2 ಯೋಹಾನನು 1 : 1 (ERVKN)
ಸಭಾಹಿರಿಯನು, ದೇವರಿಂದ ಆಯ್ಕೆಯಾದ ಅಮ್ಮನವರಿಗೆ ಮತ್ತು ಆಕೆಯ ಮಕ್ಕಳಿಗೆ ಬರೆಯುವ ಪತ್ರ. ನಾನು ನಿಮ್ಮೆಲ್ಲರನ್ನು ಸತ್ಯದಲ್ಲಿ ಪ್ರೀತಿಸುತ್ತೇನೆ. ಸತ್ಯವನ್ನು ತಿಳಿದಿರುವ ಜನರೆಲ್ಲರೂ ಸಹ ನಿಮ್ಮನ್ನು ಪ್ರೀತಿಸುತ್ತಾರೆ.
2 ಯೋಹಾನನು 1 : 2 (ERVKN)
ನಮ್ಮಲ್ಲಿ ನೆಲೆಗೊಂಡಿರುವ ಸತ್ಯದ ನಿಮಿತ್ತ ನಾವು ನಿಮ್ಮನ್ನು ಪ್ರೀತಿಸುತ್ತೇವೆ. ಈ ಸತ್ಯವು ನಮ್ಮಲ್ಲಿ ಸದಾಕಾಲ ಇರುವುದು.
2 ಯೋಹಾನನು 1 : 3 (ERVKN)
ತಂದೆಯಾದ ದೇವರಿಂದಲೂ ಆತನ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆ, ಕರುಣೆ ಮತ್ತು ಶಾಂತಿ ನಮ್ಮೊಂದಿಗಿರುತ್ತವೆ. ನಾವು ಈ ಆಶೀರ್ವಾದಗಳನ್ನು ಸತ್ಯದ ಮತ್ತು ಪ್ರೀತಿಯ ಮೂಲಕ ಪಡೆಯುತ್ತೇವೆ.
2 ಯೋಹಾನನು 1 : 4 (ERVKN)
ನಿಮ್ಮ ಮಕ್ಕಳಲ್ಲಿ ಕೆಲವರ ಬಗ್ಗೆ ನಾನು ಕೇಳಿದಾಗ ತುಂಬಾ ಸಂತೋಷವಾಯಿತು. ತಂದೆಯಾದ ದೇವರು ನಮಗೆ ಆಜ್ಞಾಪಿಸಿದ ಸತ್ಯಮಾರ್ಗವನ್ನು ಅವರು ಅನುಸರಿಸುತ್ತಿರುವುದರಿಂದ ನನಗೆ ಸಂತೋಷವಾಯಿತು.
2 ಯೋಹಾನನು 1 : 5 (ERVKN)
ಪ್ರಿಯ ಅಮ್ಮನವರೇ, ಈಗ ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ, ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಹೊಸ ಆಜ್ಞೆಯಾಗಿರದೆ ಮೊದಲಿನಿಂದಲೂ ಇದ್ದ ಆಜ್ಞೆಯಾಗಿದೆ.
2 ಯೋಹಾನನು 1 : 6 (ERVKN)
ಆತನು ಆಜ್ಞಾಪಿಸಿದ ಮಾರ್ಗದಲ್ಲಿ ಜೀವಿಸುವುದೇ ಪ್ರೀತಿ. ನೀವು ಪ್ರೀತಿಯಿಂದ ಬಾಳಬೇಕೆಂಬುದೇ ದೇವರ ಆಜ್ಞೆ. ನೀವು ಆರಂಭದಿಂದಲೂ ಈ ಆಜ್ಞೆಯನ್ನು ಕೇಳಿರುವಿರಿ.
2 ಯೋಹಾನನು 1 : 7 (ERVKN)
ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.
2 ಯೋಹಾನನು 1 : 8 (ERVKN)
ನೀವು ಎಚ್ಚರವಾಗಿರಿ! ನೀವು ದುಡಿದು ಸಂಪಾದಿಸಿದ್ದನ್ನು ಕಳೆದುಕೊಳ್ಳಬೇಡಿ. ನೀವು ಎಚ್ಚರಿಕೆಯಿಂದ ಇರುವುದಾದರೆ, ನಿಮಗೆ ಬರಬೇಕಾದ ಪೂರ್ಣಫಲವನ್ನು ಹೊಂದಿಕೊಳ್ಳುವಿರಿ.
2 ಯೋಹಾನನು 1 : 9 (ERVKN)
ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿಸಿ ಮುಂದಕ್ಕೆ ಹೋಗುವವನು ದೇವರನ್ನು ಹೊಂದಿಲ್ಲ. ಆದರೆ ಆ ಉಪದೇಶದಲ್ಲಿ ನೆಲೆಗೊಂಡಿರುವವನು ತಂದೆಯನ್ನೂ ಮಗನನ್ನೂ ಹೊಂದಿದ್ದಾನೆ.
2 ಯೋಹಾನನು 1 : 10 (ERVKN)
ನಿಮ್ಮ ಬಳಿಗೆ ಬರುವವನು ಈ ಉಪದೇಶವನ್ನು ಹೊಂದಿಲ್ಲದಿದ್ದರೆ ಅವನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಳ್ಳಬೇಡಿ. ಅವನನ್ನು ಸ್ವಾಗತಿಸಬೇಡಿ.
2 ಯೋಹಾನನು 1 : 11 (ERVKN)
ನೀವು ಅವನನ್ನು ಸ್ವಾಗತಿಸಿದರೆ ಅವನ ಕೆಟ್ಟಕಾರ್ಯಕ್ಕೆ ನೀವೂ ಸಹಾಯ ಮಾಡಿದಂತಾಗುವುದು.
2 ಯೋಹಾನನು 1 : 12 (ERVKN)
ನಾನು ನಿಮಗೆ ಹೇಳಬೇಕಾದುದು ಬಹಳಷ್ಟಿದೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲಿಚ್ಛಿಸುವುದಿಲ್ಲ. ಅದರ ಬದಲು, ನಾನೇ ನಿಮ್ಮ ಬಳಿಗೆ ಬರಬೇಕೆಂದಿದ್ದೇನೆ. ಆಗ ನಾವು ಒಟ್ಟಾಗಿ ಮಾತನಾಡಬಹುದು. ಇದು ನಮಗೆ ಬಹಳ ಸಂತಸವನ್ನು ಉಂಟುಮಾಡುತ್ತದೆ.
2 ಯೋಹಾನನು 1 : 13 (ERVKN)
ದೇವರಿಂದ ಆಯ್ಕೆಗೊಂಡವಳಾದ ನಿಮ್ಮ ಸಹೋದರಿಯ ಮಕ್ಕಳು ನಿಮಗೆ ವಂದನೆ ತಿಳಿಸಿದ್ದಾರೆ.

1 2 3 4 5 6 7 8 9 10 11 12 13