2 ಪೂರ್ವಕಾಲವೃತ್ತಾ 33 : 1 (ERVKN)
ಯೆಹೂದದ ಅರಸನಾದ ಮನಸ್ಸೆ ಮನಸ್ಸೆಯು ಪಟ್ಟಕ್ಕೆ ಬಂದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ರಾಜನಾಗಿ ಐವತ್ತೈದು ವರ್ಷ ರಾಜ್ಯಭಾರ ಮಾಡಿದನು.
2 ಪೂರ್ವಕಾಲವೃತ್ತಾ 33 : 2 (ERVKN)
ಯೆಹೋವನು ದುಷ್ಟತನವೆಂದು ಪರಿಗಣಿಸಿದ್ದನ್ನೇ ಮನಸ್ಸೆ ಮಾಡಿದನು. ಇಸ್ರೇಲರು ಆ ದೇಶವನ್ನು ವಶಪಡಿಸುವದಕ್ಕಿಂತ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನರ ಪಾಪಕೃತ್ಯಗಳನ್ನು ಅನುಸರಿಸಿದನು.
2 ಪೂರ್ವಕಾಲವೃತ್ತಾ 33 : 3 (ERVKN)
ಮನಸ್ಸೆಯ ತಂದೆಯಾದ ಹಿಜ್ಕೀಯನು ಕೆಡವಿದ ಉನ್ನತಸ್ಥಳಗಳನ್ನು ಅವನು ಮತ್ತೆ ಕಟ್ಟಿಸಿದನು. ಬಾಳ್ ದೇವರ ವೇದಿಕೆಯನ್ನು ಕಟ್ಟಿಸಿ ಅಶೇರಸ್ತಂಭಗಳನ್ನು ನಿಲ್ಲಿಸಿದನು. ಆಕಾಶದ ನಕ್ಷತ್ರಸಮೂಹಗಳನ್ನು ಪೂಜಿಸಿದನು.
2 ಪೂರ್ವಕಾಲವೃತ್ತಾ 33 : 4 (ERVKN)
ದೇವಾಲಯದೊಳಗೆ ಮನಸ್ಸೆಯು ವಿಗ್ರಹಗಳಿಗೆ ವೇದಿಕೆಯನ್ನು ಕಟ್ಟಿಸಿದನು. ಯೆಹೋವನು ದೇವಾಲಯದ ವಿಷಯವಾಗಿ, “ನನ್ನ ಹೆಸರು ಜೆರುಸಲೇಮಿನಲ್ಲಿ ನಿರಂತರಕ್ಕೂ ಸ್ಥಾಪಿತವಾಗುವದು” ಎಂದು ಹೇಳಿದ್ದನು.
2 ಪೂರ್ವಕಾಲವೃತ್ತಾ 33 : 5 (ERVKN)
ಮನಸ್ಸೆಯು ದೇವಾಲಯದ ಎರಡು ಅಂಗಳಗಳಲ್ಲಿ ಎಲ್ಲಾ ನಕ್ಷತ್ರಸಮೂಹಗಳಿಗೆ ವೇದಿಕೆಗಳನ್ನು ಕಟ್ಟಿಸಿದನು.
2 ಪೂರ್ವಕಾಲವೃತ್ತಾ 33 : 6 (ERVKN)
ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.
2 ಪೂರ್ವಕಾಲವೃತ್ತಾ 33 : 7 (ERVKN)
ಮನಸ್ಸೆಯು ಒಂದು ವಿಗ್ರಹವನ್ನು ಯೆಹೋವನ ಮಂದಿರದೊಳಗೆ ಪ್ರತಿಷ್ಠಾಪಿಸಿದನು. ಆ ಮಂದಿರದ ಬಗ್ಗೆ ಯೆಹೋವನು ದಾವೀದನೊಂದಿಗೂ ಸೊಲೊಮೋನನೊಂದಿಗೂ ಮಾತನಾಡಿ, “ನನ್ನ ಹೆಸರನ್ನು ಈ ಆಲಯದಲ್ಲಿಯೂ ಜೆರುಸಲೇಮಿನಲ್ಲಿಯೂ ಸ್ಥಾಪಿಸುವೆನು. ಈ ಪಟ್ಟಣವನ್ನು ಎಲ್ಲಾ ಕುಲಗಳ ಎಲ್ಲಾ ಪಟ್ಟಣಗಳಿಂದ ಆರಿಸಿಕೊಂಡಿರುತ್ತೇನೆ. ಇಲ್ಲಿ ನನ್ನ ನಾಮಸ್ಮರಣೆಯು ಸದಾಕಾಲ ನಡಿಯುವುದು.
2 ಪೂರ್ವಕಾಲವೃತ್ತಾ 33 : 8 (ERVKN)
ನಾನು ಮೋಶೆಯ ಮೂಲಕ ಕೊಟ್ಟಿರುವ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಇಸ್ರೇಲರು ವಿಧೇಯರಾಗಿರುವುದಾದರೆ, ಅವರ ಪೂರ್ವಿಕರಿಗೆ ಕೊಡಲು ನಾನು ಆರಿಸಿಕೊಂಡ ದೇಶದಿಂದ ಅವರನ್ನು ತೆಗೆದುಬಿಡುವುದೇ ಇಲ್ಲ” ಎಂದು ಹೇಳಿದನು.
2 ಪೂರ್ವಕಾಲವೃತ್ತಾ 33 : 9 (ERVKN)
ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು.
2 ಪೂರ್ವಕಾಲವೃತ್ತಾ 33 : 10 (ERVKN)
ಯೆಹೋವನು ಮನಸ್ಸೆಯ ಮತ್ತು ಅವನ ಜನರ ಸಂಗಡ ಮಾತಾಡಿದರೂ ಅವರು ಆತನ ಮಾತನ್ನು ಕೇಳಲಿಲ್ಲ.
2 ಪೂರ್ವಕಾಲವೃತ್ತಾ 33 : 11 (ERVKN)
ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
2 ಪೂರ್ವಕಾಲವೃತ್ತಾ 33 : 12 (ERVKN)
ಈ ಸಂಕಷ್ಟಗಳು ಅವನಿಗೆ ಒದಗಿದಾಗ ಅವನು ದೇವರಾದ ಯೆಹೋವನನ್ನು ತನಗೆ ಸಹಾಯ ಮಾಡಲು ಬೇಡಿದನು. ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡನು.
2 ಪೂರ್ವಕಾಲವೃತ್ತಾ 33 : 13 (ERVKN)
ಯೆಹೋವನು ಮನಸ್ಸೆಯ ಬೇಡಿಕೆಗಳನ್ನು ಕೇಳಿ ಅವನಿಗೆ ಕರುಣೆ ತೋರಿದನು. ಅವನು ಜೆರುಸಲೇಮಿಗೂ ತನ್ನ ಸಿಂಹಾಸನಕ್ಕೂ ಹಿಂತಿರುಗಿ ಬರುವಂತೆ ಮಾಡಿದನು. ಆಗ ಮನಸ್ಸೆಯು ಯೆಹೋವನೇ ನಿಜ ದೇವರೆಂದು ಅರಿತನು.
2 ಪೂರ್ವಕಾಲವೃತ್ತಾ 33 : 14 (ERVKN)
ಇದಾದ ನಂತರ ಮನಸ್ಸೆಯು ದಾವೀದನಗರಕ್ಕೆ ಹೊರಗಿನ ಗೋಡೆಯನ್ನು ಕಟ್ಟಿಸಿದನು. ಈ ಗೋಡೆಯು ಕಿದ್ರೋನಿನಲ್ಲಿದ್ದ ಗೀಹೋನ್ ಬುಗ್ಗೆಯ ಪಶ್ಚಿಮ ದಿಕ್ಕಿನಿಂದ ಮೀನು ಬಾಗಿಲಿನ ಮುಂದೆ ಹೋಗಿ, ಅಲ್ಲಿಂದ ಓಫೆಲ್ ಗುಡ್ಡಕ್ಕೆ ಸುತ್ತುಹಾಕಿತು. ಅವನು ಗೋಡೆಯನ್ನು ಬಹು ಎತ್ತರವಾಗಿ ಕಟ್ಟಿದನು. ಆಮೇಲೆ ಯೆಹೂದದಲ್ಲಿದ್ದ ಎಲ್ಲಾ ಕೋಟೆಗಳಲ್ಲಿ ಸೇನಾಪತಿಗಳನ್ನು ನೇಮಿಸಿದನು;
2 ಪೂರ್ವಕಾಲವೃತ್ತಾ 33 : 15 (ERVKN)
ಅನ್ಯದೇವತೆಗಳ ವಿಗ್ರಹವನ್ನು ತೆಗಿಸಿದನು; ದೇವಾಲಯದೊಳಗಿದ್ದ ವಿಗ್ರಹವನ್ನು ತೆಗೆದುಹಾಕಿಸಿದನು. ಜೆರುಸಲೇಮಿನಲ್ಲಿಯೂ ದೇವಾಲಯದ ಗುಡ್ಡದಲ್ಲಿಯೂ ಪ್ರತಿಷ್ಠಾಪಿಸಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಕಟ್ಟಿಸಿದ ಎಲ್ಲಾ ವೇದಿಕೆಗಳನ್ನು ಜೆರುಸಲೇಮಿನಿಂದ ಹೊರಗೆ ಬಿಸಾಡಿಸಿದನು.
2 ಪೂರ್ವಕಾಲವೃತ್ತಾ 33 : 16 (ERVKN)
ಯೆಹೋವನ ಯಜ್ಞವೇದಿಕೆಯನ್ನು ಕಟ್ಟಿಸಿ ಅದರಲ್ಲಿ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದನು. ಯೆಹೂದದಲ್ಲಿದ್ದ ಎಲ್ಲಾ ಜನರೂ ದೇವರಾದ ಯೆಹೋವನ ಸೇವೆಮಾಡುವಂತೆ ಆಜ್ಞೆ ವಿಧಿಸಿದನು.
2 ಪೂರ್ವಕಾಲವೃತ್ತಾ 33 : 17 (ERVKN)
ಜನರು ಉನ್ನತಸ್ಥಳಗಳಲ್ಲಿ ಯಜ್ಞವನ್ನು ಮಾಡುತ್ತಿದ್ದರೂ ಅದನ್ನು ಯೆಹೋವನಿಗೋಸ್ಕರವೇ ಮಾಡುತ್ತಿದ್ದರು.
2 ಪೂರ್ವಕಾಲವೃತ್ತಾ 33 : 18 (ERVKN)
ಮನಸ್ಸೆ ಮಾಡಿದ ಇತರ ಕಾರ್ಯಗಳು ಮತ್ತು ಅವನು ಯೆಹೋವನಿಗೆ ಮಾಡಿದ ಪ್ರಾರ್ಥನೆ, ದೇವದರ್ಶಿಗಳು ಅವನಿಗೆ ಇಸ್ರೇಲರ ದೇವರಾದ ಯೆಹೋವನ ಸಂದೇಶವನ್ನು ಕೊಟ್ಟ ವಿಷಯವೆಲ್ಲಾ ಇಸ್ರೇಲ್ ರಾಜರ ಚರಿತ್ರೆ ಎಂಬ ಗ್ರಂಥದಲ್ಲಿ ಬರೆಯಲ್ಪಟ್ಟಿದೆ.
2 ಪೂರ್ವಕಾಲವೃತ್ತಾ 33 : 19 (ERVKN)
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.
2 ಪೂರ್ವಕಾಲವೃತ್ತಾ 33 : 20 (ERVKN)
ಮನಸ್ಸೆಯು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ಅವನ ಸ್ವಂತ ಅರಮನೆಯಲ್ಲಿ ಸಮಾಧಿಮಾಡಿದರು. ಮನಸ್ಸೆಯ ಮಗನಾದ ಅಮೋನನು ಅವನ ಬದಲಿಗೆ ಅರಸನಾದನು.
2 ಪೂರ್ವಕಾಲವೃತ್ತಾ 33 : 21 (ERVKN)
ಯೆಹೂದದ ಅರಸನಾದ ಅಮೋನ ಅಮೋನನು ಪಟ್ಟಕ್ಕೆ ಬರುವಾಗ ಇಪ್ಪತ್ತೆರಡು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಎರಡು ವರ್ಷ ರಾಜ್ಯವನ್ನಾಳಿದನು.
2 ಪೂರ್ವಕಾಲವೃತ್ತಾ 33 : 22 (ERVKN)
ಅವನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಮನಸ್ಸೆಯು ಯೆಹೋವನಿಗೆ ಇಷ್ಟವಾದುದ್ದನ್ನು ಮಾಡಿದಂತೆ ಅವನು ಮಾಡಲಿಲ್ಲ. ಅವನ ತಂದೆಯಾದ ಮನಸ್ಸೆಯು ಮಾಡಿದ ಎರಕದ ಬೊಂಬೆಗಳಿಗೂ ಕೆತ್ತನೆ ಕೆಲಸದ ವಿಗ್ರಹಗಳಿಗೂ ಅಡ್ಡಬಿದ್ದನು.
2 ಪೂರ್ವಕಾಲವೃತ್ತಾ 33 : 23 (ERVKN)
ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಂತೆ ಅಮೋನನು ತಗ್ಗಿಸಿಕೊಳ್ಳಲಿಲ್ಲ. ಅಮೋನನು ಹೆಚ್ಚೆಚ್ಚಾಗಿ ಪಾಪಗಳನ್ನು ಮಾಡಿದನು.
2 ಪೂರ್ವಕಾಲವೃತ್ತಾ 33 : 24 (ERVKN)
ಅಮೋನನ ಸೇವಕರು ಸಂಚುಮಾಡಿ ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.
2 ಪೂರ್ವಕಾಲವೃತ್ತಾ 33 : 25 (ERVKN)
ಆದರೆ ಅರಸನಾದ ಅಮೋನನಿಗೆ ವಿರೋಧವಾಗಿ ಎದ್ದ ಸೇವಕರನ್ನೆಲ್ಲಾ ಯೆಹೂದದ ಜನರು ಸಂಹರಿಸಿದರು. ಅನಂತರ ಅಮೋನನ ಮಗನಾದ ಯೋಷೀಯನನ್ನು ತಮ್ಮ ಅರಸನನ್ನಾಗಿ ಆರಿಸಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25