1 ತಿಮೊಥೆಯನಿಗೆ 2 : 1 (ERVKN)
ಪ್ರಾರ್ಥನೆ ಮತ್ತು ಸಭಾಕೂಟಗಳ ಬಗ್ಗೆ ಕೆಲವು ಸಲಹೆಗಳು ಮೊಟ್ಟ ಮೊದಲನೆಯದಾಗಿ ನಾನು ನಿಮಗೆ ಹೇಳುವುದೇನೆಂದರೆ, ಎಲ್ಲಾ ಜನರಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ, ವಿಜ್ಞಾಪಿಸಿರಿ, ಅವರ ಅಗತ್ಯಕ್ಕೆ ತಕ್ಕಂತೆ ಬಿನ್ನಹ ಮಾಡಿರಿ ಮತ್ತು ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ.
1 ತಿಮೊಥೆಯನಿಗೆ 2 : 2 (ERVKN)
ನಮ್ಮಲ್ಲಿ ಶಾಂತಿ ಸಮಾಧಾನಗಳು ನೆಲಸಿ ನಾವು ದೇವರನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಆರಾಧಿಸಲು ಸಾಧ್ಯವಾಗುವಂತೆ ಅರಸರಿಗಾಗಿಯೂ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಿರಿ.
1 ತಿಮೊಥೆಯನಿಗೆ 2 : 3 (ERVKN)
ಇದು ಒಳ್ಳೆಯದೂ ಮತ್ತು ನಮ್ಮ ರಕ್ಷಕನಾದ ದೇವರಿಗೆ ಮೆಚ್ಚಿಕೆಕರವೂ ಆಗಿದೆ.
1 ತಿಮೊಥೆಯನಿಗೆ 2 : 4 (ERVKN)
ಎಲ್ಲಾ ಜನರು ರಕ್ಷಿಸಲ್ಪಡಬೇಕೆಂದು, ಸತ್ಯವನ್ನು ತಿಳಿದು ಕೊಳ್ಳಬೇಕೆಂದು ದೇವರು ಬಯಸುತ್ತಾನೆ.
1 ತಿಮೊಥೆಯನಿಗೆ 2 : 5 (ERVKN)
ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.
1 ತಿಮೊಥೆಯನಿಗೆ 2 : 6 (ERVKN)
ಯೇಸುವು ಜನರೆಲ್ಲರ ಪಾಪಗಳಿಗೆ ತನ್ನನ್ನೇ ಉಚಿತವಾಗಿ ಒಪ್ಪಿಸಿಕೊಟ್ಟನು. ಜನರೆಲ್ಲರೂ ರಕ್ಷಣೆ ಹೊಂದಬೇಕೆಂಬ ದೇವರ ಅಪೇಕ್ಷೆಗೆ ಯೇಸುವು ತಕ್ಕಕಾಲದಲ್ಲಿ ಸಾಕ್ಷಿನೀಡಿದನು.
1 ತಿಮೊಥೆಯನಿಗೆ 2 : 7 (ERVKN)
ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.
1 ತಿಮೊಥೆಯನಿಗೆ 2 : 8 (ERVKN)
ಪುರುಷರಿಗೆ ಮತ್ತು ಸ್ತ್ರೀಯರಿಗೆ ವಿಶೇಷ ಸೂಚನೆಗಳು ಎಲ್ಲಾ ಸ್ಥಳಗಳಲ್ಲಿ ಪುರುಷರು ಪ್ರಾರ್ಥನೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ತಮ್ಮ ಕೈಗಳನ್ನು ಮೇಲೆತ್ತಿ ಪ್ರಾರ್ಥಿಸುವ ಅವರು ಪರಿಶುದ್ಧರಾಗಿರಬೇಕು. ಅವರು ವಾಗ್ವಾದ ಮಾಡುವವರೂ ಕೋಪಗೊಳ್ಳುವವರೂ ಆಗಿರಬಾರದು.
1 ತಿಮೊಥೆಯನಿಗೆ 2 : 9 (ERVKN)
ಸ್ತ್ರೀಯರು ತಮಗೆ ಯೋಗ್ಯವಾದ ಉಡುಪುಗಳನ್ನು ಧರಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರ ಉಡುಪುಗಳು ಅವರು ಮಾನಸ್ಥೆಯರು ಎಂಬುದನ್ನು ತೋರಿಸುವಂಥವುಗಳಾಗಿರಬೇಕು. ಅವರು ತಮ್ಮ ಸೌಂದರ್ಯವನ್ನು ಹೆಚ್ಚಿಸಲು ತಲೆಕೂದಲನ್ನು ಅಲಂಕಾರಿಕವಾಗಿ ಕಟ್ಟಿಕೊಳ್ಳಕೂಡದು; ಬಂಗಾರವನ್ನು ಮತ್ತು ಮುತ್ತುಗಳನ್ನು ತೊಟ್ಟುಕೊಳ್ಳಕೂಡದು ಮತ್ತು ಬೆಲೆಬಾಳುವ ಬಟ್ಟೆಗಳನ್ನು ಧರಿಸಿಕೊಳ್ಳಕೂಡದು.
1 ತಿಮೊಥೆಯನಿಗೆ 2 : 10 (ERVKN)
ಆದರೆ ಅವರು ಯೋಗ್ಯಕಾರ್ಯಗಳನ್ನು ಮಾಡುವುದರ ಮೂಲಕ ತಮ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬೇಕು. ದೇವರನ್ನು ಆರಾಧಿಸುತ್ತೇವೆ ಎಂದು ಹೇಳುವ ಸ್ತ್ರೀಯರು ತಮ್ಮನ್ನು ಈ ರೀತಿಯಲ್ಲಿಯೇ ಅಲಂಕರಿಸಿಕೊಳ್ಳಬೇಕು.
1 ತಿಮೊಥೆಯನಿಗೆ 2 : 11 (ERVKN)
ಸ್ತ್ರೀಯರು ಉಪದೇಶವನ್ನು ಕೇಳಬೇಕು ಮತ್ತು ವಿಧೇಯರಾಗಲು ಪೂರ್ಣಸಿದ್ಧರಾಗಿರಬೇಕು.
1 ತಿಮೊಥೆಯನಿಗೆ 2 : 12 (ERVKN)
ಅವರು ಪುರುಷರಿಗೆ ಉಪದೇಶಿಸುವುದಕ್ಕಾಗಲಿ ಅವರ ಮೇಲೆ ಅಧಿಕಾರ ಚಲಾಯಿಸುವುದಕ್ಕಾಗಲಿ ನಾನು ಸಮ್ಮತಿಸುವುದಿಲ್ಲ. ಅವರು ಮೌನವಾಗಿರಬೇಕು.
1 ತಿಮೊಥೆಯನಿಗೆ 2 : 13 (ERVKN)
ಏಕೆಂದರೆ ಮೊದಲು ನಿರ್ಮಿತನಾದವನು ಆದಾಮ. ಅನಂತರ ನಿರ್ಮಿತಳಾದದ್ದು ಹವ್ವಳು.
1 ತಿಮೊಥೆಯನಿಗೆ 2 : 14 (ERVKN)
ಅಲ್ಲದೆ ಸೈತಾನನಿಂದ ವಂಚಿಸಲ್ಪಟ್ಟದ್ದು ಆದಾಮನಲ್ಲ. ಸ್ತ್ರೀಯು ವಂಚನೆಗೆ ಬಲಿಯಾಗಿ ಪಾಪಿಯಾದಳು.
1 ತಿಮೊಥೆಯನಿಗೆ 2 : 15 (ERVKN)
ಆದರೆ ಸ್ತ್ರೀಯರು ನಂಬಿಕೆಯಲ್ಲಿ, ಪ್ರೀತಿಯಲ್ಲಿ, ಪರಿಶುದ್ಧತೆಯಲ್ಲಿ ಮತ್ತು ಸರಿಯಾದ ನಡವಳಿಕೆಯಲ್ಲಿ ದೃಢವಾಗಿದ್ದರೆ ಮಕ್ಕಳನ್ನು ಹೆರುವಾಗ ರಕ್ಷಿಸಲ್ಪಡುವರು.

1 2 3 4 5 6 7 8 9 10 11 12 13 14 15