2 ಪೂರ್ವಕಾಲವೃತ್ತಾ 3 : 1 (ERVKN)
ಸೊಲೊಮೋನನು ದೇವಾಲಯವನ್ನು ಕಟ್ಟಿದನು ಜೆರುಸಲೇಮಿನಲ್ಲಿರುವ ಮೋರೀಯಾ ಬೆಟ್ಟದ ಮೇಲೆ ಸೊಲೊಮೋನನು ದೇವಾಲಯವನ್ನು ಕಟ್ಟಲು ಪ್ರಾರಂಭಿಸಿದನು. ಅದೇ ಸ್ಥಳದಲ್ಲಿ ಸೊಲೊಮೋನನ ತಂದೆಯಾದ ದಾವೀದನಿಗೆ ಯೆಹೋವನು ದರ್ಶನ ಕೊಟ್ಟಿದ್ದನು. ಅದು ಯೆಬೂಸಿಯನಾದ ಒರ್ನಾನನ ಕಣವಾಗಿತ್ತು. ಆಲಯವನ್ನು ಕಟ್ಟಲು ದಾವೀದನು ಆ ಸ್ಥಳವನ್ನು ತಯಾರು ಮಾಡಿದ್ದನು.
2 ಪೂರ್ವಕಾಲವೃತ್ತಾ 3 : 2 (ERVKN)
ಸೊಲೊಮೋನನು ತನ್ನ ರಾಜ್ಯಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ದೇವಾಲಯದ ಕೆಲಸವನ್ನು ಪ್ರಾರಂಭಿಸಿದನು.
2 ಪೂರ್ವಕಾಲವೃತ್ತಾ 3 : 3 (ERVKN)
ದೇವಾಲಯದ ಅಸ್ತಿವಾರದ ಉದ್ದಳತೆಯು ಹೀಗಿತ್ತು: ಉದ್ದ ಅರವತ್ತು ಮೊಳ, ಅಗಲ ಇಪ್ಪತ್ತು ಮೊಳ. ದೇವಾಲಯದ ಅಳತೆಗಾಗಿ ಸೊಲೊಮೋನನು ಹಳೆಯ ಮೊಳದ ಅಳತೆಯನ್ನು ಉಪಯೋಗಿಸಿದನು.
2 ಪೂರ್ವಕಾಲವೃತ್ತಾ 3 : 4 (ERVKN)
ದೇವಾಲಯದ ಮುಂದುಗಡೆಯಿದ್ದ ಮಂಟಪವು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಎತ್ತರವಿತ್ತು. ಮಂಟಪದ ಒಳಮೈಯನ್ನು ಸೊಲೊಮೋನನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು.
2 ಪೂರ್ವಕಾಲವೃತ್ತಾ 3 : 5 (ERVKN)
ದೊಡ್ಡ ಕೋಣೆಯ ಗೋಡೆಗೆ ಸೊಲೊಮೋನನು ತುರಾಯಿ ಮರದ ಹಲಗೆಗಳಿಂದ ಹೊದಿಸಿ ಅದರ ಮೇಲೆ ಬಂಗಾರದ ತಗಡನ್ನು ಹೊದಿಸಿದನು. ಅದರಲ್ಲಿ ಖರ್ಜೂರ ಮರಗಳೂ ಸರಪಣಿಗಳೂ ಬಂಗಾರದಿಂದ ಮಾಡಲ್ಪಟ್ಟು ಜೋಡಿಸಲ್ಪಟ್ಟಿದ್ದವು.
2 ಪೂರ್ವಕಾಲವೃತ್ತಾ 3 : 6 (ERVKN)
ದೇವಾಲಯವನ್ನು ಬೆಲೆಯುಳ್ಳ ರತ್ನಗಳಿಂದ ಅಲಂಕರಿಸಿದನು. ಸೊಲೊಮೋನನು ಪರ್ವಯಿಮ್ ದೇಶದ ಬಂಗಾರವನ್ನು ಉಪಯೋಗಿಸಿದನು.
2 ಪೂರ್ವಕಾಲವೃತ್ತಾ 3 : 7 (ERVKN)
ದೇವಾಲಯದ ಗೋಡೆಯ ಒಳಭಾಗವನ್ನು ಸೊಲೊಮೋನನು ಬಂಗಾರದಿಂದ ಹೊದಿಸಿದನು ಮತ್ತು ಆಲಯದ ತೊಲೆ, ಹೊಸ್ತಿಲು, ಗೋಡೆ, ಕದ ಇವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರವನ್ನು ಕೆತ್ತಿಸಿದನು.
2 ಪೂರ್ವಕಾಲವೃತ್ತಾ 3 : 8 (ERVKN)
ಸೊಲೊಮೋನನು ಮಹಾಪವಿತ್ರ ಸ್ಥಳವನ್ನು ತಯಾರಿಸಿದನು. ಅದು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಅಗಲವಿತ್ತು. ದೇವಾಲಯದ ಅಗಲದಷ್ಟೇ ಅದು ಅಗಲವಿತ್ತು. ಅದರ ಗೋಡೆಗಳನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು. ಆ ಬಂಗಾರವು ಇಪ್ಪತ್ತಮೂರು ಟನ್ ತೂಕವಿತ್ತು.
2 ಪೂರ್ವಕಾಲವೃತ್ತಾ 3 : 9 (ERVKN)
ಬಂಗಾರದ ಮೊಳೆಗಳ ತೂಕ ಅರ್ಧ ಕಿಲೋಗ್ರಾಂ. ಸೊಲೊಮೋನನು ಮೇಲುಪ್ಪರಿಗೆಯ ಕೋಣೆಗಳನ್ನೂ ಬಂಗಾರದಿಂದ ಹೊದಿಸಿದನು.
2 ಪೂರ್ವಕಾಲವೃತ್ತಾ 3 : 10 (ERVKN)
ಸೊಲೊಮೋನನು ಮಹಾಪವಿತ್ರ ಸ್ಥಾನದೊಳಗೆ ಇಡುವದಕ್ಕಾಗಿ ಎರಡು ಕೆರೂಬಿಗಳನ್ನು ಮಾಡಿಸಿ ಅವುಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.
2 ಪೂರ್ವಕಾಲವೃತ್ತಾ 3 : 11 (ERVKN)
ಕೆರೂಬಿಗಳ ಒಂದೊಂದು ರೆಕ್ಕೆಯು ಐದೈದು ಮೊಳ ಉದ್ದವಿದ್ದವು. ರೆಕ್ಕೆಗಳ ಒಟ್ಟು ಉದ್ದ ಇಪ್ಪತ್ತು ಮೊಳ. ಕೆರೂಬಿಯ ಒಂದು ರೆಕ್ಕೆಯು ಗೋಡೆಗೆ ತಾಗಿತ್ತು; ಅದರ ಇನ್ನೊಂದು ರೆಕ್ಕೆಯು ಮತ್ತೊಂದು ಕೆರೂಬಿಯ ರೆಕ್ಕೆಯನ್ನು ತಾಗಿತ್ತು.
2 ಪೂರ್ವಕಾಲವೃತ್ತಾ 3 : 12 (ERVKN)
ಅಂತೆಯೇ ಎರಡನೆಯ ಕೆರೂಬಿಯ ಇನ್ನೊಂದು ರೆಕ್ಕೆಯು ಮತ್ತೊಂದು ಗೋಡೆಗೆ ತಾಗಿತ್ತು.
2 ಪೂರ್ವಕಾಲವೃತ್ತಾ 3 : 13 (ERVKN)
ಹೀಗೆ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಸ್ಥಳವನ್ನು ಆವರಿಸಿಕೊಂಡಿದ್ದವು. ಅವು ಪವಿತ್ರಸ್ಥಳದ ಕಡೆಗೆ ಮುಖಮಾಡಿಕೊಂಡು ನಿಂತಿದ್ದವು.
2 ಪೂರ್ವಕಾಲವೃತ್ತಾ 3 : 14 (ERVKN)
ಸೊಲೊಮೋನನು ದೇವಾಲಯಕ್ಕೆ ನೀಲ, ಧೂಮ್ರ ಮತ್ತು ಕೆಂಪು ಬಟ್ಟೆ ಮತ್ತು ಬೆಲೆಬಾಳುವ ನಾರುಬಟ್ಟೆಗಳಿಂದ ಪರದೆಗಳನ್ನು ತಯಾರಿಸಿ ಅದರ ಮೇಲೆ ಕೆರೂಬಿಯರ ಚಿತ್ರವನ್ನು ಕಸೂತಿ ಮಾಡಿಸಿದನು.
2 ಪೂರ್ವಕಾಲವೃತ್ತಾ 3 : 15 (ERVKN)
ಸೊಲೊಮೋನನು ದೇವಾಲಯದ ಎದುರಿನಲ್ಲಿ ಮೂವತ್ತೈದು ಮೊಳ ಎತ್ತರದ ಎರಡು ಕಂಬಗಳನ್ನು ನಿಲ್ಲಿಸಿದನು. ಅದರ ಮೇಲಿನ ಭಾಗ ಐದು ಮೊಳ ಎತ್ತರವಿತ್ತು.
2 ಪೂರ್ವಕಾಲವೃತ್ತಾ 3 : 16 (ERVKN)
ಅವನು ಕೊರಳಿನ ಸರಗಳನ್ನು ಮಾಡಿಸಿ ಅವುಗಳನ್ನು ಕಂಬಗಳ ಮೇಲ್ಭಾಗದಲ್ಲಿ ಸಿಕ್ಕಿಸಿದನು. ಅವನು ನೂರು ದಾಳಿಂಬೆ ಹಣ್ಣುಗಳನ್ನು ಮಾಡಿಸಿ ತೂಗುಹಾಕಿದನು.
2 ಪೂರ್ವಕಾಲವೃತ್ತಾ 3 : 17 (ERVKN)
ಈ ಕಂಬಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ ಯಾಕೀನ್ ಎಂತಲೂ ಎಡಗಡೆಯ ಕಂಬಕ್ಕೆ ಬೋವಜ್ ಎಂತಲೂ ಹೆಸರಿಟ್ಟನು.

1 2 3 4 5 6 7 8 9 10 11 12 13 14 15 16 17