1 ತಿಮೊಥೆಯನಿಗೆ 5 : 1 (ERVKN)
ವೃದ್ಧ ಪುರುಷರೊಂದಿಗೆ ಕೋಪದಿಂದ ಮಾತಾಡದೆ ಅವರನ್ನು ನಿನ್ನ ತಂದೆಯೆಂದು ಭಾವಿಸಿ ಅವರೊಂದಿಗೆ ಮಾತನಾಡು. ಯೌವನಸ್ಥರನ್ನು ಸಹೋದರರಂತೆಯೂ
1 ತಿಮೊಥೆಯನಿಗೆ 5 : 2 (ERVKN)
ವೃದ್ಧ ಸ್ತ್ರೀಯರನ್ನು ತಾಯಿಗಳಂತೆಯೂ ಯೌವನಸ್ಥೆಯರನ್ನು ಸಹೋದರಿಯರಂತೆಯೂ ಪರಿಗಣಿಸು. ಯಾವಾಗಲೂ ಅವರೊಡನೆ ಒಳ್ಳೆಯ ರೀತಿಯಲ್ಲಿ ನಡೆದುಕೊ.
1 ತಿಮೊಥೆಯನಿಗೆ 5 : 3 (ERVKN)
ವಿಧವೆಯರನ್ನು ಹೇಗೆ ಪೋಷಿಸಬೇಕೆಂಬ ನಿಯಮಗಳು ದಿಕ್ಕಿಲ್ಲದ ವಿಧವೆಯರನ್ನು ಪರಿಪಾಲಿಸು.
1 ತಿಮೊಥೆಯನಿಗೆ 5 : 4 (ERVKN)
ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ, ಅವರು ತಂದೆತಾಯಿಗಳಿಗೆ ಸಹಾಯ ಮಾಡುವುದರ ಮೂಲಕ ಸ್ವಂತ ಕುಟುಂಬಕ್ಕೆ ಗೌರವವನ್ನು ತೋರಬೇಕು. ಅವರು ಹೀಗೆ ಮಾಡಿದರೆ, ತಂದೆತಾಯಿಗಳಿಗೆ ಮತ್ತು ಅಜ್ಜಅಜ್ಜಿಯರಿಗೆ ಪ್ರತ್ಯುಪಕಾರ ಮಾಡಿದಂತಾಗುವುದು. ಅದು ದೇವರಿಗೆ ಮೆಚ್ಚಿಕೆಯಾದದ್ದು.
1 ತಿಮೊಥೆಯನಿಗೆ 5 : 5 (ERVKN)
ಒಬ್ಬ ವಿಧವೆಯು ನಿಜವಾಗಿಯೂ ಸಹಾಯಕರಿಲ್ಲದೆ ಒಬ್ಬಂಟಿಗಳಾಗಿದ್ದರೆ, ಆಗ ಆಕೆಯು ತನ್ನ ರಕ್ಷಣೆಗಾಗಿ ದೇವರ ಮೇಲೆ ಭರವಸೆ ಇಡುವಳು. ಆ ಸ್ತ್ರೀಯು ಹಗಲು ರಾತ್ರಿಯೆಲ್ಲ ಪ್ರಾರ್ಥಿಸುವಳು. ಅವಳು ದೇವರ ಸಹಾಯವನ್ನು ಬೇಡುವಳು.
1 ತಿಮೊಥೆಯನಿಗೆ 5 : 6 (ERVKN)
ಆದರೆ ವಿಧವೆಯಾದವಳು ತನ್ನ ಇಚ್ಛೆಪೂರೈಕೆಗಾಗಿ ತನ್ನ ಜೀವಿತವನ್ನು ಬಳಸಿಕೊಳ್ಳುವುದಾದರೆ ಅವಳು ಬದುಕಿದ್ದರೂ ಸತ್ತಂತೆಯೇ.
1 ತಿಮೊಥೆಯನಿಗೆ 5 : 7 (ERVKN)
ಜನರು ನಿಂದೆನೆಗೆ ಗುರಿಯಾಗದಂತೆ ಅನುಸರಿಸಬೇಕಾದ ಕ್ರಮಗಳನ್ನು ತಿಳಿಸು. ಆಗ ಯಾರೂ ಅವರನ್ನು ನಿಂದಿಸಲು ಸಾಧ್ಯವಿಲ್ಲ.
1 ತಿಮೊಥೆಯನಿಗೆ 5 : 8 (ERVKN)
ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು.
1 ತಿಮೊಥೆಯನಿಗೆ 5 : 9 (ERVKN)
ವಿಧವೆಯರ ಪಟ್ಟಿಗೆ ಸೇರಿಸಲ್ಪಟ್ಟ ವಿಧವೆಯರು ವಯಸ್ಸಿನಲ್ಲಿ ಅರವತ್ತು ವರ್ಷಕ್ಕಿಂತ ಮೇಲ್ಪಟ್ಟಿರಬೇಕು. ಅವಳು ತನ್ನ ಗಂಡನಿಗೆ ನಂಬಿಗಸ್ತಳಾಗಿದ್ದವಳೆಂದೂ
1 ತಿಮೊಥೆಯನಿಗೆ 5 : 10 (ERVKN)
ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.
1 ತಿಮೊಥೆಯನಿಗೆ 5 : 11 (ERVKN)
ಆದರೆ ಪ್ರಾಯದ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬಾರದು. ಅವರು ಕ್ರಿಸ್ತನಿಗೆ ತಮ್ಮನ್ನು ಒಪ್ಪಿಸಿಕೊಂಡಿದ್ದರೂ ದೈಹಿಕ ಬಯಕೆಗಳ ಒತ್ತಡದಿಂದ ಪದೇಪದೇ ಆತನಿಗೆ ವಿಮುಖರಾಗುತ್ತಾರೆ. ನಂತರ ಅವರು ಮತ್ತೆ ಮದುವೆಯಾಗಲು ಆಸಕ್ತರಾಗುತ್ತಾರೆ.
1 ತಿಮೊಥೆಯನಿಗೆ 5 : 12 (ERVKN)
ತಾವು ಕೊಟ್ಟ ವಾಗ್ದಾನವನ್ನು ಮೀರಿದವರೆಂಬ ತೀರ್ಪು ಅವರಿಗಾಗುತ್ತದೆ.
1 ತಿಮೊಥೆಯನಿಗೆ 5 : 13 (ERVKN)
ಇದಲ್ಲದೆ, ಅವರು ಮನೆಮನೆಗೆ ಅಲೆಯುತ್ತಾ ತಮ್ಮ ಕಾಲವನ್ನು ಕಳೆಯಲಾರಂಭಿಸುತ್ತಾರೆ; ಹರಟೆ ಮಾತುಗಳನ್ನಾಡುತ್ತಾ ಇತರರ ಜೀವನದಲ್ಲಿ ತಲೆಹಾಕಿ ಕಾಲಹರಣ ಮಾಡುತ್ತಾರೆ; ಹೇಳಬಾರದ ಸಂಗತಿಗಳನ್ನೆಲ್ಲ ಹೇಳುತ್ತಾರೆ.
1 ತಿಮೊಥೆಯನಿಗೆ 5 : 14 (ERVKN)
ಆದ್ದರಿಂದ ಅವರು ಮದುವೆ ಮಾಡಿಕೊಂಡು ಮಕ್ಕಳನ್ನು ಪಡೆಯಲಿ ಮತ್ತು ತಮ್ಮ ಮನೆಗಳನ್ನು ನೋಡಿಕೊಳ್ಳಲಿ. ಆಗ ಅವರನ್ನು ಟೀಕಿಸಲು ನಮ್ಮ ಶತ್ರುವಿಗೆ ಯಾವ ಕಾರಣವೂ ಇರುವುದಿಲ್ಲ.
1 ತಿಮೊಥೆಯನಿಗೆ 5 : 15 (ERVKN)
ಆದರೆ ಈಗಾಗಲೇ ಕೆಲವರು ತಮ್ಮ ದಾರಿಯನ್ನು ಬದಲಾಯಿಸಿ ಸೈತಾನನನ್ನು ಹಿಂಬಾಲಿಸಿದ್ದಾರೆ.
1 ತಿಮೊಥೆಯನಿಗೆ 5 : 16 (ERVKN)
ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆಯೇ ಅವರನ್ನು ಪರಿಪಾಲಿಸಲಿ. ಅವರನ್ನು ನೋಡಿಕೊಳ್ಳುವಂಥ ಜವಾಬ್ದಾರಿಯನ್ನು ಸಭೆಗೆ ಕೊಡಕೂಡದು. ಆಗ ದಿಕ್ಕಿಲ್ಲದ ವಿಧವೆಯರನ್ನು ನೋಡಿಕೊಳ್ಳಲು ಸಭೆಗೆ ಸಾಧ್ಯವಾಗುವುದು.
1 ತಿಮೊಥೆಯನಿಗೆ 5 : 17 (ERVKN)
ಹಿರಿಯರ ಮತ್ತು ಇನ್ನಿತರ ವಿಷಯಗಳ ಕುರಿತು ಹೆಚ್ಚಿನ ಬೋಧನೆ ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.
1 ತಿಮೊಥೆಯನಿಗೆ 5 : 18 (ERVKN)
ಏಕೆಂದರೆ “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು” [✡ಉಲ್ಲೇಖನ: ಧರ್ಮೋಪದೇಶ. 25: 4 ಲೂಕ 10:7.] ಎಂಬುದಾಗಿಯೂ “ದುಡಿಯುವ ಆಳಿಗೆ ತಕ್ಕ ಕೂಲಿ ದೊರೆಯಬೇಕು” ಎಂಬುದಾಗಿಯೂ ಪವಿತ್ರ ಗ್ರಂಥವು ಹೇಳುತ್ತದೆ.
1 ತಿಮೊಥೆಯನಿಗೆ 5 : 19 (ERVKN)
ಸಭೆಯ ಹಿರಿಯರನ್ನು ಕುರಿತು ಯಾವನಾದರೂ ದೂರು ಹೇಳಿದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳಿಲ್ಲದ ಹೊರತು ಅವನ ಮಾತುಗಳಿಗೆ ಕಿವಿಗೊಡಬೇಡ.
1 ತಿಮೊಥೆಯನಿಗೆ 5 : 20 (ERVKN)
ಪಾಪ ಮಾಡುವ ಜನರನ್ನು ಸಭೆಯಲ್ಲಿ ಎಲ್ಲರ ಎದುರಿನಲ್ಲಿಯೇ ಗದರಿಸು. ಆಗ ಇತರರಿಗೂ ಎಚ್ಚರಿಕೆ ನೀಡಿದಂತಾಗುವುದು.
1 ತಿಮೊಥೆಯನಿಗೆ 5 : 21 (ERVKN)
ನೀನು ಈ ಕಾರ್ಯಗಳನ್ನು ಮಾಡಬೇಕೆಂದು ದೇವರ, ಯೇಸು ಕ್ರಿಸ್ತನ ಮತ್ತು ಆರಿಸಲ್ಪಟ್ಟ ದೇವದೂತರ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುತ್ತೇನೆ. ಆದರೆ ಸತ್ಯವನ್ನು ತಿಳಿಯುವುದಕ್ಕಿಂತ ಮೊದಲೇ ಜನರಿಗೆ ತೀರ್ಪು ನೀಡಬೇಡ. ಯಾರಿಗೂ ಪಕ್ಷಪಾತ ತೋರಬೇಡ.
1 ತಿಮೊಥೆಯನಿಗೆ 5 : 22 (ERVKN)
ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.
1 ತಿಮೊಥೆಯನಿಗೆ 5 : 23 (ERVKN)
ತಿಮೊಥೆಯನೇ, ನೀನು ನೀರನ್ನು ಮಾತ್ರ ಕುಡಿಯದೆ ಸ್ವಲ್ಪ ದ್ರಾಕ್ಷಾರಸವನ್ನು ಸಹ ಕುಡಿಯಬೇಕು. ಇದರಿಂದ ನಿನ್ನ ಜೀರ್ಣಶಕ್ತಿಯು ಹೆಚ್ಚುವುದರಿಂದ ಪದೇಪದೇ ಅಸ್ವಸ್ಥನಾಗುವುದಿಲ್ಲ.
1 ತಿಮೊಥೆಯನಿಗೆ 5 : 24 (ERVKN)
ಕೆಲವು ಜನರ ಪಾಪಗಳು ಎದ್ದುಕಾಣುತ್ತವೆ. ಅವರಿಗೆ ನ್ಯಾಯತೀರ್ಪಾಗುವುದೆಂಬುದನ್ನು ಅವರ ಪಾಪಗಳೇ ತೋರ್ಪಡಿಸುತ್ತವೆ. ಆದರೆ ಇತರ ಕೆಲವು ಜನರ ಪಾಪಗಳು ಸ್ವಲ್ಪಕಾಲದ ನಂತರ ತಿಳಿದುಬರುತ್ತವೆ.
1 ತಿಮೊಥೆಯನಿಗೆ 5 : 25 (ERVKN)
ಹಾಗೆಯೇ, ಕೆಲವರ ಒಳ್ಳೆಯ ಕಾರ್ಯಗಳು ಪ್ರಸಿದ್ಧವಾಗಿವೆ. ಇನ್ನು ಕೆಲವರ ಒಳ್ಳೆಯ ಕಾರ್ಯಗಳು ಪ್ರಸಿದ್ಧವಾಗಿಲ್ಲದಿದ್ದರೂ ಅವು ಮರೆಯಾಗಿರಲು ಸಾಧ್ಯವಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25