1 ಸಮುವೇಲನು 31 : 1 (ERVKN)
ಸೌಲನ ಮರಣ ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಸೋತು ಓಡಿಹೋದರು. ಬಹಳ ಜನ ಇಸ್ರೇಲರು ಗಿಲ್ಬೋವ ಶಿಖರದಲ್ಲಿ ಹತರಾದರು.
1 ಸಮುವೇಲನು 31 : 2 (ERVKN)
ಫಿಲಿಷ್ಟಿಯರು ಸೌಲ ಮತ್ತು ಅವನ ಮಕ್ಕಳೊಂದಿಗೆ ಭೀಕರವಾಗಿ ಹೋರಾಡಿದರು. ಸೌಲನ ಮಕ್ಕಳಾದ ಯೋನಾತಾನ, ಅಬೀನಾದ್ವಾ ಮತ್ತು ಮಲ್ಕೀಷೂವರನ್ನು ಫಿಲಿಷ್ಟಿಯರು ಕೊಂದರು.
1 ಸಮುವೇಲನು 31 : 3 (ERVKN)
ಸೌಲನ ವಿರುದ್ಧವಾದ ಈ ಯುದ್ಧವು ಬಹಳ ಘೋರವಾಗಿತ್ತು. ಬಿಲ್ಲುಗಾರರು ಸೌಲನ ಮೇಲೆ ಬಾಣಗಳನ್ನು ಬಿಟ್ಟಿದ್ದರಿಂದ ಸೌಲನು ಬಹಳವಾಗಿ ಗಾಯಗೊಂಡನು.
1 ಸಮುವೇಲನು 31 : 4 (ERVKN)
ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.
1 ಸಮುವೇಲನು 31 : 5 (ERVKN)
ಸೌಲನು ಸತ್ತುಹೋದದ್ದನ್ನು ಕಂಡ ಆಯುಧವಾಹಕನೂ ತನ್ನ ಖಡ್ಗದಿಂದ ತಾನೂ ಆತ್ಮಹತ್ಯೆ ಮಾಡಿಕೊಂಡನು. ಅವನು ಸೌಲನೊಂದಿಗೆ ಅಲ್ಲಿಯೇ ಸತ್ತುಹೋದನು.
1 ಸಮುವೇಲನು 31 : 6 (ERVKN)
ಹೀಗೆ ಸೌಲನು ಮತ್ತು ಅವನ ಮೂವರು ಗಂಡುಮಕ್ಕಳೂ ಮತ್ತು ಸೌಲನ ಆಯುಧವಾಹಕನೂ ಅದೇ ದಿನ ಸತ್ತುಹೋದರು.
1 ಸಮುವೇಲನು 31 : 7 (ERVKN)
ಸೌಲನ ದೇಹವು ಫಿಲಿಷ್ಟಿಯರಿಗೆ ಸಿಕ್ಕಿತು ಇಸ್ರೇಲರ ಸೈನ್ಯವು ಓಡಿಹೋಗುತ್ತಿರುವುದನ್ನು ಕಣಿವೆಯ ಮತ್ತೊಂದು ಪಕ್ಕದಲ್ಲಿ ವಾಸಮಾಡುತ್ತಿದ್ದ ಇಸ್ರೇಲರು ನೋಡಿದರು. ಸೌಲನು ಮತ್ತು ಅವನ ಮಕ್ಕಳು ಸತ್ತದ್ದನ್ನೂ ಅವರು ನೋಡಿದರು. ಆದ್ದರಿಂದ ಆ ಇಸ್ರೇಲರು ತಮ್ಮ ನಗರಗಳನ್ನು ಬಿಟ್ಟು ಓಡಿಹೋದರು. ನಂತರ ಫಿಲಿಷ್ಟಿಯರು ಬಂದು ಆ ನಗರಗಳನ್ನು ವಶಪಡಿಸಿಕೊಂಡು ನೆಲೆಸಿದರು.
1 ಸಮುವೇಲನು 31 : 8 (ERVKN)
ಮಾರನೆಯ ದಿನ, ಸತ್ತದೇಹಗಳಿಂದ ವಸ್ತುಗಳನ್ನು ದೋಚಲು ಫಿಲಿಷ್ಟಿಯರು ಬಂದರು. ಸೌಲನು ಮತ್ತು ಅವನ ಮೂರು ಜನ ಮಕ್ಕಳು ಗಿಲ್ಬೋವ ಶಿಖರದಲ್ಲಿ ಸತ್ತಿರುವುದನ್ನು ಅವರು ನೋಡಿದರು.
1 ಸಮುವೇಲನು 31 : 9 (ERVKN)
ಸೌಲನ ತಲೆಯನ್ನು ಫಿಲಿಷ್ಟಿಯರು ಕಡಿದುಹಾಕಿದರು. ಮತ್ತು ಅವನ ಆಯುಧಗಳನ್ನು ತೆಗೆದುಕೊಂಡರು. ಫಿಲಿಷ್ಟಿಯ ಜನರಿಗೆ ಮತ್ತು ಅವರ ವಿಗ್ರಹಗಳ ಗುಡಿಗೆ ಈ ವಿಜಯದ ವಾರ್ತೆಯನ್ನು ಕಳುಹಿಸಿದರು.
1 ಸಮುವೇಲನು 31 : 10 (ERVKN)
ಅಷ್ಟೋರೆತಳ ದೇವಾಲಯದಲ್ಲಿ ಅವರು ಸೌಲನ ಆಯುಧಗಳನ್ನು ಇಟ್ಟರು. ಫಿಲಿಷ್ಟಿಯರು ಸೌಲನ ದೇಹವನ್ನು ಬೇತ್‌ಷೆಯಾನಿನ ಗೋಡೆಗೆ ನೇತುಹಾಕಿದರು.
1 ಸಮುವೇಲನು 31 : 11 (ERVKN)
ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬುದನ್ನು ಯಾಬೆಷ್‌ಗಿಲ್ಯಾದಿನಲ್ಲಿ ವಾಸಿಸುತ್ತಿದ್ದ ಜನರೆಲ್ಲ ತಿಳಿದುಕೊಂಡರು.
1 ಸಮುವೇಲನು 31 : 12 (ERVKN)
ಆದ್ದರಿಂದ ಯಾಬೆಷಿನ ಸೈನಿಕರೆಲ್ಲ ಬೇತ್‌ಷೆಯಾನಿಗೆ ಹೋದರು. ಅವರು ರಾತ್ರಿಯೆಲ್ಲಾ ನಡೆದರು! ನಂತರ ಅವರು ಬೇತ್‌ಷೆಯಾನಿನ ಗೋಡೆಯಲ್ಲಿದ್ದ ಸೌಲನ ದೇಹವನ್ನು ಇಳಿಸಿದರು. ನಂತರ ಅವರು ಸೌಲನ ಗಂಡುಮಕ್ಕಳ ದೇಹಗಳನ್ನೂ ಇಳಿಸಿದರು. ನಂತರ ಅವರು ಆ ದೇಹಗಳನ್ನು ಯಾಬೇಷಿಗೆ ತೆಗೆದುಕೊಂಡು ಹೋದರು. ಸೌಲ ಮತ್ತು ಅವನ ಮೂವರು ಗಂಡುಮಕ್ಕಳ ದೇಹಗಳನ್ನು ಯಾಬೇಷಿನ ಜನರು ಅಲ್ಲಿ ದಹಿಸಿಬಿಟ್ಟರು.
1 ಸಮುವೇಲನು 31 : 13 (ERVKN)
ನಂತರ ಈ ಜನರು ಸೌಲ ಮತ್ತು ಅವನ ಮೂರು ಮಕ್ಕಳ ಮೂಳೆಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನ ಪಿಚುಲ ಮರದ ಕೆಳಗೆ ಸಮಾಧಿಮಾಡಿದರು. ನಂತರ ಯಾಬೇಷಿನ ಜನರು ದುಃಖದಿಂದ ಏಳು ದಿನಗಳ ಕಾಲ ಉಪವಾಸ ಮಾಡಿದರು. *ಏಳು ದಿನಗಳ ಕಾಲ ಉಪವಾಸ ಮಾಡಿದರು ಸೌಲನ ಮರಣಕ್ಕಾಗಿ ತೀವ್ರ ಸಂತಾಪವನ್ನು ವ್ಯಕ್ತಪಡಿಸಲು ಅನುಸರಿಸಿದ ಮಾರ್ಗ. ಅವರ ನಗರವನ್ನು ಸೌಲನು ರಕ್ಷಿಸಿದನೆಂಬುದನ್ನು ಅವರು ಎಂದೆಂದಿಗೂ ಮರೆಯುವುದಿಲ್ಲ.
❮
❯
1
2
3
4
5
6
7
8
9
10
11
12
13