1 ಅರಸುಗಳು 10 : 1 (ERVKN)
ಶೆಬದ ರಾಣಿಯು ಸೊಲೊಮೋನನನ್ನು ಸಂದರ್ಶಿಸಿದಳು ಶೆಬದ ರಾಣಿ ಸೊಲೊಮೋನನ ಬಗ್ಗೆ ಕೇಳಿದಳು. ಅವಳು ಒಗಟುಗಳಿಂದ ಅವನನ್ನು ಪರೀಕ್ಷಿಸಲು
1 ಅರಸುಗಳು 10 : 2 (ERVKN)
ತನ್ನ ಸೇವಕರ ದೊಡ್ಡ ಗುಂಪಿನೊಡನೆ ಜೆರುಸಲೇಮಿಗೆ ಬಂದಳು. ಅನೇಕ ಒಂಟೆಗಳ ಮೇಲೆ ಸಾಂಬಾರ ಪದಾರ್ಥಗಳನ್ನು, ಮುತ್ತುಗಳನ್ನು ಮತ್ತು ಬಹಳ ಬಂಗಾರವನ್ನು ಹೇರಿಸಿಕೊಂಡು ಬಂದಳು. ಅವಳು ಸೊಲೊಮೋನನನ್ನು ಸಂಧಿಸಿ, ತನ್ನ ಮನಸ್ಸಿನಲ್ಲಿದ್ದ ಎಲ್ಲ ಪ್ರಶ್ನೆಗಳನ್ನು ಅವನಿಗೆ ಕೇಳಿದಳು.
1 ಅರಸುಗಳು 10 : 3 (ERVKN)
ಸೊಲೊಮೋನನು ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದನು. ಅವಳ ಯಾವ ಪ್ರಶ್ನೆಗಳೂ ಅವನಿಗೆ ಹೆಚ್ಚು ಕಠಿಣವೆನಿಸಲಿಲ್ಲ.
1 ಅರಸುಗಳು 10 : 4 (ERVKN)
ಸೊಲೊಮೋನನು ಬಹು ಜ್ಞಾನಿಯೆಂಬುದು ಶೆಬದ ರಾಣಿಗೆ ತಿಳಿಯಿತು. ಅವನು ನಿರ್ಮಿಸಿದ್ದ ಸುಂದರವಾದ ಅರಮನೆಯನ್ನೂ
1 ಅರಸುಗಳು 10 : 5 (ERVKN)
ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ “ಉಸಿರುಕಟ್ಟಿಸುವಂತಹ” ವಿಸ್ಮಯವಾಯಿತು.
1 ಅರಸುಗಳು 10 : 6 (ERVKN)
ಆದ್ದರಿಂದ ರಾಣಿಯು ರಾಜನಿಗೆ, “ನಿನ್ನ ಜ್ಞಾನದ ಬಗ್ಗೆ ಮತ್ತು ನೀನು ಮಾಡುವ ಕಾರ್ಯಗಳ ಬಗ್ಗೆ ಅನೇಕ ಸಂಗತಿಗಳನ್ನು ನಾನು ನನ್ನ ದೇಶದಲ್ಲಿ ಕೇಳಿದ್ದೇನೆ. ಆ ಸಂಗತಿಗಳೆಲ್ಲ ನಿಜ!
1 ಅರಸುಗಳು 10 : 7 (ERVKN)
ನಾನೇ ಬಂದು, ನನ್ನ ಸ್ವಂತ ಕಣ್ಣುಗಳಿಂದ ಆ ಸಂಗತಿಗಳನ್ನು ನೋಡುವವರೆಗೆ ನಾನು ನಂಬಲೇ ಇಲ್ಲ. ಆದರೆ ನಾನು ಕೇಳಿದುದಕ್ಕಿಂತಲೂ ಮಹತ್ವವಾದ ಸಂಗತಿಗಳನ್ನು ಈಗ ನೋಡುತ್ತಿದ್ದೇನೆ. ಜನರು ಹೇಳಿದುದಕ್ಕಿಂತ ಅತ್ಯಂತ ಹೆಚ್ಚಿನ ಜ್ಞಾನವೂ ಐಶ್ವರ್ಯವೂ ನಿನ್ನಲ್ಲಿದೆ.
1 ಅರಸುಗಳು 10 : 8 (ERVKN)
ನಿನ್ನ ಪತ್ನಿಯರೂ *ಪತ್ನಿಯರೂ ಇದು ಪುರಾತನ ಗ್ರೀಕ್ ಭಾಷಾಂತರದಲ್ಲಿದೆ. ಹೀಬ್ರೂವಿನ ಪ್ರತಿಯಲ್ಲಿ “ಪುರುಷರು” ಎಂದಿದೆ. ಅಧಿಕಾರಿಗಳೂ ಧನ್ಯರೇ ಸರಿ! ಯಾಕೆಂದರೆ ಅವರು ನಿನ್ನ ಸೇವೆ ಮಾಡುತ್ತಾ ನಿನ್ನ ಜ್ಞಾನವಾಕ್ಯಗಳನ್ನು ಕೇಳಬಹುದು!
1 ಅರಸುಗಳು 10 : 9 (ERVKN)
ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ನಿನ್ನನ್ನು ಇಸ್ರೇಲಿನ ರಾಜನಾಗಿ ಮಾಡಲು ಆತನು ಸಂತೋಷಪಟ್ಟಿರಬೇಕು. ದೇವರಾದ ಯೆಹೋವನು ಇಸ್ರೇಲನ್ನು ಸದಾ ಪ್ರೀತಿಸುತ್ತಾನೆ. ಆದ್ದರಿಂದಲೇ ಆತನು ನಿನ್ನನ್ನು ರಾಜನನ್ನಾಗಿ ನೇಮಿಸಿದನು. ನೀನು ಕಟ್ಟಳೆಗಳನ್ನು ಅನುಸರಿಸುತ್ತಿರುವೆ ಮತ್ತು ಜನರಿಗೆ ನ್ಯಾಯ ದೊರಕಿಸುತ್ತಿರುವೆ” ಎಂದು ಹೇಳಿದಳು.
1 ಅರಸುಗಳು 10 : 10 (ERVKN)
ನಂತರ ಶೆಬದ ರಾಣಿಯು ರಾಜನಿಗೆ ನಾಲ್ಕು ಸಾವಿರದ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಕೊಟ್ಟಳು. ಅವಳು ಅವನಿಗೆ ಅನೇಕ ಸಾಂಬಾರ ಪದಾರ್ಥಗಳನ್ನು ಮತ್ತು ರತ್ನಗಳನ್ನು ಕೊಟ್ಟಳು. ಹಿಂದೆಂದೂ ಯಾರೂ ಇಸ್ರೇಲಿಗೆ ತೆಗೆದುಕೊಂಡು ಬಂದಿಲ್ಲದಷ್ಟು ಸಾಂಬಾರ ಪದಾರ್ಥಗಳನ್ನು ಶೆಬದ ರಾಣಿಯು ಸೊಲೊಮೋನನಿಗೆ ಕೊಟ್ಟಳು.
1 ಅರಸುಗಳು 10 : 11 (ERVKN)
ಹೀರಾಮನ ಹಡಗುಗಳು ಓಫೀರಿನಿಂದ ಬಂಗಾರವನ್ನು ತೆಗೆದುಕೊಂಡು ಬಂದವು. ಆ ಹಡಗುಗಳು ಮರಗಳನ್ನು ಮತ್ತು ರತ್ನಗಳನ್ನು ರಾಶಿರಾಶಿಯಾಗಿ ತಂದವು.
1 ಅರಸುಗಳು 10 : 12 (ERVKN)
ಸೊಲೊಮೋನನು ಮರವನ್ನು ಆಲಯದ ಮತ್ತು ಅರಮನೆಯ ಆಧಾರಕಂಬಗಳಿಗಾಗಿ ಬಳಸಿದನು. ಅವನು ಹಾಡುಗಾರರಿಗೆ ಬೇಕಾದ ಹಾರ್ಪ್ ವಾದ್ಯಗಳನ್ನು ಮತ್ತು ಲೈರ್ ವಾದ್ಯಗಳನ್ನು ತಯಾರಿಸಲು ಆ ಮರವನ್ನು ಉಪಯೋಗಿಸಿದನು. ಹಿಂದೆಂದೂ ಯಾವ ವ್ಯಕ್ತಿಯೂ ಅಂತಹ ಮರವನ್ನು ಇಸ್ರೇಲಿಗೆ ತಂದಿರಲಿಲ್ಲ ಮತ್ತು ಅಲ್ಲಿಯವರೆಗೆ ಇಸ್ರೇಲಿನ ಯಾವ ವ್ಯಕ್ತಿಯೂ ಅಂತಹ ಮರವನ್ನು ನೋಡಿರಲಿಲ್ಲ.
1 ಅರಸುಗಳು 10 : 13 (ERVKN)
ಆಗ ರಾಜನಾದ ಸೊಲೊಮೋನನು ಇತರ ದೇಶದ ರಾಜರಿಗೆ ಮರ್ಯಾದೆಗಾಗಿ ನೀಡುವ ಕಾಣಿಕೆಗಳನ್ನು ಶೆಬದ ರಾಣಿಗೂ ಕೊಟ್ಟನು. ಆಕೆಯು ಕೇಳಿದ್ದೆಲ್ಲವನ್ನೂ ಅವನು ನೀಡಿದನು. ಅನಂತರ ರಾಣಿಯು ಸೇವಕರೊಡನೆ ತನ್ನ ದೇಶಕ್ಕೆ ಹಿಂದಿರುಗಿದಳು.
1 ಅರಸುಗಳು 10 : 14 (ERVKN)
ರಾಜನಾದ ಸೊಲೊಮೋನನು ಪ್ರತಿವರ್ಷವೂ ಇಪ್ಪತ್ತೆರಡು ಸಾವಿರದ ಆರುನೂರ ನಲವತ್ನಾಲ್ಕು ಕಿಲೋಗ್ರಾಂ ಬಂಗಾರವನ್ನು ಪಡೆಯುತ್ತಿದ್ದನು.
1 ಅರಸುಗಳು 10 : 15 (ERVKN)
ಹಡಗುಗಳಿಂದ ಸಿಗುತ್ತಿದ್ದ ಬಂಗಾರವಲ್ಲದೆ ವ್ಯಾಪಾರಿಗಳಿಂದಲೂ ಅರೇಬಿಯಾದ ರಾಜರಿಂದಲೂ ರಾಜ್ಯಪಾಲರುಗಳಿಂದಲೂ ಬಂಗಾರವನ್ನು ಅವನು ಪಡೆಯುತ್ತಿದ್ದನು.
1 ಅರಸುಗಳು 10 : 16 (ERVKN)
ರಾಜನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ದೊಡ್ಡ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ಏಳು ಕಿಲೋಗ್ರಾಂ ಬಂಗಾರವಿತ್ತು.
1 ಅರಸುಗಳು 10 : 17 (ERVKN)
ಅವನು ಬಂಗಾರದ ತಗಡಿನಿಂದ ಮುನ್ನೂರು ಚಿಕ್ಕ ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಯಲ್ಲಿ ನಾಲ್ಕು ಪೌಂಡುಗಳಷ್ಟು ಬಂಗಾರವಿತ್ತು. ರಾಜನು ಅವುಗಳನ್ನು “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿಟ್ಟನು.
1 ಅರಸುಗಳು 10 : 18 (ERVKN)
ರಾಜನಾದ ಸೊಲೊಮೋನನು ವಿಶಾಲವಾದ ದಂತದ ಸಿಂಹಾಸನವನ್ನು ಸಹ ಮಾಡಿಸಿದನು. ಅವನು ಅಪ್ಪಟ ಚಿನ್ನದ ತಗಡನ್ನು ಅದಕ್ಕೆ ಹೊದಿಸಿದನು.
1 ಅರಸುಗಳು 10 : 19 (ERVKN)
ಸಿಂಹಾಸನದ ಮೇಲಕ್ಕೆ ಹತ್ತಲು ಅದರಲ್ಲಿ ಆರು ಮೆಟ್ಟಿಲುಗಳಿದ್ದವು. ಸಿಂಹಾಸನದ ಮೇಲ್ಭಾಗವು ವೃತ್ತಾಕಾರವಾಗಿತ್ತು. ಆ ಸಿಂಹಾಸನದ ಎರಡು ಕಡೆಗಳಲ್ಲಿ ಎರಡು ತೋಳುಗಳಿದ್ದವು. ಆ ಸಿಂಹಾಸನದ ತೋಳುಗಳ ಕೆಳಭಾಗದಲ್ಲಿ ಸಿಂಹದ ಚಿತ್ರಗಳಿದ್ದವು.
1 ಅರಸುಗಳು 10 : 20 (ERVKN)
ಆರು ಮೆಟ್ಟಿಲುಗಳ ಪ್ರತಿಯೊಂದು ಮೆಟ್ಟಿಲಿನಲ್ಲಿ ಎರಡು ಸಿಂಹಗಳಿದ್ದವು. ಪ್ರತಿಯೊಂದು ಕೊನೆಯಲ್ಲಿ ಒಂದು ಸಿಂಹವಿತ್ತು. ಬೇರೆ ಯಾವ ರಾಜ್ಯದಲ್ಲೂ ಇಂತಹ ಸಿಂಹಾಸನ ಇರಲಿಲ್ಲ.
1 ಅರಸುಗಳು 10 : 21 (ERVKN)
ಸೊಲೊಮೋನನ ಬಟ್ಟಲುಗಳು ಮತ್ತು ಲೋಟಗಳು ಬಂಗಾರದಿಂದ ತಯಾರಿಸಲಾಗಿದ್ದವು. “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿದ್ದ ಎಲ್ಲಾ ಆಯುಧಗಳನ್ನು ಅಪ್ಪಟ ಚಿನ್ನದಿಂದ ಮಾಡಿದ್ದರು. ಅರಮನೆಯ ಯಾವ ವಸ್ತುವನ್ನೂ ಬೆಳ್ಳಿಯಿಂದ ಮಾಡಿರಲಿಲ್ಲ. ಜನರು ಬೆಳ್ಳಿಯನ್ನು ಅಮೂಲ್ಯವೆಂದು ಯೋಚಿಸದಷ್ಟು ಬಂಗಾರವು ಸೊಲೊಮೋನನ ಕಾಲದಲ್ಲಿತ್ತು!
1 ಅರಸುಗಳು 10 : 22 (ERVKN)
ರಾಜನಾದ ಸೊಲೊಮೋನನ ಹತ್ತಿರ ಅನೇಕ ಸರಕು ಸಾಗಣಿಕೆಯ ಹಡಗುಗಳಿದ್ದವು. ಅವನು ಅವುಗಳನ್ನು ಇತರ ದೇಶಗಳಲ್ಲಿನ ವ್ಯಾಪಾರಕ್ಕಾಗಿ ಕಳುಹಿಸುತ್ತಿದ್ದನು. ಇವು ಹೀರಾಮನ ಹಡಗುಗಳು. ಈ ಹಡಗುಗಳು ಬಂಗಾರ, ಬೆಳ್ಳಿ, ದಂತ ಮತ್ತು ಪ್ರಾಣಿಗಳನ್ನು ಹೊಸದಾಗಿ ತುಂಬಿಕೊಂಡು ಮೂರು ವರ್ಷಕ್ಕೊಮ್ಮೆ ಹಿಂದಿರುಗುತ್ತಿದ್ದವು.
1 ಅರಸುಗಳು 10 : 23 (ERVKN)
ಸೊಲೊಮೋನನು ಭೂಲೋಕದ ರಾಜರುಗಳಲ್ಲೆಲ್ಲಾ ಅತ್ಯಂತ ಬಲಿಷ್ಠನಾಗಿದ್ದನು. ಅವನು ರಾಜರುಗಳಲ್ಲೆಲ್ಲಾ ಹೆಚ್ಚು ಶ್ರೀಮಂತನೂ ಜ್ಞಾನಿಯೂ ಆಗಿದ್ದನು.
1 ಅರಸುಗಳು 10 : 24 (ERVKN)
ಭೂಲೋಕದವರೆಲ್ಲರೂ ರಾಜನಾದ ಸೊಲೊಮೋನನನ್ನು ನೋಡುವುದಕ್ಕೂ ದೇವರು ಸೊಲೊಮೋನನಿಗೆ ದಯಪಾಲಿಸಿರುವ ಜ್ಞಾನವಾಕ್ಯಗಳನ್ನು ಕೇಳುವುದಕ್ಕೂ ಅಪೇಕ್ಷಿಸುತ್ತಿದ್ದರು.
1 ಅರಸುಗಳು 10 : 25 (ERVKN)
ಪ್ರತಿವರ್ಷವೂ ರಾಜನನ್ನು ನೋಡಲು ಜನರು ಬರುತ್ತಿದ್ದರು. ಪ್ರತಿಯೊಬ್ಬನೂ ಕಾಣಿಕೆಯನ್ನು ತರುತ್ತಿದ್ದನು. ಅವರು ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳನ್ನು, ಆಯುಧಗಳನ್ನು, ಉಡುಪುಗಳನ್ನು, ಸಾಂಬಾರ ಪದಾರ್ಥಗಳನ್ನು, ಕುದುರೆಗಳನ್ನು ಮತ್ತು ಹೇಸರಕತ್ತೆಗಳನ್ನು ತರುತ್ತಿದ್ದರು.
1 ಅರಸುಗಳು 10 : 26 (ERVKN)
ಆದ್ದರಿಂದ ಅಸಂಖ್ಯವಾದ ರಥಗಳೂ ಕುದುರೆಗಳೂ ಸೊಲೊಮೋನನಲ್ಲಿದ್ದವು. ಅವನಲ್ಲಿ ಒಂದು ಸಾವಿರದ ನಾನೂರು ರಥಗಳು ಮತ್ತು ಹನ್ನೆರಡು ಸಾವಿರ ಕುದುರೆಗಳಿದ್ದವು. ಸೊಲೊಮೋನನು ಈ ರಥಗಳಿಗಾಗಿ ವಿಶೇಷವಾದ ನಗರಗಳನ್ನು ಕಟ್ಟಿಸಿದನು. ಆ ನಗರಗಳಲ್ಲಿ ರಥಗಳನ್ನು ಇರಿಸಿದನು. ರಾಜನಾದ ಸೊಲೊಮೋನನು ಕೆಲವು ರಥಗಳನ್ನು ಜೆರುಸಲೇಮಿನಲ್ಲಿ ತನ್ನ ಹತ್ತಿರ ಇಟ್ಟುಕೊಂಡನು.
1 ಅರಸುಗಳು 10 : 27 (ERVKN)
ರಾಜನು ಇಸ್ರೇಲನ್ನು ಬಹಳ ಶ್ರೀಮಂತವಾಗಿರಿಸಿದನು. ಜೆರುಸಲೇಮಿನಲ್ಲಿ ಬೆಳ್ಳಿಯು ಕಲ್ಲುಗಳಂತೆಯೂ ದೇವದಾರುಮರಗಳು ಬೆಟ್ಟದ ಮೇಲೆ ಬೆಳೆಯುವ ಅನೇಕ ಅಂಜೂರದ ಗಿಡಗಳಂತೆಯೂ ಹೇರಳವಾಗಿದ್ದವು.
1 ಅರಸುಗಳು 10 : 28 (ERVKN)
ಸೊಲೊಮೋನನು ಈಜಿಪ್ಟ್ ಮತ್ತು ಕ್ಯೂ ಪ್ರದೇಶಗಳಿಂದ ಕುದುರೆಗಳನ್ನು ಖರೀದಿಸಿ ಆಮದು ಮಾಡಿಕೊಂಡನು. ಅವನ ವ್ಯಾಪಾರಿಗಳು ಅವುಗಳನ್ನು ಕ್ಯೂ ಪ್ರಾಂತ್ಯದಿಂದ ಇಸ್ರೇಲಿಗೆ ತರುತ್ತಿದ್ದರು.
1 ಅರಸುಗಳು 10 : 29 (ERVKN)
ಈಜಿಪ್ಟಿನ ಒಂದು ರಥದ ಬೆಲೆಯು ಏಳು ಕಿಲೋಗ್ರಾಂ ಆದರೆ ಒಂದು ಕುದುರೆಯ ಬೆಲೆಯು ಎರಡು ಕಿಲೋಗ್ರಾಂ ಬೆಳ್ಳಿಯಾಗಿತ್ತು. ಸೊಲೊಮೋನನು ಹಿತ್ತಿಯ ಮತ್ತು ಅರಾಮ್ಯ ರಾಜರುಗಳಿಗೆ ಕುದುರೆಗಳನ್ನೂ ರಥಗಳನ್ನೂ ಮಾರಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29