ.
1 ಕೊರಿಂಥದವರಿಗೆ 1 : 13 (ERVKN)
ಕ್ರಿಸ್ತನು ವಿಭಾಗವಾಗಿದ್ದಾನೋ? ಪೌಲನು ನಿಮಗೋಸ್ಕರ ಶಿಲುಬೆಯ ಮೇಲೆ ಸತ್ತನೇ? ಇಲ್ಲ! ನೀವು ಪೌಲನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರೋ? ಇಲ್ಲ!
1 ಕೊರಿಂಥದವರಿಗೆ 1 : 14 (ERVKN)
ನಿಮ್ಮಲ್ಲಿ ಕ್ರಿಸ್ಪನು ಮತ್ತು ಗಾಯನು ಇವರ ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಮಾಡಿಸಿಲ್ಲವಾದ್ದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
1 ಕೊರಿಂಥದವರಿಗೆ 1 : 15 (ERVKN)
ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವುದಾಗಿ ಹೇಳಲು ನಿಮ್ಮಲ್ಲಿ ಯಾರಿಗೂ ಈಗ ಸಾಧ್ಯವಿಲ್ಲವಾದ್ದರಿಂದ ನಾನು ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
1 ಕೊರಿಂಥದವರಿಗೆ 1 : 16 (ERVKN)
(ಸ್ತೆಫನನ ಮನೆಯವರಿಗಲ್ಲದೆ ಬೇರೆ ಯಾರಿಗೂ ದೀಕ್ಷಾಸ್ನಾನ ಮಾಡಿಸಿದಂತೆ ನನಗೆ ತೋರುವುದಿಲ್ಲ.)
1 ಕೊರಿಂಥದವರಿಗೆ 1 : 17 (ERVKN)
ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.
1 ಕೊರಿಂಥದವರಿಗೆ 1 : 18 (ERVKN)
ನಾಶನ ಮಾರ್ಗದಲ್ಲಿರುವ ಜನರಿಗೆ ಶಿಲುಬೆಯ ಉಪದೇಶವು ಮೂರ್ಖತನವಾಗಿದೆ. ಆದರೆ ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ಅದು ದೇವರ ಶಕ್ತಿಯಾಗಿದೆ.
1 ಕೊರಿಂಥದವರಿಗೆ 1 : 19 (ERVKN)
ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು. ಬುದ್ಧಿವಂತರ ಬುದ್ಧಿಯನ್ನು ಬೆಲೆಬಾಳದಂತೆ ಮಾಡುವೆನು.” ಯೆಶಾಯ 29:14
1 ಕೊರಿಂಥದವರಿಗೆ 1 : 20 (ERVKN)
ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.
1 ಕೊರಿಂಥದವರಿಗೆ 1 : 21 (ERVKN)
ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.
1 ಕೊರಿಂಥದವರಿಗೆ 1 : 22 (ERVKN)
ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರಿಗೆ ಜ್ಞಾನವು ಬೇಕಾಗಿದೆ.
1 ಕೊರಿಂಥದವರಿಗೆ 1 : 23 (ERVKN)
ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ.
1 ಕೊರಿಂಥದವರಿಗೆ 1 : 24 (ERVKN)
ದೇವರಿಂದ ಕರೆಯಲ್ಪಟ್ಟಿರುವ ಜನರು ಯೆಹೂದ್ಯರಾಗಿದ್ದರೂ ಯೆಹೂದ್ಯರಲ್ಲದವರಾಗಿದ್ದರೂ ಅವರಿಗೆ ಕ್ರಿಸ್ತನು ದೇವರ ಶಕ್ತಿಯಾಗಿದ್ದಾನೆ; ಮತ್ತು ದೇವರ ಜ್ಞಾನವಾಗಿದ್ದಾನೆ.
1 ಕೊರಿಂಥದವರಿಗೆ 1 : 25 (ERVKN)
ದೇವರ ಮೂಢತನವು ಸಹ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆಯು ಸಹ ಮನುಷ್ಯರ ಬಲಕ್ಕಿಂತಲೂ ಹೆಚ್ಚು ಶಕ್ತಿಯುತವಾಗಿದೆ.
1 ಕೊರಿಂಥದವರಿಗೆ 1 : 26 (ERVKN)
ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ.
1 ಕೊರಿಂಥದವರಿಗೆ 1 : 27 (ERVKN)
ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.
1 ಕೊರಿಂಥದವರಿಗೆ 1 : 28 (ERVKN)
ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೊ ಯಾವುದನ್ನು ದ್ವೇಷಿಸುತ್ತದೆಯೊ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೊ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು.
1 ಕೊರಿಂಥದವರಿಗೆ 1 : 29 (ERVKN)
ಹೀಗಿರಲು ದೇವರ ಮುಂದೆ ಹೆಮ್ಮೆಪಡಲು ಯಾರಿಗೂ ಆಸ್ಪದವಿಲ್ಲ.
1 ಕೊರಿಂಥದವರಿಗೆ 1 : 30 (ERVKN)
ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.
1 ಕೊರಿಂಥದವರಿಗೆ 1 : 31 (ERVKN)
ಆದ್ದರಿಂದ ಪವಿತ್ರ ಗ್ರಂಥವು ಹೇಳುವಂತೆ, "ಹೆಮ್ಮೆಪಡುವವನು ಪ್ರಭುವಿನಲ್ಲಿ ಮಾತ್ರ ಹೆಮ್ಮೆಪಡಬೇಕು.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31

BG:

Opacity:

Color:


Size:


Font: