1 ಕೊರಿಂಥದವರಿಗೆ 6 : 1 (ERVKN)
ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವಿರೋಧವಿದ್ದರೆ, ನೀವು ನ್ಯಾಯಾಲಯಗಳಿಗೆ ಹೋಗುವುದೇಕೆ? ಅವರು ನೀತಿವಂತರಲ್ಲ. ಹೀಗಿರಲು ನಿಮಗೆ ನ್ಯಾಯತೀರ್ಪು ಮಾಡಲು ಅವರಿಗೆ ನೀವು ಅವಕಾಶ ಮಾಡಿಕೊಡುವುದೇಕೆ? ನಿಮಗೆ ನಾಚಿಕೆಯಾಗಬೇಕು. ನಿಮಗೆ ನ್ಯಾಯತೀರ್ಪು ನೀಡಲು ನೀವು ದೇವಜನರಿಗೆ ಏಕೆ ಅವಕಾಶ ಕೊಡಬಾರದು?
1 ಕೊರಿಂಥದವರಿಗೆ 6 : 2 (ERVKN)
ದೇವಜನರು ಲೋಕಕ್ಕೆ ತೀರ್ಪು ಮಾಡುವರೆಂಬುದು ನಿಮಗೆ ತಿಳಿಯದೋ? ದೇವಜನರು ಲೋಕಕ್ಕೆ ನ್ಯಾಯತೀರ್ಪು ಮಾಡುವವರಾಗಿದ್ದರೆ, ಇಂಥ ಚಿಕ್ಕ ಸಂಗತಿಗಳ ಬಗ್ಗೆಯೂ ನ್ಯಾಯತೀರ್ಪು ಮಾಡಬಲ್ಲರೆಂಬುದು ನಿಶ್ಚಯವಾಗಿದೆ.
1 ಕೊರಿಂಥದವರಿಗೆ 6 : 3 (ERVKN)
ಮುಂದಿನ ಕಾಲದಲ್ಲಿ ನಾವು ದೇವದೂತರಿಗೂ ನ್ಯಾಯತೀರಿಸುತ್ತೇವೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ಈ ಜೀವಿತದ ಸಂಗತಿಗಳನ್ನು ಕುರಿತು ನಾವು ತೀರ್ಪುಮಾಡಬಲ್ಲೆವು.
1 ಕೊರಿಂಥದವರಿಗೆ 6 : 4 (ERVKN)
ಹೀಗಿರಲು, ನಿಮಲ್ಲಿ ಭಿನ್ನಾಭಿಪ್ರಾಯಗಳಿದ್ದು ಅದಕ್ಕೆ ನ್ಯಾಯನಿರ್ಣಯದ ಅಗತ್ಯವಿರುವಾಗ, ಸಭೆಗೆ ಸೇರಿಲ್ಲದ ಜನರ ಬಳಿಗೆ ನೀವು ಆ ಸಂಗತಿಗಳನ್ನು ತೆಗೆದುಕೊಂಡು ಹೋಗುವುದೇಕೆ? ಆ ಜನರಿಗೆ ಸಭೆಯಲ್ಲಿ ಯಾವ ಮಾನ್ಯತೆಯೂ ಇಲ್ಲ.
1 ಕೊರಿಂಥದವರಿಗೆ 6 : 5 (ERVKN)
ನಿಮ್ಮನ್ನು ನಾಚಿಕೆಪಡಿಸಲು ಹೀಗೆ ಹೇಳುತ್ತಿದ್ದೇನೆ. ವಿಶ್ವಾಸಿಗಳಾಗಿರುವ ಇಬ್ಬರು ಸಹೋದರರ ನಡುವೆ ಉಂಟಾಗಿರುವ ವ್ಯಾಜ್ಯಕ್ಕೆ ತೀರ್ಪು ನೀಡಬಲ್ಲ ಜ್ಞಾನಿಯೊಬ್ಬನು ನಿಮ್ಮ ಸಭೆಯಲ್ಲಿ ಇಲ್ಲವೇ?
1 ಕೊರಿಂಥದವರಿಗೆ 6 : 6 (ERVKN)
ನಿಮ್ಮಲ್ಲಿ ಒಬ್ಬ ಸಹೋದರನು ಮತ್ತೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅವರ ವ್ಯಾಜ್ಯಕ್ಕೆ ತೀರ್ಪು ನೀಡಲು ಅವಿಶ್ವಾಸಿಗಳಿಗೆ ನೀವು ಅವಕಾಶ ಮಾಡಿಕೊಟ್ಟಿದ್ದೀರಿ!
1 ಕೊರಿಂಥದವರಿಗೆ 6 : 7 (ERVKN)
ನೀವು ಆಗಲೇ ಸೋತು ಹೋಗಿದ್ದೀರೆಂಬುದನ್ನು ನಿಮ್ಮ ಮಧ್ಯದಲ್ಲಿರುವ ವ್ಯಾಜ್ಯಗಳೇ ಸೂಚಿಸುತ್ತವೆ. ಅದಕ್ಕಿಂತ, ನೀವು ಕೆಟ್ಟದ್ದನ್ನು ಸಹಿಸಿಕೊಳ್ಳಬೇಕಿತ್ತು; ಮೋಸವನ್ನು ತಾಳಿಕೊಳ್ಳಬೇಕಿತ್ತು.
1 ಕೊರಿಂಥದವರಿಗೆ 6 : 8 (ERVKN)
ಆದರೆ ಸ್ವತಃ ನೀವೇ ಕೆಟ್ಟದ್ದನ್ನು ಮಾಡುತ್ತೀರಿ ಮತ್ತು ಮೋಸ ಮಾಡುತ್ತೀರಿ! ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿರುವವನಿಗೇ ನೀವು ಹೀಗೆ ಮಾಡುತ್ತೀರಿ.
1 ಕೊರಿಂಥದವರಿಗೆ 6 : 9 (ERVKN)
[This verse may not be a part of this translation]
1 ಕೊರಿಂಥದವರಿಗೆ 6 : 10 (ERVKN)
[This verse may not be a part of this translation]
1 ಕೊರಿಂಥದವರಿಗೆ 6 : 11 (ERVKN)
ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.
1 ಕೊರಿಂಥದವರಿಗೆ 6 : 12 (ERVKN)
"ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ಪ್ರತಿಯೊಂದೂ ಜನರಿಗೆ ಪ್ರಯೋಜಕವಲ್ಲ. “ಪ್ರತಿಯೊಂದನ್ನೂ ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ನಾನು ಯಾವುದನ್ನೂ ನನ್ನ ಒಡೆಯನನ್ನಾಗಿ ಮಾಡಿಕೊಳ್ಳುವುದಿಲ್ಲ.
1 ಕೊರಿಂಥದವರಿಗೆ 6 : 13 (ERVKN)
"ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶ ಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.
1 ಕೊರಿಂಥದವರಿಗೆ 6 : 14 (ERVKN)
ದೇವರು ತನ್ನ ಶಕ್ತಿಯಿಂದ ಪ್ರಭು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ದೇವರು ನಮ್ಮನ್ನು ಸಹ ಜೀವಂತವಾಗಿ ಎಬ್ಬಿಸುವನು.
1 ಕೊರಿಂಥದವರಿಗೆ 6 : 15 (ERVKN)
ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಹೀಗಿರಲಾಗಿ, ನಾನು ಕ್ರಿಸ್ತನ ಅಂಗಗಳನ್ನು ತೆಗೆದುಕೊಂಡು ಅವುಗಳನ್ನು ಸೂಳೆಯ ಅಂಗಗಳನ್ನಾಗಿ ಮಾಡಕೂಡದು.
1 ಕೊರಿಂಥದವರಿಗೆ 6 : 16 (ERVKN)
"ಇಬ್ಬರೂ ಒಂದೇ ದೇಹವಾಗುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.
1 ಕೊರಿಂಥದವರಿಗೆ 6 : 17 (ERVKN)
ಆದರೆ ಪ್ರಭುವಿನೊಂದಿಗೆ ಸಂಬಂಧವನ್ನು ಹೊಂದಿರುವಂಥವನು ಆತ್ಮದಲ್ಲಿ ಪ್ರಭುವಿನೊಂದಿಗೆ ಒಂದಾಗಿರುತ್ತಾನೆ.
1 ಕೊರಿಂಥದವರಿಗೆ 6 : 18 (ERVKN)
ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
1 ಕೊರಿಂಥದವರಿಗೆ 6 : 19 (ERVKN)
ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ.
1 ಕೊರಿಂಥದವರಿಗೆ 6 : 20 (ERVKN)
ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ.

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: