2 ಪೂರ್ವಕಾಲವೃತ್ತಾ 16 : 1 (ERVKN)
ಆಸನ ಕೊನೆಯ ವರ್ಷಗಳು ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರೇಲಿನ ರಾಜನಾದ ಬಾಷನು ಆಸನ ಸಂಗಡ ಯುದ್ಧಕ್ಕೆ ಹೊರಟನು. ಅವನು ರಾಮ ಎಂಬ ಪಟ್ಟಣವನ್ನು ಕೋಟೆಯನ್ನಾಗಿ ಪರಿವರ್ತಿಸಿ, ಯೆಹೂದದ ರಾಜನಾದ ಆಸನ ಬಳಿಗೆ ಹೋಗುವುದಕ್ಕಾಗಲಿ ಬರುವುದಕ್ಕಾಗಲಿ ಯಾರಿಗೂ ಆಗದಂತೆ ಮಾಡಿದನು.
2 ಪೂರ್ವಕಾಲವೃತ್ತಾ 16 : 2 (ERVKN)
ಆಗ ಆಸನು ದೇವಾಲಯದಲ್ಲಿಯೂ ಅರಮನೆಯಲ್ಲಿಯೂ ಶೇಖರಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೆಲ್ಲಾ ಒಟ್ಟಾಗಿ ಸೇರಿಸಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಈ ಸಂದೇಶದೊಡನೆ ಕಳುಹಿಸಿದನು,
2 ಪೂರ್ವಕಾಲವೃತ್ತಾ 16 : 3 (ERVKN)
“ಬೆನ್ಹದದನೇ, ನಮ್ಮೊಂದಿಗೆ ಒಂದು ಒಪ್ಪಂದವಿರಲಿ. ನನ್ನ ತಂದೆಯೂ ನಿನ್ನ ತಂದೆಯೂ ಮಾಡಿದ್ದ ಒಪ್ಪಂದವನ್ನು ನಾವು ಮುಂದುವರಿಸೋಣ. ನೋಡು, ನಾನೀಗ ನಿನಗೆ ಬೆಳ್ಳಿಬಂಗಾರಗಳನ್ನು ಕಳುಹಿಸುತ್ತಿದ್ದೇನೆ. ನೀನೀಗ ಇಸ್ರೇಲಿನ ರಾಜನಾದ ಬಾಷನೊಡನೆ ಮಾಡಿದ್ದ ಒಪ್ಪಂದವನ್ನು ಮುರಿದುಹಾಕು. ಆಗ ಅವನು ನನಗೆ ತೊಂದರೆ ಕೊಡುವುದನ್ನು ನಿಲ್ಲಿಸುವನು.”
2 ಪೂರ್ವಕಾಲವೃತ್ತಾ 16 : 4 (ERVKN)
ಇದಕ್ಕೆ ಬೆನ್ಹದದನು ಒಪ್ಪಿ ತನ್ನ ಸೇನಾಪತಿಗಳನ್ನು ಇಸ್ರೇಲಿನ ಪಟ್ಟಣಗಳ ಮೇಲೆ ಆಕ್ರಮಣಮಾಡಲು ಕಳುಹಿಸಿದನು. ಅವರು ಹೋಗಿ ಇಯ್ಯೋನ್, ದಾನ್, ಅಬೇಲ್ಮಯಿಮ್ ಎಂಬ ಪಟ್ಟಣಗಳ ಮೇಲೆಯೂ ಭಂಡಾರಗಳನ್ನು ಇಟ್ಟಿದ ನಫ್ತಾಲಿ ಪ್ರಾಂತ್ಯದ ಎಲ್ಲಾ ಪಟ್ಟಣಗಳ ಮೇಲೆಯೂ ಆಕ್ರಮಣ ಮಾಡಿದರು.
2 ಪೂರ್ವಕಾಲವೃತ್ತಾ 16 : 5 (ERVKN)
ಇದನ್ನು ಕೇಳಿದ ಬಾಷನು ರಾಮ ಪಟ್ಟಣವನ್ನು ಕೋಟೆಯಾಗಿ ಕಟ್ಟುವ ಕೆಲಸವನ್ನು ಬಿಟ್ಟುಬಿಟ್ಟನು.
2 ಪೂರ್ವಕಾಲವೃತ್ತಾ 16 : 6 (ERVKN)
ಆಗ ಆಸನೂ ಇಸ್ರೇಲಿನ ಎಲ್ಲಾ ಜನರೂ ಒಟ್ಟಿಗೆ ರಾಮಕ್ಕೆ ಹೋಗಿ ಅಲ್ಲಿ ಬಾಷನು ಕೋಟೆಕಟ್ಟಲು ತಂದಿಟ್ಟಿದ್ದ ಕಲ್ಲುಮರಗಳನ್ನೆಲ್ಲಾ ತೆಗೆದು ಮಿಚ್ಪ ಮತ್ತು ಗೆಬ ಪಟ್ಟಣಗಳನ್ನು ಭದ್ರಪಡಿಸಿದರು.
2 ಪೂರ್ವಕಾಲವೃತ್ತಾ 16 : 7 (ERVKN)
ಆಗ ದೇವದರ್ಶಿಯಾದ ಹನಾನಿಯು ಯೆಹೂದದ ರಾಜನಾದ ಆಸನ ಬಳಿಗೆ ಬಂದು, “ಆಸನೇ, ನೀನು ದೇವರಾದ ಯೆಹೋವನ ಮೇಲೆ ಭರವಸವನ್ನಿಡುವ ಬದಲು ಅರಾಮ್ಯರ ಅರಸನ ಮೇಲೆ ಭರವಸವನ್ನಿಟ್ಟಿದ್ದರಿಂದ ಅರಾಮ್ಯರ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.
2 ಪೂರ್ವಕಾಲವೃತ್ತಾ 16 : 8 (ERVKN)
ಇಥಿಯೋಪಿಯಾದವರಿಗೆ ಮತ್ತು ಲಿಬ್ಯದವರಿಗೆ ಮಹಾದೊಡ್ಡ ಸೈನ್ಯವಿತ್ತು. ಅಪರಿಮಿತವಾದ ರಥಾಶ್ವಗಳಿದ್ದವು. ಆದರೆ ಅವರನ್ನು ಸೋಲಿಸುವಂತೆ ಯೆಹೋವನು ನಿನಗೆ ಸಹಾಯಿಸಿದನು.
2 ಪೂರ್ವಕಾಲವೃತ್ತಾ 16 : 9 (ERVKN)
ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧವಿರುವದು.”
2 ಪೂರ್ವಕಾಲವೃತ್ತಾ 16 : 10 (ERVKN)
ಇದನ್ನು ಕೇಳಿದ ಆಸನು ಹನಾನಿಯ ಮೇಲೆ ಬಹುಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಆಸನು ಅದೇ ಸಮಯದಲ್ಲಿ ದೇವಜನರಾದ ಕೆಲವರೊಂದಿಗೆ ಕ್ರೂರವಾಗಿ ವರ್ತಿಸಿದನು.
2 ಪೂರ್ವಕಾಲವೃತ್ತಾ 16 : 11 (ERVKN)
ಆಸನು ಪ್ರಾರಂಭದಿಂದ ಕೊನೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಯೆಹೂದ ಮತ್ತು ಇಸ್ರೇಲ್ ರಾಜರ ಗ್ರಂಥದಲ್ಲಿ ಬರೆಯಲ್ಪಟ್ಟಿವೆ.
2 ಪೂರ್ವಕಾಲವೃತ್ತಾ 16 : 12 (ERVKN)
ಆಸನ ಆಳ್ವಿಕೆಯ ಮೂವತ್ತೊಂಭತ್ತನೆಯ ವರ್ಷದಲ್ಲಿ ಅವನ ಕಾಲಿಗೆ ರೋಗ ಬಂದಿತು. ಅದು ಅಧಿಕವಾಗಿ ಹೆಚ್ಚಿದ್ದರಿಂದ ಅವನು ಯೆಹೋವನ ಸಹಾಯವನ್ನು ಕೇಳದೆ ವೈದ್ಯರ ನೆರವನ್ನೇ ಪಡೆದನು.
2 ಪೂರ್ವಕಾಲವೃತ್ತಾ 16 : 13 (ERVKN)
ಆಸನು ತನ್ನ ಆಳ್ವಿಕೆಯ ನಲವತ್ತೊಂದನೆಯ ವರ್ಷದಲ್ಲಿ ತನ್ನ ಪೂರ್ವಿಕರ ಬಳಿ ಸೇರಿದನು.
2 ಪೂರ್ವಕಾಲವೃತ್ತಾ 16 : 14 (ERVKN)
ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳಧೂಪವನ್ನು ಸುಟ್ಟರು.

1 2 3 4 5 6 7 8 9 10 11 12 13 14