1 ಕೊರಿಂಥದವರಿಗೆ 8 : 1 (ERVKN)
ವಿಗ್ರಹಗಳಿಗೆ ಅರ್ಪಿತವಾದ ಆಹಾರದ ಬಗ್ಗೆ ಚರ್ಚೆ ವಿಗ್ರಹಗಳಿಗೆ ಯಜ್ಞ ಮಾಡಿದ ಪಶುವಿನ ಮಾಂಸದ ಬಗ್ಗೆ ಈಗ ನಾನು ಬರೆಯುತ್ತೇನೆ. “ನಮಗೆಲ್ಲರಿಗೂ ಜ್ಞಾನವಿದೆ” ಎಂಬುದು ನಮಗೆ ಗೊತ್ತಿದೆ. “ಜ್ಞಾನವು” ನಮ್ಮನ್ನು ಅಹಂಕಾರದಿಂದ ತುಂಬಿಸುತ್ತದೆ. ಆದರೆ ಪ್ರೀತಿಯು ಬೇರೆಯವರಲ್ಲಿ ಭಕ್ತಿವೃದ್ಧಿಯನ್ನು ಮಾಡುತ್ತದೆ.
1 ಕೊರಿಂಥದವರಿಗೆ 8 : 2 (ERVKN)
ಇಂಥಿಂಥದ್ದನ್ನು ತಿಳಿದುಕೊಂಡಿದ್ದೇನೆಂದು ಭಾವಿಸುವವನು ತಾನು ತಿಳಿದುಕೊಳ್ಳಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿಲ್ಲ.
1 ಕೊರಿಂಥದವರಿಗೆ 8 : 3 (ERVKN)
ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನು ದೇವರು ತಿಳಿದುಕೊಂಡಿದ್ದಾನೆ.
1 ಕೊರಿಂಥದವರಿಗೆ 8 : 4 (ERVKN)
ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.
1 ಕೊರಿಂಥದವರಿಗೆ 8 : 5 (ERVKN)
ಆಕಾಶದಲ್ಲಾಗಲಿ ಭೂಮಿಯ ಮೇಲಾಗಲಿ ದೇವರುಗಳೆಂದು ಕರೆಯಲ್ಪಡುವ ವಸ್ತುಗಳಿದ್ದರೆ ಅವು ನಿಜವಾಗಿಯೂ ನಮಗೆ ಮುಖ್ಯವಲ್ಲ. (ಅನೇಕ ವಸ್ತುಗಳನ್ನು ಜನರು “ದೇವರು”ಗಳೆಂತಲೂ “ಪ್ರಭು”ಗಳೆಂತಲೂ ಕರೆಯುತ್ತಾರೆ.)
1 ಕೊರಿಂಥದವರಿಗೆ 8 : 6 (ERVKN)
ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.
1 ಕೊರಿಂಥದವರಿಗೆ 8 : 7 (ERVKN)
ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಆ ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಈ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.
1 ಕೊರಿಂಥದವರಿಗೆ 8 : 8 (ERVKN)
ಆದರೆ ಆಹಾರವು ನಮ್ಮನ್ನು ದೇವರ ಸಮೀಪಕ್ಕೆ ತರಲಾರದು. ನಾವು ಮಾಂಸವನ್ನು ತಿನ್ನದಿದ್ದರೆ, ನಮ್ಮ ಮೇಲೆ ದೇವರಿಗಿರುವ ಮೆಚ್ಚುಗೆಯು ಕಡಿಮೆಯೇನೂ ಆಗುವುದಿಲ್ಲ. ಅದೇ ರೀತಿ, ಮಾಂಸವನ್ನು ತಿಂದರೆ, ನಮ್ಮ ಮೇಲೆ ದೇವರಿಗಿರುವ ಮೆಚ್ಚುಗೆಯು ಹೆಚ್ಚೇನೂ ಆಗುವುದಿಲ್ಲ.
1 ಕೊರಿಂಥದವರಿಗೆ 8 : 9 (ERVKN)
ಆದರೆ ನಿಮ್ಮ ಸ್ವತಂತ್ರದ ಬಗ್ಗೆ ಎಚ್ಚರಿಕೆಯಿಂದಿರಿ. ನಂಬಿಕೆಯಲ್ಲಿ ಬಲಹೀನರಾಗಿರುವ ಜನರನ್ನು ನಿಮ್ಮ ಸ್ವಾತಂತ್ರ್ಯವು ಪಾಪಕ್ಕೆ ಬೀಳಿಸುವ ಸಾಧ್ಯತೆಯಿದೆ.
1 ಕೊರಿಂಥದವರಿಗೆ 8 : 10 (ERVKN)
ನಿಮಗೆ ತಿಳುವಳಿಕೆ ಇರುವುದರಿಂದ ನೀವು ವಿಗ್ರಹದ ಗುಡಿಯೊಂದರಲ್ಲಿ ಸಂಕೋಚವಿಲ್ಲದೆ ಊಟ ಮಾಡಬಹುದು. ನೀವು ಅಲ್ಲಿ ಊಟ ಮಾಡುವುದನ್ನು ನಂಬಿಕೆಯಲ್ಲಿ ಬಲಹೀನನಾದ ವ್ಯಕ್ತಿಯೊಬ್ಬನು ನೋಡಿ, ವಿಗ್ರಹಗಳಿಗೆ ಅರ್ಪಿತವಾದ ಮಾಂಸವನ್ನು ತಿನ್ನಲು ಪ್ರೋತ್ಸಾಹಗೊಳ್ಳಬಹುದು. ಆದರೆ ಅದನ್ನು ತಿನ್ನಕೊಡದೆಂಬ ಭಾವನೆ ಅವನಲ್ಲಿ ಆಳವಾಗಿ ಬೇರೂರಿದೆ.
1 ಕೊರಿಂಥದವರಿಗೆ 8 : 11 (ERVKN)
ಹೀಗಿರಲಾಗಿ, ಈ ಬಲಹೀನ ಸಹೋದರನು ನಿಮ್ಮ ತಿಳುವಳಿಕೆಯ ದೆಸೆಯಿಂದ ಹಾಳಾದನು. ಕ್ರಿಸ್ತನು ಈ ಸಹೋದರನಿಗೋಸ್ಕರವಾಗಿ ತನ್ನ ಪ್ರಾಣವನ್ನೇ ಕೊಟ್ಟಿದ್ದಾನೆ.
1 ಕೊರಿಂಥದವರಿಗೆ 8 : 12 (ERVKN)
ಹೀಗೆ ನಿಮ್ಮ ಸಹೋದರ ಸಹೋದರಿಯರಿಗೆ ವಿರೋಧವಾಗಿ ಪಾಪ ಮಾಡುವಾಗ ಮತ್ತು ಅವರು ತಪ್ಪೆಂದು ಭಾವಿಸುವ ಕಾರ್ಯಗಳನ್ನು ಮಾಡುವಂತೆ ಅವರನ್ನು ಪ್ರೋತ್ಸಾಹಿಸಿ ಅವರಿಗೆ ಕೇಡನ್ನು ಉಂಟುಮಾಡುವಾಗ ನೀವು ಕ್ರಿಸ್ತನಿಗೆ ವಿರೋಧವಾಗಿಯೂ ಪಾಪ ಮಾಡುವವರಾಗಿದ್ದೀರಿ.
1 ಕೊರಿಂಥದವರಿಗೆ 8 : 13 (ERVKN)
ಹೀಗಿರಲಾಗಿ, ನಾನು ತಿನ್ನುವ ಆಹಾರವು ನನ್ನ ಸಹೋದರನನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ. ನನ್ನ ಸಹೋದರನ ಪಾಪಕ್ಕೆ ನಾನು ಕಾರಣನಾಗಬಾರದೆಂದು ನಾನು ಮಾಂಸ ತಿನ್ನುವುದನ್ನು ನಿಲ್ಲಿಸುತ್ತೇನೆ.
❮
❯
1
2
3
4
5
6
7
8
9
10
11
12
13