2 ಅರಸುಗಳು 20 : 1 (ERVKN)
ಹಿಜ್ಕೀಯನಿಗೆ ಕಾಯಿಲೆ ಆ ಸಮಯದಲ್ಲಿ ಹಿಜ್ಕೀಯನಿಗೆ ಕಾಯಿಲೆಯಾಗಿ ಸತ್ತಂತಾದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಹಿಜ್ಕೀಯನ ಬಳಿಗೆ ಹೋಗಿ, “ಯೆಹೋವನು ಹೀಗೆನ್ನುತ್ತಾನೆ. ‘ನಿನ್ನ ಮನೆಯನ್ನು ವ್ಯವಸ್ಥೆಗೊಳಿಸು; ಏಕೆಂದರೆ ನೀನು ಸಾಯುವೆ, ಬದುಕುವುದಿಲ್ಲ!’ ” ಎಂದು ಹೇಳಿದನು.
2 ಅರಸುಗಳು 20 : 2 (ERVKN)
ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನಲ್ಲಿ ಪ್ರಾರ್ಥಿಸುತ್ತಾ,
2 ಅರಸುಗಳು 20 : 3 (ERVKN)
“ಯೆಹೋವನೇ, ನಾನು ಪೂರ್ಣಮನಸ್ಸಿನಿಂದ ನಿಜವಾಗಿಯೂ ನಿನ್ನ ಸೇವೆಮಾಡಿದ್ದೇನೆಂಬುದನ್ನು ನೆನಪುಮಾಡಿಕೊ. ನೀನು ಯೋಗ್ಯವೆಂದು ಹೇಳಿದವುಗಳನ್ನು ನಾನು ಮಾಡಿದೆನು” ಎಂದು ಹೇಳಿದನು. ನಂತರ ಹಿಜ್ಕೀಯನು ಬಹಳ ಜೋರಾಗಿ ಗೋಳಾಡಿದನು.
2 ಅರಸುಗಳು 20 : 4 (ERVKN)
ಯೆಶಾಯನು ಮಧ್ಯಪ್ರಾಕಾರವನ್ನು ಬಿಡುವುದಕ್ಕೆ ಮುಂಚೆಯೇ, ಯೆಹೋವನ ವಾಕ್ಯವು ಅವನಿಗೆ ಬಂದಿತು. ಯೆಹೋವನು
2 ಅರಸುಗಳು 20 : 5 (ERVKN)
“ಹಿಂದಿರುಗಿ ಹೋಗಿ, ನನ್ನ ಜನರ ನಾಯಕನಾದ ಹಿಜ್ಕೀಯನಿಗೆ ಇದನ್ನು ಹೇಳು: ‘ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ಆದ್ದರಿಂದ ನಾನು ನಿನ್ನನ್ನು ಗುಣಪಡಿಸುತ್ತೇನೆ. ಮೂರನೆಯ ದಿನ, ನೀನು ದೇವಾಲಯಕ್ಕೆ ಹೋಗುವೆ.
2 ಅರಸುಗಳು 20 : 6 (ERVKN)
ನಾನು ನಿನ್ನ ಜೀವಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಾನು ನಿನ್ನನ್ನು ಮತ್ತು ಈ ನಗರವನ್ನು ಅಶ್ಶೂರದ ರಾಜನ ಅಧಿಕಾರದಿಂದ ರಕ್ಷಿಸುತ್ತೇನೆ. ನಾನು ಈ ನಗರವನ್ನು ಸಂರಕ್ಷಿಸುತ್ತೇನೆ. ನಾನು ನನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದಕ್ಕಾಗಿಯೂ ನನಗಾಗಿಯೂ ಇದನ್ನು ಮಾಡುತ್ತೇನೆ’ ” ಎಂದು ಹೇಳಿದನು.
2 ಅರಸುಗಳು 20 : 7 (ERVKN)
ಆಗ ಯೆಶಾಯನು, “ಅಂಜೂರದ ಹಣ್ಣಿನಿಂದ ಒಂದು ಉಂಡೆಯನ್ನು ಮಾಡಿಸಿ ಅದನ್ನು ಕುರುವಿನ ಮೇಲೆ ಇಡು” ಎಂದು ಹೇಳಿದನು. ಅಂತೆಯೇ ಅವರು ಅಂಜೂರಹಣ್ಣಿನ ಒಂದು ಉಂಡೆಯನ್ನು ಹಿಜ್ಕೀಯನ ಕುರುವಿನ ಮೇಲೆ ಇಟ್ಟರು. ಆಗ ಹಿಜ್ಕೀಯನಿಗೆ ಗುಣವಾಯಿತು.
2 ಅರಸುಗಳು 20 : 8 (ERVKN)
ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುತ್ತಾನೆಂಬುದಕ್ಕೆ ಮತ್ತು ಮೂರನೆಯ ದಿನ ನಾನು ದೇವಾಲಯದವರೆಗೆ ಹೋಗುವೆನೆಂಬುದಕ್ಕೆ ಏನು ಗುರುತು?” ಎಂದು ಕೇಳಿದನು.
2 ಅರಸುಗಳು 20 : 9 (ERVKN)
ಯೆಶಾಯನು, “ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ ಅಥವಾ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ? *ನೆರಳು … ಹೋಗಬೇಕೋ? ಹಿಜ್ಕೀಯನು ಗಡಿಯಾರದಂತೆ ಬಳಸುತ್ತಿದ್ದ ಒಂದು ವಿಶೇಷ ಕಟ್ಟಡವು ಹೊರಗಡೆಯಿದ್ದಿತು. ಸೂರ್ಯಕಿರಣಗಳು ಮೆಟ್ಟಲಿನ ಮೇಲೆ ಬಿದ್ದಾಗ, ನೆರಳು ಆ ದಿನದ ಸಮಯವನ್ನು ತೋರಿಸುತ್ತಿತ್ತು ಎಂಬುದು ಇದರ ಅರ್ಥ. ನಿನಗೆ ಯಾವುದು ಬೇಕಾಗಿದೆ? ಯೆಹೋವನು ತಾನು ಹೇಳಿದ್ದನ್ನು ಮಾಡುತ್ತಾನೆಂಬುದಕ್ಕೆ ಇದೇ ನಿನಗೆ ಗುರುತು” ಎಂದು ಹೇಳಿದನು.
2 ಅರಸುಗಳು 20 : 10 (ERVKN)
ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದ್ದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಉತ್ತರಿಸಿದನು.
2 ಅರಸುಗಳು 20 : 11 (ERVKN)
ಆಗ ಯೆಶಾಯನು ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಈಗಾಗಲೇ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡಿದನು.
2 ಅರಸುಗಳು 20 : 12 (ERVKN)
ಹಿಜ್ಕೀಯನು ತನ್ನ ಭಂಡಾರವನ್ನು ಬಾಬಿಲೋನಿನ ಜನರಿಗೆ ತೋರಿಸಿದನು ಆ ಸಮಯದಲ್ಲಿ, ಬಲದಾನನ ಮಗನಾದ ಬೆರೋದಕ ಬಲದಾನ ಎಂಬುವನು ಬಾಬಿಲೋನಿನ ರಾಜನಾಗಿದ್ದನು. ಅವನು ಹಿಜ್ಕೀಯನಿಗೆ ಪತ್ರಗಳನ್ನು ಮತ್ತು ಕಾಣಿಕೆಯನ್ನು ಕಳುಹಿಸಿದನು. ಹಿಜ್ಕೀಯನು ಅಸ್ವಸ್ಥನಾಗಿದ್ದಾನೆ ಎಂಬುದನ್ನು ಬೆರೋದಕ ಬಲದಾನನು ತಿಳಿದುಕೊಂಡದ್ದರಿಂದ ಹೀಗೆ ಮಾಡಿದನು.
2 ಅರಸುಗಳು 20 : 13 (ERVKN)
ಹಿಜ್ಕೀಯನು ಬಾಬಿಲೋನಿನ ಜನರನ್ನು ಸ್ವಾಗತಿಸಿ, ಅವರಿಗೆ ತನ್ನ ಮನೆಯಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ತೋರಿಸಿದನು. ಅವನು ತನ್ನ ಭಂಡಾರದಲ್ಲಿದ್ದ ಬೆಳ್ಳಿಬಂಗಾರಗಳನ್ನು, ಸುಗಂಧದ್ರವ್ಯಗಳನ್ನು, ಪರಿಮಳಭರಿತ ತೈಲವನ್ನು, ಆಯುಧಗಳನ್ನು ತೋರಿಸಿದನು. ಹಿಜ್ಕೀಯನ ಮನೆಯಲ್ಲಿ ಮತ್ತು ಅವನ ರಾಜ್ಯದಲ್ಲಿ ಅವರಿಗೆ ತೋರಿಸದೆ ಉಳಿದದ್ದು ಏನೂ ಇರಲಿಲ್ಲ.
2 ಅರಸುಗಳು 20 : 14 (ERVKN)
ನಂತರ ಪ್ರವಾದಿಯಾದ ಯೆಶಾಯನು ರಾಜನಾದ ಹಿಜ್ಕೀಯನ ಬಳಿಗೆ ಬಂದು, “ಈ ಜನರು ಹೇಳುವುದೇನು? ಇವರು ಎಲ್ಲಿಂದ ಬಂದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹಳ ದೂರದೇಶದಿಂದ, ಬಾಬಿಲೋನಿನಿಂದ ಬಂದಿದ್ದಾರೆ” ಎಂದನು.
2 ಅರಸುಗಳು 20 : 15 (ERVKN)
ಯೆಶಾಯನು, “ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ನನ್ನ ಮನೆಯಲ್ಲಿರುವುದನ್ನೆಲ್ಲಾ ನೋಡಿದರು. ಅವರಿಗೆ ತೋರಿಸದೆ ಉಳಿದಿರುವುದು ನನ್ನ ಭಂಡಾರದಲ್ಲಿ ಏನೂ ಇಲ್ಲ” ಎಂದು ಉತ್ತರಿಸಿದನು.
2 ಅರಸುಗಳು 20 : 16 (ERVKN)
ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವನಿಂದ ಬಂದ ಈ ಸಂದೇಶವನ್ನು ಆಲಿಸು.
2 ಅರಸುಗಳು 20 : 17 (ERVKN)
ನಿನ್ನ ಮನೆಯಲ್ಲಿರುವ ವಸ್ತುಗಳೆಲ್ಲವನ್ನು ನಿನ್ನ ಮನೆಯಿಂದ ಬಾಬಿಲೋನಿಗೆ ಕೊಂಡೊಯ್ಯುವ ಕಾಲವು ಬರುತ್ತಿದೆ; ನಿನ್ನ ಪೂರ್ವಿಕರು ಇಂದಿನವರೆಗೆ ರಕ್ಷಿಸಿದ ವಸ್ತುಗಳೆಲ್ಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗುವ ಸಮಯವು ಬರುತ್ತಿದೆ. ಏನನ್ನೂ ಬಿಡುವುದಿಲ್ಲ! ಯೆಹೋವನೇ ಇದನ್ನು ನುಡಿದಿದ್ದಾನೆ.
2 ಅರಸುಗಳು 20 : 18 (ERVKN)
ಬಾಬಿಲೋನಿನವರು ನಿನ್ನ ಮಕ್ಕಳನ್ನೂ ತೆಗೆದುಕೊಂಡು ಹೋಗುವರು. ನಿನ್ನ ಮಕ್ಕಳು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗುತ್ತಾರೆ” ಎಂದು ಹೇಳಿದನು.
2 ಅರಸುಗಳು 20 : 19 (ERVKN)
ಹಿಜ್ಕೀಯನು ತನ್ನ ಜೀವಮಾನದಲ್ಲಿ ಹೇಗೂ ಶಾಂತಿಯಿರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ಯೆಹೋವನ ಈ ಸಂದೇಶವು ಒಳ್ಳೆಯದಾಗಿದೆ” ಎಂದು ಹೇಳಿದನು.
2 ಅರಸುಗಳು 20 : 20 (ERVKN)
“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.
2 ಅರಸುಗಳು 20 : 21 (ERVKN)
ಹಿಜ್ಕೀಯನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಲಾಯಿತು. ಹಿಜ್ಕೀಯನ ನಂತರ ಅವನ ಮಗನಾದ ಮನಸ್ಸೆಯು ಹೊಸ ರಾಜನಾದನು.

1 2 3 4 5 6 7 8 9 10 11 12 13 14 15 16 17 18 19 20 21