2 ಪೂರ್ವಕಾಲವೃತ್ತಾ 7 : 1 (ERVKN)
ಸೊಲೊಮೋನನು ಪ್ರಾರ್ಥಿಸುವದನ್ನು ನಿಲ್ಲಿಸಿದ ಕೂಡಲೇ ಆಕಾಶದಿಂದ ಬೆಂಕಿಯು ಬಂದು ಯಜ್ಞವೇದಿಕೆಯ ಮೇಲಿದ್ದ ಸರ್ವಾಂಗಹೋಮಗಳನ್ನೂ ಯಜ್ಞಮಾಂಸವನ್ನೂ ದಹಿಸಿಬಿಟ್ಟಿತು. ಯೆಹೋವನ ಮಹಿಮೆಯು ದೇವಾಲಯದಲ್ಲಿ ತುಂಬಿತು.
2 ಪೂರ್ವಕಾಲವೃತ್ತಾ 7 : 2 (ERVKN)
ದೇವಾಲಯದಲ್ಲಿ ತುಂಬಲ್ಪಟ್ಟ ಮಹಿಮೆಯಿಂದಾಗಿ ಯಾಜಕರಿಗೆ ದೇವಾಲಯದೊಳಗೆ ಪ್ರವೇಶಿಸಲು ಆಗದೆ ಹೋಯಿತು.
2 ಪೂರ್ವಕಾಲವೃತ್ತಾ 7 : 3 (ERVKN)
ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು ‘ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು’ ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.
2 ಪೂರ್ವಕಾಲವೃತ್ತಾ 7 : 4 (ERVKN)
ಅನಂತರ ಅರಸನಾದ ಸೊಲೊಮೋನನೂ ಇಸ್ರೇಲಿನ ಎಲ್ಲಾ ಜನರೂ ಯೆಹೋವನ ಮುಂದೆ ಯಜ್ಞವನ್ನು ಸಮರ್ಪಿಸಿದರು.
2 ಪೂರ್ವಕಾಲವೃತ್ತಾ 7 : 5 (ERVKN)
ಸೊಲೊಮೋನ ಅರಸನು ಇಪ್ಪತ್ತೆರಡು ಸಾವಿರ ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು.
2 ಪೂರ್ವಕಾಲವೃತ್ತಾ 7 : 6 (ERVKN)
ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, ‘ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು’ ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.
2 ಪೂರ್ವಕಾಲವೃತ್ತಾ 7 : 7 (ERVKN)
ಆಲಯದ ಮುಂದೆ ಇದ್ದ ಅಂಗಳವನ್ನು ಸೊಲೊಮೋನನು ಶುದ್ಧೀಕರಿಸಿದನು. ಆ ಸ್ಥಳದಲ್ಲಿ ಸೊಲೊಮೋನನು ಸರ್ವಾಂಗಹೋಮವನ್ನೂ ಧಾನ್ಯನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಸಮರ್ಪಿಸಿದ್ದನು. ಯಾಕಂದರೆ ಸೊಲೊಮೋನನು ಮಾಡಿಸಿದ ತಾಮ್ರದ ಯಜ್ಞವೇದಿಕೆಯ ಮೇಲೆ ಇಷ್ಟೆಲ್ಲಾ ಸರ್ವಾಂಗಹೋಮಗಳನ್ನೂ ಧಾನ್ಯನೈವೇದ್ಯಗಳನ್ನೂ ಸಮರ್ಪಿಸಲು ಆಗದೆ ಹೋಯಿತು.
2 ಪೂರ್ವಕಾಲವೃತ್ತಾ 7 : 8 (ERVKN)
ಸೊಲೊಮೋನನೂ ಎಲ್ಲಾ ಇಸ್ರೇಲರೂ ಏಳು ದಿನಗಳ ತನಕ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಸೊಲೊಮೋನನೊಂದಿಗೆ ಬಹುದೊಡ್ಡ ಇಸ್ರೇಲರ ಸಮೂಹವು ನೆರೆದು ಬಂದಿತ್ತು. ಹಮಾತಿನಿಂದ ಹಿಡಿದು ಈಜಿಪ್ಟಿನ ನದಿಯ ತನಕ ವಾಸಿಸುವವರೆಲ್ಲರೂ ಜೆರುಸಲೇಮಿಗೆ ಬಂದಿದ್ದರು.
2 ಪೂರ್ವಕಾಲವೃತ್ತಾ 7 : 9 (ERVKN)
ಏಳು ದಿನ ಹಬ್ಬದ ಆಚರಣೆಯ ಬಳಿಕ ಎಂಟನೆಯ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿದರು. ಅವರು ಯಜ್ಞವೇದಿಕೆಯನ್ನು ಯೆಹೋವನ ಆರಾಧನೆಗೋಸ್ಕರ ಪ್ರತಿಷ್ಠಿಸಿದರು. ಹಬ್ಬವನ್ನು ಏಳು ದಿನಗಳ ತನಕ ಆಚರಿಸಿದರು.
2 ಪೂರ್ವಕಾಲವೃತ್ತಾ 7 : 10 (ERVKN)
ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದು ಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು.
2 ಪೂರ್ವಕಾಲವೃತ್ತಾ 7 : 11 (ERVKN)
ಸೊಲೊಮೋನನು ತಾನು ಯೋಜಿಸಿದ ರೀತಿಯಲ್ಲಿ ದೇವಾಲಯವನ್ನೂ ಅರಮನೆಯನ್ನೂ ಕಟ್ಟಿ ಮುಗಿಸಿದನು.
2 ಪೂರ್ವಕಾಲವೃತ್ತಾ 7 : 12 (ERVKN)
ಆ ಬಳಿಕ ಯೆಹೋವನು ರಾತ್ರಿಯಲ್ಲಿ ಸೊಲೊಮೋನನಿಗೆ ಕಾಣಿಸಿಕೊಂಡು, “ಸೊಲೊಮೋನನೇ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ. ನಾನು ಈ ಆಲಯವನ್ನು ಯಜ್ಞಾಲಯಕ್ಕಾಗಿ ಆರಿಸಿಕೊಂಡಿರುತ್ತೇನೆ.
2 ಪೂರ್ವಕಾಲವೃತ್ತಾ 7 : 13 (ERVKN)
ನಾನು ಮಳೆ ಬಾರದಂತೆ ಆಕಾಶವನ್ನು ಮುಚ್ಚಿದರೆ, ಅಥವಾ ಮಿಡತೆಗಳಿಗೆ ದೇಶವನ್ನು ಹಾಳುಮಾಡಲು ಅಪ್ಪಣೆಕೊಟ್ಟರೆ ಅಥವಾ ಜನರಿಗೆ ರೋಗವನ್ನು ಬರಮಾಡಿದರೆ
2 ಪೂರ್ವಕಾಲವೃತ್ತಾ 7 : 14 (ERVKN)
ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.
2 ಪೂರ್ವಕಾಲವೃತ್ತಾ 7 : 15 (ERVKN)
ನಿಮ್ಮನ್ನು ದೃಷ್ಟಿಸಿ ನಿಮ್ಮ ಪ್ರಾರ್ಥನೆಗಳಿಗೆ ಕಿವಿಗೊಡುವೆನು.
2 ಪೂರ್ವಕಾಲವೃತ್ತಾ 7 : 16 (ERVKN)
ನನ್ನ ನಾಮದ ಮಹತ್ವ ಶಾಶ್ವತವಾಗಿರಬೇಕೆಂದು ನಾನು ಈ ಆಲಯವನ್ನು ಆರಿಸಿಕೊಂಡು ಶುದ್ಧೀಕರಿಸಿದ್ದೇನೆ. ಹೌದು, ನನ್ನ ದೃಷ್ಟಿಯೂ ನನ್ನ ಹೃದಯವೂ ಸದಾಕಾಲ ಈ ಆಲಯದ ಮೇಲೆ ನೆಲೆಸಿರುತ್ತದೆ.
2 ಪೂರ್ವಕಾಲವೃತ್ತಾ 7 : 17 (ERVKN)
ಸೊಲೊಮೋನನೇ, ನಿನ್ನ ತಂದೆಯಾದ ದಾವೀದನು ಹೇಗೆ ಜೀವಿಸಿದನೋ ಅದೇ ಪ್ರಕಾರ ನೀನು ನನ್ನೆದುರಿನಲ್ಲಿ ಜೀವಿಸಿ, ನನ್ನ ಅಪ್ಪಣೆಗಳನ್ನು ಕೈಕೊಂಡು, ನನ್ನ ವಿಧಿನಿಯಮಗಳಿಗೆ ವಿಧೇಯನಾಗುವದಾದರೆ,
2 ಪೂರ್ವಕಾಲವೃತ್ತಾ 7 : 18 (ERVKN)
ನಾನು ನಿನ್ನನ್ನು ಬಲಿಷ್ಠನಾದ ಅರಸನನ್ನಾಗಿ ಮಾಡುವೆನು. ನಿನ್ನ ರಾಜ್ಯವು ಮಹಾರಾಜ್ಯವಾಗುವದು. ನಿನ್ನ ತಂದೆಯಾದ ದಾವೀದನಿಗೆ, ‘ದಾವೀದನೇ, ನಿನ್ನ ಕುಟುಂಬದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ರಾಜನಾಗಿರುವನು’ ಎಂದು ನಾನು ವಾಗ್ದಾನ ಮಾಡಿದ್ದೇನೆ.
2 ಪೂರ್ವಕಾಲವೃತ್ತಾ 7 : 19 (ERVKN)
“ಆದರೆ ನಾನು ಕೊಟ್ಟ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ನೀನು ಮೀರಿ ಇತರ ದೇವರುಗಳನ್ನು ಪೂಜಿಸಿದರೆ,
2 ಪೂರ್ವಕಾಲವೃತ್ತಾ 7 : 20 (ERVKN)
ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದುಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿ ಮಾಡುವಂತೆ ಮಾಡುವೆನು.
2 ಪೂರ್ವಕಾಲವೃತ್ತಾ 7 : 21 (ERVKN)
ಅತ್ಯಂತ ಪ್ರಸಿದ್ಧಿ ಹೊಂದಿದ ಈ ದೇವಾಲಯವನ್ನು ನೋಡುವ ಪ್ರತಿಯೊಬ್ಬನು, ‘ದೇವರು ಈ ದೇಶಕ್ಕೆ ಮತ್ತು ಈ ಆಲಯಕ್ಕೆ ಹೀಗೇಕೆ ಮಾಡಿದನು?’ ಎಂದು ಅಚ್ಚರಿಪಡುವಂತೆ ಮಾಡುವೆನು.
2 ಪೂರ್ವಕಾಲವೃತ್ತಾ 7 : 22 (ERVKN)
ಆಗ ಜನರು, ‘ಯಾಕಂದರೆ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ಆತನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಹೊರತಂದನು. ಆದರೆ ಅವರು ಬೇರೆ ದೇವರುಗಳನ್ನು ಪೂಜಿಸಿ ಅವುಗಳ ಸೇವೆಮಾಡಿದರು. ಆದುದರಿಂದಲೇ ಭಯಂಕರವಾದ ಈ ಸಂಕಟಗಳನ್ನೆಲ್ಲ ದೇವರು ಇಸ್ರೇಲರಿಗೆ ಬರಮಾಡಿದನು’ ಎಂದು ಹೇಳುವರು” ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: