2 ಅರಸುಗಳು 16 : 1 (ERVKN)
{ಅಹಾಜನು ಯೆಹೂದದ ರಾಜನಾದನು} [PS] ರೆಮಲ್ಯನ ಮಗನಾದ ಪೆಕಹನು ಇಸ್ರೇಲಿನ ರಾಜನಾಗಿದ್ದ ಹದಿನೇಳನೆಯ ವರ್ಷದಲ್ಲಿ ಯೋತಾವುನ ಮಗನಾದ ಅಹಾಜನು ಯೆಹೂದದ ರಾಜನಾದನು.
2 ಅರಸುಗಳು 16 : 2 (ERVKN)
ಅಹಾಜನು ರಾಜನಾದಾಗ ಅವನಿಗೆ ಇಪ್ಪತ್ತು ವರ್ಷ ವಯಸ್ಸಾಗಿತ್ತು. ಅಹಾಜನು ಜೆರುಸಲೇಮನ್ನು ಹದಿನಾರು ವರ್ಷ ಆಳಿದನು. ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿದ್ದ ಕಾರ್ಯಗಳನ್ನು ಅಹಾಜನು ಮಾಡಲಿಲ್ಲ. ಅವನ ಪೂರ್ವಿಕನಾದ ದಾವೀದನು ದೇವರಿಗೆ ವಿಧೇಯನಾಗಿದ್ದನು; ಆದರೆ ಅಹಾಜನು ವಿಧೇಯನಾಗಲಿಲ್ಲ.
2 ಅರಸುಗಳು 16 : 3 (ERVKN)
ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.
2 ಅರಸುಗಳು 16 : 4 (ERVKN)
ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು. [PE][PS]
2 ಅರಸುಗಳು 16 : 5 (ERVKN)
ಅರಾಮ್ಯರ ರಾಜನಾದ ರೆಚೀನನು ಮತ್ತು ರೆಮಲ್ಯನ ಮಗನೂ ಇಸ್ರೇಲಿನ ರಾಜನೂ ಆದ ಪೆಕಹನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಬಂದರು. ರೆಚೀನ ಮತ್ತು ಪೆಕಹ ಅಹಾಜನಿಗೆ ಮುತ್ತಿಗೆ ಹಾಕಿದರು. ಆದರೆ ಅವನನ್ನು ಸೋಲಿಸಲಾಗಲಿಲ್ಲ.
2 ಅರಸುಗಳು 16 : 6 (ERVKN)
ಆ ಸಮಯಲ್ಲಿ ಅರಾಮ್ಯರ ರಾಜನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ಯಕ್ಕೆ ಸೇರಿಸಿಕೊಂಡನು. ರೆಚೀನನು ಏಲತ್ ಪಟ್ಟಣದಲ್ಲಿ ವಾಸಿಸುತ್ತಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಅರಾಮ್ಯರು ಬಂದು ಏಲತ್ ಪಟ್ಟಣದಲ್ಲಿ ನೆಲೆಸಿದರು; ಅವರು ಇಂದಿನವರೆಗೂ ಅಲ್ಲಿಯೇ ವಾಸಿಸುತ್ತಿದ್ದಾರೆ. [PE][PS]
2 ಅರಸುಗಳು 16 : 7 (ERVKN)
ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನೆಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”
2 ಅರಸುಗಳು 16 : 8 (ERVKN)
ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು.
2 ಅರಸುಗಳು 16 : 9 (ERVKN)
ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು. [PE][PS]
2 ಅರಸುಗಳು 16 : 10 (ERVKN)
ರಾಜನಾದ ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನನ್ನು ಭೇಟಿಮಾಡಲು ದಮಸ್ಕಕ್ಕೆ ಹೋದನು. ಅಹಾಜನು ದಮಸ್ಕದಲ್ಲಿದ್ದ ಯಜ್ಞವೇದಿಕೆಯನ್ನು ನೋಡಿದನು. ರಾಜನಾದ ಅಹಾಜನು ಯಜ್ಞವೇದಿಕೆಯ ವಿನ್ಯಾಸವನ್ನು ಮತ್ತು ಮಾದರಿಯನ್ನು ಯಾಜಕನಾದ ಊರೀಯನಿಗೆ ಕಳುಹಿಸಿದನು.
2 ಅರಸುಗಳು 16 : 11 (ERVKN)
ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೊಂದನ್ನು ನಿರ್ಮಿಸಿದ್ದನು. [PE][PS]
2 ಅರಸುಗಳು 16 : 12 (ERVKN)
ರಾಜನು ದಮಸ್ಕದಿಂದ ಹಿಂದಿರುಗಿಬಂದು ಯಜ್ಞವೇದಿಕೆಯನ್ನು ನೋಡಿದನು. ಅವನು ಯಜ್ಞಗಳನ್ನು ಅದರ ಮೇಲೆ ಅರ್ಪಿಸಿದನು.
2 ಅರಸುಗಳು 16 : 13 (ERVKN)
ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು. [PE][PS]
2 ಅರಸುಗಳು 16 : 14 (ERVKN)
ಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.
2 ಅರಸುಗಳು 16 : 15 (ERVKN)
ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.
2 ಅರಸುಗಳು 16 : 16 (ERVKN)
ರಾಜನಾದ ಅಹಾಜನು ಆಜ್ಞಾಪಿಸಿದಂತೆಯೇ ಯಾಜಕನಾದ ಊರೀಯನು ಮಾಡಿದನು. [PE][PS]
2 ಅರಸುಗಳು 16 : 17 (ERVKN)
ನಂತರ ರಾಜನಾದ ಅಹಾಜನು ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು. ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು; ಸಮುದ್ರವೆಂಬ ತೊಟ್ಟಿಯನ್ನು ತಾಮ್ರದ ಹೋರಿಗಳಿಂದ ಕೆಳಗಿಳಿಸಿ ಕಲ್ಲುಕಟ್ಟೆಯ ಮೇಲಿಟ್ಟನು.
2 ಅರಸುಗಳು 16 : 18 (ERVKN)
ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ [*ಅಶ್ಶೂರದ ರಾಜ ಯಾಕೆಂದರೆ ಅಶ್ಶೂರದ ರಾಜನು ಅವುಗಳ ಬಗ್ಗೆ ಕೇಳಿದ್ದರೆ ಅವುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿದ್ದನು.] ದೆಸೆಯಿಂದ ಬದಲಾಯಿಸಿದನು. [PE][PS]
2 ಅರಸುಗಳು 16 : 19 (ERVKN)
“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಬರೆಯಲಾಗಿದೆ.
2 ಅರಸುಗಳು 16 : 20 (ERVKN)
ಅಹಾಜನು ಸತ್ತಮೇಲೆ ಅವನನ್ನು ಅವನ ಪೂರ್ವಿಕರ ಬಳಿ ದಾವೀದನಗರದಲ್ಲಿ ಸಮಾಧಿಮಾಡಿದರು. ಅಹಾಜನ ಮಗನಾದ ಹಿಜ್ಕೀಯನು ಅವನ ನಂತರ ಹೊಸ ರಾಜನಾದನು. [PE]
❮
❯