2 ಅರಸುಗಳು 24 : 1 (ERVKN)
ರಾಜನಾದ ನೆಬೂಕದ್ನೆಚ್ಚರನು ಯೆಹೂದಕ್ಕೆ ಬರುವನು ಯೆಹೋಯಾಕೀಮನ ಕಾಲದಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶಕ್ಕೆ ಬಂದನು. ಯೆಹೋಯಾಕೀಮನು ಮೂರು ವರ್ಷಗಳವರೆಗೆ ನೆಬೂಕದ್ನೆಚ್ಚರನ ಸೇವೆಮಾಡಿದನು. ನಂತರ ಯೆಹೋಯಾಕೀಮನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದು ಅವನ ಆಳ್ವಿಕೆಯಿಂದ ದೂರವಾದನು.
2 ಅರಸುಗಳು 24 : 2 (ERVKN)
ಯೆಹೋವನು ಬಾಬಿಲೋನಿನವರನ್ನು, ಅರಾಮ್ಯರನ್ನು, ಮೋವಾಬ್ಯರನ್ನು ಮತ್ತು ಅಮ್ಮೋನಿಯರನ್ನು ಯೆಹೋಯಾಕೀಮನ ವಿರುದ್ಧ ಹೋರಾಡಲು ಕಳುಹಿಸಿದನು. ಯೆಹೋವನು ಯೆಹೂದವನ್ನು ನಾಶಗೊಳಿಸಲು ಈ ಗುಂಪುಗಳನ್ನು ಕಳುಹಿಸಿದನು. ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮೂಲಕ ತಿಳಿಸಿದ್ದಂತೆಯೇ ಇದು ಸಂಭವಿಸಿತು.
2 ಅರಸುಗಳು 24 : 3 (ERVKN)
ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದ ಕಾರಣ ಆತನ ಆಜ್ಞೆಯ ಪ್ರಕಾರ ಈ ಶಿಕ್ಷೆಯು ಅವರಿಗಾಯಿತು.
2 ಅರಸುಗಳು 24 : 4 (ERVKN)
ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.
2 ಅರಸುಗಳು 24 : 5 (ERVKN)
“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋಯಾಕೀಮನು ಮಾಡಿದ ಇತರ ಕಾರ್ಯಗಳನ್ನು ಬರೆಯಲಾಗಿದೆ.
2 ಅರಸುಗಳು 24 : 6 (ERVKN)
ಯೆಹೋಯಾಕೀಮನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಜೊತೆಯಲ್ಲಿ ಸಮಾಧಿಮಾಡಿದರು. ಯೆಹೋಯಾಕೀಮನ ಮಗನಾದ ಯೆಹೋಯಾಖೀನನು ಅವನ ನಂತರ ಹೊಸ ರಾಜನಾದನು.
2 ಅರಸುಗಳು 24 : 7 (ERVKN)
ಈಜಿಪ್ಟಿನ ರಾಜನು ಈಜಿಪ್ಟನ್ನು ಬಿಟ್ಟು ಹೊರಗೆ ಹೋಗಲಿಲ್ಲ. ಏಕೆಂದರೆ ಬಾಬಿಲೋನ್ ರಾಜನು, ಈಜಿಪ್ಟಿನ ಹಳ್ಳದಿಂದ ಯೂಫ್ರೇಟೀಸ್ ನದಿಯವರೆಗಿನ ದೇಶವನ್ನೆಲ್ಲಾ ಆಕ್ರಮಿಸಿಕೊಂಡಿದ್ದನು.
2 ಅರಸುಗಳು 24 : 8 (ERVKN)
ನೆಬೂಕದ್ನೆಚ್ಚರನು ಜೆರುಸಲೇಮನ್ನು ಆಕ್ರಮಿಸಿಕೊಂಡನು ಯೆಹೋಯಾಖೀನನು ಆಳಲಾರಂಭಿಸಿದಾಗ ಅವನಿಗೆ ಹದಿನೆಂಟು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳ ಕಾಲ ಆಳಿದನು. ಅವನ ತಾಯಿಯು ಜೆರುಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬ ಹೆಸರಿನವಳು.
2 ಅರಸುಗಳು 24 : 9 (ERVKN)
ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೋಯಾಖೀನನು ಮಾಡಿದನು. ಅವನು ತನ್ನ ತಂದೆಯು ಮಾಡಿದಂತಹ ಕಾರ್ಯಗಳನ್ನೆಲ್ಲ ಮಾಡಿದನು.
2 ಅರಸುಗಳು 24 : 10 (ERVKN)
ಆ ಸಮಯದಲ್ಲಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನ ಅಧಿಕಾರಿಗಳು ಜೆರುಸಲೇಮಿಗೆ ಮುತ್ತಿಗೆ ಹಾಕಿದರು.
2 ಅರಸುಗಳು 24 : 11 (ERVKN)
ಆಗ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಆ ನಗರಕ್ಕೆ ಬಂದನು.
2 ಅರಸುಗಳು 24 : 12 (ERVKN)
ಯೆಹೂದದ ರಾಜನಾದ ಯೆಹೋಯಾಖೀನನು ಬಾಬಿಲೋನ್ ರಾಜನನ್ನು ಭೇಟಿಮಾಡಲು ಹೋದನು. ಯೆಹೋಯಾಖೀನನ ತಾಯಿ, ಅವನ ಅಧಿಕಾರಿಗಳು, ನಾಯಕರು ಮತ್ತು ಸಿಬ್ಬಂದಿಯೆಲ್ಲವೂ ಅವನೊಂದಿಗೆ ಹೋದರು. ಆಗ ಬಾಬಿಲೋನ್ ರಾಜ ಯೆಹೋಯಾಖೀನನನ್ನು ಸೆರೆಹಿಡಿದನು. ಇದು ಸಂಭವಿಸಿದ್ದು ನೆಬೂಕದ್ನೆಚ್ಚರನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ.
2 ಅರಸುಗಳು 24 : 13 (ERVKN)
ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಲ್ಲಿದ್ದ ಭಂಡಾರವನ್ನೆಲ್ಲಾ ಮತ್ತು ರಾಜನ ಅರಮನೆಯಲ್ಲಿದ್ದ ಭಂಡಾರವನ್ನೆಲ್ಲಾ ತೆಗೆದುಕೊಂಡು ಹೋದನು. ಇಸ್ರೇಲರ ರಾಜನಾದ ಸೊಲೊಮೋನನು ದೇವಾಲಯದಲ್ಲಿಟ್ಟಿದ್ದ ಬಂಗಾರವನ್ನೆಲ್ಲಾ ನೆಬೂಕದ್ನೆಚ್ಚರನು ತೆಗೆದುಕೊಂಡನು. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು.
2 ಅರಸುಗಳು 24 : 14 (ERVKN)
ನೆಬೂಕದ್ನೆಚ್ಚರನು ಜೆರುಸಲೇಮಿನ ಜನರನ್ನೆಲ್ಲಾ ಸೆರೆಹಿಡಿದನು. ಅವನು ಎಲ್ಲಾ ನಾಯಕರನ್ನು ಮತ್ತು ಹಣವಂತರನ್ನು ಸೆರೆಹಿಡಿದನು. ಅವನು ಹತ್ತು ಸಾವಿರ ಜನರನ್ನು ಸೆರೆಯಾಳುಗಳನ್ನಾಗಿ ಒಯ್ದನು. ನೆಬೂಕದ್ನೆಚ್ಚರನು ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಸಾಮಾನ್ಯ ಜನರನ್ನೂ ಕಡುಬಡವರನ್ನೂ ಬಿಟ್ಟು ಉಳಿದ ಯಾರನ್ನೂ ಬಿಡಲಿಲ್ಲ.
2 ಅರಸುಗಳು 24 : 15 (ERVKN)
ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಸೆರೆಯಾಳಾಗಿ ಬಾಬಿಲೋನಿಗೆ ಕರೆದೊಯ್ದನು. ನೆಬೂಕದ್ನೆಚ್ಚರನು ರಾಜನ ತಾಯಿಯನ್ನು, ಅವನ ಪತ್ನಿಯರನ್ನು, ಅಧಿಕಾರಿಗಳನ್ನು ಮತ್ತು ದೇಶದ ಪ್ರತಿಷ್ಠಿತರನ್ನು ಕರೆದೊಯ್ದನು. ನೆಬೂಕದ್ನೆಚ್ಚರನು ಅವರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳನ್ನಾಗಿ ಒಯ್ದನು.
2 ಅರಸುಗಳು 24 : 16 (ERVKN)
ಬಾಬಿಲೋನ್ ರಾಜನು ಏಳು ಸಾವಿರ ಮಂದಿ ಸೈನಿಕರನ್ನು ಮತ್ತು ಒಂದು ಸಾವಿರ ಮಂದಿ ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಈ ಜನರೆಲ್ಲರೂ ಸೈನಿಕರಾಗಿದ್ದು, ಯುದ್ಧಗಳಲ್ಲಿ ಹೋರಾಡಲು ಸಮರ್ಥರಾಗಿದ್ದರು. ಬಾಬಿಲೋನ್ ರಾಜನು ಅವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದನು.
2 ಅರಸುಗಳು 24 : 17 (ERVKN)
ರಾಜನಾದ ಚಿದ್ಕೀಯನು ಬಾಬಿಲೋನ್ ರಾಜನು ಮತ್ತನ್ಯನನ್ನು ಹೊಸ ರಾಜನನ್ನಾಗಿ ನೇಮಿಸಿದನು. ಅವನು ಯೆಹೋಯಾಖೀನನ ಸ್ಥಳವನ್ನು ಪಡೆದನು. ಮತ್ತನ್ಯನು ಯೆಹೋಯಾಖೀನನ ಚಿಕ್ಕಪ್ಪ. ಬಾಬಿಲೋನ್ ರಾಜನು ಮತ್ತನ್ಯನ ಹೆಸರನ್ನು ಚಿದ್ಕೀಯ ಎಂದು ಬದಲಾಯಿಸಿದನು.
2 ಅರಸುಗಳು 24 : 18 (ERVKN)
ಚಿದ್ಕೀಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯು ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.
2 ಅರಸುಗಳು 24 : 19 (ERVKN)
ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಚಿದ್ಕೀಯನು ಮಾಡಿದನು. ಚಿದ್ಕೀಯನು ಯೆಹೋಯಾಖೀನನು ಮಾಡಿದಂಥ ಕಾರ್ಯಗಳನ್ನು ಮಾಡಿದನು.
2 ಅರಸುಗಳು 24 : 20 (ERVKN)
ಯೆಹೋವನ ಕೋಪದಿಂದ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಇವೆಲ್ಲವೂ ಸಂಭವಿಸಿದವು. ಹೀಗೆ ಯೆಹೋವನು ಅವರನ್ನು ತನ್ನಿಂದ ದೂರಸರಿಸಿದನು. ಚಿದ್ಕೀಯನು ಬಾಬಿಲೋನ್ ರಾಜನಿಗೆ ವಿರುದ್ಧವಾಗಿ ದಂಗೆ ಎದ್ದನು.

1 2 3 4 5 6 7 8 9 10 11 12 13 14 15 16 17 18 19 20