1 ತಿಮೊಥೆಯನಿಗೆ 6 : 1 (ERVKN)
ಗುಲಾಮರಿಗೆ ವಿಶೇಷವಾದ ಉಪದೇಶ ಗುಲಾಮರು ತಮ್ಮ ಯಜಮಾನರಿಗೆ ಸಂಪೂರ್ಣ ಗೌರವ ಕೊಡಬೇಕು. ಆಗ ದೇವರ ಹೆಸರಾಗಲಿ ನಮ್ಮ ಉಪದೇಶವಾಗಲಿ ಟೀಕೆಗೆ ಗುರಿಯಾಗುವುದಿಲ್ಲ.
1 ತಿಮೊಥೆಯನಿಗೆ 6 : 2 (ERVKN)
ಕೆಲವರಿಗೆ ವಿಶ್ವಾಸಿಗಳಾದ ಯಜಮಾನರಿದ್ದಾರೆ. ಆದ್ದರಿಂದ ಆ ಗುಲಾಮರು ಮತ್ತು ಯಜಮಾನರು ಸಹೋದರರಾಗಿದ್ದಾರೆ. ಆದರೆ ಅವರು ತಮ್ಮ ಯಜಮಾನರಿಗೆ ಕಡಿಮೆ ಗೌರವ ಕೊಡದೆ ತಮ್ಮ ಯಜಮಾನರ ಸೇವೆಯನ್ನು ಇನ್ನೂ ಉತ್ತಮವಾಗಿ ಮಾಡಬೇಕು. ಏಕೆಂದರೆ ಅವರು ಒಳ್ಳೆಯ ಕೆಲಸಗಳಿಗಾಗಿ ತಮ್ಮನ್ನು ಪ್ರತಿಷ್ಠಿಸಿಕೊಳ್ಳುವ ವಿಶ್ವಾಸಿಗಳಾಗಿದ್ದಾರೆ ಮತ್ತು ಸ್ನೇಹಿತರಾಗಿದ್ದಾರೆ. *ಅಥವಾ “ಏಕೆಂದರೆ ಅವರು ತಾವು ಪ್ರೀತಿಸುವ ವಿಶ್ವಾಸಿಗಳಿಗೇ ಸಹಾಯ ಮಾಡುವವರಾಗಿದ್ದಾರೆ.” ಈ ಕಾರ್ಯಗಳನ್ನು ಮಾಡುವಂತೆ ನೀನು ಜನರಿಗೆ ಉಪದೇಶಿಸಬೇಕು ಮತ್ತು ತಿಳಿಸಬೇಕು.
1 ತಿಮೊಥೆಯನಿಗೆ 6 : 3 (ERVKN)
ದುರ್ಬೋಧನೆ ಮತ್ತು ನಿಜವಾದ ಶ್ರೀಮಂತಿಕೆ ಕೆಲವು ಜನರು ಸುಳ್ಳುಸಂಗತಿಗಳನ್ನು ಬೋಧಿಸುತ್ತಾರೆ. ಆ ಜನರು ನಮ್ಮ ಪ್ರಭುವಾದ ಯೇಸುವಿನ ಸತ್ಯ ಬೋಧನೆಯನ್ನು ಒಪ್ಪುವುದಿಲ್ಲ. ದೇವರ ಸೇವೆಯನ್ನು ಸತ್ಯಕ್ಕನುಸಾರವಾಗಿ ಮಾಡಬೇಕೆಂಬ ಉಪದೇಶವನ್ನು ಅವರು ಸ್ವೀಕರಿಸಿಕೊಳ್ಳುವುದಿಲ್ಲ.
1 ತಿಮೊಥೆಯನಿಗೆ 6 : 4 (ERVKN)
ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.
1 ತಿಮೊಥೆಯನಿಗೆ 6 : 5 (ERVKN)
ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.
1 ತಿಮೊಥೆಯನಿಗೆ 6 : 6 (ERVKN)
ದೇವರ ಸೇವೆ ಮಾಡುವವನು ತನ್ನಲ್ಲಿರುವುದರಲ್ಲಿ ಸಂತುಷ್ಟನಾಗಿದ್ದರೆ, ಅವನು ದೊಡ್ಡ ಶ್ರೀಮಂತನೇ ಸರಿ.
1 ತಿಮೊಥೆಯನಿಗೆ 6 : 7 (ERVKN)
ನಾವು ಲೋಕಕ್ಕೆ ಬಂದಾಗ ಏನನ್ನೂ ತೆಗೆದುಕೊಂಡು ಬರಲಿಲ್ಲ. ನಾವು ಸಾಯುವಾಗ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.
1 ತಿಮೊಥೆಯನಿಗೆ 6 : 8 (ERVKN)
ಆದ್ದರಿಂದ ಊಟ ಬಟ್ಟೆಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತೇವೆ.
1 ತಿಮೊಥೆಯನಿಗೆ 6 : 9 (ERVKN)
ಶ್ರೀಮಂತರಾಗಬೇಕೆನ್ನುವವರು ತಮ್ಮನ್ನು ತಾವೇ ಶೋಧನೆಗೆ ಗುರಿಪಡಿಸಿಕೊಳ್ಳುವರು. ಅವರು ಉರ್ಲಿನಲ್ಲಿ ಸಿಕ್ಕಿಹಾಕಿಕೊಂಡವರಾಗಿದ್ದಾರೆ. ಅವರು ಹಾನಿಕರವಾದ ಅನೇಕ ಮೂರ್ಖ ಆಸೆಗಳಲ್ಲಿ ಸಿಕ್ಕಿಬೀಳುವರು. ಅವು ಜನರನ್ನು ಹಾಳುಮಾಡಿ, ನಾಶಗೊಳಿಸುತ್ತವೆ.
1 ತಿಮೊಥೆಯನಿಗೆ 6 : 10 (ERVKN)
ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.
1 ತಿಮೊಥೆಯನಿಗೆ 6 : 11 (ERVKN)
ನೀವು ನೆನಪಿನಲ್ಲಿಡಬೇಕಾದ ಕೆಲವು ಸಂಗತಿಗಳು ಆದರೆ ನೀನು ದೇವರ ಮನುಷ್ಯ. ಆದ್ದರಿಂದ ಈ ಎಲ್ಲಾ ಸಂಗತಿಗಳಿಂದ ದೂರವಾಗಿರು. ದೇವರ ಸೇವೆಯನ್ನು ಮಾಡುತ್ತಾ ಉತ್ತಮಮಾರ್ಗದಲ್ಲಿ ಜೀವಿಸಲು ಪ್ರಯತ್ನಿಸು; ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತೆಗಳನ್ನು ಹೊಂದಿದವನಾಗಿರು.
1 ತಿಮೊಥೆಯನಿಗೆ 6 : 12 (ERVKN)
ನಂಬಿಕೆಯಲ್ಲಿ ದೃಢವಾಗಿರುವುದು ಓಟದ ಸ್ಪರ್ಧೆಗೆ ಹೋಲಿಕೆಯಾಗಿದೆ. ಓಟದ ಸ್ಪರ್ಧೆಯಲ್ಲಿ ಗೆಲ್ಲಲು ನಿನ್ನಿಂದ ಸಾಧ್ಯವಾದಷ್ಟು ಪ್ರಯತ್ನಿಸು. ನಿತ್ಯಜೀವವನ್ನು ಪಡೆದುಕೊಳ್ಳಲು ಪ್ರಯಾಸಪಡು. ಅದನ್ನು ಹೊಂದಿಕೊಳ್ಳುವುದಕ್ಕಾಗಿ ನೀನು ಕರೆಯಲ್ಪಟ್ಟಿರುವೆ. ಕ್ರಿಸ್ತನಂಬಿಕೆಯ ಕುರಿತಾದ ಸತ್ಯವನ್ನು ನೀನು ಅನೇಕ ಜನರ ಎದುರಿನಲ್ಲಿ ಒಪ್ಪಿಕೊಂಡೆಯಲ್ಲಾ.
1 ತಿಮೊಥೆಯನಿಗೆ 6 : 13 (ERVKN)
ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,
1 ತಿಮೊಥೆಯನಿಗೆ 6 : 14 (ERVKN)
ನಮ್ಮ ಪ್ರಭುವಾದ ಯೇಸುಕ್ರಿಸ್ತನು ಮತ್ತೆ ಪ್ರತ್ಯಕ್ಷನಾಗುವ ಕಾಲದವರೆಗೆ ನೀನು ಆ ಕಾರ್ಯಗಳನ್ನು ತಪ್ಪಿಲ್ಲದೆ, ನಿಂದಾರಹಿತನಾಗಿ ಮಾಡುತ್ತಿರು.
1 ತಿಮೊಥೆಯನಿಗೆ 6 : 15 (ERVKN)
ದೇವರು ತಕ್ಕ ಸಮಯದಲ್ಲಿ ಅದನ್ನು ನೆರವೇರಿಸುವನು. ಆತನು ಭಾಗ್ಯವಂತನಾದ ಏಕಾಧಿಪತಿಯೂ ರಾಜಾಧಿರಾಜನೂ ಪ್ರಭುಗಳಿಗೆ ಪ್ರಭುವೂ ಆಗಿದ್ದಾನೆ.
1 ತಿಮೊಥೆಯನಿಗೆ 6 : 16 (ERVKN)
ಸಾವಿಲ್ಲದವನು ಆತನೊಬ್ಬನೇ. ಆತನು ಉಜ್ವಲ ಬೆಳಕಿನಲ್ಲಿ ವಾಸವಾಗಿರುವುದರಿಂದ ಆತನ ಹತ್ತಿರಕ್ಕೆ ಜನರು ಹೋಗಲು ಸಾಧ್ಯವಿಲ್ಲ. ಆತನನ್ನು ಇದುವರೆಗೆ ಯಾರು ನೋಡಿಲ್ಲ; ನೋಡಲು ಸಾಧ್ಯವೂ ಇಲ್ಲ. ಆತನಿಗೆ ಗೌರವವೂ ಅಧಿಪತ್ಯವೂ ಸದಾಕಾಲವಿರಲಿ. ಆಮೆನ್.
1 ತಿಮೊಥೆಯನಿಗೆ 6 : 17 (ERVKN)
ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.
1 ತಿಮೊಥೆಯನಿಗೆ 6 : 18 (ERVKN)
ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.
1 ತಿಮೊಥೆಯನಿಗೆ 6 : 19 (ERVKN)
ಆಗ ಪರಲೋಕದಲ್ಲಿ ಒಂದು ನಿಧಿಯನ್ನು ಅವರು ಕೂಡಿಟ್ಟು ಕೊಂಡಂತಾಗುತ್ತದೆ. ಆ ನಿಧಿಯೇ ಅವರ ಮುಂದಿನ ಜೀವಿತಕ್ಕೆ ಭದ್ರವಾದ ಅಸ್ತಿವಾರವಾಗಿದೆ. ಹೀಗೆ ಅವರು ನಿಜವಾದ ಜೀವಿತವನ್ನು ಹೊಂದಿಕೊಳ್ಳುವರು.
1 ತಿಮೊಥೆಯನಿಗೆ 6 : 20 (ERVKN)
ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.
1 ತಿಮೊಥೆಯನಿಗೆ 6 : 21 (ERVKN)
ಕೆಲವರು ತಮಗೆ ಜ್ಞಾನ ಇದೆಯೆಂದು ಹೇಳಿ ಕೊಂಡರೂ ಸತ್ಯೋಪದೇಶವನ್ನು ತೊರೆದುಬಿಟ್ಟವರಾಗಿದ್ದಾರೆ. ದೇವರ ಕೃಪೆಯು ನಿಮ್ಮೆಲ್ಲರೊಂದಿಗಿರಲಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21