2 ಕೊರಿಂಥದವರಿಗೆ 8 : 1 (ERVKN)
ಕ್ರೈಸ್ತರ ಕೊಡುವಿಕೆ ಸಹೋದರ ಸಹೋದರಿಯರೇ, ಮಕೆದೋನಿಯದ ಸಭೆಗಳಲ್ಲಿ ದೇವರು ತೋರಿದ ಕೃಪೆಯ ಬಗ್ಗೆ ನಿಮಗೆ ತಿಳಿಸಲು ಇಷ್ಟಪಡುತ್ತೇವೆ.
2 ಕೊರಿಂಥದವರಿಗೆ 8 : 2 (ERVKN)
ಆ ವಿಶ್ವಾಸಿಗಳು ಅತೀವ ಕಷ್ಟಗಳಿಂದ ಪರೀಕ್ಷಿಸಲ್ಪಟ್ಟಿದ್ದಾರೆ. ಅವರು ಬಹಳ ಬಡಜನರು. ಆದರೆ ಅವರು ತಮ್ಮ ಮಹಾ ಆನಂದದಿಂದ ಬಹಳವಾಗಿ ಕೊಟ್ಟರು.
2 ಕೊರಿಂಥದವರಿಗೆ 8 : 3 (ERVKN)
ತಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಕೊಟ್ಟಿದ್ದಾರೆಂದು ನಾನು ನಿಮಗೆ ಹೇಳುತ್ತೇನೆ. ಅವರು ತಮ್ಮ ಶಕ್ತಿಮೀರಿ ಕೊಟ್ಟಿದ್ದಾರೆ. ಅವರು ತಾವಾಗಿಯೇ ಕೊಟ್ಟರು. ಕೊಡಬೇಕೆಂದು ಅವರಿಗೆ ಯಾರೂ ಹೇಳಲಿಲ್ಲ.
2 ಕೊರಿಂಥದವರಿಗೆ 8 : 4 (ERVKN)
ದೇವಜನರಿಗೋಸ್ಕರವಾದ ಈ ಸೇವೆಯಲ್ಲಿ ತಾವೂ ಪಾಲುಗಾರರಾಗುವ ಭಾಗ್ಯ ದೊರೆಯಬೇಕೆಂದು ಅವರು ನಮ್ಮನ್ನು ಪದೇಪದೇ ಕೇಳಿಕೊಂಡರು ಮತ್ತು ಬೇಡಿಕೊಂಡರು.
2 ಕೊರಿಂಥದವರಿಗೆ 8 : 5 (ERVKN)
ನಾವೆಂದೂ ನೆನಸಿಲ್ಲದ ರೀತಿಯಲ್ಲಿ ಅವರು ಕೊಟ್ಟರು. ಅವರು ತಮ್ಮ ಹಣವನ್ನು ನಮಗೆ ಕೊಡುವುದಕ್ಕಿಂತ ಮೊದಲು ತಮ್ಮನ್ನೇ ಪ್ರಭುವಿಗೂ ನಮಗೂ ಒಪ್ಪಿಸಿಕೊಟ್ಟರು. ದೇವರು ಬಯಸುವುದು ಇದನ್ನೇ.
2 ಕೊರಿಂಥದವರಿಗೆ 8 : 6 (ERVKN)
ಆದ್ದರಿಂದ, ವಿಶೇಷವಾದ ಈ ಕೃಪಾಕಾರ್ಯವನ್ನು ಪೂರೈಸಲು ನಿಮಗೆ ಸಹಾಯ ಮಾಡಬೇಕೆಂದು ನಾವು ತೀತನನ್ನು ಕೇಳಿಕೊಂಡೆವು. ಈ ಕಾರ್ಯವನ್ನು ಪ್ರಾರಂಭಿಸಿದವನು ತೀತನೇ.
2 ಕೊರಿಂಥದವರಿಗೆ 8 : 7 (ERVKN)
ನೀವು ಪ್ರತಿಯೊಂದರಲ್ಲಿಯೂ ಅಂದರೆ, ನಂಬಿಕೆಯಲ್ಲಿ, ಮಾತಾಡುವುದರಲ್ಲಿ, ಜ್ಞಾನದಲ್ಲಿ, ಸಹಾಯಮಾಡಬೇಕೆಂಬ ಆಸಕ್ತಿಯಲ್ಲಿ ಮತ್ತು ನಮ್ಮಿಂದ ಕಲಿತುಕೊಂಡ ಪ್ರೀತಿಯಲ್ಲಿ ಶ್ರೀಮಂತರಾಗಿದ್ದೀರಿ. ಆದ್ದರಿಂದ ಕೃಪಾಕಾರ್ಯದಲ್ಲಿಯೂ ನೀವು ಶ್ರೀಮಂತರಾಗಿರಬೇಕೆಂದು ನಾವು ಬಯಸುತ್ತೇವೆ.
2 ಕೊರಿಂಥದವರಿಗೆ 8 : 8 (ERVKN)
ನೀವು ಕೊಡಬೇಕೆಂದು ನಾನು ಆಜ್ಞಾಪಿಸುತ್ತಿಲ್ಲ. ಆದರೆ ನಿಮ್ಮ ಪ್ರೀತಿಯು ನಿಜವಾದ ಪ್ರೀತಿಯೇ ಎಂಬುದನ್ನು ನಾನು ನೋಡಬಯಸುತ್ತೇನೆ. ಸಹಾಯ ಮಾಡಲು ಇತರ ಜನರಿಗಿರುವ ನಿಜವಾದ ಬಯಕೆಯನ್ನು ನಿಮಗೆ ತೋರಿಸುವುದರ ಮೂಲಕವಾಗಿ ನಾನು ನಿಮ್ಮನ್ನು ಪರೀಕ್ಷಿಸುತ್ತೇನೆ.
2 ಕೊರಿಂಥದವರಿಗೆ 8 : 9 (ERVKN)
ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.
2 ಕೊರಿಂಥದವರಿಗೆ 8 : 10 (ERVKN)
ನಾನು ನಿಮಗೆ ಹೇಳುವುದೇನೆಂದರೆ: ಕಳೆದ ವರ್ಷ ಕೊಡುವುದರಲ್ಲಿ ನೀವೇ ಮೊದಲಿಗರಾಗಿದ್ದಿರಿ ಮತ್ತು ಮೊಟ್ಟಮೊದಲನೆಯದಾಗಿ ಕೊಟ್ಟವರು ನೀವೇ.
2 ಕೊರಿಂಥದವರಿಗೆ 8 : 11 (ERVKN)
ಆದ್ದರಿಂದ ನೀವು ಆರಂಭಿಸಿದ ಕಾರ್ಯವನ್ನು ಈಗ ಪೂರ್ಣಗೊಳಿಸಿರಿ. ಆಗ, ನಿಮ್ಮ ಕಾರ್ಯ ಮತ್ತು ನಿಮ್ಮ ಸಿದ್ಧಮನಸ್ಸು ಸರಿಸಮಾನವಾಗಿರುವುದು. ನಿಮ್ಮಲ್ಲಿರುವುದನ್ನು ಕೊಡಿರಿ.
2 ಕೊರಿಂಥದವರಿಗೆ 8 : 12 (ERVKN)
ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.
2 ಕೊರಿಂಥದವರಿಗೆ 8 : 13 (ERVKN)
ಇತರ ಜನರು ಸುಖವಾಗಿರುವಾಗ ನೀವು ಕಷ್ಟದಿಂದಿರುವುದು ನಮಗೆ ಇಷ್ಟವಿಲ್ಲ. ಪ್ರತಿಯೊಂದರಲ್ಲಿಯೂ ಸಮಾನತೆ ಇರಬೇಕೆಂಬುದೇ ನಮ್ಮ ಬಯಕೆ.
2 ಕೊರಿಂಥದವರಿಗೆ 8 : 14 (ERVKN)
ಈಗ ನಿಮ್ಮಲ್ಲಿ ಬೇಕಾದಷ್ಟಿದೆ. ನಿಮ್ಮ ಈ ಸಮೃದ್ಧಿಯು ಇತರ ಜನರ ಕೊರತೆಯನ್ನು ನೀಗಿಸುವುದು. ಬಳಿಕ, ಅವರು ಸಮೃದ್ಧರಾಗಿರುವಾಗ ನಿಮ್ಮ ಕೊರತೆಯನ್ನು ನೀಗಿಸುವರು. ಹೀಗೆ ಎಲ್ಲರೂ ಸಮಾನರಾಗಿರುವರು.
2 ಕೊರಿಂಥದವರಿಗೆ 8 : 15 (ERVKN)
ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಇದಾಗುವುದು, “ಬಹಳವಾಗಿ ಶೇಖರಿಸಿಕೊಂಡವನಿಗೆ ಏನೂ ಹೆಚ್ಚಾಗಲಿಲ್ಲ,
ಸ್ವಲ್ಪ ಶೇಖರಿಸಿಕೊಂಡವನಿಗೆ ಏನೂ ಕಡಿಮೆಯಾಗಲಿಲ್ಲ.” ವಿಮೋಚನಕಾಂಡ 16:18
2 ಕೊರಿಂಥದವರಿಗೆ 8 : 16 (ERVKN)
ತೀತನು ಮತ್ತು ಅವನ ಸಂಗಡಿಗರು ನಿಮ್ಮ ಮೇಲೆ ನನಗಿರುವ ಪ್ರೀತಿಯನ್ನು ದೇವರು ತೀತನಿಗೂ ಕೊಟ್ಟದ್ದಕ್ಕಾಗಿ ದೇವರನ್ನು ಸ್ತುತಿಸುತ್ತೇನೆ.
2 ಕೊರಿಂಥದವರಿಗೆ 8 : 17 (ERVKN)
ನಾವು ಕೇಳಿಕೊಂಡ ಕಾರ್ಯಗಳನ್ನು ಮಾಡಲು ತೀತನು ಒಪ್ಪಿಕೊಂಡನು. ನಿಮ್ಮ ಬಳಿಗೆ ಬರಲು ಅವನು ಅತ್ಯಾಸಕ್ತನಾಗಿದ್ದನು. ಇದು ಅವನ ಸ್ವಂತ ಆಲೋಚನೆ.
2 ಕೊರಿಂಥದವರಿಗೆ 8 : 18 (ERVKN)
ಎಲ್ಲಾ ಸಭೆಗಳಲ್ಲಿ ಹೊಗಳಿಕೆಗೆ ಪಾತ್ರನಾಗಿರುವ ಒಬ್ಬ ಸಹೋದರನನ್ನು ತೀತನೊಡನೆ ಕಳುಹಿಸುತ್ತಿದ್ದೇವೆ. ಈ ಸಹೋದರನು ಸುವಾರ್ತಾಸೇವೆಯ ವಿಷಯದಲ್ಲಿ ಕೀರ್ತಿಪಡೆದಿದ್ದಾನೆ.
2 ಕೊರಿಂಥದವರಿಗೆ 8 : 19 (ERVKN)
ಇದಲ್ಲದೆ, ನಾವು ಈ ಸಹಾಯಧನವನ್ನು ತೆಗೆದುಕೊಂಡು ಹೋಗುವಾಗ ನಮ್ಮ ಸಂಗಡವಿರುವುದಕ್ಕಾಗಿ ಸಭೆಗಳವರು ಈ ಸಹೋದರನನ್ನು ಆಯ್ಕೆಮಾಡಿದ್ದಾರೆ. ದೇವರ ಮಹಿಮೆಗಾಗಿಯೂ ಮತ್ತು ಸಹಾಯ ಮಾಡಲು ನಿಜವಾಗಿ ಬಯಸುತ್ತೇವೆ ಎಂಬುದನ್ನು ತೋರಿಸುವುದಕ್ಕಾಗಿಯೂ ಈ ಸೇವಾಕಾರ್ಯವನ್ನು ಮಾಡುತ್ತಿದ್ದೇವೆ.
2 ಕೊರಿಂಥದವರಿಗೆ 8 : 20 (ERVKN)
ಹೇರಳವಾದ ಈ ಸಹಾಯಧನವನ್ನು ನಾವು ನೋಡಿಕೊಳ್ಳುವ ಬಗ್ಗೆ ಟೀಕಿಸಲು ಯಾರಿಗೂ ಅವಕಾಶ ಕೊಡಬಾರದೆಂದು ಎಚ್ಚರಿಕೆಯಿಂದಿದ್ದೇವೆ.
2 ಕೊರಿಂಥದವರಿಗೆ 8 : 21 (ERVKN)
ಪ್ರಭುವು ಯಾವುದನ್ನು ಸರಿಯಾದದ್ದೆಂದು ಸ್ವೀಕರಿಸಿಕೊಳ್ಳುವನೋ ಮತ್ತು ಜನರು ಯಾವುದನ್ನು ಸರಿಯಾದದ್ದೆಂದು ಯೋಚಿಸುವರೋ ಅದನ್ನೇ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ.
2 ಕೊರಿಂಥದವರಿಗೆ 8 : 22 (ERVKN)
ಇದಲ್ಲದೆ, ಸಹಾಯ ಮಾಡಲು ಯಾವಾಗಲೂ ಸಿದ್ಧನಾಗಿರುವ ನಮ್ಮ ಸಹೋದರನನ್ನು ಅವರೊಂದಿಗೆ ಕಳುಹಿಸಿಕೊಡುತ್ತಿದ್ದೇವೆ. ಅವನು ಅನೇಕ ವಿಧದಲ್ಲಿ ತನ್ನನ್ನು ನಿರೂಪಿಸಿದ್ದಾನೆ. ಈಗ ಅವನಿಗೆ ನಿಮ್ಮಲ್ಲಿ ಹೆಚ್ಚು ಭರವಸೆ ಇರುವುದರಿಂದ ಮತ್ತಷ್ಟು ಸಹಾಯ ಮಾಡಲು ಬಯಸುತ್ತಾನೆ.
2 ಕೊರಿಂಥದವರಿಗೆ 8 : 23 (ERVKN)
ನಾನು ತೀತನ ಬಗ್ಗೆ ಹೇಳುವುದೇನೆಂದರೆ, ಅವನು ನನ್ನ ಜೊತೆಕೆಲಸಗಾರನಾಗಿದ್ದಾನೆ. ನಿಮಗೆ ಸಹಾಯ ಮಾಡಲು ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ. ಇತರ ಸಹೋದರರ ಬಗ್ಗೆ ನಾನು ಹೇಳುವುದೇನೆಂದರೆ, ಅವರು ಸಭೆಗಳಿಂದ ಕುಳುಹಿಸಲ್ಪಟ್ಟವರಾಗಿದ್ದಾರೆ ಮತ್ತು ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುವಂಥವರಾಗಿದ್ದಾರೆ.
2 ಕೊರಿಂಥದವರಿಗೆ 8 : 24 (ERVKN)
ಆದ್ದರಿಂದ ನಿಮ್ಮಲ್ಲಿ ನಿಜವಾಗಿಯೂ ಪ್ರೀತಿಯಿದೆ ಎಂಬುದನ್ನು ಈ ಜನರಿಗೆ ತೋರಿಸಿಕೊಡಿರಿ. ನಾವು ನಿಮ್ಮ ವಿಷಯದಲ್ಲಿ ಯಾಕೆ ಹೆಮ್ಮೆಪಡುತ್ತೇವೆಂಬುದನ್ನು ಇವರಿಗೆ ತೋರಿಸಿಕೊಡಿರಿ. ಆಗ ಎಲ್ಲಾ ಸಭೆಗಳವರು ಅದನ್ನು ನೋಡಲು ಸಾಧ್ಯವಾಗುವುದು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24