2 ಕೊರಿಂಥದವರಿಗೆ 12 : 1 (ERVKN)
ಪೌಲನ ಜೀವಿತದಲ್ಲಾದ ವಿಶೇಷ ಆಶೀರ್ವಾದ ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ನನಗೆ ಅವಶ್ಯವಾಗಿದೆ. ಆದ್ದರಿಂದ ನನಗೆ ಪ್ರಭುವಿನಿಂದಾದ ದರ್ಶನಗಳ ಮತ್ತು ಪ್ರಕಟಣೆಗಳ ಬಗ್ಗೆ ಹೇಳುತ್ತೇನೆ.
2 ಕೊರಿಂಥದವರಿಗೆ 12 : 2 (ERVKN)
ಮೂರನೆಯ ಆಕಾಶಕ್ಕೆ ಒಯ್ಯಲ್ಪಟ್ಟಿದ್ದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆನು. ಇದು ಸಂಭವಿಸಿ ಹದಿನಾಲ್ಕು ವರ್ಷಗಳಾದವು. ಆ ವ್ಯಕ್ತಿಯು ದೇಹಸಹಿತವಾಗಿ ಹೋಗಿದ್ದನೊ ಅಥವಾ ದೇಹರಹಿತನಾಗಿ ಹೋಗಿದ್ದನೊ ನನಗೆ ಗೊತ್ತಿಲ್ಲ. ದೇವರಿಗೆ ಗೊತ್ತು.
2 ಕೊರಿಂಥದವರಿಗೆ 12 : 3 (ERVKN)
(3-4) ಈ ವ್ಯಕ್ತಿಯು ಪರದೈಸಿಗೆ ಒಯ್ಯಲ್ಪಟ್ಟದ್ದು ನನಗೆ ಗೊತ್ತಿದೆ. ಅವನು ನುಡಿಯಲಶಕ್ಯವಾದ ಮತ್ತು ಹೇಳಕೂಡದಂಥ ಮಾತುಗಳನ್ನು ಕೇಳಿದನು.
2 ಕೊರಿಂಥದವರಿಗೆ 12 : 4 (ERVKN)
2 ಕೊರಿಂಥದವರಿಗೆ 12 : 5 (ERVKN)
ಅಂಥವನ ಬಗ್ಗೆ ನಾನು ಹೊಗಳಿಕೊಳ್ಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳದೆ, ನನ್ನ ಬಲಹೀನತೆಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ.
2 ಕೊರಿಂಥದವರಿಗೆ 12 : 6 (ERVKN)
ನನ್ನ ಬಗ್ಗೆ ಹೊಗಳಿಕೊಳ್ಳಬೇಕೆಂದಿದ್ದರೂ ಬುದ್ಧಿಹೀನನಾಗುವುದಿಲ್ಲ, ಏಕೆಂದರೆ ಸತ್ಯವನ್ನೇ ಹೇಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳುವುದಿಲ್ಲ, ಏಕೆಂದರೆ ಜನರು ನನ್ನಲ್ಲಿ ನೋಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಯೋಚಿಸುವುದು ನನಗೆ ಇಷ್ಟವಿಲ್ಲ.
2 ಕೊರಿಂಥದವರಿಗೆ 12 : 7 (ERVKN)
ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.
2 ಕೊರಿಂಥದವರಿಗೆ 12 : 8 (ERVKN)
ನನ್ನಿಂದ ಅದನ್ನು ತೆಗೆದುಹಾಕಬೇಕೆಂದು ನಾನು ಮೂರು ಸಲ ಪ್ರಭುವನ್ನು ಬೇಡಿಕೊಂಡೆನು.
2 ಕೊರಿಂಥದವರಿಗೆ 12 : 9 (ERVKN)
ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು.
2 ಕೊರಿಂಥದವರಿಗೆ 12 : 10 (ERVKN)
ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ.
2 ಕೊರಿಂಥದವರಿಗೆ 12 : 11 (ERVKN)
ಕೊರಿಂಥದ ಕ್ರೈಸ್ತರ ಮೇಲೆ ಪೌಲನಿಗಿರುವ ಪ್ರೀತಿ ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ.
2 ಕೊರಿಂಥದವರಿಗೆ 12 : 12 (ERVKN)
ನಾನು ನಿಮ್ಮೊಂದಿಗಿದ್ದಾಗ ನಾನೂ ಅಪೊಸ್ತಲನೆಂಬುದನ್ನು ನಿರೂಪಿಸುವಂಥ ಸೂಚಕಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡಿದೆನು.
2 ಕೊರಿಂಥದವರಿಗೆ 12 : 13 (ERVKN)
ನಾನು ಈ ಕಾರ್ಯಗಳನ್ನು ಬಹು ತಾಳ್ಮೆಯಿಂದ ಮಾಡಿದೆನು. ಆದ್ದರಿಂದ ಇತರ ಸಭೆಗಳಿಗೆ ದೊರೆತವುಗಳೆಲ್ಲ ನಿಮಗೂ ದೊರೆತವು. ಒಂದೇ ಒಂದು ವ್ಯತ್ಯಾಸವೇನೆಂದರೆ, ನಾನು ನಿಮಗೆ ಭಾರವಾಗಿರಲಿಲ್ಲ. ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿರಿ.
2 ಕೊರಿಂಥದವರಿಗೆ 12 : 14 (ERVKN)
ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು.
2 ಕೊರಿಂಥದವರಿಗೆ 12 : 15 (ERVKN)
ಆದ್ದರಿಂದ ನನ್ನಲ್ಲಿರುವುದನ್ನೆಲ್ಲಾ ನಿಮಗೆ ಕೊಡಲು ಸಂತೋಷಿಸುತ್ತೇನೆ. ನನ್ನನ್ನೇ ನಿಮಗೆ ಕೊಟ್ಟುಬಿಡುತ್ತೇನೆ. ನಾನು ನಿಮ್ಮನ್ನು ಬಹಳವಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?
2 ಕೊರಿಂಥದವರಿಗೆ 12 : 16 (ERVKN)
ನಾನು ನಿಮಗೆ ಭಾರವಾಗಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಸುಳ್ಳು ಹೇಳಿ ಕುತಂತ್ರದಿಂದ ನಿಮ್ಮನ್ನು ಬಲೆಗೆ ಬೀಳಿಸುವವನಾಗಿದ್ದೇನೆಂದು ನೀವು ಯೋಚಿಸಿಕೊಂಡಿದ್ದೀರಿ.
2 ಕೊರಿಂಥದವರಿಗೆ 12 : 17 (ERVKN)
ನಾನು ನಿಮ್ಮ ಬಳಿಗೆ ಕಳುಹಿಸಿದ ಜನರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಮೋಸಗೊಳಿಸಿದೆನೇ? ಇಲ್ಲ! ನಾನು ಮೋಸಗೊಳಿಸಲಿಲ್ಲ ಎಂಬುದು ನಿಮಗೆ ಗೊತ್ತಿದೆ.
2 ಕೊರಿಂಥದವರಿಗೆ 12 : 18 (ERVKN)
ನಿಮ್ಮ ಬಳಿಗೆ ಹೋಗಬೇಕೆಂದು ತೀತನನ್ನು ಕೇಳಿಕೊಂಡೆನು. ಅಲ್ಲದೆ ನಮ್ಮ ಸಹೋದರನನ್ನು ಅವನೊಂದಿಗೆ ಕಳುಹಿಸಿದೆನು. ಅವನು ನಿಮ್ಮನ್ನು ಮೋಸಗೊಳಿಸಲಿಲ್ಲ. ಅವನು ಮೋಸ ಮಾಡಿದನೇ? ಇಲ್ಲ! ಅವನು ಮತ್ತು ನಾನು ಒಂದೇ ಆತ್ಮನಿಂದ ಪ್ರೇರಿತರಾಗಿ ಒಂದೇ ರೀತಿಯಲ್ಲಿ ನಡೆದುಕೊಂಡೆವು.
2 ಕೊರಿಂಥದವರಿಗೆ 12 : 19 (ERVKN)
ಈವರೆಗೂ ನಾವು ನಿಮ್ಮೊಂದಿಗೆ ನಮ್ಮ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದೇವೆಂದು ಭಾವಿಸುತ್ತೀರೋ? ಇಲ್ಲ! ನಾವು ಕ್ರಿಸ್ತನಲ್ಲಿ ಈ ಸಂಗತಿಗಳನ್ನು ದೇವರ ಮುಂದೆ ಹೇಳುತ್ತಿದ್ದೇವೆ. ನೀವು ನಮ್ಮ ಪ್ರಿಯ ಸ್ನೇಹಿತರು. ನಾವು ಮಾಡುವ ಪ್ರತಿಯೊಂದೂ ನಿಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡುವುದಕ್ಕಾಗಿಯೇ.
2 ಕೊರಿಂಥದವರಿಗೆ 12 : 20 (ERVKN)
ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ.
2 ಕೊರಿಂಥದವರಿಗೆ 12 : 21 (ERVKN)
ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.
❮
❯
1
2
3
4
5
6
7
8
9
10
11
12
13
14
15
16
17
18
19
20
21