1 ಕೊರಿಂಥದವರಿಗೆ 2 : 1 (ERVKN)
ಪ್ರಿಯ ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬಂದಿದ್ದಾಗ, ನಾನು ನಿಮಗೆ ದೇವರ ಸತ್ಯವನ್ನು ತಿಳಿಸಿದೆನು. ಆದರೆ ನಾನು ನಾಜೂಕಾದ ಪದಗಳನ್ನಾಗಲಿ ಮಹಾ ಜ್ಞಾನವನ್ನಾಗಲಿ ಉಪಯೋಗಿಸಲಿಲ್ಲ.
1 ಕೊರಿಂಥದವರಿಗೆ 2 : 2 (ERVKN)
ನಾನು ನಿಮ್ಮೊಂದಿಗಿದ್ದಾಗ ಯೇಸು ಕ್ರಿಸ್ತನ ಮತ್ತು ಆತನ ಶಿಲುಬೆಯ ಮೇಲಿನ ಮರಣವನ್ನೇ ಹೊರತು ಬೇರೆಲ್ಲಾ ವಿಷಯಗಳನ್ನು ಮರೆತುಬಿಡಲು ನಿರ್ಧರಿಸಿದೆನು.
1 ಕೊರಿಂಥದವರಿಗೆ 2 : 3 (ERVKN)
ನಾನು ನಿಮ್ಮ ಬಳಿಗೆ ಬಂದಿದ್ದಾಗ ಬಲಹೀನನಾಗಿದ್ದೆನು; ಭಯದಿಂದ ನಡುಗುತ್ತಿದ್ದೆನು.
1 ಕೊರಿಂಥದವರಿಗೆ 2 : 4 (ERVKN)
ನನ್ನ ಉಪದೇಶವಾಗಲಿ ಮಾತುಕತೆಯಾಗಲಿ ಜನರನ್ನು ಒತ್ತಾಯಿಸುವಂಥ ಜ್ಞಾನವಾಕ್ಯಗಳನ್ನು ಒಳಗೊಂಡಿರಲಿಲ್ಲ. ಆದರೆ ಪವಿತ್ರಾತ್ಮನು ಕೊಡುವ ಶಕ್ತಿಯೇ ನನ್ನ ಉಪದೇಶಕ್ಕೆ ಆಧಾರವಾಗಿತ್ತು.
1 ಕೊರಿಂಥದವರಿಗೆ 2 : 5 (ERVKN)
ನಿಮ್ಮ ನಂಬಿಕೆಯು ಮನುಷ್ಯನ ಜ್ಞಾನದ ಮೇಲೆ ಆಧಾರಗೊಂಡಿರದೆ ದೇವರ ಶಕ್ತಿಯ ಮೇಲೆ ಆಧಾರಗೊಂಡಿರಬೇಕೆಂದು ನಾನು ಹೀಗೆ ಮಾಡಿದೆನು.
1 ಕೊರಿಂಥದವರಿಗೆ 2 : 6 (ERVKN)
ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ.
1 ಕೊರಿಂಥದವರಿಗೆ 2 : 7 (ERVKN)
ನಾವಾದರೊ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.
1 ಕೊರಿಂಥದವರಿಗೆ 2 : 8 (ERVKN)
ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ.
1 ಕೊರಿಂಥದವರಿಗೆ 2 : 9 (ERVKN)
ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: "ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.” ಯೆಶಾಯ 64:4
1 ಕೊರಿಂಥದವರಿಗೆ 2 : 10 (ERVKN)
ಆದರೆ ದೇವರು ತನ್ನ ಪವಿತ್ರಾತ್ಮನ ಮೂಲಕ ನಮಗೆ ಈ ಸಂಗತಿಗಳನ್ನು ಪ್ರಕಟಿಸಿದನು. ಪವಿತ್ರಾತ್ಮನು ಸಕಲವನ್ನೂ ದೇವರ ಅಗಾಧವಾದ ರಹಸ್ಯಗಳನ್ನೂ ತಿಳಿದಿದ್ದಾನೆ.
1 ಕೊರಿಂಥದವರಿಗೆ 2 : 11 (ERVKN)
ಇದು ಹೇಗೆಂದರೆ: ಒಬ್ಬನ ಆಲೋಚನೆಗಳು ಅವನ ಆಂತರ್ಯದಲ್ಲಿರುವ ಜೀವಾತ್ಮವೊಂದಕ್ಕೆ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ. ಅಂತೆಯೇ, ದೇವರ ಆಲೋಚನೆಗಳು ದೇವರಾತ್ಮನ ಹೊರತು ಬೇರೆ ಯಾರಿಗೂ ತಿಳಿದಿರುವುದಿಲ್ಲ.
1 ಕೊರಿಂಥದವರಿಗೆ 2 : 12 (ERVKN)
ನಾವು ಹೊಂದಿಕೊಂಡದ್ದು ದೇವರಿಂದ ಬಂದ ಪವಿತ್ರಾತ್ಮನನ್ನೇ ಹೊರತು ಪ್ರಾಪಂಚಿಕವಾದ ಆತ್ಮವನ್ನಲ್ಲ. ದೇವರು ನಮಗೆ ಉಚಿತವಾಗಿ ಕೊಟ್ಟಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ನಾವು ಆತನನ್ನು ಹೊಂದಿಕೊಂಡೆವು.
1 ಕೊರಿಂಥದವರಿಗೆ 2 : 13 (ERVKN)
ನಾವು ಈಸಂಗತಿಗಳನ್ನು ಹೇಳುವಾಗ ಮನುಷ್ಯರ ಜ್ಞಾನದಿಂದ ಕಲಿತುಕೊಂಡಿರುವ ವಾಕ್ಯಗಳನ್ನು ಉಪಯೋಗಿಸದೆ ಆತ್ಮನಿಂದ ಕಲಿತುಕೊಂಡ ವಾಕ್ಯಗಳನ್ನೇ ಉಪಯೋಗಿಸುತ್ತೇವೆ. ಆತ್ಮಿಕ ಸಂಗತಿಗಳನ್ನು ವಿವರಿಸಲು ಆತ್ಮಿಕ ಪದಗಳನ್ನೇ ಬಳಸುತ್ತೇವೆ.
1 ಕೊರಿಂಥದವರಿಗೆ 2 : 14 (ERVKN)
ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.
1 ಕೊರಿಂಥದವರಿಗೆ 2 : 15 (ERVKN)
ಆದರೆ ಆತ್ಮಿಕ ಮನುಷ್ಯನು ಎಲ್ಲಾ ವಿಷಯಗಳ ಬಗ್ಗೆ ತೀರ್ಪು ಮಾಡಬಲ್ಲನು. ಅವನಿಗೆ ಬೇರೆ ಯಾರೂ ತೀರ್ಪು ನೀಡಲಾಗುವುದಿಲ್ಲ.
1 ಕೊರಿಂಥದವರಿಗೆ 2 : 16 (ERVKN)
ಪವಿತ್ರ ಗ್ರಂಥವು ಹೇಳುವಂತೆ: "ಪ್ರಭುವಿನ ಮನಸ್ಸನ್ನು ಯಾರು ಬಲ್ಲರು? ಪ್ರಭುವಿಗೆ ಯಾರು ಉಪದೇಶ ಮಾಡಬಲ್ಲರು?" ಯೆಶಾಯ 40:13 ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ.

1 2 3 4 5 6 7 8 9 10 11 12 13 14 15 16

BG:

Opacity:

Color:


Size:


Font: