2 ಸಮುವೇಲನು 22 : 1 (ERVKN)
ದಾವೀದನು ಯೆಹೋವನಿಗಾಗಿ ರಚಿಸಿದ ಸ್ತುತಿಗೀತೆ ಯೆಹೋವನು ದಾವೀದನನ್ನು ಸೌಲನಿಂದ ಮತ್ತು ಅವನ ಇತರ ಎಲ್ಲಾ ಶತ್ರುಗಳಿಂದ ರಕ್ಷಿಸಿದನು. ಆ ಸಮಯದಲ್ಲಿ ದಾವೀದನು ಈ ಹಾಡನ್ನು ರಚಿಸಿ ಹಾಡಿದನು:
2 ಸಮುವೇಲನು 22 : 2 (ERVKN)
ಯೆಹೋವನು ನನ್ನ ಬಂಡೆ; ನನ್ನ ಕೋಟೆ; ನನ್ನ ವಿಮೋಚಕ.
2 ಸಮುವೇಲನು 22 : 3 (ERVKN)
ನಾನು ಸಹಾಯಕ್ಕಾಗಿ ದೇವರ ಬಳಿಗೆ ಓಡಿಹೋಗುತ್ತೇನೆ.
ಆತನೇ ನನ್ನ ಆಶ್ರಯಗಿರಿ. ಯೆಹೋವನು ನನ್ನ ಗುರಾಣಿ. ಆತನ ಶಕ್ತಿಯು ನನ್ನನ್ನು ರಕ್ಷಿಸುತ್ತದೆ. ಆತನು ನಾನು ಅಡಗಿಕೊಳ್ಳುವ ಸ್ಥಳ; ಬೆಟ್ಟಗಳ ಮೇಲಿರುವ ನನ್ನ ಸುರಕ್ಷಿತ ಸ್ಥಳ;
ಆತನು ನನ್ನನ್ನು ಕ್ರೂರ ಶತ್ರುಗಳಿಂದ ರಕ್ಷಿಸುವನು!
2 ಸಮುವೇಲನು 22 : 4 (ERVKN)
ಯೆಹೋವನು ಸ್ತೋತ್ರಕ್ಕೆ ಅರ್ಹನಾಗಿದ್ದಾನೆ. ನಾನು ಸಹಾಯಕ್ಕಾಗಿ ಆತನನ್ನು ಕರೆಯುವೆನು. ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುವನು.
2 ಸಮುವೇಲನು 22 : 5 (ERVKN)
ಸಾವಿನ ಅಲೆಗಳು ನನ್ನನ್ನು ಸುತ್ತುವರೆದಿವೆ; ತೊಂದರೆಗಳು ಪ್ರವಾಹದಂತೆ ನುಗ್ಗಿಬಂದಿವೆ. ಅವೆಲ್ಲ ನನ್ನಲ್ಲಿ ಭೀತಿಯನ್ನು ಉಂಟುಮಾಡಿವೆ.
2 ಸಮುವೇಲನು 22 : 6 (ERVKN)
ಪಾತಾಳದ ಪಾಶಗಳು ನನ್ನನ್ನು ಸುತ್ತುವರೆದಿವೆ; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿವೆ.
2 ಸಮುವೇಲನು 22 : 7 (ERVKN)
ನಾನು ಅವುಗಳಲ್ಲಿ ಸಿಲುಕಿಕೊಂಡಿದ್ದಾಗ ಯೆಹೋವನಿಗೆ ಪ್ರಾರ್ಥಿಸಿದೆನು. ಹೌದು, ನನ್ನ ದೇವರಿಗೆ ನಾನು ಮೊರೆಯಿಟ್ಟೆನು;
ತನ್ನ ಆಲಯದಲ್ಲಿದ್ದ ಆತನಿಗೆ ನನ್ನ ಸ್ವರ ಕೇಳಿಸಿತು; ಸಹಾಯಕ್ಕಾಗಿ ನಾನಿಟ್ಟ ಮೊರೆಗೆ ಆತನು ಕಿವಿಗೊಟ್ಟನು.
2 ಸಮುವೇಲನು 22 : 8 (ERVKN)
ಆಗ ಭೂಮಿಯು ಗಡಗಡನೆ ನಡುಗಿತು. ಆಕಾಶದ ಅಡಿಪಾಯಗಳು ಅಲುಗಾಡಿದವು. ಏಕೆಂದರೆ ಯೆಹೋವನಿಗೆ ಸಿಟ್ಟೇರಿತ್ತು!
2 ಸಮುವೇಲನು 22 : 9 (ERVKN)
ಆತನ ಮೂಗಿನ ಹೊಳ್ಳೆಗಳಿಂದ ಹೊಗೆಯು ಹೊರಬಂದಿತು. ಬೆಂಕಿಕಿಡಿಯ ಜ್ವಾಲೆಗಳು ಆತನ ಬಾಯಿಂದ ಹೊರಬಂದವು; ದಹಿಸುವ ಬೆಂಕಿಯು ಆತನ ಬಾಯೊಳಗಿಂದ ಬಂದಿತು.
2 ಸಮುವೇಲನು 22 : 10 (ERVKN)
ಆತನು ಆಕಾಶವನ್ನು ಇಬ್ಭಾಗಮಾಡಿ ಕೆಳಗಿಳಿದು ಬಂದನು! ಆತನ ಕಾಲುಗಳ ಕೆಳಗೆ ಕತ್ತಲೆ ಕವಿದಿತ್ತು.
2 ಸಮುವೇಲನು 22 : 11 (ERVKN)
ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.
2 ಸಮುವೇಲನು 22 : 12 (ERVKN)
ಆತನು ಕಾರ್ಮೋಡಗಳನ್ನೇ ತನ್ನ ಸುತ್ತಲೂ ಗುಡಾರದಂತಾಗಿಸಿಕೊಂಡನು. ಆತನು ಆಕಾಶದ ನೀರನ್ನು, ಗುಡುಗುವ ದೊಡ್ಡ ಮೋಡಗಳನ್ನು ತನ್ನ ಸುತ್ತಲೂ ಕವಿಸಿಕೊಂಡನು.
2 ಸಮುವೇಲನು 22 : 13 (ERVKN)
ಉರಿಯುವ ಕಲ್ಲಿದ್ದಲಿನಂತಿದ್ದ ಕಿಡಿಗಳು ಆತನ ಸುತ್ತಲೂ ಇದ್ದ ಬೆಳಕಿನಿಂದ ಬಂದವು.
2 ಸಮುವೇಲನು 22 : 14 (ERVKN)
ಯೆಹೋವನು ಆಕಾಶದಿಂದ ಗುಡುಗಿದನು! ಸರ್ವೋನ್ನತನಾದ ದೇವರು ತನ್ನ ಸ್ವರ ಕೇಳುವಂತೆ ಮಾಡಿದನು.
2 ಸಮುವೇಲನು 22 : 15 (ERVKN)
ಆತನಿಂದ ಹೊರಟ ಬಾಣಗಳು ಶತ್ರುಗಳನ್ನು ಚೆಲ್ಲಾಪಿಲ್ಲಿಯಾಗಿ ಮಾಡಿದವು. ಆತನು ಸಿಡಿಲನ್ನು ಉಂಟುಮಾಡಿದನು, ಜನರು ಭೀತಿಯಿಂದ ಓಡಿಹೋದರು.
2 ಸಮುವೇಲನು 22 : 16 (ERVKN)
ಯೆಹೋವನೇ, ನೀನು ಗದರಿಸಿದಾಗ ನಿನ್ನ ಬಾಯಿಂದ ಪ್ರಬಲವಾದ ಗಾಳಿಯು ಬೀಸಿತು;
ನೀರು ಹಿಂದಕ್ಕೆ ತಳ್ಳಲ್ಪಟ್ಟಿತು. ಸಮುದ್ರದ ತಳವೂ ಭೂಮಿಯ ಅಸ್ತಿವಾರಗಳು ಕಣ್ಣಿಗೆ ಗೋಚರವಾದವು.
2 ಸಮುವೇಲನು 22 : 17 (ERVKN)
ಆತನು ಮೇಲಿನ ಲೋಕದಿಂದ ಕೆಳಗಿಳಿದನು. ಆತನು ನನ್ನನ್ನು ಹಿಡಿದುಕೊಂಡು ನನ್ನನ್ನು ನೀರಿನಡಿಯಿಂದ ಮೇಲಕ್ಕೆತ್ತಿದನು.
2 ಸಮುವೇಲನು 22 : 18 (ERVKN)
ನನ್ನನ್ನು ದ್ವೇಷಿಸುತ್ತಿದ್ದ ಶತ್ರುಗಳಿಂದ ಆತನೇ ರಕ್ಷಿಸಿದನು. ನನ್ನ ಶತ್ರುಗಳು ನನಗಿಂತಲೂ ಬಹಳ ಬಲಿಷ್ಠರೂ ಸೊಕ್ಕಿದವರೂ ಆಗಿದ್ದರು. ಅವರ ಕೈಯಿಂದ ಆತನೇ ನನ್ನನ್ನು ರಕ್ಷಿಸಿದನು.
2 ಸಮುವೇಲನು 22 : 19 (ERVKN)
ಶತ್ರುಗಳು ನನಗೆ ಮುತ್ತಿಗೆ ಹಾಕಿದಾಗ ನಾನು ತೊಂದರೆಯಲ್ಲಿದ್ದೆನು. ಆದರೆ ನನಗೆ ಯೆಹೋವನು ಸಹಾಯ ಮಾಡಿದನು.
2 ಸಮುವೇಲನು 22 : 20 (ERVKN)
ಆತನು ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ತಂದನು. ಆತನು ನನ್ನನ್ನು ಪ್ರೀತಿಸಿ ರಕ್ಷಿಸಿದನು.
2 ಸಮುವೇಲನು 22 : 21 (ERVKN)
ನಾನು ನೀತಿಗನುಸಾರವಾಗಿ ನಡೆದುಕೊಂಡಿದ್ದರಿಂದ ಯೆಹೋವನು ನನಗೆ ಪ್ರತಿಫಲವನ್ನು ಕೊಟ್ಟನು. ನಾನು ನಿರ್ದೋಷಿಯಾಗಿದ್ದರಿಂದ ಆತನು ನನಗೆ ಒಳ್ಳೆಯದನ್ನೇ ಮಾಡಿದನು.
2 ಸಮುವೇಲನು 22 : 22 (ERVKN)
ನಾನು ಆತನ ಮಾರ್ಗಗಳನ್ನೇ ಅನುಸರಿಸಿದೆನು. ನನ್ನ ದೇವರ ವಿರುದ್ಧ ನಾನು ಪಾಪವನ್ನು ಮಾಡಲಿಲ್ಲ.
2 ಸಮುವೇಲನು 22 : 23 (ERVKN)
ನಾನು ಯೆಹೋವನ ಆಜ್ಞೆಗಳನ್ನು ಯಾವಾಗಲೂ ಜ್ಞಾಪಿಸಿಕೊಂಡೆನು. ನಾನು ಯಾವಾಗಲೂ ಆತನ ಕಟ್ಟಳೆಗನುಸಾರವಾಗಿಯೇ ನಡೆದುಕೊಂಡೆನು.
2 ಸಮುವೇಲನು 22 : 24 (ERVKN)
ನಾನು ದೋಷಿಯಲ್ಲವೆಂಬುದು ಆತನಿಗೆ ತಿಳಿದಿದೆ. ನಾನು ಪಾಪದಲ್ಲಿ ಬೀಳದಂತೆ ಎಚ್ಚರಿಕೆ ವಹಿಸಿದೆನು.
2 ಸಮುವೇಲನು 22 : 25 (ERVKN)
ನಾನು ಒಳ್ಳೆಯದನ್ನೇ ಮಾಡಿದೆನು. ಯೆಹೋವನ ದೃಷ್ಟಿಯಲ್ಲಿ ನಾನು ತಪ್ಪೇನೂ ಮಾಡಲಿಲ್ಲ, ಆದ್ದರಿಂದ ಆತನು ನನಗೆ ಪ್ರತಿಫಲ ಕೊಡುವನು!
2 ಸಮುವೇಲನು 22 : 26 (ERVKN)
ನಿನ್ನನ್ನು ಪ್ರೀತಿಸುವವರನ್ನು ನೀನು ಪ್ರೀತಿಸುತ್ತಿ. ನಿನ್ನ ಮುಂದೆ ದೋಷವಿಲ್ಲದವನಾಗಿ ನಡೆಯುವವನಿಗೆ ನಿರ್ದೋಷಿಯಾಗಿರುತ್ತಿ.
2 ಸಮುವೇಲನು 22 : 27 (ERVKN)
ನೀನು ಪರಿಶುದ್ಧರಿಗೆ ಪರಿಶುದ್ಧನಾಗಿರುವೆ; ಮೋಸಗಾರರಿಗೆ ಜಾಣನಾಗಿರುವೆ.
2 ಸಮುವೇಲನು 22 : 28 (ERVKN)
ನೀನು ದೀನರನ್ನು ಮೇಲಕ್ಕೆತ್ತುವೆ; ಗರ್ವಿಷ್ಠರನ್ನಾದರೋ ತುಳಿದುಬಿಡುವೆ.
2 ಸಮುವೇಲನು 22 : 29 (ERVKN)
ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕು ಕೊಟ್ಟು ನನ್ನ ಸುತ್ತಲಿನ ಅಂಧಕಾರವನ್ನು ಪ್ರಕಾಶಮಯವಾಗುವಂತೆ ಮಾಡುವನು.
2 ಸಮುವೇಲನು 22 : 30 (ERVKN)
ನಿನ್ನ ಸಹಾಯದಿಂದಲೇ, ನಾನು ವೈರಿಗಳ ಮೇಲೆ ಬೀಳುವೆನು. ನಿನ್ನ ಸಹಾಯದಿಂದಲೇ ನಾನು ಶತ್ರುಗಳ ಗೋಡೆಗಳನ್ನು ಹತ್ತಬಲ್ಲೆನು.
2 ಸಮುವೇಲನು 22 : 31 (ERVKN)
ದೇವರ ಶಕ್ತಿಯು ಪರಿಪೂರ್ಣವಾದದ್ದು. ಯೆಹೋವನ ಮಾತು ಪರೀಕ್ಷಿಸಲ್ಪಟ್ಟದ್ದು; ಆತನು ತನ್ನಲ್ಲಿ ಭರವಸೆಯಿಟ್ಟವರನ್ನು ಸಂರಕ್ಷಿಸುತ್ತಾನೆ.
2 ಸಮುವೇಲನು 22 : 32 (ERVKN)
ಯೆಹೋವನ ಹೊರತು ಬೇರೆ ದೇವರಿಲ್ಲ. ನಮ್ಮ ದೇವರ ಹೊರತು ಬೇರೆ ಬಂಡೆಯಿಲ್ಲ.
2 ಸಮುವೇಲನು 22 : 33 (ERVKN)
ದೇವರು ನನ್ನ ಬಲವೂ ಕೋಟೆಯೂ ಆಗಿದ್ದಾನೆ. ಆತನು ನನ್ನ ಮಾರ್ಗವನ್ನು ದೋಷವಿಲ್ಲದ್ದಾಗಿ ಮಾಡುತ್ತಾನೆ.
2 ಸಮುವೇಲನು 22 : 34 (ERVKN)
ನಾನು ಉನ್ನತ ಪ್ರದೇಶಗಳಲ್ಲಿ ನಿಲ್ಲುವಂತೆ ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳಂತೆ ಮಾಡುತ್ತಾನೆ.
2 ಸಮುವೇಲನು 22 : 35 (ERVKN)
ಆತನು ಯುದ್ಧಕ್ಕಾಗಿ ನನ್ನನ್ನು ತರಬೇತುಗೊಳಿಸುವನು. ಆದ್ದರಿಂದ ನನ್ನ ತೋಳುಗಳು ಹಿತ್ತಾಳೆಯ ಬಿಲ್ಲನ್ನೂ ಬಗ್ಗಿಸಬಲ್ಲವು.
2 ಸಮುವೇಲನು 22 : 36 (ERVKN)
ದೇವರೇ, ನೀನು ನನ್ನನ್ನು ಸಂರಕ್ಷಿಸಿ ಜಯಹೊಂದಲು ನನಗೆ ಸಹಾಯಮಾಡಿರುವೆ. ನನ್ನ ಶತ್ರುವನ್ನು ಸೋಲಿಸಲು ನೀನು ನನಗೆ ಸಹಾಯ ಮಾಡಿರುವೆ.
2 ಸಮುವೇಲನು 22 : 37 (ERVKN)
ನನ್ನ ಕಾಲುಗಳನ್ನೂ ಕೀಲುಗಳನ್ನೂ ಬಲಗೊಳಿಸು; ಆಗ ನಾನು ಎಡವದೆ ವೇಗವಾಗಿ ನಡೆಯಬಲ್ಲೆನು.
2 ಸಮುವೇಲನು 22 : 38 (ERVKN)
ನಾನು ನನ್ನ ಶತ್ರುಗಳನ್ನು ಅಟ್ಟಿಸಿಕೊಂಡು ಹೋದೆನು. ನಾನು ಅವರನ್ನು ನಾಶಗೊಳಿಸಿದೆನು! ನಾನು ನನ್ನ ಶತ್ರುಗಳನ್ನು ನಾಶಗೊಳಿಸುವ ತನಕ ಹಿಂದಿರುಗುವುದಿಲ್ಲ.
2 ಸಮುವೇಲನು 22 : 39 (ERVKN)
ನಾನು ನನ್ನ ಶತ್ರುಗಳನ್ನು ನಾಶಗೊಳಿಸಿದೆನು! ನಾನು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆನು.
ಅವರು ಮತ್ತೆ ಮೇಲೇಳುವುದಿಲ್ಲ. ಹೌದು, ನನ್ನ ಶತ್ರುಗಳು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
2 ಸಮುವೇಲನು 22 : 40 (ERVKN)
ದೇವರೇ, ನೀನು ನನ್ನನ್ನು ಯುದ್ಧಕ್ಕಾಗಿ ಬಲಪಡಿಸಿರುವೆ. ನನ್ನ ಶತ್ರುಗಳನ್ನು ನನಗೆ ಅಧೀನರಾಗುವಂತೆ ಮಾಡಿರುವೆ.
2 ಸಮುವೇಲನು 22 : 41 (ERVKN)
ನನ್ನ ಶತ್ರುಗಳು ಓಡಿಹೋಗಲು ನೀನೇ ಕಾರಣ. ಆದ್ದರಿಂದಲೇ ನನ್ನನ್ನು ದ್ವೇಷಿಸಿದ ಜನರನ್ನು ನಾನು ನಾಶ ಮಾಡಿದೆನು.
2 ಸಮುವೇಲನು 22 : 42 (ERVKN)
ನನ್ನ ಶತ್ರುಗಳು ಸಹಾಯಕ್ಕಾಗಿ ನೋಡಿದರು. ಆದರೆ ಅವರನ್ನು ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ.
ಅವರು ಯೆಹೋವನ ಕಡೆಗೂ ನೋಡಿದರು; ಆದರೆ ಆತನು ಅವರಿಗೆ ಉತ್ತರ ಕೊಡಲಿಲ್ಲ.
2 ಸಮುವೇಲನು 22 : 43 (ERVKN)
ನಾನು ನನ್ನ ಶತ್ರುಗಳನ್ನು ತುಂಡುತುಂಡಾಗಿ ಕತ್ತರಿಸಿಹಾಕಿದೆ.
ಅವರು ನೆಲದ ಮೇಲಿನ ಧೂಳಿನಂತಾದರು. ನನ್ನ ಶತ್ರುಗಳನ್ನು ರಸ್ತೆಯಲ್ಲಿನ ಮಣ್ಣಿನಂತಾಗುವವರೆಗೆ ತುಳಿದುಬಿಟ್ಟೆನು.
2 ಸಮುವೇಲನು 22 : 44 (ERVKN)
ಜನರು ನನ್ನ ವಿರುದ್ಧ ವಾದಿಸಿದಾಗ ನೀನು ನನ್ನನ್ನು ರಕ್ಷಿಸಿದೆ. ನೀನು ನನ್ನನ್ನು ಜನಾಂಗಗಳಿಗೆ ಅಧಿಪತಿಯನ್ನಾಗಿ ಮಾಡಿದೆ. ನಾನು ತಿಳಿಯದ ಜನರೂ ನನ್ನ ಸೇವೆಮಾಡುತ್ತಾರೆ!
2 ಸಮುವೇಲನು 22 : 45 (ERVKN)
ಅನ್ಯದೇಶದ ಜನರೂ ನನಗೆ ವಿಧೇಯರಾಗಿರುವರು! ಅವರು ನನ್ನ ಬಗ್ಗೆ ಕೇಳಿದಾಗ, ತಕ್ಷಣವೇ ನನಗೆ ವಿಧೇಯರಾಗುವರು! ಆ ಪರದೇಶಿಯರು ನನಗೆ ಭಯಪಡುವರು.
2 ಸಮುವೇಲನು 22 : 46 (ERVKN)
ಅನ್ಯದೇಶದ ಜನರು ಭಯಗೊಳ್ಳುವರು; ತಾವು ಅಡಗಿದ್ದ ಸ್ಥಳಗಳಿಂದ ನಡುಗುತ್ತಾ ಹೊರಬರುವರು.
2 ಸಮುವೇಲನು 22 : 47 (ERVKN)
ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಗೆ ಸ್ತೋತ್ರವಾಗಲಿ. ಯೆಹೋವನು ಮಹೋನ್ನತನು! ನನ್ನನ್ನು ರಕ್ಷಿಸುವ ಬಂಡೆಯಾದಾತನಿಗೆ ಸ್ತುತಿಯುಂಟಾಗಲಿ.
2 ಸಮುವೇಲನು 22 : 48 (ERVKN)
ನನ್ನ ಶತ್ರುಗಳನ್ನು ನನಗಾಗಿ ದಂಡಿಸುವ ದೇವರು ಆತನೇ. ಆತನು ಜನರನ್ನು ನನ್ನ ಅಧೀನತೆಗೆ ಒಳಪಡಿಸುವನು.
2 ಸಮುವೇಲನು 22 : 49 (ERVKN)
ನನ್ನ ಶತ್ರುಗಳಿಂದ ನನ್ನನ್ನು ಸ್ವತಂತ್ರನಾಗಿಸುವವನು ದೇವರೇ. ಹೌದು, ನೀನು ನನ್ನನ್ನು ನನ್ನ ಶತ್ರುಗಳಿಂದ ತಪ್ಪಿಸಿ ಮೇಲಕ್ಕೇರಿಸುವೆ. ನನ್ನನ್ನು ಹಿಂಸಿಸಬೇಕೆನ್ನುವ ಮನುಷ್ಯನಿಂದ ನೀನು ನನಗೆ ರಕ್ಷಣೆ ನೀಡುವೆ.
2 ಸಮುವೇಲನು 22 : 50 (ERVKN)
ಯೆಹೋವನೇ, ಈ ಕಾರಣದಿಂದಲೇ ನಾನು ಅನ್ಯ ಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಈ ಕಾರಣದಿಂದಲೇ ನಿನ್ನ ಹೆಸರಿನ ಮೇಲೆ ಹಾಡುಗಳನ್ನು ಹಾಡುವೆನು.
2 ಸಮುವೇಲನು 22 : 51 (ERVKN)
ಆತನು ತಾನು ನೇಮಿಸಿದ ರಾಜನಿಗೆ ಸಹಾಯಮಾಡಿ ಯುದ್ಧಗಳಲ್ಲಿ ಜಯ ದಯಪಾಲಿಸುವನು. ಆತನು ನನ್ನ ರಕ್ಷಣಾದುರ್ಗವಾಗಿದ್ದಾನೆ.
ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಪ್ರೀತಿಯನ್ನು ಮತ್ತು ದಯೆಯನ್ನು ತೋರುವನು. ದಾವೀದನಿಗೆ ಮತ್ತು ಅವನ ಸಂತತಿಯವರಿಗೆ ಆತನು ಎಂದೆಂದಿಗೂ ಕೃಪೆ ತೋರಿಸುವವನಾಗಿದ್ದಾನೆ.
❮
❯