2 ಕೊರಿಂಥದವರಿಗೆ 6 : 1 (ERVKN)
ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.
2 ಕೊರಿಂಥದವರಿಗೆ 6 : 2 (ERVKN)
ದೇವರು ಹೀಗೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಯೆಶಾಯ 49:8 ಇದೇ ಆ “ಸುಪ್ರಸನ್ನತೆಯ ಕಾಲ.” ಇದೇ ಆ “ರಕ್ಷಣೆಯ ದಿನ.”
2 ಕೊರಿಂಥದವರಿಗೆ 6 : 3 (ERVKN)
ನಮ್ಮ ಸೇವೆಯು ನಿಂದೆಗೆ ಒಳಗಾಗಬಾರದೆಂದು ನಾವು ಯಾರಿಗೂ ತೊಂದರೆ ಮಾಡುವುದಿಲ್ಲ.
2 ಕೊರಿಂಥದವರಿಗೆ 6 : 4 (ERVKN)
ಆದರೆ ಪ್ರತಿಯೊಂದು ವಿಷಯದಲ್ಲಿಯೂ ನಾವು ದೇವರ ಸೇವಕರೆಂಬುದನ್ನು ತೋರ್ಪಡಿಸುತ್ತೇವೆ. ನಾವು ಸಂಕಟಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
2 ಕೊರಿಂಥದವರಿಗೆ 6 : 5 (ERVKN)
ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ.
2 ಕೊರಿಂಥದವರಿಗೆ 6 : 6 (ERVKN)
ನಾವು ದೇವರ ಸೇವಕರೆಂಬುದನ್ನು ನಮ್ಮ ತಿಳುವಳಿಕೆಯಿಂದಲೂ ತಾಳ್ಮೆಯಿಂದಲೂ ಕನಿಕರದಿಂದಲೂ ಮತ್ತು ಪರಿಶುದ್ಧ ಜೀವಿತದಿಂದಲೂ ತೋರ್ಪಡಿಸಿದ್ದೇವೆ. ನಾವು ಇದನ್ನು ಪವಿತ್ರಾತ್ಮನಿಂದಲೂ ನಿಜವಾದ ಪ್ರೀತಿಯಿಂದಲೂ
2 ಕೊರಿಂಥದವರಿಗೆ 6 : 7 (ERVKN)
ಸತ್ಯವನ್ನು ಹೇಳುವುದರಿಂದಲೂ ದೇವರ ಶಕ್ತಿಯಿಂದಲೂ ತೋರ್ಪಡಿಸುತ್ತೇವೆ. ಪ್ರತಿಯೊಂದರ ವಿರೋಧವಾಗಿ ನಮ್ಮನ್ನು ಸಂರಕ್ಷಿಸಿಕೊಳ್ಳಲು ನಮ್ಮ ಒಳ್ಳೆಯ ಜೀವಿತವನ್ನೇ ಉಪಯೋಗಿಸುತ್ತೇವೆ.
2 ಕೊರಿಂಥದವರಿಗೆ 6 : 8 (ERVKN)
ಕೆಲವರು ನಮ್ಮನ್ನು ಸನ್ಮಾನಿಸುತ್ತಾರೆ; ಇನ್ನು ಕೆಲವರು ನಮಗೆ ಅವಮಾನ ಮಾಡುತ್ತಾರೆ. ಕೆಲವರು ನಮ್ಮ ಬಗ್ಗೆ ಒಳ್ಳೆಯ ವಿಷಯಗಳನ್ನು ಹೇಳುತ್ತಾರೆ; ಇನ್ನು ಕೆಲವರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಹೇಳುತ್ತಾರೆ. ಕೆಲವರು ನಮ್ಮನ್ನು ಸುಳ್ಳುಗಾರರೆನ್ನುತ್ತಾರೆ, ಆದರೆ ನಾವು ಸತ್ಯವನ್ನೇ ಹೇಳುತ್ತೇವೆ.
2 ಕೊರಿಂಥದವರಿಗೆ 6 : 9 (ERVKN)
ನಾವು ಪ್ರಸಿದ್ಧರಾಗಿದ್ದರೂ ಕೆಲವರು ನಮ್ಮನ್ನು ಅಪ್ರಸಿದ್ಧರಂತೆ ಕಾಣುತ್ತಾರೆ. ನಾವು ಸಾಯುವಂತಿದ್ದರೂ ಬದುಕಿದ್ದೇವೆ; ಶಿಕ್ಷಿಸಲ್ಪಟ್ಟರೂ ಕೊಲ್ಲಲ್ಪಡಲಿಲ್ಲ;
2 ಕೊರಿಂಥದವರಿಗೆ 6 : 10 (ERVKN)
ದುಃಖಿತರಂತೆ ಕಂಡರೂ ಯಾವಾಗಲೂ ಉಲ್ಲಾಸಿಸುವವರಾಗಿದ್ದೇವೆ; ಬಡವರಂತೆ ಕಂಡರೂ ಅನೇಕರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿ ಮಾಡುತ್ತಿದ್ದೇವೆ; ಏನೂ ಇಲ್ಲದವರಂತೆ ಕಂಡರೂ ವಾಸ್ತವವಾಗಿ ಎಲ್ಲವನ್ನೂ ಹೊಂದಿದವರಾಗಿದ್ದೇವೆ.
2 ಕೊರಿಂಥದವರಿಗೆ 6 : 11 (ERVKN)
ಕೊರಿಂಥದಲ್ಲಿರುವ ನಿಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತಾಡಿದ್ದೇವೆ. ನಮ್ಮ ಹೃದಯಗಳನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇವೆ.
2 ಕೊರಿಂಥದವರಿಗೆ 6 : 12 (ERVKN)
ನಿಮ್ಮ ಮೇಲೆ ನಮಗಿರುವ ಪ್ರೀತಿಯು ನಿಂತು ಹೋಗಿಲ್ಲ. ಆದರೆ ನಮ್ಮ ಮೇಲೆ ನಿಮಗಿದ್ದ ಪ್ರೀತಿಯೇ ನಿಂತು ಹೋಗಿದೆ.
2 ಕೊರಿಂಥದವರಿಗೆ 6 : 13 (ERVKN)
ನೀವು ನನ್ನ ಮಕ್ಕಳೆಂಬಂತೆ ನಾನು ನಿಮ್ಮೊಂದಿಗೆ ಮಾತಾಡುತ್ತಿದ್ದೇನೆ. ನಾವು ತೆರೆದಂತೆ ನೀವು ಸಹ ನಿಮ್ಮ ಹೃದಯಗಳನ್ನು ತೆರೆಯಿರಿ.
2 ಕೊರಿಂಥದವರಿಗೆ 6 : 14 (ERVKN)
ಅವಿಶ್ವಾಸಿಗಳ ಮಧ್ಯದಲ್ಲಿ ಜೀವಿಸುವುದರ ಬಗ್ಗೆ ಎಚ್ಚರಿಕೆ ಕ್ರಿಸ್ತನಂಬಿಕೆಯಿಲ್ಲದ ಜನರಿಗೂ ನಿಮಗೂ ವ್ಯತ್ಯಾಸವಿದೆ. ಆದ್ದರಿಂದ ನೀವು ಅವರೊಂದಿಗೆ ಸೇರಬೇಡಿ. ಒಳ್ಳೆಯದು ಮತ್ತು ಕೆಟ್ಟದು ಒಟ್ಟಾಗಿ ಸೇರಲು ಸಾಧ್ಯವಿಲ್ಲ. ಬೆಳಕು ಕತ್ತಲೆಯೊಡನೆ ಅನ್ಯೋನ್ಯವಾಗಿರಲು ಸಾಧ್ಯವೇ?
2 ಕೊರಿಂಥದವರಿಗೆ 6 : 15 (ERVKN)
ಕ್ರಿಸ್ತನೂ ಸೈತಾನನೂ ಅನ್ಯೋನ್ಯವಾಗಿರಲು ಸಾಧ್ಯವೇ? ವಿಶ್ವಾಸಿಗಳಿಗೂ ಅವಿಶ್ವಾಸಿಗಳಿಗೂ ಪಾಲುಗಾರಿಕೆಯೇನು?
2 ಕೊರಿಂಥದವರಿಗೆ 6 : 16 (ERVKN)
ದೇವರ ಆಲಯವು ವಿಗ್ರಹಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲು ಸಾಧ್ಯವೇ? ನಾವು ಜೀವಸ್ವರೂಪನಾದ ದೇವರ ಆಲಯವಾಗಿದ್ದೇವೆ. ದೇವರು ಹೇಳಿದಂತೆ: “ನಾನು ಅವರೊಂದಿಗೆ ವಾಸಿಸುವೆನು; ಅವರೊಂದಿಗೆ ನಡೆಯುವೆನು;
ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.” ಯಾಜಕಕಾಂಡ 26:11-12
2 ಕೊರಿಂಥದವರಿಗೆ 6 : 17 (ERVKN)
“ಆದ್ದರಿಂದ ಆ ಜನರನ್ನು ಬಿಟ್ಟು ಹೊರಬನ್ನಿರಿ; ಅವರಿಂದ ಬೇರ್ಪಡಿರಿ ಎನ್ನುತ್ತಾನೆ ಪ್ರಭುವು.
ಅಶುದ್ಧವಾದ ಯಾವುದನ್ನೂ ಮುಟ್ಟಬೇಡಿ, ಆಗ ನಾನು ನಿಮ್ಮನ್ನು ಸ್ವೀಕರಿಸಿಕೊಳ್ಳುವೆನು.” ಯೆಶಾಯ 52:11
2 ಕೊರಿಂಥದವರಿಗೆ 6 : 18 (ERVKN)
“ನಾನು ನಿಮ್ಮ ತಂದೆಯಾಗಿರುವೆನು ಮತ್ತು ನೀವು ನನ್ನ ಪುತ್ರಪುತ್ರಿಯರಾಗುವಿರಿ ಎನ್ನುತ್ತಾನೆ ಸರ್ವಶಕ್ತನಾದ ಪ್ರಭುವು.” 2 ಸಮುವೇಲ 7:8, 14
❮
❯
1
2
3
4
5
6
7
8
9
10
11
12
13
14
15
16
17
18