1 ತಿಮೊಥೆಯನಿಗೆ 3 : 1 (ERVKN)
ಸಭಾನಾಯಕರು ನಾನು ಹೇಳುವ ಈ ಸಂಗತಿ ಸತ್ಯವಾದದ್ದು. ಅದೇನೆಂದರೆ, ಸಭಾಧ್ಯಕ್ಷನಾಗಲು ಬಹಳವಾಗಿ ಪ್ರಯತ್ನಿಸುವವನು ಒಳ್ಳೆಯ ಕೆಲಸವನ್ನೇ ಅಪೇಕ್ಷಿಸುವವನಾಗಿದ್ದಾನೆ.
1 ತಿಮೊಥೆಯನಿಗೆ 3 : 2 (ERVKN)
ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;
1 ತಿಮೊಥೆಯನಿಗೆ 3 : 3 (ERVKN)
ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.
1 ತಿಮೊಥೆಯನಿಗೆ 3 : 4 (ERVKN)
ಅವನು ತನ್ನ ಸ್ವಂತ ಕುಟುಂಬಕ್ಕೆ ಒಳ್ಳೆಯ ನಾಯಕನಾಗಿರಬೇಕು. ಅವನ ಮಕ್ಕಳು ಅವನಿಗೆ ವಿಧೇಯರಾಗಿದ್ದು ಪೂರ್ಣ ಗೌರವವನ್ನು ನೀಡುವಂತಿರಬೇಕೆಂಬುದು ಇದರ ಅರ್ಥ.
1 ತಿಮೊಥೆಯನಿಗೆ 3 : 5 (ERVKN)
(ತನ್ನ ಸ್ವಂತ ಕುಟುಂಬವನ್ನು ಆಳಲು ತಿಳಿಯದವನು ದೇವರ ಸಭೆಯನ್ನು ಪರಾಮರಿಸಲು ಸಮರ್ಥನಲ್ಲ.)
1 ತಿಮೊಥೆಯನಿಗೆ 3 : 6 (ERVKN)
ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.
1 ತಿಮೊಥೆಯನಿಗೆ 3 : 7 (ERVKN)
ಸಭಾಧ್ಯಕ್ಷನು ಸಭೆಯಲ್ಲಿಲ್ಲದ ಜನರ ಗೌರವಕ್ಕೆ ಸಹ ಪಾತ್ರನಾಗಿರಬೇಕು. ಆಗ ಅವನು ಇತರರ ಟೀಕೆಗೆ ಗುರಿಯಾಗುವುದೂ ಇಲ್ಲ, ಸೈತಾನನ ವಂಚನೆಗೆ ಸಿಕ್ಕಿಬೀಳುವುದೂ ಇಲ್ಲ.
1 ತಿಮೊಥೆಯನಿಗೆ 3 : 8 (ERVKN)
ವಿಶೇಷ ಸೇವಕರು ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು;
1 ತಿಮೊಥೆಯನಿಗೆ 3 : 9 (ERVKN)
ದೇವರು ನಮಗೆ ತಿಳಿಸಿಕೊಟ್ಟ ಸತ್ಯವನ್ನು ಶುದ್ಧ ಮನಸ್ಸಾಕ್ಷಿಯಿಂದ ಮಾಡುವವರಾಗಿರಬೇಕು.
1 ತಿಮೊಥೆಯನಿಗೆ 3 : 10 (ERVKN)
ಅವರನ್ನು ನೀನು ಮೊದಲು ಪರೀಕ್ಷಿಸು. ಅವರು ಕಳಂಕರಹಿತರಾಗಿದ್ದರೆ, ಸೇವಕರಾಗಿ ಸೇವೆ ಮಾಡಬಹುದು.
1 ತಿಮೊಥೆಯನಿಗೆ 3 : 11 (ERVKN)
ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು.
1 ತಿಮೊಥೆಯನಿಗೆ 3 : 12 (ERVKN)
ಸಭಾಸೇವಕರು ಏಕ ಪತ್ನಿ ಉಳ್ಳವರಾಗಿರಬೇಕು. ಅವರು ತಮ್ಮ ಮಕ್ಕಳಿಗೆ ಮತ್ತು ಕುಟುಂಬಕ್ಕೆ ಒಳ್ಳೆಯ ನಾಯಕರಾಗಿರಬೇಕು.
1 ತಿಮೊಥೆಯನಿಗೆ 3 : 13 (ERVKN)
ಯೋಗ್ಯ ಮಾರ್ಗದಲ್ಲಿ ಸೇವೆ ಮಾಡುವ ಜನರು ತಮಗೆ ಗೌರವಯುತವಾದ ಸ್ಥಾನವನ್ನು ಪಡೆಯುವರು. ಕ್ರಿಸ್ತ ಯೇಸುವಿನಲ್ಲಿ ತಮಗಿರುವ ನಂಬಿಕೆಯ ವಿಷಯದಲ್ಲಿ ಅವರು ಭರವಸೆ ಉಳ್ಳವರಾಗಿರುತ್ತಾರೆ.
1 ತಿಮೊಥೆಯನಿಗೆ 3 : 14 (ERVKN)
ನಮ್ಮ ಜೀವನದ ರಹಸ್ಯ ನಾನು ನಿನ್ನ ಬಳಿಗೆ ಬಹುಬೇಗ ಬರುವೆನೆಂಬ ಭರವಸೆ ನನಗಿದೆ. ಆದರೆ ಈಗ ನಾನು ಈ ಸಂಗತಿಗಳನ್ನು ಬರೆಯುತ್ತಿದ್ದೇನೆ.
1 ತಿಮೊಥೆಯನಿಗೆ 3 : 15 (ERVKN)
ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.
1 ತಿಮೊಥೆಯನಿಗೆ 3 : 16 (ERVKN)
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು.
ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು.
ದೇವದೂತರಿಗೆ ಆತನು ಕಾಣಿಸಿಕೊಂಡನು.
ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು.
ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು.
ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
❮
❯
1
2
3
4
5
6
7
8
9
10
11
12
13
14
15
16