2 ಸಮುವೇಲನು 2 : 1 (ERVKN)
ಹೆಬ್ರೋನಿಗೆ ದಾವೀದನ ಆಗಮನ ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.
2 ಸಮುವೇಲನು 2 : 2 (ERVKN)
ಆದ್ದರಿಂದ ದಾವೀದನು ಅಲ್ಲಿಗೆ ಹೋದನು. ಅವನ ಇಬ್ಬರು ಹೆಂಡತಿಯರೂ ಅವನ ಜೊತೆಯಲ್ಲಿ ಹೋದರು. ಅವರು ಯಾರೆಂದರೆ: ಇಜ್ರೇಲಿನ ಅಹೀನೋವಮಳು ಮತ್ತು ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳು.
2 ಸಮುವೇಲನು 2 : 3 (ERVKN)
ದಾವೀದನು ತನ್ನ ಜನರನ್ನು ಮತ್ತು ಅವರ ಕುಟುಂಬಗಳನ್ನು ಸಹ ಕರೆತಂದನು. ಅವರೆಲ್ಲರೂ ಹೆಬ್ರೋನ್ ಮತ್ತು ಅದರ ಸಮೀಪದ ನಗರಗಳಲ್ಲಿ ನೆಲೆಸಿದರು.
2 ಸಮುವೇಲನು 2 : 4 (ERVKN)
ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.
2 ಸಮುವೇಲನು 2 : 5 (ERVKN)
ಯಾಬೇಷ್ ಗಿಲ್ಯಾದಿನ ಜನರಿಗೆ ದಾವೀದನು ಸಂದೇಶಕರನ್ನು ಕಳುಹಿಸಿ, “ಸೌಲನ ದೇಹದ ಬೂದಿಯನ್ನು *ಬೂದಿಯನ್ನು ಸೌಲ ಮತ್ತು ಯೋನಾತಾನರ ದೇಹಗಳನ್ನು ಸುಡಲಾಗಿತ್ತು. ನೋಡಿ. 1 ಸಮು. 31:12. ಸಮಾಧಿಮಾಡುವುದರ ಮೂಲಕ ನೀವು ನಿಮ್ಮ ಒಡೆಯನಾದ ಸೌಲನಿಗೆ ಕರುಣೆ ತೋರಿದ್ದೀರಿ. ಅದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.
2 ಸಮುವೇಲನು 2 : 6 (ERVKN)
ಆತನು ನಿಮಗೆ ಕೃಪಾಳುವೂ ನಂಬಿಗಸ್ತನೂ ಆಗಿರಲಿ. ನೀವು ಸೌಲನ ಬೂದಿಯನ್ನು ಸಮಾಧಿಮಾಡಿದ್ದರಿಂದ ನಾನೂ ನಿಮಗೆ ಕರುಣೆ ತೋರಿಸುವೆನು.
2 ಸಮುವೇಲನು 2 : 7 (ERVKN)
ನಿಮ್ಮ ಒಡೆಯನಾದ ಸೌಲನು ಮರಣ ಹೊಂದಿರುವುದರಿಂದ, ಯೆಹೂದ ಕುಲದವರು ನನ್ನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆ. ಆದ್ದರಿಂದ ನೀವು ಬಲಿಷ್ಠರಾಗಿರಿ ಮತ್ತು ಧೈರ್ಯದಿಂದಿರಿ” ಎಂದು ಹೇಳಿಸಿದನು.
2 ಸಮುವೇಲನು 2 : 8 (ERVKN)
ಈಷ್ಬೋಶೆತನು ರಾಜನಾದನು ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.
2 ಸಮುವೇಲನು 2 : 9 (ERVKN)
ಆ ಸ್ಥಳದಲ್ಲಿ ಅಬ್ನೇರನು ಈಷ್ಬೋಶೆತನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್ ಮತ್ತು ಬೆನ್ಯಾಮೀನ್ ಜನರ ಮೇಲೆಯೂ ಮತ್ತು ಇಸ್ರೇಲಿಗೆಲ್ಲ ರಾಜನನ್ನಾಗಿ ಮಾಡಿದನು.
2 ಸಮುವೇಲನು 2 : 10 (ERVKN)
ಈಷ್ಬೋಶೆತನು ಸೌಲನ ಮಗ. ಈಷ್ಬೋಶೆತನು ಇಸ್ರೇಲನ್ನು ಆಳಲು ಆರಂಭಿಸಿದಾಗ ನಲವತ್ತು ವರ್ಷ ವಯಸ್ಸಿನವನಾಗಿದ್ದನು. ಅವನು ಎರಡು ವರ್ಷ ಆಳಿದನು. ಆದರೆ ಯೆಹೂದ ಕುಲದವರು ದಾವೀದನನ್ನು ಹಿಂಬಾಲಿಸಿದರು.
2 ಸಮುವೇಲನು 2 : 11 (ERVKN)
ದಾವೀದನು ಯೆಹೂದ ಕುಲದವರಿಗೆ ಹೆಬ್ರೋನಿನಲ್ಲಿ ಏಳು ವರ್ಷ ಆರು ತಿಂಗಳುಗಳ ಕಾಲ ರಾಜನಾಗಿದ್ದನು.
2 ಸಮುವೇಲನು 2 : 12 (ERVKN)
ಈಷ್ಬೋಶೆತನ ಜನರು ಮತ್ತು ದಾವೀದನ ಜನರು ಪರಸ್ಪರ ಹೋರಾಡಿದರು ನೇರನ ಮಗನಾದ ಅಬ್ನೇರನೂ ಮತ್ತು ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಯನ್ನು ಬಿಟ್ಟು ಗಿಬ್ಯೋನಿಗೆ ಹೋದರು.
2 ಸಮುವೇಲನು 2 : 13 (ERVKN)
ಚೆರೂಯಳ ಮಗನಾದ ಯೋವಾಬನು ಮತ್ತು ದಾವೀದನ ಸೈನಿಕರು ಸಹ ಗಿಬ್ಯೋನಿಗೆ ಹೋದರು. ಅವರು ಅಬ್ನೇರನನ್ನು ಮತ್ತು ಈಷ್ಬೋಶೆತನ ಸೇವಕರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಅಬ್ನೇರನ ಗುಂಪಿನವರು ಕೆರೆಯ ಒಂದು ಕಡೆ ಕುಳಿತರು. ಯೋವಾಬನ ಗುಂಪಿನವರು ಕೆರೆಯ ಮತ್ತೊಂದು ಕಡೆ ಕುಳಿತರು.
2 ಸಮುವೇಲನು 2 : 14 (ERVKN)
ಅಬ್ನೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು, ಇಲ್ಲಿ ಹೋರಾಡಲಿ” ಎಂದು ಹೇಳಿದನು. ಯೋವಾಬನು “ಆಗಲಿ, ಅವರು ಹೋರಾಡಲಿ” ಎಂದನು.
2 ಸಮುವೇಲನು 2 : 15 (ERVKN)
ನಂತರ ಯುವಜನರು ಮೇಲೆದ್ದರು. ಎರಡು ಗುಂಪಿನವರೂ ಹೋರಾಡುವುದಕ್ಕಾಗಿ ತಮ್ಮತಮ್ಮ ಜನರನ್ನು ಲೆಕ್ಕ ಹಾಕಿದರು. ಸೌಲನ ಮಗನಾದ ಈಷ್ಬೋಶೆತನಿಗಾಗಿ ಬೆನ್ಯಾಮೀನ್ ಕುಲದ ಹನ್ನೆರಡು ಜನರನ್ನು ಆರಿಸಲಾಯಿತು. ದಾವೀದನ ಸೇವಕರಲ್ಲಿ ಹನ್ನೆರಡು ಜನರನ್ನು ಆರಿಸಲಾಯಿತು.
2 ಸಮುವೇಲನು 2 : 16 (ERVKN)
ಪ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕೆಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಆ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಈ ಸ್ಥಳವು ಗಿಬ್ಯೋನಿನಲ್ಲಿದೆ.
2 ಸಮುವೇಲನು 2 : 17 (ERVKN)
ಆ ದಿನ ಘೋರವಾದ ಯುದ್ಧ ಸಂಭವಿಸಿತು. ದಾವೀದನ ಸೇವಕರು ಅಬ್ನೇರನನ್ನು ಮತ್ತು ಇಸ್ರೇಲರನ್ನು ಸೋಲಿಸಿದರು.
2 ಸಮುವೇಲನು 2 : 18 (ERVKN)
ಅಸಾಹೇಲನನ್ನು ಅಬ್ನೇರನು ಕೊಲ್ಲುವನು ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು.
2 ಸಮುವೇಲನು 2 : 19 (ERVKN)
ಅಸಾಹೇಲನು ಯಾವ ಕಡೆಗೂ ತಿರುಗದೆ ನೇರವಾಗಿ ಅಬ್ನೇರನ ಕಡೆಗೆ ಹೋದನು.
2 ಸಮುವೇಲನು 2 : 20 (ERVKN)
ಅಬ್ನೇರನು ಹಿಂದಕ್ಕೆ ತಿರುಗಿ, “ನೀನು ಅಸಾಹೇಲನಲ್ಲವೇ?” ಎಂದು ಕೇಳಿದನು. “ಹೌದು” ಎಂದು ಅಸಾಹೇಲನು ಹೇಳಿದನು.
2 ಸಮುವೇಲನು 2 : 21 (ERVKN)
ಆಗ ಅಬ್ನೇರನು ಅವನಿಗೆ, “ನೀನು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಒಬ್ಬ ಯುವಕನನ್ನು ಹಿಡಿದುಕೊಂಡು ಅವನ ಬಳಿಯಿರುವ ಆಯುಧವನ್ನು ನಿನಗಾಗಿ ತೆಗೆದುಕೊ” ಎಂದು ಹೇಳಿದನು. ಆದರೆ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲಿಲ್ಲ.
2 ಸಮುವೇಲನು 2 : 22 (ERVKN)
ಅಬ್ನೇರನು ಮತ್ತೆ ಅಸಾಹೇಲನಿಗೆ, “ನನ್ನನ್ನು ಅಟ್ಟಿಸಿಕೊಂಡು ಬರಬೇಡ; ಇಲ್ಲವಾದರೆ ನಾನು ನಿನ್ನನ್ನು ಕೊಲ್ಲುತ್ತೇನೆ. ನಾನು ನಿನ್ನನ್ನು ಕೊಂದುಬಿಟ್ಟರೆ, ನಿನ್ನ ಸೋದರನಾದ ಯೋವಾಬನ ಮುಖವನ್ನು ನಾನು ಮತ್ತೆ ನೋಡಲಾಗುವುದಿಲ್ಲ” ಎಂದು ಹೇಳಿದನು.
2 ಸಮುವೇಲನು 2 : 23 (ERVKN)
ಆದರೂ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದನು. ಆದ್ದರಿಂದ ಅಬ್ನೇರನು ತನ್ನ ಬರ್ಜಿಯ ಹಿಡಿಕೆಯನ್ನು ಹಿಡಿದುಕೊಂಡು ಅದನ್ನು ಅಸಾಹೇಲನ ಹೊಟ್ಟೆಗೆ ತಿವಿದನು. ಆ ಬರ್ಜಿಯು ಅಸಾಹೇಲನ ಹೊಟ್ಟೆಯೊಳಗೆ ಆಳವಾಗಿ ಚುಚ್ಚಿಕೊಂಡು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅಸಾಹೇಲನು ಕೂಡಲೇ ಅಲ್ಲೇ ಸತ್ತುಬಿದ್ದನು. ಅಸಾಹೇಲನ ದೇಹವು ನೆಲದ ಮೇಲೆ ಬಿದ್ದಿತ್ತು. ಜನರು ಅವನ ಬಳಿಗೆ ಹೋಗಿ ಅಲ್ಲಿಯೇ ನಿಂತರು.
2 ಸಮುವೇಲನು 2 : 24 (ERVKN)
ಅಬ್ನೇರನನ್ನು ಯೋವಾಬ್ ಮತ್ತು ಅಬೀಷೈ ಅಟ್ಟಿಸಿಕೊಂಡು ಹೋಗುವರು ಆದರೆ ಯೋವಾಬ್ ಮತ್ತು ಅಬೀಷೈ ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದರು. ಅವರು “ಅಮ್ಮಾ” ಬೆಟ್ಟಕ್ಕೆ ಬರುವಷ್ಟರಲ್ಲಿ ಸೂರ್ಯನು ಮುಳುಗಿದನು. (ಗಿಬ್ಯೋನಿನ ಮರಳುಗಾಡಿನ ಮಾರ್ಗದಲ್ಲಿರುವ ಗೀಯದ ಎದುರಿಗಿರುವುದೇ “ಅಮ್ಮಾ” ಬೆಟ್ಟ.)
2 ಸಮುವೇಲನು 2 : 25 (ERVKN)
ಬೆನ್ಯಾಮೀನ್ ಕುಲದವರೆಲ್ಲರು ಅಬ್ನೇರನ ಹತ್ತಿರಕ್ಕೆ ಬಂದರು. ಅವರೆಲ್ಲ ಬೆಟ್ಟದ ಮೇಲೆ ಒಟ್ಟಾಗಿ ನಿಂತರು.
2 ಸಮುವೇಲನು 2 : 26 (ERVKN)
ಅಬ್ನೇರನು ಯೋವಾಬನಿಗೆ, “ನಾವು ಎಂದೆಂದಿಗೂ ಯುದ್ಧ ಮಾಡಿ ಒಬ್ಬರನ್ನೊಬ್ಬರು ಕೊಲ್ಲಬೇಕೇ? ಇದು ಹಗೆತನದಲ್ಲಿ ಅಂತ್ಯಗೊಳ್ಳುತ್ತದೆಂಬುದು ನಿಜವಾಗಿಯೂ ನಿನಗೆ ತಿಳಿದಿದೆ. ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲು ನಿನ್ನ ಜನರಿಗೆ ಹೇಳು” ಎಂದು ಕೂಗಿ ಹೇಳಿದನು.
2 ಸಮುವೇಲನು 2 : 27 (ERVKN)
ಆಗ ಯೋವಾಬನು, “ನೀನು ಒಳ್ಳೆಯ ಮಾತನ್ನೇ ಆಡಿರುವೆ. ನೀನು ಹೀಗೆ ಹೇಳದೆ ಇದ್ದಿದ್ದರೆ, ಯೆಹೋವನಾಣೆಗೂ ಜನರು ನಾಳೆ ಮುಂಜಾನೆವರೆಗೂ ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುತ್ತಿದ್ದರು” ಎಂದು ಹೇಳಿದನು.
2 ಸಮುವೇಲನು 2 : 28 (ERVKN)
ಆಗ ಯೋವಾಬನು ತುತ್ತೂರಿಯನ್ನು ಊದಿದನು. ಅವನ ಜನರು ಇಸ್ರೇಲರನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದರು. ಅವರು ಇಸ್ರೇಲರ ವಿರುದ್ಧ ಹೋರಾಡಲು ಪ್ರಯತ್ನಿಸಲೇ ಇಲ್ಲ.
2 ಸಮುವೇಲನು 2 : 29 (ERVKN)
ಅಬ್ನೇರನು ತನ್ನ ಜನರೊಂದಿಗೆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ಪ್ರಯಾಣಮಾಡಿ, ಜೋರ್ಡನ್ ನದಿಯನ್ನು ದಾಟಿ ಮಹನಯಿಮಿಗೆ ಬಂದನು.
2 ಸಮುವೇಲನು 2 : 30 (ERVKN)
ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದ ನಂತರ ಯೋವಾಬನು ಹಿಂತಿರುಗಿ ಬಂದನು. ಯೋವಾಬನು ತನ್ನ ಜನರನ್ನೆಲ್ಲ ಒಟ್ಟಾಗಿ ಸೇರಿಸಿದಾಗ, ದಾವೀದನ ಭಟರಲ್ಲಿ ಹತ್ತೊಂಭತ್ತು ಮಂದಿ ಕಾಣಲಿಲ್ಲ. ಅಸಾಹೇಲನು ಸಹ ಕಾಣಲಿಲ್ಲ.
2 ಸಮುವೇಲನು 2 : 31 (ERVKN)
ಆದರೆ ಅಬ್ನೇರನ ಹಿಂಬಾಲಕರೂ ಬೆನ್ಯಾಮೀನ್ ಕುಟುಂಬದ ಗುಂಪಿನವರೂ ಆದ ಮುನ್ನೂರೈವತ್ತು ಜನರನ್ನು ದಾವೀದನ ಭಟರು ಕೊಂದಿದ್ದರು.
2 ಸಮುವೇಲನು 2 : 32 (ERVKN)
ದಾವೀದನ ಭಟರು ಅಸಾಹೇಲನ ಶವವನ್ನು ಬೆತ್ಲೆಹೇಮಿಗೆ ತಂದು, ಅವನ ತಂದೆಯ ಶ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಯೋವಾಬನು ತನ್ನ ಜನರೊಂದಿಗೆ ರಾತ್ರಿಯೆಲ್ಲ ಪ್ರಯಾಣಮಾಡಿ ಹೆಬ್ರೋನನ್ನು ತಲುಪಿದಾಗ ಸೂರ್ಯೋದಯವಾಯಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32