1 ಸಮುವೇಲನು 28 : 1 (ERVKN)
{ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು} [PS] ತರುವಾಯ, ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಲು ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದರು. ಆಕೀಷನು, “ನೀನು ಮತ್ತು ನಿನ್ನ ಜನರು ಇಸ್ರೇಲರ ವಿರುದ್ಧ ಹೋರಾಡುವುದಕ್ಕಾಗಿ ನನ್ನ ಜೊತೆಗೂಡಬೇಕೆಂಬುದನ್ನು ನೀನು ಅರ್ಥಮಾಡಿಕೊಂಡಿರುವೆಯಾ?” ಎಂದು ದಾವೀದನನ್ನು ಕೇಳಿದನು. [PE][PS]
1 ಸಮುವೇಲನು 28 : 2 (ERVKN)
ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು. [PE][PS] ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು. [PS]
1 ಸಮುವೇಲನು 28 : 3 (ERVKN)
{ಸೌಲನು ಮತ್ತು ಏಂದೋರಿನ ಯಕ್ಷಿಣಿ} [PS] ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. [PE][PS] ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು. [PE][PS]
1 ಸಮುವೇಲನು 28 : 4 (ERVKN)
ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು. ಅವರೆಲ್ಲ ಶೂನೇಮಿಗೆ ಬಂದು ಆ ಸ್ಥಳದಲ್ಲಿಯೇ ಪಾಳೆಯಮಾಡಿಕೊಂಡರು. ಸೌಲನು ಇಸ್ರೇಲರನ್ನೆಲ್ಲ ಒಟ್ಟುಗೂಡಿಸಿಕೊಂಡು ಬಂದು ಗಿಲ್ಬೋವದಲ್ಲಿ ಪಾಳೆಯ ಮಾಡಿಕೊಂಡನು.
1 ಸಮುವೇಲನು 28 : 5 (ERVKN)
ಸೌಲನು ಫಿಲಿಷ್ಟಿಯರ ಸೈನ್ಯವನ್ನು ನೋಡಿ ಹೆದರಿದನು. ಅವನ ಹೃದಯವು ಭಯದಿಂದ ಬಡಿದುಕೊಳ್ಳತೊಡಗಿತು.
1 ಸಮುವೇಲನು 28 : 6 (ERVKN)
ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.
1 ಸಮುವೇಲನು 28 : 7 (ERVKN)
ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು. [PE][PS] ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು. [PE][PS]
1 ಸಮುವೇಲನು 28 : 8 (ERVKN)
ಯಾರಿಗೂ ತನ್ನ ಗುರುತು ಸಿಕ್ಕದಂತೆ ಸೌಲನು ವೇಷವನ್ನು ಬದಲಾಯಿಸಿಕೊಂಡನು. ಸೌಲನು ತನ್ನ ಜನರಿಬ್ಬರೊಡನೆ ಅದೇ ರಾತ್ರಿಯಲ್ಲೇ ಆ ಬೇತಾಳಿಕಳನ್ನು ನೋಡಲು ಹೋದನು. ಸೌಲನು ಅವಳಿಗೆ, “ಬೇತಾಳದ ಮೂಲಕ ನನ್ನ ಭವಿಷ್ಯವನ್ನು ನನಗೆ ತೋರಿಸು, ನಾನು ಹೆಸರಿಸುವ ವ್ಯಕ್ತಿಯನ್ನು ಕರೆ” ಎಂದು ಕೇಳಿದನು. [PE][PS]
1 ಸಮುವೇಲನು 28 : 9 (ERVKN)
ಆದರೆ ಆ ಬೇತಾಳಿಕಳು ಸೌಲನಿಗೆ, “ಸೌಲನು ಏನು ಮಾಡಿದನೆಂಬುದು ನಿನಗೆ ನಿಜವಾಗಿಯೂ ತಿಳಿದಿದೆ. ಅವನು ಮಾಂತ್ರಿಕರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರವಾಗಿ ದೇಶದಿಂದ ಹೊರಗಟ್ಟಿದನು. ನೀನು ನನ್ನನ್ನು ಬಲೆಗೆ ಬೀಳಿಸಿ ಕೊಲ್ಲಲು ಪ್ರಯತ್ನಿಸುತ್ತಿರುವೆ” ಎಂದಳು. [PE][PS]
1 ಸಮುವೇಲನು 28 : 10 (ERVKN)
ಸೌಲನು ಯೆಹೋವನ ಹೆಸರಿನಲ್ಲಿ ಆ ಬೇತಾಳಿಕಳಿಗೆ ವಾಗ್ದಾನಮಾಡಿ, “ಯೆಹೋವನಾಣೆ, ಈ ಕಾರ್ಯವನ್ನು ಮಾಡಿದ್ದಕ್ಕಾಗಿ ನಿನಗೆ ದಂಡನೆಯಾಗುವುದಿಲ್ಲ” ಎಂದು ಹೇಳಿದನು. [PE][PS]
1 ಸಮುವೇಲನು 28 : 11 (ERVKN)
ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು. [PE][PS] ಸೌಲನು, “ಸಮುವೇಲನನ್ನು ಬರಮಾಡು” ಎಂದು ಉತ್ತರಿಸಿದನು. [PE][PS]
1 ಸಮುವೇಲನು 28 : 12 (ERVKN)
ಅಂತೆಯೇ ಆಯಿತು. ಆ ಹೆಂಗಸು ಸಮುವೇಲನನ್ನು ಕಂಡ ಕೊಡಲೇ ಗಟ್ಟಿಯಾಗಿ ಅರಚಿದಳು. ಅವಳು ಸೌಲನಿಗೆ, “ನೀನು ನನ್ನನ್ನು ವಂಚಿಸಿದೆ! ನೀನೇ ಸೌಲನು” ಎಂದಳು. [PE][PS]
1 ಸಮುವೇಲನು 28 : 13 (ERVKN)
ರಾಜನು ಆ ಹೆಂಗಸಿಗೆ, “ಹೆದರದಿರು! ನಿನಗೇನು ಕಾಣಿಸುತ್ತಿದೆ?” ಎಂದು ಕೇಳಿದನು. [PE][PS] ಆ ಹೆಂಗಸು, “ಒಂದು ಆತ್ಮವು ಭೂಮಿಯೊಳಗಿಂದ [*ಭೂಮಿಯೊಳಗಿಂದ ಅಥವಾ “ಶಿಯೋಲ್.”] ಮೇಲಕ್ಕೆ ಬರುತ್ತಿರುವುದು ನನಗೆ ಕಾಣುತ್ತಿದೆ” ಎಂದು ಉತ್ತರಕೊಟ್ಟಳು. [PE][PS]
1 ಸಮುವೇಲನು 28 : 14 (ERVKN)
ಸೌಲನು, “ಅವನ ರೂಪ ಹೇಗಿದೆ?” ಎಂದು ಕೇಳಿದನು. [PE][PS] ಆ ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು. [PE][PS] ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದುಕೊಂಡು ಸಾಷ್ಟಾಂಗನಮಸ್ಕಾರ ಮಾಡಿದನು.
1 ಸಮುವೇಲನು 28 : 15 (ERVKN)
ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು. [PE][PS] ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲಿ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು. [PE][PS]
1 ಸಮುವೇಲನು 28 : 16 (ERVKN)
ಸಮುವೇಲನು, “ಯೆಹೋವನು ನಿನ್ನನ್ನು ತ್ಯಜಿಸಿದ್ದಾನೆ. ಈಗ ಆತನು ನಿನ್ನ ವಿರೋಧಿಯಾಗಿದ್ದಾನೆ. ಆದ್ದರಿಂದ ನನ್ನನ್ನೇಕೆ ಕರೆಯುವೆ?
1 ಸಮುವೇಲನು 28 : 17 (ERVKN)
ಯೆಹೋವನು ನಿನಗೆ ಹೇಳಿದ್ದಂತೆಯೇ ಮಾಡಿದನು. ಆತನು ಅವುಗಳ ಬಗ್ಗೆ ನನ್ನ ಮೂಲಕವಾಗಿ ನಿನಗೆ ತಿಳಿಸಿದನು. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಕೈಗಳಿಂದ ಕಿತ್ತುಕೊಂಡು ನಿನ್ನ ನೆರೆಯವರಲ್ಲಿ ಒಬ್ಬನಿಗೆ ಕೊಟ್ಟಿದ್ದಾನೆ. ದಾವೀದನೇ ಆ ನೆರೆಯವನು.
1 ಸಮುವೇಲನು 28 : 18 (ERVKN)
ನೀನು ಯೆಹೋವನಿಗೆ ವಿಧೇಯನಾಗಲಿಲ್ಲ. ನೀನು ಅಮಾಲೇಕ್ಯರನ್ನು ನಾಶಗೊಳಿಸಲಿಲ್ಲ; ಯೆಹೋವನು ಅವರ ಬಗ್ಗೆ ಎಷ್ಟು ಕೋಪಗೊಂಡಿದ್ದನೆಂಬುದನ್ನು ಅವರಿಗೆ ತಿಳಿಯಪಡಿಸಿಲ್ಲ. ಆದ್ದರಿಂದಲೇ ಯೆಹೋವನು ಇಂದು ನಿನಗೆ ಹೀಗೆ ಮಾಡಿದ್ದಾನೆ.
1 ಸಮುವೇಲನು 28 : 19 (ERVKN)
ಯೆಹೋವನು ನಿನ್ನನ್ನು ಮತ್ತು ಇಸ್ರೇಲರನ್ನು ಫಿಲಿಷ್ಟಿಯರ ವಶಕ್ಕೆ ಒಪ್ಪಿಸುತ್ತಾನೆ. ಫಿಲಿಷ್ಟಿಯರು ಇಸ್ರೇಲ್ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ. ಮಾರನೆಯ ದಿನ, ನೀನು ಮತ್ತು ನಿನ್ನ ಮಕ್ಕಳು ನನ್ನೊಡನೆ ಇಲ್ಲಿರುತ್ತೀರಿ!” ಎಂದು ಹೇಳಿದನು. [PE][PS]
1 ಸಮುವೇಲನು 28 : 20 (ERVKN)
ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು. [PE][PS]
1 ಸಮುವೇಲನು 28 : 21 (ERVKN)
ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.
1 ಸಮುವೇಲನು 28 : 22 (ERVKN)
ಈಗ ದಯವಿಟ್ಟು ನನ್ನ ಮಾತನ್ನು ಆಲಿಸು. ನಾನು ನಿನಗೆ ಸ್ವಲ್ಪ ಆಹಾರವನ್ನು ಕೊಡುತ್ತೇನೆ. ನೀನು ತಿನ್ನಲೇಬೇಕು. ಆಗ ನಿನ್ನ ಪ್ರಯಾಣವನ್ನು ಮುಂದುವರಿಸಲು ನಿನಗೆ ಸಾಕಷ್ಟು ಶಕ್ತಿಯಿರುವುದು” ಎಂದು ಹೇಳಿದಳು. [PE][PS]
1 ಸಮುವೇಲನು 28 : 23 (ERVKN)
ಆದರೆ ಸೌಲನು ನಿರಾಕರಿಸಿ, “ನಾನು ತಿನ್ನುವುದಿಲ್ಲ” ಅಂದನು. [PE][PS] ಊಟಮಾಡುವಂತೆ ಸೌಲನ ಅಧಿಕಾರಿಗಳೂ ಬೇಡಿಕೊಂಡರು. ಕೊನೆಗೆ ಸೌಲನು ಅವರ ಮಾತಿಗೆ ಕಿವಿಗೊಟ್ಟನು. ಅವನು ನೆಲದಿಂದ ಮೇಲಕ್ಕೆದ್ದು ಮಂಚದ ಮೇಲೆ ಕುಳಿತನು.
1 ಸಮುವೇಲನು 28 : 24 (ERVKN)
ಆ ಹೆಂಗಸಿನ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು. ಅವಳು ಬೇಗನೆ ಅದನ್ನು ಕೊಯ್ದಳು. ಅವಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ನಾದಿದಳು. ನಂತರ ಅವಳು ಕೆಲವು ರೊಟ್ಟಿಗಳನ್ನು ಸುಟ್ಟಳು.
1 ಸಮುವೇಲನು 28 : 25 (ERVKN)
ಆ ಹೆಂಗಸು ಸೌಲನ ಮತ್ತು ಅವನ ಸೇನಾಧಿಕಾರಿಗಳ ಮುಂದೆ ಆಹಾರವನ್ನಿಟ್ಟಳು. ಸೌಲನು ಮತ್ತು ಅವನ ಅಧಿಕಾರಿಗಳು ಊಟಮಾಡಿದರು. ನಂತರ ಆ ರಾತ್ರಿಯೇ ಅವರು ಅಲ್ಲಿಂದ ಹೊರಟುಹೋದರು. [PE]
❮
❯