1 ಪೇತ್ರನು 1 : 1 (ERVKN)
ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಎಂಬ ಪ್ರದೇಶಗಳಲ್ಲಿ ಚದರಿಹೋಗಿ ಪ್ರವಾಸಿಗಳಾದ ದೇವಜನರಿಗೆ ಬರೆಯುವ ಪತ್ರ.
1 ಪೇತ್ರನು 1 : 2 (ERVKN)
ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.
1 ಪೇತ್ರನು 1 : 3 (ERVKN)
ಜೀವಂತವಾದ ನಿರೀಕ್ಷೆ ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.
1 ಪೇತ್ರನು 1 : 4 (ERVKN)
ದೇವರು ತನ್ನ ಮಕ್ಕಳಿಗೆ ನೀಡುವ ಆಶೀರ್ವಾದಗಳಲ್ಲಿ ಈಗ ನಮಗೆ ನಿರೀಕ್ಷೆಯಿದೆ. ಅವು ನಿಮಗಾಗಿ ಪರಲೋಕದಲ್ಲಿ ಇಡಲ್ಪಟ್ಟಿವೆ. ಅವು ಹಾಳಾಗುವುದಿಲ್ಲ, ನಾಶವಾಗುವುದಿಲ್ಲ ಮತ್ತು ಸೌಂದರ್ಯವನ್ನು ಕಳೆದುಕೊಳ್ಳುವುದಿಲ್ಲ.
1 ಪೇತ್ರನು 1 : 5 (ERVKN)
ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.
1 ಪೇತ್ರನು 1 : 6 (ERVKN)
ಇದು ನಿಮ್ಮನ್ನು ಬಹಳ ಸಂತೋಷಗೊಳಿಸುತ್ತದೆ. ಆದರೆ ಈಗ ಸ್ವಲ್ಪಕಾಲ ಅನೇಕ ವಿಧವಾದ ತೊಂದರೆಗಳು ನಿಮ್ಮಲ್ಲಿ ದುಃಖವನ್ನು ಉಂಟುಮಾಡಬಹುದು.
1 ಪೇತ್ರನು 1 : 7 (ERVKN)
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.
1 ಪೇತ್ರನು 1 : 8 (ERVKN)
ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.
1 ಪೇತ್ರನು 1 : 9 (ERVKN)
ನಿಮ್ಮ ನಂಬಿಕೆಗೆ ಒಂದು ಗುರಿಯಿದೆ. ನಿಮ್ಮ ಆತ್ಮವನ್ನು ರಕ್ಷಿಸಬೇಕೆಂಬುದೇ ಆ ಗುರಿ. ನಿಮ್ಮ ಗುರಿಯಾಗಿರುವ ರಕ್ಷಣೆಯನ್ನು ಹೊಂದಿಕೊಳ್ಳುವಿರಿ.
1 ಪೇತ್ರನು 1 : 10 (ERVKN)
ಪ್ರವಾದಿಗಳು ಈ ರಕ್ಷಣೆಯನ್ನು ಕುರಿತು ಸೂಕ್ಷ್ಮವಾಗಿ ಹುಡುಕಿ ಪರಿಶೀಲಿಸಲು ಪ್ರಯತ್ನಿಸಿದರು. ನಿಮಗೆ ಮುಂದೆ ಬರಲಿರುವ ಕೃಪೆಯನ್ನು ಕುರಿತು ಅವರು ಮಾತನಾಡಿದರು.
1 ಪೇತ್ರನು 1 : 11 (ERVKN)
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.
1 ಪೇತ್ರನು 1 : 12 (ERVKN)
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.
1 ಪೇತ್ರನು 1 : 13 (ERVKN)
ಪರಿಶುದ್ಧರಾಗಿ ಜೀವಿಸಲು ಆಹ್ವಾನ ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.
1 ಪೇತ್ರನು 1 : 14 (ERVKN)
ನೀವು ಮೊದಲು ಈ ಸಂಗತಿಗಳ ಕುರಿತು ಅರ್ಥಮಾಡಿಕೊಳ್ಳದಿದ್ದ ಕಾರಣ, ನೀವು ನಿಮ್ಮ ಇಚ್ಛೆಯಂತೆ ಕೆಟ್ಟಕಾರ್ಯಗಳನ್ನು ಮಾಡಿದಿರಿ. ಆದರೆ ಈಗ ನೀವು ವಿಧೇಯರಾಗಿರುವ ದೇವಮಕ್ಕಳು, ಆದ್ದರಿಂದ ಈಗ ಮೊದಲಿನಂತೆ ಜೀವಿಸಬೇಡಿ.
1 ಪೇತ್ರನು 1 : 15 (ERVKN)
ದೇವರು ಪರಿಶುದ್ಧನಾಗಿರುವಂತೆ ನಿಮ್ಮ ನಡೆನುಡಿಗಳು ಪರಿಶುದ್ಧವಾಗಿರಲಿ. ನಿಮ್ಮನ್ನು ಕರೆದಾತನು ದೇವರೇ.
1 ಪೇತ್ರನು 1 : 16 (ERVKN)
“ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಉಲ್ಲೇಖನ: ಯಾಜಕಕಾಂಡ 11:44,45; 19:2; 20:7. ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದೆ.
1 ಪೇತ್ರನು 1 : 17 (ERVKN)
ನೀವು ದೇವರಲ್ಲಿ ಪ್ರಾರ್ಥಿಸುವಾಗ ಆತನನ್ನು ತಂದೆಯೆಂದು ಕರೆಯುತ್ತೀರಿ. ದೇವರು ಪ್ರತಿಯೊಬ್ಬರಿಗೆ ಅವರವರ ಕೆಲಸಕ್ಕೆ ತಕ್ಕಂತೆ ತೀರ್ಪುಕೊಡುವನು. ನೀವು ಈ ಲೋಕದಲ್ಲಿ ಪ್ರವಾಸಿಗಳಾಗಿರುವುದರಿಂದ ದೇವರಿಗೆ ಭಯಪಟ್ಟು ಜೀವಿಸಿ.
1 ಪೇತ್ರನು 1 : 18 (ERVKN)
ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿಬಂಗಾರಗಳಿಂದಲ್ಲ.
1 ಪೇತ್ರನು 1 : 19 (ERVKN)
ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.
1 ಪೇತ್ರನು 1 : 20 (ERVKN)
ಈ ಲೋಕವು ಸೃಷ್ಟಿಯಾಗುವುದಕ್ಕೆ ಮೊದಲೇ ಕ್ರಿಸ್ತನು ಆರಿಸಲ್ಪಟ್ಟನು. ಆದರೆ ಆತನು ನಿಮಗೋಸ್ಕರ ಈ ಅಂತ್ಯಕಾಲದಲ್ಲಿ ಪ್ರತ್ಯಕ್ಷನಾದನು.
1 ಪೇತ್ರನು 1 : 21 (ERVKN)
ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.
1 ಪೇತ್ರನು 1 : 22 (ERVKN)
ನೀವು ಸತ್ಯಕ್ಕೆ ವಿಧೇಯರಾಗಿರುವುದರ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡಿಕೊಂಡಿದ್ದೀರಿ. ಈಗ ನಿಮ್ಮ ಸಹೋದರ ಸಹೋದರಿಯರನ್ನು ನಿಜವಾಗಿಯೂ ಪ್ರೀತಿಸಬಲ್ಲವರಾಗಿದ್ದೀರಿ. ಆದ್ದರಿಂದ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿ *ಹೃದಯಪೂರ್ವಕವಾಗಿ ಕೆಲವು ಪ್ರಾಚೀನ ಪತ್ರಿಕೆಗಳಲ್ಲಿ “ಪವಿತ್ರ ಹೃದಯ” ಎಂದು ಹೇಳಿದೆ. ಪ್ರೀತಿಸಿರಿ.
1 ಪೇತ್ರನು 1 : 23 (ERVKN)
ನೀವು ಹೊಸದಾಗಿ ಹುಟ್ಟಿದವರಾಗಿದ್ದೀರಿ. ಈ ಹೊಸಜೀವವು ನಾಶವಾಗುವಂಥದ್ದರಿಂದ ಬರದೆ ನಾಶವಾಗದೆ ಇರುವಂಥದ್ದರಿಂದ ಬಂದದ್ದಾಗಿದೆ. ಸಜೀವವೂ ಶಾಶ್ವತವೂ ಆಗಿರುವ ದೇವರ ವಾಕ್ಯದ ಮೂಲಕ ನೀವು ಹೊಸದಾಗಿ ಹುಟ್ಟಿದ್ದೀರಿ.
1 ಪೇತ್ರನು 1 : 24 (ERVKN)
ಪವಿತ್ರ ಗ್ರಂಥವು ಹೇಳುವುದೇನೆಂದರೆ, “ಜನರೆಲ್ಲರೂ ಹುಲ್ಲಿನಂತಿದ್ದಾರೆ. ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತಿದೆ.
ಹುಲ್ಲು ಒಣಗಿಹೋಗುವುದು, ಹೂವು ಉದುರಿಹೋಗುವುದು,
1 ಪೇತ್ರನು 1 : 25 (ERVKN)
ಆದರೆ ದೇವರ ವಾಕ್ಯವು ಎಂದೆಂದಿಗೂ ಜೀವಂತವಾಗಿರುತ್ತದೆ.” ಯೆಶಾಯ 40:6-8] ನಿಮಗೆ ಈ ವಾಕ್ಯವನ್ನೇ ತಿಳಿಸಲಾಯಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25