1 ಅರಸುಗಳು 16 : 1 (ERVKN)
ಆಗ ಯೆಹೋವನು ಹನಾನೀಯ ಮಗನಾದ ಯೇಹುವಿನೊಂದಿಗೆ ಮಾತನಾಡಿ ರಾಜನಾದ ಬಾಷನ ವಿರುದ್ಧವಾಗಿ ಹೀಗೆ ಹೇಳಿದನು:
1 ಅರಸುಗಳು 16 : 2 (ERVKN)
“ನಾನು ನಿನ್ನನ್ನು ಪ್ರಾಮುಖ್ಯ ವ್ಯಕ್ತಿಯನ್ನಾಗಿ ಮಾಡಿದೆ. ಇಸ್ರೇಲಿನ ಜನರಿಗೆ ನಿನ್ನನ್ನು ರಾಜನನ್ನಾಗಿ ನಾನು ಮಾಡಿದೆ. ಆದರೆ ನೀನು ಯಾರೊಬ್ಬಾಮನ ಮಾರ್ಗವನ್ನೇ ಅನುಸರಿಸಿದೆ. ಇಸ್ರೇಲಿನ ನನ್ನ ಜನರು ಪಾಪಮಾಡುವಂತೆ ನೀನು ಪ್ರೇರೇಪಿಸಿದೆ. ಅವರು ತಮ್ಮ ಪಾಪಗಳಿಂದ ನನ್ನನ್ನು ಕೋಪಗೊಳಿಸಿದರು.
1 ಅರಸುಗಳು 16 : 3 (ERVKN)
ಆದ್ದರಿಂದ ಬಾಷನೇ, ನಿನ್ನನ್ನೂ ನಿನ್ನ ಕುಟುಂಬವನ್ನೂ ನಾನು ನಾಶಪಡಿಸುತ್ತೇನೆ. ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬಕ್ಕೆ ನಾನು ಮಾಡಿದಂತೆ ನಿನಗೂ ಮಾಡುತ್ತೇನೆ.
1 ಅರಸುಗಳು 16 : 4 (ERVKN)
ನಿನ್ನ ಕುಟುಂಬದ ಜನರು ನಗರದ ಬೀದಿಗಳಲ್ಲಿ ಸಾಯುತ್ತಾರೆ; ಅವರ ದೇಹಗಳನ್ನು ನಾಯಿಗಳು ತಿನ್ನುತ್ತವೆ. ನಿನ್ನ ಕುಟುಂಬದ ಕೆಲವು ಜನರು ಹೊಲಗಳಲ್ಲಿ ಸಾಯುತ್ತಾರೆ. ಅವರ ದೇಹಗಳನ್ನು ಪಕ್ಷಿಗಳು ತಿನ್ನುತ್ತವೆ.”
1 ಅರಸುಗಳು 16 : 5 (ERVKN)
ಬಾಷನು ಮಾಡಿದ ಎಲ್ಲ ಕಾರ್ಯಗಳ ಬಗ್ಗೆ ಮತ್ತು ಅವನ ಮಹಾಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.
1 ಅರಸುಗಳು 16 : 6 (ERVKN)
ಬಾಷನು ಸತ್ತುಹೋದನು. ಅವನನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ಮಗನಾದ ಏಲನು ಅವನ ನಂತರ ಹೊಸ ರಾಜನಾದನು.
1 ಅರಸುಗಳು 16 : 7 (ERVKN)
ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಈ ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.
1 ಅರಸುಗಳು 16 : 8 (ERVKN)
ಇಸ್ರೇಲಿನ ರಾಜನಾದ ಏಲ ಆಸನು ಯೆಹೂದದ ರಾಜನಾದ ಇಪ್ಪತ್ತಾರನೆಯ ವರ್ಷದಲ್ಲಿ ಏಲನು ಇಸ್ರೇಲಿನ ರಾಜನಾದನು. ಏಲನು ಬಾಷನ ಮಗ. ಅವನು ತಿರ್ಚದಲ್ಲಿ ಎರಡು ವರ್ಷ ಆಳಿದನು.
1 ಅರಸುಗಳು 16 : 9 (ERVKN)
ಜಿಮ್ರಿಯು ಏಲನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. ಏಲನ ರಥಬಲದ ಅರ್ಧಭಾಗಕ್ಕೆ ಜಿಮ್ರಿಯು ಅಧಿಪತಿ. ಆದರೆ ಏಲನ ವಿರುದ್ಧ ಜಿಮ್ರಿಯು ಸಂಚುಮಾಡಿದನು. ರಾಜನಾದ ಏಲನು ತಿರ್ಚದಲ್ಲಿದ್ದನು. ಅವನು ಅರ್ಚನ ಮನೆಯಲ್ಲಿ ಕುಡಿದು ಮತ್ತನಾದನು. ಅರ್ಚನು ತಿರ್ಚದಲ್ಲಿದ್ದ ಅರಮನೆಯ ಮೇಲ್ವಿಚಾರಕ.
1 ಅರಸುಗಳು 16 : 10 (ERVKN)
ಜಿಮ್ರಿಯು ಆ ಮನೆಯೊಳಕ್ಕೆ ಹೋಗಿ ರಾಜನಾದ ಏಲನನ್ನು ಕೊಂದುಹಾಕಿದನು. ಆಸನು ಯೆಹೂದದ ರಾಜನಾಗಿದ್ದ ಇಪ್ಪತ್ತೇಳನೆಯ ವರ್ಷದಲ್ಲಿ ಇದು ನಡೆಯಿತು. ಏಲನ ನಂತರ ಜಿಮ್ರಿಯು ಇಸ್ರೇಲಿನ ಹೊಸ ರಾಜನಾದನು.
1 ಅರಸುಗಳು 16 : 11 (ERVKN)
ಇಸ್ರೇಲಿನ ರಾಜನಾದ ಜಿಮ್ರಿ ಜಿಮ್ರಿಯು ಹೊಸ ರಾಜನಾದ ಮೇಲೆ ಬಾಷನ ಕುಟುಂಬದವರನ್ನೆಲ್ಲಾ ಕೊಂದುಹಾಕಿದನು. ಅವನು ಬಾಷನ ಕುಟುಂಬದಲ್ಲಿ ಯಾವ ಗಂಡಸನ್ನೂ ಬಿಡಲಿಲ್ಲ. ಬಾಷನ ಸ್ನೇಹಿತರನ್ನೂ ಜಿಮ್ರಿಯು ಕೊಂದುಹಾಕಿದನು.
1 ಅರಸುಗಳು 16 : 12 (ERVKN)
ಹೀಗೆ ಜಿಮ್ರಿಯು ಬಾಷನ ಕುಟುಂಬವನ್ನು ನಾಶಗೊಳಿಸಿದನು. ಬಾಷನ ವಿರುದ್ಧವಾಗಿ ಯೆಹೋವನು ಪ್ರವಾದಿಯಾದ ಯೇಹುವಿನ ಮೂಲಕ ತಿಳಿಸಿದಂತೆ ಇದು ಸಂಭವಿಸಿತು.
1 ಅರಸುಗಳು 16 : 13 (ERVKN)
ಬಾಷನ ಮತ್ತು ಅವನ ಮಗನಾದ ಏಲನ ಪಾಪಗಳೇ ಅದಕ್ಕೆ ಕಾರಣ. ಅವರು ಪಾಪಗಳನ್ನು ಮಾಡಿದರು ಮತ್ತು ಪಾಪಗಳನ್ನು ಮಾಡುವಂತೆ ಇಸ್ರೇಲಿನ ಜನರನ್ನು ಪ್ರೇರೇಪಿಸಿದರು. ಅವರಲ್ಲಿ ಅನೇಕ ವಿಗ್ರಹಗಳಿದ್ದುದರಿಂದ ಯೆಹೋವನು ಕೋಪಗೊಂಡನು.
1 ಅರಸುಗಳು 16 : 14 (ERVKN)
ಏಲನು ಮಾಡಿದ ಇತರ ಕಾರ್ಯಗಳ ಬಗ್ಗೆ, “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.
1 ಅರಸುಗಳು 16 : 15 (ERVKN)
ಆಸನು ಯೆಹೂದದ ರಾಜನಾದ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ಇಸ್ರೇಲಿನ ರಾಜನಾದನು. ಜಿಮ್ರಿಯು ತಿರ್ಚದಲ್ಲಿ ಏಳು ದಿನ ಆಳಿದನು. ಆಗ ಸಂಭವಿಸಿದ್ದೇನೆಂದರೆ: ಇಸ್ರೇಲಿನ ಸೈನ್ಯವು ಫಿಲಿಷ್ಟಿಯರಿಗೆ ಸೇರಿದ್ದ ಗಿಬ್ಬೆತೋನಿನ ವಿರುದ್ಧ ಮುತ್ತಿಗೆ ಹಾಕಿದ್ದರು. ಅವರು ಯುದ್ಧಕ್ಕೆ ಸಿದ್ಧರಾಗಿದ್ದರು.
1 ಅರಸುಗಳು 16 : 16 (ERVKN)
ರಾಜನ ವಿರುದ್ಧ ಜಿಮ್ರಿಯು ರಹಸ್ಯಯೋಜನೆಗಳನ್ನು ಮಾಡಿದ್ದಾನೆಂಬುದು ಪಾಳೆಯದಲ್ಲಿದ್ದ ಜನರಿಗೆ ತಿಳಿಯಿತು. ಅವನು ರಾಜನನ್ನು ಕೊಂದುಹಾಕಿದನೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಇಸ್ರೇಲರೆಲ್ಲರೂ ಆ ದಿನವೇ ಪಾಳೆಯದಲ್ಲಿ ಒಮ್ರಿಯನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದರು. ಒಮ್ರಿಯು ಸೈನ್ಯದ ಅಧಿಪತಿಯಾಗಿದ್ದನು.
1 ಅರಸುಗಳು 16 : 17 (ERVKN)
ಒಮ್ರಿಯು ಇಸ್ರೇಲರೆಲ್ಲರೊಡನೆ ಗಿಬ್ಬೆತೋನನ್ನು ಬಿಟ್ಟು ತಿರ್ಚಕ್ಕೆ ಮುತ್ತಿಗೆ ಹಾಕಿದನು.
1 ಅರಸುಗಳು 16 : 18 (ERVKN)
ಆ ನಗರವು ವಶವಾದುದನ್ನು ಜಿಮ್ರಿಯು ಕಂಡು ಅರಮನೆಯೊಳಕ್ಕೆ ಹೋಗಿ ಬೆಂಕಿಯನ್ನು ಹತ್ತಿಸಿದನು. ಅವನು ಅರಮನೆಯನ್ನು ಸುಟ್ಟುಹಾಕಿ ತಾನೂ ಸುಟ್ಟುಕೊಂಡನು.
1 ಅರಸುಗಳು 16 : 19 (ERVKN)
ಜಿಮ್ರಿಯು ತಾನು ಮಾಡಿದ ಪಾಪದ ಕಾರಣದಿಂದಲೇ ಸತ್ತುಹೋದನು. ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಜಿಮ್ರಿಯು ಮಾಡಿದನು. ಯಾರೊಬ್ಬಾಮನು ಪಾಪಮಾಡಿದಂತೆ ಅವನೂ ಪಾಪವನ್ನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.
1 ಅರಸುಗಳು 16 : 20 (ERVKN)
ಜಿಮ್ರಿಯ ರಹಸ್ಯಯೋಜನೆಗಳ ಕುರಿತಾಗಿಯೂ ಅವನು ಮಾಡಿದ ಇತರ ಕಾರ್ಯಗಳ ಕುರಿತಾಗಿಯೂ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ, ಜಿಮ್ರಿಯು ರಾಜನಾದ ಏಲಾಗೆ ವಿರುದ್ಧವಾಗಿ ತಿರುಗಿಬಿದ್ದಾಗ ಸಂಭವಿಸಿದ ಘಟನೆಗಳನ್ನೂ ಆ ಪುಸ್ತಕದಲ್ಲಿ ಬರೆಯಲಾಗಿದೆ.
1 ಅರಸುಗಳು 16 : 21 (ERVKN)
ಇಸ್ರೇಲಿನ ರಾಜನಾದ ಒಮ್ರಿ ಇಸ್ರೇಲಿನ ಜನರಲ್ಲಿ ಎರಡು ಪಕ್ಷಗಳಾದವು. ಗೀನತನ ಮಗನಾದ ತಿಬ್ನಿಯನ್ನು ಒಂದು ಪಕ್ಷದವರು ಅನುಸರಿಸಿ, ಅವನನ್ನು ತಮ್ಮ ರಾಜನನ್ನಾಗಿ ಮಾಡಲು ಅಪೇಕ್ಷೆಪಟ್ಟರು. ಮತ್ತೊಂದು ಪಕ್ಷದವರು ಒಮ್ರಿಯನ್ನು ಅನುಸರಿಸಿದರು.
1 ಅರಸುಗಳು 16 : 22 (ERVKN)
ಆದರೆ ಗೀನತನ ಮಗ ತಿಬ್ನಿಯ ಹಿಂಬಾಲಕರಿಗಿಂತಲೂ ಒಮ್ರಿಯ ಹಿಂಬಾಲಕರು ಬಲಶಾಲಿಗಳಾಗಿದ್ದರು. ಆದ್ದರಿಂದ ತಿಬ್ನಿಯನ್ನು ಕೊಲ್ಲಲಾಯಿತು; ಒಮ್ರಿಯು ರಾಜನಾದನು.
1 ಅರಸುಗಳು 16 : 23 (ERVKN)
ಆಸನು ಯೆಹೂದದ ರಾಜನಾಗಿದ್ದ ಮೂವತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರೇಲಿನ ರಾಜನಾದನು. ಒಮ್ರಿಯು ಇಸ್ರೇಲನ್ನು ಹನ್ನೆರಡು ವರ್ಷ ಆಳಿದನು. ಆ ಹನ್ನೆರಡು ವರ್ಷಗಳಲ್ಲಿ ಆರು ವರ್ಷ ಅವನು ತಿರ್ಚದಲ್ಲಿ ಆಳಿದನು.
1 ಅರಸುಗಳು 16 : 24 (ERVKN)
ಆದರೆ ಒಮ್ರಿಯು ಸಮಾರ್ಯ ಬೆಟ್ಟವನ್ನು ಶೆಮೆರನಿಂದ ಅರವತ್ತೆಂಟು ಕಿಲೋಗ್ರಾಂ ಬೆಳ್ಳಿಗೆ ಕೊಂಡುಕೊಂಡನು. ಒಮ್ರಿಯು ಆ ಬೆಟ್ಟದ ಮೇಲೆ ಒಂದು ನಗರವನ್ನು ಕಟ್ಟಿಸಿದನು. ಅವನು ಆ ನಗರಕ್ಕೆ ಸಮಾರ್ಯವೆಂದು ಅದರ ಒಡೆಯನಾದ ಶೆಮೆರನ ಹೆಸರನ್ನು ಇಟ್ಟನು.
1 ಅರಸುಗಳು 16 : 25 (ERVKN)
ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೆಲ್ಲ ಒಮ್ರಿಯು ಮಾಡಿದನು. ಒಮ್ರಿಯು ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅತ್ಯಂತ ಕೆಟ್ಟವನು.
1 ಅರಸುಗಳು 16 : 26 (ERVKN)
ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅವನೂ ಮಾಡಿದನು, ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಆದ್ದರಿಂದ ಅವರು ಇಸ್ರೇಲಿನ ದೇವರಾದ ಯೆಹೋವನನ್ನು ಹೆಚ್ಚು ಕೋಪಗೊಳಿಸಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಆರಾಧಿಸಿದ್ದರಿಂದ ಯೆಹೋವನು ಕೋಪಗೊಂಡನು.
1 ಅರಸುಗಳು 16 : 27 (ERVKN)
ಒಮ್ರಿಯ ಕುರಿತಾದ ಇತರ ಸಂಗತಿಗಳನ್ನೂ ಅವನ ಪರಾಕ್ರಮಗಳನ್ನೂ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆದಿದ್ದಾರೆ.
1 ಅರಸುಗಳು 16 : 28 (ERVKN)
ಒಮ್ರಿಯು ಸತ್ತುಹೋದನು; ಅವನನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು, ಅವನ ನಂತರ ಅವನ ಮಗನಾದ ಅಹಾಬನು ಹೊಸ ರಾಜನಾದನು.
1 ಅರಸುಗಳು 16 : 29 (ERVKN)
ಇಸ್ರೇಲಿನ ರಾಜನಾದ ಅಹಾಬ ಆಸನು ಯೆಹೂದದ ರಾಜನಾಗಿದ್ದ ಮೂವತ್ತೆಂಟನೇ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರೇಲಿನ ರಾಜನಾದನು. ಅಹಾಬನು ಇಸ್ರೇಲನ್ನು ಸಮಾರ್ಯ ಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.
1 ಅರಸುಗಳು 16 : 30 (ERVKN)
ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಾಬನು ಮಾಡಿದನು. ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅಹಾಬನೇ ಅತ್ಯಂತ ಕೆಟ್ಟವನು.
1 ಅರಸುಗಳು 16 : 31 (ERVKN)
ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಗಳನ್ನೇ ಅಹಾಬನು ಮಾಡಿದರೂ ಅವು ಅವನಿಗೆ ಸಾಕಾಗಲಿಲ್ಲ. ಆದ್ದರಿಂದ ಅಹಾಬನು ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾದನು. ಎತ್ಬಾಳನು ಚೀದೋನ್ಯರ ರಾಜನಾಗಿದ್ದನು. ನಂತರ ಅಹಾಬನು ಬಾಳ್ ದೇವರನ್ನು ಪೂಜಿಸಿ ಅದರ ಸೇವೆ ಮಾಡಲಾರಂಭಿಸಿದನು.
1 ಅರಸುಗಳು 16 : 32 (ERVKN)
ಬಾಳನನ್ನು ಪೂಜಿಸಲು ಅಹಾಬನು ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿದನು. ಆ ಗುಡಿಯಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು.
1 ಅರಸುಗಳು 16 : 33 (ERVKN)
ಅಹಾಬನು ಅಶೇರ ದೇವತೆಯನ್ನು ಆರಾಧಿಸಲು ಒಂದು ವಿಶೇಷ ಸ್ತಂಭವನ್ನು ನೆಡಿಸಿದನು. ಹೀಗೆ ಎಷ್ಟೋ ಕೆಟ್ಟಕಾರ್ಯಗಳನ್ನು ಮಾಡಿ ತನ್ನ ಮುಂಚೆ ಇದ್ದ ಇಸ್ರೇಲ್ ರಾಜರುಗಳಿಗಿಂತಲೂ ಹೆಚ್ಚಾಗಿ ಇಸ್ರೇಲ್ ದೇವರಾದ ಯೆಹೋವನನ್ನು ರೇಗಿಸಿದನು.
1 ಅರಸುಗಳು 16 : 34 (ERVKN)
ಅಹಾಬನ ಕಾಲದಲ್ಲಿ ಬೇತೇಲಿನ ಹೀಯೇಲನು ಜೆರಿಕೊ ಪಟ್ಟಣವನ್ನು ಮತ್ತೆ ನಿರ್ಮಿಸಿದನು. ಹೀಯೇಲನು ನಗರದಲ್ಲಿ ಈ ಕೆಲಸವನ್ನು ಮಾಡಲು ಆರಂಭಿಸಿದ ಕಾಲದಲ್ಲಿಯೇ ಅವನ ಹಿರಿಯ ಮಗನಾದ ಅಬೀರಾಮನು ಸತ್ತುಹೋದನು. ಹೀಯೇಲನು ನಗರದ ಬಾಗಿಲುಗಳನ್ನು ಕಟ್ಟಿಸಿದಾಗ, ಅವನ ಕಿರಿಯ ಮಗನಾದ ಸೆಗೂಬನು ಸತ್ತುಹೋದನು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ನೂನನ ಮಗನಾದ ಯೆಹೋಶುವನ ಮೂಲಕ ಯೆಹೋವನು ಇದನ್ನು ತಿಳಿಸಿದ್ದನು. *ನೂನನ … ತಿಳಿಸಿದ್ದನು ಯೆಹೋಶುವನು ಜೆರಿಕೊವನ್ನು ನಾಶಗೊಳಿಸಿದಾಗ, ಈ ನಗರವನ್ನು ಯಾರೇ ಆಗಲಿ ಮತ್ತೆ ಕಟ್ಟಿದರೆ ಅವರು ತಮ್ಮ ಹಿರಿಯ ಮಗನನ್ನು ಮತ್ತು ಕಿರಿಯ ಮಗನನ್ನು ಕಳೆದುಕೊಳ್ಳುತ್ತಾರೆಂದು ಅವನು ಹೇಳಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34