2 ಕೊರಿಂಥದವರಿಗೆ 13 : 1 (ERVKN)
ಕಡೆಯ ಎಚ್ಚರಿಕೆಗಳು ಮತ್ತು ವಂದನೆಗಳು ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಉಲ್ಲೇಖನ: ಧರ್ಮೋಪದೇಶ. 19:15. ಹೇಳಬೇಕು.
2 ಕೊರಿಂಥದವರಿಗೆ 13 : 2 (ERVKN)
ನಾನು ನಿಮ್ಮ ಬಳಿಗೆ ಎರಡನೆ ಸಲ ಬಂದಿದ್ದಾಗ ಪಾಪಕ್ಕೆ ಒಳಗಾಗಿದ್ದವರನ್ನು ಮತ್ತು ಉಳಿದವರೆಲ್ಲರನ್ನು ಎಚ್ಚರಿಸಿದೆನು. ಈಗ ನಾನು ದೂರದಲ್ಲಿದ್ದೇನೆ. ಈ ಪಾಪಕ್ಕೆ ಒಳಗಾಗಿರುವ ಎಲ್ಲರಿಗೂ ನಾನು ಕೊಡುವ ಎಚ್ಚರಿಕೆ ಏನೆಂದರೆ, ನಾನು ನಿಮ್ಮ ಬಳಿಗೆ ಬಂದಾಗ, ನಿಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು.
2 ಕೊರಿಂಥದವರಿಗೆ 13 : 3 (ERVKN)
ಕ್ರಿಸ್ತನು ನನ್ನ ಮೂಲಕ ಮಾತಾಡುತ್ತಿದ್ದಾನೆ ಎಂಬುದಕ್ಕೆ ನಿಮಗೆ ಸಾಕ್ಷಿಬೇಕು. ನನಗಿರುವ ಸಾಕ್ಷಿ ಏನೆಂದರೆ, ಕ್ರಿಸ್ತನು ನಿಮ್ಮನ್ನು ದಂಡಿಸುವುದರಲ್ಲಿ ಬಲಹೀನನಲ್ಲ. ಕ್ರಿಸ್ತನು ನಿಮ್ಮ ಮಧ್ಯದಲ್ಲಿ ಬಲಿಷ್ಠನಾಗಿದ್ದಾನೆ.
2 ಕೊರಿಂಥದವರಿಗೆ 13 : 4 (ERVKN)
ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.
2 ಕೊರಿಂಥದವರಿಗೆ 13 : 5 (ERVKN)
ನೀವು ನಂಬಿಕೆಯಲ್ಲಿ ಜೀವಿಸುತ್ತಿದ್ದೀರೋ ಎಂಬುದನ್ನು ತಿಳಿದುಕೊಳ್ಳಲು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ಕ್ರಿಸ್ತಯೇಸುವು ನಿಮ್ಮೊಳಗೆ ಇದ್ದಾನೆಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಅಯೋಗ್ಯರಾಗಿದ್ದೀರಿ.
2 ಕೊರಿಂಥದವರಿಗೆ 13 : 6 (ERVKN)
ಆದರೆ ನಾವು ಅಯೋಗ್ಯರಲ್ಲವೆಂದು ನಿಮಗೆ ಖಚಿತವಾಗುವುದರಲ್ಲಿ ನಮಗೆ ಸಂದೇಹವಿಲ್ಲ.
2 ಕೊರಿಂಥದವರಿಗೆ 13 : 7 (ERVKN)
ನೀವು ಯಾವ ತಪ್ಪನ್ನೂ ಮಾಡದಿರಲಿ ಎಂಬುದಾಗಿ ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ. ನಮ್ಮನ್ನು ಅಯೋಗ್ಯರೆಂದು ಜನರು ಭಾವಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವುದೇ ಮುಖ್ಯ.
2 ಕೊರಿಂಥದವರಿಗೆ 13 : 8 (ERVKN)
ಸತ್ಯಕ್ಕೆ ವಿರೋಧವಾದ ಸಂಗತಿಗಳನ್ನು ಮಾಡಲು ನಮಗೆ ಸಾಧ್ಯವಿಲ್ಲ. ಸತ್ಯದ ಪರವಾದ ಕಾರ್ಯಗಳನ್ನು ಮಾತ್ರ ಮಾಡಲು ನಮಗೆ ಸಾಧ್ಯ.
2 ಕೊರಿಂಥದವರಿಗೆ 13 : 9 (ERVKN)
ನೀವು ಶಕ್ತರಾಗಿರುವುದಾದರೆ, ನಾವು ಬಲಹೀನರಾಗಿರಲು ಸಂತೋಷಿಸುತ್ತೇವೆ. ನೀವು ನಂಬಿಕೆಯಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಉದ್ದೇಶ.
2 ಕೊರಿಂಥದವರಿಗೆ 13 : 10 (ERVKN)
ನಾನು ನಿಮ್ಮೊಂದಿಗೆ ಇಲ್ಲದಿರುವಾಗ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ. ಏಕೆಂದರೆ ನಾನು ಬಂದಾಗ ನಿಮ್ಮನ್ನು ದಂಡಿಸುವುದಕ್ಕಾಗಿ ನನ್ನ ಅಧಿಕಾರವನ್ನು ಉಪಯೋಗಿಸುವ ಅಗತ್ಯವಿರುವುದಿಲ್ಲ. ಪ್ರಭುವು ನನಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಗೊಳಿಸುವುದಕ್ಕಾಗಿಯೇ ಹೊರತು ನಾಶಮಾಡುವುದಕ್ಕಾಗಿಯಲ್ಲ.
2 ಕೊರಿಂಥದವರಿಗೆ 13 : 11 (ERVKN)
ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.
2 ಕೊರಿಂಥದವರಿಗೆ 13 : 12 (ERVKN)
ನೀವು ಒಬ್ಬರನ್ನೊಬ್ಬರು ವಂದಿಸುವಾಗ ಪವಿತ್ರವಾದ ಮುದ್ದಿಟ್ಟು ವಂದಿಸಿರಿ.
2 ಕೊರಿಂಥದವರಿಗೆ 13 : 13 (ERVKN)
ದೇವರ ಪವಿತ್ರ ಜನರೆಲ್ಲರೂ ನಿಮಗೆ ವಂದನೆ ತಿಳಿಸಿದ್ದಾರೆ.
2 ಕೊರಿಂಥದವರಿಗೆ 13 : 14 (ERVKN)
ನಮ್ಮ ಪ್ರಭುವಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರೊಂದಿಗಿರಲಿ.

1 2 3 4 5 6 7 8 9 10 11 12 13 14