2 ಪೂರ್ವಕಾಲವೃತ್ತಾ 13 : 1 (ERVKN)
ಯೆಹೂದ ರಾಜ್ಯದ ರಾಜನಾದ ಅಬೀಯನು ಇಸ್ರೇಲ್ ರಾಜ್ಯದ ರಾಜನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ರಾಜನಾಗಿ ಆಳತೊಡಗಿದನು.
2 ಪೂರ್ವಕಾಲವೃತ್ತಾ 13 : 2 (ERVKN)
ಅವನು ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಊರೀಯೇಲನ ಮಗಳಾದ ಮೀಕಾಯಳು ಅಬೀಯನ ತಾಯಿ. ಊರೀಯೇಲನು ಗಿಬೆಯ ಊರಿನವನು. ಅಬೀಯನಿಗೂ ಯಾರೊಬ್ಬಾಮನಿಗೂ ಯುದ್ಧವಾಗುತ್ತಿತ್ತು.
2 ಪೂರ್ವಕಾಲವೃತ್ತಾ 13 : 3 (ERVKN)
ಅಬೀಯನ ಬಳಿ ನಾಲ್ಕು ಲಕ್ಷ ಮಂದಿ ವೀರ ಸೈನಿಕರಿದ್ದರು. ಅವನು ಸೈನ್ಯವನ್ನು ಯುದ್ಧದಲ್ಲಿ ಮುನ್ನಡೆಸಿದನು. ಯಾರೊಬ್ಬಾಮನ ಬಳಿಯಲ್ಲಿ ಎಂಟು ಲಕ್ಷ ಮಂದಿ ಸೈನಿಕರು ಇದ್ದರು. ಯಾರೊಬ್ಬಾಮನು ಅಬೀಯನ ಮೇಲೆ ಯುದ್ಧಕ್ಕೆ ತಯಾರಾದನು.
2 ಪೂರ್ವಕಾಲವೃತ್ತಾ 13 : 4 (ERVKN)
ಆಗ ಅಬೀಯನು ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಚೆಮಾರೈ ಬೆಟ್ಟದ ಮೇಲೆ ನಿಂತು, “ಯಾರೊಬ್ಬಾಮನೇ, ಸಮಸ್ತ ಇಸ್ರೇಲರೇ, ನನ್ನ ಮಾತುಗಳಿಗೆ ಕಿವಿಗೊಡಿರಿ.
2 ಪೂರ್ವಕಾಲವೃತ್ತಾ 13 : 5 (ERVKN)
ಇಸ್ರೇಲರ ದೇವರಾದ ಯೆಹೋವನು ದಾವೀದನಿಗೂ ಅವನ ಗಂಡುಮಕ್ಕಳಿಗೂ ನಿರಂತರವಾಗಿ ಇಸ್ರೇಲನ್ನು ಆಳಲು ಉಪ್ಪಿನ ಒಡಂಬಡಿಕೆಯ ಮೂಲಕ ಅಧಿಕಾರ ಕೊಟ್ಟಿದ್ದಾನೆಂದು ನಿಮಗೆ ತಿಳಿದಿರಬೇಕು.
2 ಪೂರ್ವಕಾಲವೃತ್ತಾ 13 : 6 (ERVKN)
ಆದರೆ ಯಾರೊಬ್ಬಾಮನು ತನ್ನ ಒಡೆಯನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬಾಟನ ಮಗನಾದ ಯಾರೊಬ್ಬಾಮನು ಸೊಲೊಮೋನನ ಸೇವಕರಲ್ಲಿ ಒಬ್ಬನಾಗಿದ್ದನು.
2 ಪೂರ್ವಕಾಲವೃತ್ತಾ 13 : 7 (ERVKN)
ಆಗ ಕೆಲಸಕ್ಕೆ ಬಾರದ ದುಷ್ಟಜನರು ಯಾರೊಬ್ಬಾಮನ ಸ್ನೇಹಿತರಾಗಿ ಅವನನ್ನು ಹಿಂಬಾಲಿಸಿ ರೆಹಬ್ಬಾಮನಿಗೆ ವಿರುದ್ಧವಾಗಿ ದಂಗೆ ಎದ್ದರು. ಸೊಲೊಮೋನನ ಮಗನಾದ ರೆಹಬ್ಬಾಮನು ಆಗ ಸಣ್ಣ ಪ್ರಾಯದವನಾಗಿ ಅನುಭವವಿಲ್ಲದವನಾಗಿದ್ದನು. ಆದ್ದರಿಂದ ಯಾರೊಬ್ಬಾಮನನ್ನೂ ಅವನ ದುಷ್ಟ ಹಿಂಬಾಲಕರನ್ನೂ ತಡೆಯಲು ಅವನಿಗೆ ಆಗಲಿಲ್ಲ.
2 ಪೂರ್ವಕಾಲವೃತ್ತಾ 13 : 8 (ERVKN)
“ದಾವೀದನ ಮಕ್ಕಳು ಆಳುತ್ತಿರುವ ಯೆಹೋವನ ರಾಜ್ಯವನ್ನು ಸೋಲಿಸಲು ಈಗ ನೀವು ನಿರ್ಧರಿಸಿದ್ದೀರಿ. ನಿಮ್ಮಲ್ಲಿ ಅಧಿಕ ಸಂಖ್ಯೆಯ ಸೈನ್ಯವಿರಬಹುದು. ಯಾರೊಬ್ಬಾಮನು ನಿಮ್ಮ ದೇವರುಗಳಾಗಿ ಮಾಡಿಸಿದ ಬಂಗಾರದ ಬಸವ ನಿಮ್ಮಲ್ಲಿವೆ.
2 ಪೂರ್ವಕಾಲವೃತ್ತಾ 13 : 9 (ERVKN)
ನೀವು ಆರೋನನ ಸಂತತಿಯವರಾದ ಯೆಹೋವನ ಯಾಜಕರನ್ನು ಹೊರಡಿಸಿಬಿಟ್ಟರಿ. ನೀವು ಲೇವಿಯರನ್ನೂ ಹೊರಡಿಸಿಬಿಟ್ಟಿರಿ. ಅನ್ಯಜನಾಂಗದವರಂತೆ ನೀವು ನಿಮ್ಮಲ್ಲಿಂದಲೇ ಯಾಜಕರನ್ನು ಆರಿಸಿಕೊಂಡಿರಿ. ಯಾವನಾದರೂ ಏಳು ಟಗರುಗಳನ್ನೂ ಒಂದು ಎಳೇ ಹೋರಿಯನ್ನೂ ತಂದರೆ ನೀವು ಅವನನ್ನು ‘ದೇವರಲ್ಲದವುಗಳ’ ಸೇವೆಮಾಡಲು ಯಾಜಕನನ್ನಾಗಿ ಮಾಡುವಿರಿ.
2 ಪೂರ್ವಕಾಲವೃತ್ತಾ 13 : 10 (ERVKN)
“ನಮಗಾದರೋ ಯೆಹೋವನೇ ದೇವರು. ಯೆಹೂದ್ಯ ಪ್ರಾಂತ್ಯದವರಾದ ನಾವು ದೇವರ ಕಟ್ಟಳೆಗೆ ವಿಧೇಯರಾಗಲು ನಿರಾಕರಿಸಲಿಲ್ಲ. ನಾವು ಆತನನ್ನು ತೊರೆಯಲಿಲ್ಲ. ಆತನ ಸೇವೆಮಾಡಲು ಲೇವಿಯರು ಮತ್ತು ಆರೋನನ ಸಂತತಿಯವರಾದ ಯಾಜಕರು ಸಹಾಯ ಮಾಡುವರು.
2 ಪೂರ್ವಕಾಲವೃತ್ತಾ 13 : 11 (ERVKN)
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.
2 ಪೂರ್ವಕಾಲವೃತ್ತಾ 13 : 12 (ERVKN)
ದೇವರು ನಮ್ಮೊಂದಿಗಿದ್ದಾನೆ. ನಮ್ಮನ್ನು ಆಳುವವನು ಆತನೇ. ಅವನ ಯಾಜಕರು ನಮ್ಮೊಂದಿಗಿದ್ದಾರೆ. ದೇವರ ಯಾಜಕರು ತುತ್ತೂರಿಯನ್ನೂದಿ ನಿಮ್ಮನ್ನು ಆತನ ಬಳಿಗೆ ಬರಲು ಎಚ್ಚರಿಸುತ್ತಾರೆ. ಇಸ್ರೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಜನರೊಂದಿಗೆ ಕಾದಾಡಬೇಡಿರಿ. ನೀವು ಜಯಹೊಂದುವದಿಲ್ಲ” ಎಂದು ಹೇಳಿದನು.
2 ಪೂರ್ವಕಾಲವೃತ್ತಾ 13 : 13 (ERVKN)
ಆದರೆ ಯಾರೊಬ್ಬಾಮನು ತನ್ನ ಸೈನ್ಯದ ಒಂದು ಭಾಗವನ್ನು ಅಬೀಯನ ಸೈನ್ಯದ ಹಿಂಭಾಗಕ್ಕೆ ಅವನಿಗೆ ಗೊತ್ತಿಲ್ಲದಂತೆ ಕಳುಹಿಸಿದನು. ಯಾರೊಬ್ಬಾಮನ ಸೈನ್ಯವು ಅಬೀಯನ ಸೈನ್ಯಕ್ಕೆ ಎದುರಾಗಿತ್ತು. ಅಬೀಯನ ಹಿಂದೆ ಯಾರೊಬ್ಬಾಮನ ಸೈನ್ಯವು ಅಡಗಿಕೊಂಡಿತ್ತು.
2 ಪೂರ್ವಕಾಲವೃತ್ತಾ 13 : 14 (ERVKN)
ಅಬೀಯನ ಸೈನ್ಯವು ಸುತ್ತಲೂ ನೋಡಿದಾಗ ವೈರಿಗಳ ಸೈನ್ಯವು ಮುಂದೆಯೂ ಹಿಂದೆಯೂ ಯುದ್ಧಮಾಡುತ್ತಿರುವದನ್ನು ನೋಡಿ ಯೆಹೋವನನ್ನು ಕೂಗಿದರು. ಯಾಜಕರು ತುತ್ತೂರಿಯನ್ನೂದಿದರು.
2 ಪೂರ್ವಕಾಲವೃತ್ತಾ 13 : 15 (ERVKN)
ಆಗ ಅಬೀಯನ ಸೈನ್ಯದವರು ದೊಡ್ಡ ಆರ್ಭಟ ಮಾಡಿದರು. ಆರ್ಭಟಿಸುತ್ತಾ ಮುಂದೆ ಸಾಗಿದರು. ಯಾರೊಬ್ಬಾಮನ ಸೈನ್ಯವನ್ನು ಮತ್ತು ಎಲ್ಲಾ ಇಸ್ರೇಲರನ್ನು ಯೆಹೂದದ ಅಬೀಯನ ಸೈನ್ಯವು ಸೋಲಿಸುವಂತೆ ದೇವರು ಮಾಡಿದನು.
2 ಪೂರ್ವಕಾಲವೃತ್ತಾ 13 : 16 (ERVKN)
ಯೆಹೂದದ ಸೈನ್ಯದ ಮುಂದೆ ಇಸ್ರೇಲರ ಸೈನ್ಯವು ಬೆನ್ನುಕೊಟ್ಟು ಓಡಿಹೋಗುವಂತೆ ದೇವರು ಮಾಡಿದನು.
2 ಪೂರ್ವಕಾಲವೃತ್ತಾ 13 : 17 (ERVKN)
ಅಬೀಯನ ಸೈನ್ಯವು ಇಸ್ರೇಲಿನ ಸೈನ್ಯದ ಮೇಲೆ ಮಹಾಜಯವನ್ನು ಗಳಿಸಿತು. ಯಾರೊಬ್ಬಾಮನ ಐದು ಲಕ್ಷ ಪಳಗಿದ ಸೈನಿಕರು ಕೊಲ್ಲಲ್ಪಟ್ಟರು.
2 ಪೂರ್ವಕಾಲವೃತ್ತಾ 13 : 18 (ERVKN)
ಇಸ್ರೇಲಿನ ಜನರು ಸೋತುಹೋದರು. ಯೆಹೂದದ ಜನರಿಗೆ ಜಯ ದೊರಕಿತು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಭರವಸವನ್ನಿಟ್ಟಿದರು.
2 ಪೂರ್ವಕಾಲವೃತ್ತಾ 13 : 19 (ERVKN)
ಅಬೀಯನ ಸೈನಿಕರು ಯಾರೊಬ್ಬಾಮನ ಸೈನಿಕರನ್ನು ಓಡಿಸಿದರು. ಮತ್ತು ಅವರ ಪಟ್ಟಣಗಳಾದ ಬೇತೇಲ್, ಯೆಷಾನಾ ಮತ್ತು ಎಪ್ರೋನ್‌ಗಳನ್ನು ವಶಪಡಿಸಿಕೊಂಡರು. ಈ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿದ್ದ ಹಳ್ಳಿಗಳನ್ನೂ ವಶಪಡಿಸಿಕೊಂಡರು.
2 ಪೂರ್ವಕಾಲವೃತ್ತಾ 13 : 20 (ERVKN)
ಅಬೀಯನಿರುವಷ್ಟು ಕಾಲ ಯಾರೊಬ್ಬಾಮನು ಮತ್ತೆ ಬಲಗೊಳ್ಳಲೇ ಇಲ್ಲ. ಯೆಹೋವನು ಯಾರೊಬ್ಬಾಮನನ್ನು ಸಾಯಿಸಿದನು.
2 ಪೂರ್ವಕಾಲವೃತ್ತಾ 13 : 21 (ERVKN)
ಅಬೀಯನು ಬಲಗೊಂಡನು. ಅವನು ಹದಿನಾಲ್ಕು ಮಂದಿ ಸ್ತ್ರೀಯರನ್ನು ಮದುವೆ ಮಾಡಿಕೊಂಡು ಅವರಿಂದ ಇಪ್ಪತ್ತೆರಡು ಗಂಡುಮಕ್ಕಳನ್ನೂ ಹದಿನಾರು ಹೆಣ್ಣುಮಕ್ಕಳನ್ನೂ ಪಡೆದನು.
2 ಪೂರ್ವಕಾಲವೃತ್ತಾ 13 : 22 (ERVKN)
ಅಬೀಯನು ಮಾಡಿದ ಎಲ್ಲಾ ಕಾರ್ಯಗಳ ಕುರಿತು ಪ್ರವಾದಿ ಇದ್ದೋ ಬರೆದ ಪುಸ್ತಕದಲ್ಲಿ ದಾಖಲಾಗಿವೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22