2 ಪೂರ್ವಕಾಲವೃತ್ತಾ 17 : 1 (ERVKN)
ಯೆಹೂದದ ಅರಸನಾದ ಯೆಹೋಷಾಫಾಟನು ಆಸನ ಮಗನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದನು. ಅವನು ತನ್ನ ರಾಜ್ಯವನ್ನು ಬಲಪಡಿಸಿ ಇಸ್ರೇಲರಿಂದ ತನಗೆ ಅಪಾಯವಾಗದಂತೆ ಸುರಕ್ಷೆಯ ವ್ಯವಸ್ಥೆ ಮಾಡಿಕೊಂಡನು.
2 ಪೂರ್ವಕಾಲವೃತ್ತಾ 17 : 2 (ERVKN)
ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು.
2 ಪೂರ್ವಕಾಲವೃತ್ತಾ 17 : 3 (ERVKN)
ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕೆಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೆ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ.
2 ಪೂರ್ವಕಾಲವೃತ್ತಾ 17 : 4 (ERVKN)
ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ.
2 ಪೂರ್ವಕಾಲವೃತ್ತಾ 17 : 5 (ERVKN)
ಯೆಹೋವನು ಯೆಹೋಷಾಫಾಟನಿಗಾಗಿ ರಾಜ್ಯದ ಅಧಿಕಾರವನ್ನು ಸ್ಥಿರಪಡಿಸಿದನು. ಯೆಹೂದದ ಜನರೆಲ್ಲರು ಅವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಆದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ದೊರಕಿತು.
2 ಪೂರ್ವಕಾಲವೃತ್ತಾ 17 : 6 (ERVKN)
ಅವನ ಹೃದಯವು ಯೆಹೋವನ ಮಾರ್ಗಗಳಲ್ಲಿ ಆನಂದವನ್ನು ಕಂಡುಕೊಂಡಿತು. *ಯೆಹೋವ … ಕೊಂಡಿತು ಅಕ್ಷರಶಃ, “ದೇವರ ಮಾರ್ಗಗಳಲ್ಲಿ ನಡೆಯಲು ಅವನು ಬಹಳ ಹೆಮ್ಮೆಯುಳ್ಳವನಾಗಿದ್ದನು.” ಯೆಹೂದ ಪ್ರಾಂತ್ಯದಲ್ಲಿ ವಿಗ್ರಹಗಳ ಪೂಜಾಸ್ಥಳಗಳನ್ನೆಲ್ಲಾ ತೆಗೆದುಹಾಕಿಸಿ ಅಶೇರಸ್ತಂಭಗಳನ್ನು ಕಡಿದುಹಾಕಿಸಿ ಅವುಗಳನ್ನು ನಿರ್ಮೂಲ ಮಾಡಿದನು.
2 ಪೂರ್ವಕಾಲವೃತ್ತಾ 17 : 7 (ERVKN)
ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದದ ಎಲ್ಲಾ ಪಟ್ಟಣಗಳಿಗೆ ನಾಯಕರನ್ನು ಕಳುಹಿಸಿ ಜನರಿಗೆ ದೇವರ ವಿಧಿನಿಯಮಗಳು ಬೋಧಿಸಲ್ಪಡುವಂತೆ ಮಾಡಿದನು. ಆ ನಾಯಕರು ಯಾರೆಂದರೆ: ಬೆನ್ಹೈಲ್, ಓಬದ್ಯ, ಜೆಕರ್ಯನೆತನೇಲ್ ಮತ್ತು ಮೀಕಾಯ.
2 ಪೂರ್ವಕಾಲವೃತ್ತಾ 17 : 8 (ERVKN)
ಯೆಹೋಷಾಫಾಟನು ಅವರೊಂದಿಗೆ ಲೇವಿಯರನ್ನೂ ಕಳುಹಿಸಿದನು. ಅವರು ಯಾರೆಂದರೆ: ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ ಮತ್ತು ಟೋಬೀಯ. ಅವರೊಂದಿಗೆ ಕಳುಹಿಸಲ್ಪಟ್ಟ ಯಾಜಕರು ಯಾರೆಂದರೆ: ಎಲೀಷಾಮಾ ಮತ್ತು ಯೆಹೋರಾಮ.
2 ಪೂರ್ವಕಾಲವೃತ್ತಾ 17 : 9 (ERVKN)
ಇವರೆಲ್ಲಾ ಯೆಹೂದದ ಜನರಿಗೆ ಯೆಹೋವನ ಧರ್ಮೋಪದೇಶ ಪುಸ್ತಕದಿಂದ ಆತನ ಕಟ್ಟಳೆ ವಿಧಿನಿಯಮಗಳನ್ನು ಯೆಹೂದದ ಪಟ್ಟಣಗಳಲ್ಲೆಲ್ಲಾ ಸಂಚರಿಸಿ ಕಲಿಸಿದರು.
2 ಪೂರ್ವಕಾಲವೃತ್ತಾ 17 : 10 (ERVKN)
ಯೆಹೂದದ ಸುತ್ತಮುತ್ತಲಿನ ದೇಶಗಳ ಜನಾಂಗಗಳು ಯೆಹೋವನಿಗೆ ಭಯಪಟ್ಟರು. ಆದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಕ್ಕೆ ಹೋಗಲಿಲ್ಲ.
2 ಪೂರ್ವಕಾಲವೃತ್ತಾ 17 : 11 (ERVKN)
ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳು ಮತ್ತು ಏಳು ಸಾವಿರದ ಏಳುನೂರು ಹೋತಗಳು ಇದ್ದವು.
2 ಪೂರ್ವಕಾಲವೃತ್ತಾ 17 : 12 (ERVKN)
ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ದೊಡ್ಡ ಅರಸನಾದನು. ಅವನು ಯೆಹೂದ ದೇಶದಲ್ಲೆಲ್ಲಾ ಕೋಟೆಗಳನ್ನು ಕಟ್ಟಿಸಿದನು. ಉಗ್ರಾಣ ನಗರಗಳನ್ನು ಕಟ್ಟಿಸಿದನು.
2 ಪೂರ್ವಕಾಲವೃತ್ತಾ 17 : 13 (ERVKN)
ಅವುಗಳಲ್ಲಿ ಬೇಕಾದ ಸಾಮಾಗ್ರಿಗಳನ್ನು ಸಂಗ್ರಹಿಸಿಟ್ಟನು. ಜೆರುಸಲೇಮಿನಲ್ಲಿ ನುರಿತ ಸೈನ್ಯವನ್ನು ಇರಿಸಿದನು.
2 ಪೂರ್ವಕಾಲವೃತ್ತಾ 17 : 14 (ERVKN)
ಅವರು ಬೇರೆಬೇರೆ ಕುಲಗಳಿಂದ ಬಂದವರಾಗಿದ್ದರು. ಯೆಹೂದಕುಲದ ಅದ್ನನು ಮೂರುಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು.
2 ಪೂರ್ವಕಾಲವೃತ್ತಾ 17 : 15 (ERVKN)
ಯೆಹೋಹಾನಾನನು ಎರಡು ಲಕ್ಷ ಎಂಭತ್ತು ಸಾವಿರ ಸೈನಿಕರಿಗೆ ಸೇನಾಪತಿಯಾಗಿದ್ದನು.
2 ಪೂರ್ವಕಾಲವೃತ್ತಾ 17 : 16 (ERVKN)
ಅಮಸ್ಯನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಅಮಸ್ಯನು ಜಿಕ್ರಿಯ ಮಗ. ಯೆಹೋವನ ಸೇವೆಮಾಡುವದಕ್ಕೆ ಅವನು ತನ್ನನ್ನು ಒಪ್ಪಿಸಿಕೊಟ್ಟಿದ್ದನು.
2 ಪೂರ್ವಕಾಲವೃತ್ತಾ 17 : 17 (ERVKN)
ಬೆನ್ಯಾಮೀನನ ಕುಲದ ಎಲ್ಯಾದನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಇವರು ಬಿಲ್ಲು, ಬಾಣ, ಗುರಾಣಿಗಳನ್ನು ಬಳಸಬಲ್ಲವರಾಗಿದ್ದರು. ಎಲ್ಯಾದನು ಶೂರನಾದ ಸೇನಾಪತಿ.
2 ಪೂರ್ವಕಾಲವೃತ್ತಾ 17 : 18 (ERVKN)
ಯೆಹೋಜಾಬಾದನು ಒಂದುಲಕ್ಷ ಎಂಭತ್ತು ಸಾವಿರ ಸೈನಿಕರಿಗೆ ಸೇನಾಪತಿಯಾಗಿದ್ದನು.
2 ಪೂರ್ವಕಾಲವೃತ್ತಾ 17 : 19 (ERVKN)
ಈ ಸೈನಿಕರೆಲ್ಲಾ ಯೆಹೋಷಾಫಾಟನ ಸೇವೆಮಾಡಿದರು. ಇವರಲ್ಲದೆ ಯೆಹೂದ ದೇಶದಲ್ಲೆಲ್ಲಾ ಇದ್ದ ಕೋಟೆಗಳಲ್ಲಿಯೂ ಸೈನಿಕರಿದ್ದರು.
❮
❯
1
2
3
4
5
6
7
8
9
10
11
12
13
14
15
16
17
18
19