1 ಪೇತ್ರನು 4 : 1 (ERVKN)
ಮಾರ್ಪಾಟಾದ ಜೀವಿತ ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.
1 ಪೇತ್ರನು 4 : 2 (ERVKN)
ಆದ್ದರಿಂದ ಈ ಲೋಕದಲ್ಲಿ ನೀವು ಜನರ ಅಪೇಕ್ಷೆಗೆ ತಕ್ಕಂತೆ ಕೆಟ್ಟಕಾರ್ಯಗಳನ್ನು ಮಾಡದೆ, ದೇವರು ಅಪೇಕ್ಷಿಸುವಂಥ ಕಾರ್ಯಗಳನ್ನೇ ಮಾಡುತ್ತಾ ಜೀವಿಸಲು ನಿಮ್ಮನ್ನು ಬಲಪಡಿಸಿಕೊಳ್ಳಿರಿ.
1 ಪೇತ್ರನು 4 : 3 (ERVKN)
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.
1 ಪೇತ್ರನು 4 : 4 (ERVKN)
ನೀವು ಅಸಹ್ಯಕರವಾದ ನಿರರ್ಥಕಗೋಷ್ಠಿಗಳನ್ನು ಮಾಡದಿರುವುದನ್ನು ಕಂಡ ಅವಿಶ್ವಾಸಿಗಳು ನಿಮ್ಮ ವಿಷಯದಲ್ಲಿ ಆಶ್ಚರ್ಯಪಡುವರು. ಆದ್ದರಿಂದಲೇ ಅವರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳುವರು.
1 ಪೇತ್ರನು 4 : 5 (ERVKN)
ಆದರೆ ಅವಿಶ್ವಾಸಿಗಳು ತಾವು ಮಾಡುವ ಕಾರ್ಯಗಳ ಬಗ್ಗೆ ತಾವೇ ವಿವರಣೆಯನ್ನು ನೀಡಬೇಕಾಗುತ್ತದೆ. ಜೀವಂತವಾಗಿರುವ ಮತ್ತು ಸತ್ತಿರುವ ಜನರಿಗೆ ತೀರ್ಪು ನೀಡಲು ಸಿದ್ಧನಾಗಿರುವ ಕ್ರಿಸ್ತನಿಗೆ ಅವರು ವಿವರಣೆ ನೀಡಬೇಕಾಗುವುದು.
1 ಪೇತ್ರನು 4 : 6 (ERVKN)
ಸತ್ತುಹೋಗಿರುವ ಜನರಿಗೂ ಸುವಾರ್ತೆಯನ್ನು ಉಪದೇಶಿಸಲಾಯಿತು. ಅವರು ಶರೀರಸಂಬಂಧವಾಗಿ ಮರಣದಂಡನೆಗೆ ಗುರಿಯಾಗಿದ್ದರೂ ಸಹ ಆತ್ಮ ಸಂಬಂಧವಾಗಿ ದೇವರಂತೆ ಸದಾಕಾಲ ಜೀವಿಸಲೆಂದೇ ಅವರಿಗೆ ಉಪದೇಶಿಸಲಾಯಿತು.
1 ಪೇತ್ರನು 4 : 7 (ERVKN)
ದೇವರ ವರಗಳಿಗೆ ಉತ್ತಮ ಕಾರ್ಯ ನಿರ್ವಾಹಕರಾಗಿರಿ ಎಲ್ಲಾ ಸಂಗತಿಗಳೂ ಅಂತ್ಯಗೊಳ್ಳುವ ಕಾಲ ಸಮೀಪಿಸಿದೆ. ನೀವು ವಿವೇಕಿಗಳಾಗಿದ್ದು ನಿಮ್ಮನ್ನು ಹತೋಟಿಯಲ್ಲಿಟ್ಟು ಕೊಳ್ಳಿರಿ. ನೀವು ಪ್ರಾರ್ಥಿಸಲು ಇದು ಸಹಾಯ ಮಾಡುತ್ತದೆ.
1 ಪೇತ್ರನು 4 : 8 (ERVKN)
ನೀವು ಒಬ್ಬರನ್ನೊಬ್ಬರು ಎಡಬಿಡದೆ ಪ್ರೀತಿಸುವುದು ಬಹಳ ಮುಖ್ಯವಾದುದು. ಪ್ರೀತಿಯು ಅನೇಕ ಪಾಪಗಳನ್ನು ಅಡಗಿಸಿಬಿಡುತ್ತದೆ.
1 ಪೇತ್ರನು 4 : 9 (ERVKN)
ಗುಣುಗುಟ್ಟದೆ ಅತಿಥಿಸತ್ಕಾರ ಮಾಡಿರಿ.
1 ಪೇತ್ರನು 4 : 10 (ERVKN)
ನಿಮ್ಮಲ್ಲಿ ಪ್ರತಿಯೊಬ್ಬರೂ ದೇವರಿಂದ ಆತ್ಮಿಕ ವರವನ್ನು ಪಡೆದುಕೊಂಡಿರಿ. ದೇವರು ನಿಮಗೆ ಅನೇಕ ವಿಧಗಳಲ್ಲಿ ತನ್ನ ಕೃಪೆಯನ್ನು ದಯಪಾಲಿಸಿರುವನು. ನೀವು ದೇವರ ವರಗಳನ್ನು ಉಪಯೋಗಿಸುವ ಜವಾಬ್ದಾರಿಯುತರಾದ ಸೇವಕರಾಗಿದ್ದೀರಿ. ಆದ್ದರಿಂದ ಒಳ್ಳೆಯ ಸೇವಕರಾಗಿರಿ; ಪರಸ್ಪರ ಸೇವೆ ಮಾಡಲು ನಿಮ್ಮ ವರಗಳನ್ನು ಉಪಯೋಗಿಸಿರಿ.
1 ಪೇತ್ರನು 4 : 11 (ERVKN)
ಬೋಧಿಸುವವನು ದೇವರ ನುಡಿಗಳನ್ನೇ ಬೋಧಿಸಲಿ. ಸೇವೆ ಮಾಡುವವನು ದೇವರೇ ದಯಪಾಲಿಸಿದ ಶಕ್ತಿಯಿಂದ ಸೇವೆ ಮಾಡಲಿ. ನೀವು ಹೀಗೆ ಮಾಡಿದರೆ, ನೀವು ಮಾಡುವ ಪ್ರತಿಯೊಂದರಲ್ಲೂ ಯೇಸು ಕ್ರಿಸ್ತನ ಮೂಲಕ ದೇವರು ಸ್ತುತಿಸಲ್ಪಡುವನು. ಅಧಿಕಾರವೂ ಮಹಿಮೆಯೂ ಯುಗಯುಗಾಂತರಗಳಲ್ಲಿ ಆತನಿಗೆ ಸೇರಿದವುಗಳಾಗಿವೆ. ಆಮೆನ್.
1 ಪೇತ್ರನು 4 : 12 (ERVKN)
ಕ್ರೈಸ್ತನಾಗಿ ಸಂಕಟಪಡುವುದು ನನ್ನ ಸ್ನೇಹಿತರೇ, ನೀವು ಈಗ ಅನುಭವಿಸುತ್ತಿರುವ ಸಂಕಟಗಳ ವಿಷಯದಲ್ಲಿ ಆಶ್ಚರ್ಯಪಡದಿರಿ. ಅವು ನಿಮ್ಮ ನಂಬಿಕೆಯನ್ನು ಪರೀಕ್ಷಿಸುತ್ತಿವೆ. ವಿಪರೀತವಾದದ್ದು ನಿಮಗೆ ಸಂಭವಿಸುತ್ತಿದೆಯೆಂದು ಯೋಚಿಸದಿರಿ.
1 ಪೇತ್ರನು 4 : 13 (ERVKN)
ಆದರೆ ನೀವು ಕ್ರಿಸ್ತನ ಸಂಕಟಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಸಂತೋಷಿಸಿರಿ. ಕ್ರಿಸ್ತನು ತನ್ನ ಮಹಿಮೆಯನ್ನು ತೋರ್ಪಡಿಸುವಾಗ ನೀವು ಸಂತೋಷಪಡುವಿರಿ ಮತ್ತು ಆನಂದಿಸುವಿರಿ.
1 ಪೇತ್ರನು 4 : 14 (ERVKN)
ನೀವು ಕ್ರಿಸ್ತನನ್ನು ಅನುಸರಿಸುತ್ತಿರುವುದರ ನಿಮಿತ್ತವಾಗಿ ನಿಮ್ಮ ಬಗ್ಗೆ ಜನರು ಕೆಟ್ಟದ್ದನ್ನು ನುಡಿದರೆ ನೀವು ಭಾಗ್ಯವಂತರಾಗಿದ್ದೀರಿ. ತೇಜೋಮಯವಾದ ಆತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನೆ. ಆತನು ದೇವರಾತ್ಮನಾಗಿದ್ದಾನೆ.
1 ಪೇತ್ರನು 4 : 15 (ERVKN)
ನೀವು ಕೆಡುಕರಾಗಬಾರದು ಅಂದರೆ ಕೊಲೆಗಾರರಾಗಬಾರದು, ಕಳ್ಳರಾಗಬಾರದು ಮತ್ತು ಇತರರಿಗೆ ತೊಂದರೆ ಕೊಡಬಾರದು. ಇಂಥವುಗಳನ್ನು ಮಾಡುವವನು ಸಂಕಟಕ್ಕೆ ಒಳಗಾಗುವನು. ನಿಮ್ಮಲ್ಲಿ ಯಾರೂ ಆ ರೀತಿಯ ಸಂಕಟಕ್ಕೆ ಒಳಗಾಗಬಾರದು.
1 ಪೇತ್ರನು 4 : 16 (ERVKN)
ನೀವು ಕ್ರೈಸ್ತರಾಗಿರುವುದರಿಂದ ಸಂಕಟಪಟ್ಟರೆ, ನಾಚಿಕೊಳ್ಳಬಾರದು. ಆ (ಕ್ರೈಸ್ತ) ಹೆಸರಿನ ನಿಮಿತ್ತ ನೀವು ದೇವರಿಗೆ ಸ್ತೋತ್ರ ಮಾಡಬೇಕು.
1 ಪೇತ್ರನು 4 : 17 (ERVKN)
ನಿಮ್ಮ ನ್ಯಾಯನಿರ್ಣಯದ ಕಾಲ ಬಂದಿದೆ. ಅದು ದೇವರ ಕುಟುಂಬದಿಂದಲೇ ಆರಂಭವಾಗುವುದು. ನಮ್ಮಲ್ಲಿಯೇ ಅದು ಆರಂಭವಾದರೆ, ದೇವರ ಸುವಾರ್ತೆಗೆ ವಿಧೇಯರಾಗದ ಜನರಿಗೆ ಏನಾಗಬಹುದು?
1 ಪೇತ್ರನು 4 : 18 (ERVKN)
“ನೀತಿವಂತನೇ ರಕ್ಷಣೆ ಹೊಂದಲು ಕಷ್ಟವಾದರೆ, ಭಕ್ತಿಹೀನನ ಮತ್ತು ಪಾಪಿಷ್ಠನ ಗತಿಯೇನು?”ಜ್ಞಾನೋಕ್ತಿ. 11:31
1 ಪೇತ್ರನು 4 : 19 (ERVKN)
ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.

1 2 3 4 5 6 7 8 9 10 11 12 13 14 15 16 17 18 19