2 ಸಮುವೇಲನು 5 : 1 (ERVKN)
ಇಸ್ರೇಲರು ದಾವೀದನನ್ನು ರಾಜನನ್ನಾಗಿ ಮಾಡುವರು ಆಗ ಇಸ್ರೇಲಿನ ಕುಲಗಳವರೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವೆಲ್ಲಾ ಒಂದೇ ಕುಲದವರಾಗಿದ್ದೇವೆ.
2 ಸಮುವೇಲನು 5 : 2 (ERVKN)
ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.
2 ಸಮುವೇಲನು 5 : 3 (ERVKN)
ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು.
2 ಸಮುವೇಲನು 5 : 4 (ERVKN)
ದಾವೀದನು ಆಳುವುದಕ್ಕೆ ಪ್ರಾರಂಭಿಸಿದಾಗ ಅವನಿಗೆ ಮೂವತ್ತು ವರ್ಷ ವಯಸ್ಸಾಗಿತ್ತು. ಅವನು ನಲವತ್ತು ವರ್ಷಗಳ ಕಾಲ ಆಳಿದನು.
2 ಸಮುವೇಲನು 5 : 5 (ERVKN)
ಅವನು ಏಳು ವರ್ಷ ಆರು ತಿಂಗಳ ಕಾಲ ಹೆಬ್ರೋನಿನಲ್ಲಿದ್ದು ಯೆಹೂದ್ಯರನ್ನು ಆಳಿದನು. ಅವನು ಮೂವತ್ತಮೂರು ವರ್ಷ ಜೆರುಸಲೇಮಿನಲ್ಲಿದ್ದು ಸಮಸ್ತ ಇಸ್ರೇಲನ್ನು ಮತ್ತು ಯೆಹೂದವನ್ನು ಆಳಿದನು.
2 ಸಮುವೇಲನು 5 : 6 (ERVKN)
ದಾವೀದನು ಜೆರುಸಲೇಮ್ ಪಟ್ಟಣವನ್ನು ಗೆಲ್ಲುವನು ದಾವೀದನು ಯೆಬೂಸಿಯರಿಗೆ ವಿರುದ್ಧವಾಗಿ ಜೆರುಸಲೇಮಿಗೆ ತನ್ನ ಜನರೊಂದಿಗೆ ಹೋದನು. (ಯೆಬೂಸಿಯರು ಆ ದೇಶದ ಮೂಲನಿವಾಸಿಗಳು.) ಯೆಬೂಸಿಯರು ದಾವೀದನಿಗೆ, “ನೀನು ನಮ್ಮ ನಗರದೊಳಕ್ಕೆ ಬರಲಾಗದು. *ನೀನು ನಮ್ಮ ನಗರದೊಳಕ್ಕೆ ಬರಲಾಗದು ಜೆರುಸಲೇಮ್ ನಗರವನ್ನು ಬೆಟ್ಟದ ಮೇಲೆ ಕಟ್ಟಿದ್ದರು. ಆ ನಗರದ ಸುತ್ತಲೂ ಎತ್ತರವಾದ ಗೋಡೆಗಳಿದ್ದುದರಿಂದ, ಅದನ್ನು ವಶಪಡಿಸಿಕೊಳ್ಳುವುದು ಕಠಿಣವಾಗಿತ್ತು. ಕುರುಡರು ಮತ್ತು ಕುಂಟರು ಸಹ ನಿನ್ನನ್ನು ತಡೆಯಬಲ್ಲರು” ಎಂದು ಹೇಳಿದರು. (ದಾವೀದನು ಅವರ ನಗರದೊಳಕ್ಕೆ ಪ್ರವೇಶಿಸಲು ಸಮರ್ಥನಲ್ಲವೆಂದು ಅವರು ಈ ರೀತಿ ಹೇಳಿದರು.
2 ಸಮುವೇಲನು 5 : 7 (ERVKN)
ಆದರೆ ದಾವೀದನು ಚೀಯೋನ್ ಕೋಟೆಯನ್ನು ವಶಪಡಿಸಿಕೊಂಡನು. ಈ ಕೋಟೆಗೆ ದಾವೀದ ನಗರವೆಂದು ಹೆಸರಾಯಿತು.)
2 ಸಮುವೇಲನು 5 : 8 (ERVKN)
ದಾವೀದನು ತನ್ನ ಜನರಿಗೆ ಅಂದು, “ನೀವು ಯೆಬೂಸಿಯರನ್ನು ಸೋಲಿಸಬೇಕೆಂದಿದ್ದರೆ ಜಲಮಾರ್ಗದ ಮೂಲಕ †ಜಲಮಾರ್ಗದ ಮೂಲಕ ಪುರಾತನ ನಗರವಾದ ಜೆರುಸಲೇಮ್ ನಗರದ ನೆಲದ ಒಳಗಡೆ ನಿರ್ಮಿಸಿದ್ದ ಒಂದು ಜಲಮಾರ್ಗ. ದಾವೀದನು ಮತ್ತು ಅವನ ಜನರು ನಗರಕ್ಕೆ ಈ ಮಾರ್ಗದಲ್ಲಿ ಹೋದರು. ಹೋಗಿ ಶತ್ರುಗಳಾದ ಕುಂಟರು ಮತ್ತು ಕುರುಡರನ್ನು ಎದುರಿಸಿ” ಎಂದು ಹೇಳಿದನು. ಆದ್ದರಿಂದಲೇ “ಕುರುಡರು ಮತ್ತು ಕುಂಟರು ಮನೆಯೊಳಕ್ಕೆ ‡ಮನೆಯೊಳಕ್ಕೆ ಹೀಗೆಂದರೆ: “ಮನೆ, ಅರಮನೆ ಅಥವಾ ದೇವಾಲಯ” ಎಂದು. ಬರಲಾಗದು” ಎಂಬ ನಾಣ್ಣುಡಿ ಉಂಟಾಯಿತು.
2 ಸಮುವೇಲನು 5 : 9 (ERVKN)
ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.
2 ಸಮುವೇಲನು 5 : 10 (ERVKN)
ಸರ್ವಶಕ್ತನಾದ ಯೆಹೋವನು ದಾವೀದನೊಂದಿಗೆ ಇದ್ದುದರಿಂದ ಅವನು ಬಲಶಾಲಿಯಾಗುತ್ತಲೇ ಇದ್ದನು.
2 ಸಮುವೇಲನು 5 : 11 (ERVKN)
ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.
2 ಸಮುವೇಲನು 5 : 12 (ERVKN)
ಯೆಹೋವನು ನಿಜವಾಗಿಯೂ ತನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದ್ದಾನೆಂಬುದನ್ನೂ ಆತನು ತನ್ನ ಜನರಾದ ಇಸ್ರೇಲರಿಗಾಗಿ ನನ್ನ ರಾಜ್ಯವನ್ನು ಸ್ಥಿರಪಡಿಸಿದ್ದಾನೆಂತಲೂ ದಾವೀದನು ಇದರ ಮೂಲಕ ತಿಳಿದುಕೊಂಡನು.
2 ಸಮುವೇಲನು 5 : 13 (ERVKN)
ದಾವೀದನು ಹೆಬ್ರೋನಿನಿಂದ ಜೆರುಸಲೇಮಿಗೆ ಹೋದನು. ದಾವೀದನಿಗೆ ಜೆರುಸಲೇಮಿನಲ್ಲಿ ಅನೇಕ ಪತ್ನಿಯರೂ ಉಪಪತ್ನಿಯರೂ ಇದ್ದರು. ಜೆರುಸಲೇಮಿನಲ್ಲಿ ದಾವೀದನಿಗೆ ಅನೇಕ ಮಕ್ಕಳು ಹುಟ್ಟಿದರು.
2 ಸಮುವೇಲನು 5 : 14 (ERVKN)
ಜೆರುಸಲೇಮಿನಲ್ಲಿ ದಾವೀದನಿಗೆ ಹುಟ್ಟಿದ ಗಂಡುಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,
2 ಸಮುವೇಲನು 5 : 15 (ERVKN)
ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,
2 ಸಮುವೇಲನು 5 : 16 (ERVKN)
ಎಲೀಷಾಮ, ಎಲ್ಯಾದ, ಎಲೀಫೆಲೆಟ್.
2 ಸಮುವೇಲನು 5 : 17 (ERVKN)
ದಾವೀದನು ಫಿಲಿಷ್ಟಿಯರ ವಿರುದ್ಧ ಯುದ್ಧಕ್ಕೆ ಹೋಗುವನು ಇಸ್ರೇಲರು ದಾವೀದನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆಂಬುದು ಫಿಲಿಷ್ಟಿಯರಿಗೆ ತಿಳಿದಾಗ, ಫಿಲಿಷ್ಟಿಯರೆಲ್ಲ ದಾವೀದನನ್ನು ಹಿಡಿಯಲು ಹಾಗೂ ಅವನನ್ನು ಕೊಲ್ಲಲು ಹೋದರು. ಆದರೆ ಈ ಸುದ್ದಿಯು ದಾವೀದನಿಗೆ ತಿಳಿಯಿತು. ಅವನು ಕೋಟೆಗೆ ಹೊರಟುಹೋದನು.
2 ಸಮುವೇಲನು 5 : 18 (ERVKN)
ಫಿಲಿಷ್ಟಿಯರು ಬಂದು ರೆಫಾಯೀಮ್ ಕಣಿವೆಯಲ್ಲಿ ಪಾಳೆಯವನ್ನು ಮಾಡಿದರು.
2 ಸಮುವೇಲನು 5 : 19 (ERVKN)
ದಾವೀದನು ಯೆಹೋವನಿಗೆ “ಫಿಲಿಷ್ಟಿಯರ ವಿರುದ್ಧ ಹೋರಾಡಲು ನಾನು ಹೋಗಬಹುದೇ? ಫಿಲಿಷ್ಟಿಯರನ್ನು ಸೋಲಿಸಲು ನೀನು ಸಹಾಯ ಮಾಡುವೆಯಾ?” ಎಂದು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು, ಫಿಲಿಷ್ಟಿಯರನ್ನು ಸೋಲಿಸಲು ನಾನು ಖಂಡಿತವಾಗಿಯೂ ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.
2 ಸಮುವೇಲನು 5 : 20 (ERVKN)
ಆಗ ದಾವೀದನು ಬಾಳ್‌ಪೆರಾಚೀಮ್‌ಗೆ ಬಂದನು. ಅಲ್ಲಿ ಅವನು ಫಿಲಿಷ್ಟಿಯರನ್ನು ಸೋಲಿಸಿದನು. ದಾವೀದನು, “ಕಟ್ಟೆಯೊಡೆದ ಪ್ರವಾಹವು ನುಗ್ಗಿ ನಾಶಮಾಡುವಂತೆ ಯೆಹೋವನು ನನ್ನ ಶತ್ರುಗಳನ್ನು ನನ್ನ ಎದುರಿನಲ್ಲೇ ನಾಶಪಡಿಸಿದನು” ಎಂದನು. ಆದ್ದರಿಂದ ಅವನು ಆ ಸ್ಥಳಕ್ಕೆ “ಬಾಳ್‌ಪೆರಾಚೀಮ್” ಎಂದು ಹೆಸರಿಟ್ಟನು.
2 ಸಮುವೇಲನು 5 : 21 (ERVKN)
ಫಿಲಿಷ್ಟಿಯರು ತಮ್ಮ ದೇವರ ವಿಗ್ರಹಗಳನ್ನು ಬಾಳ್‌ಪೆರಾಚೀಮ್‌ನಲ್ಲಿಯೇ ಬಿಟ್ಟುಹೋದರು. ದಾವೀದನು ಮತ್ತು ಅವನ ಜನರು ಈ ವಿಗ್ರಹಗಳನ್ನು ತೆಗೆದುಕೊಂಡು ಹೋದರು.
2 ಸಮುವೇಲನು 5 : 22 (ERVKN)
ಫಿಲಿಷ್ಟಿಯರು ಮತ್ತೆ ರೆಫಾಯೀಮ್ ಕಣಿವೆಗೆ ಬಂದು ಪಾಳೆಯವನ್ನು ಮಾಡಿದರು.
2 ಸಮುವೇಲನು 5 : 23 (ERVKN)
ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಈ ಸಮಯದಲ್ಲಿ ಯೆಹೋವನು ದಾವೀದನಿಗೆ, “ಅಲ್ಲಿಗೆ ಹೋಗಬೇಡ. ಅವರ ಸೈನ್ಯವನ್ನು ಸುತ್ತಿಕೊಂಡು ಹಿಂದಿನಿಂದ ಅವರನ್ನು ಸಮೀಪಿಸು. ಬಾಲ್ಯಾಮ್ ಮರಗಳಿರುವ ಮತ್ತೊಂದು ಕಡೆಯಿಂದ ಅವರ ಮೇಲೆ ಆಕ್ರಮಣ ಮಾಡು.
2 ಸಮುವೇಲನು 5 : 24 (ERVKN)
ಮರಗಳ ತುದಿಯಲ್ಲಿರುವ ನಿಮಗೆ ಫಿಲಿಷ್ಟಿಯರು ಯುದ್ಧಕ್ಕೆ ಹೊರಡುವುದು ಕೇಳಿಸುತ್ತದೆ. ಆಗ ನೀನು ತ್ವರಿತಗತಿಯಿಂದ ಕಾರ್ಯನಿರತನಾಗು. ಆಗ ಯೆಹೋವನಾದ ನಾನು ನಿನಗಾಗಿ ಅದೇ ಸಮಯದಲ್ಲಿ ಫಿಲಿಷ್ಟಿಯರನ್ನು ಸೋಲಿಸಲು ನಿಮ್ಮ ಮುಂದೆ ನಾನು ಹೋಗುತ್ತೇನೆ” ಎಂದು ಹೇಳಿದನು.
2 ಸಮುವೇಲನು 5 : 25 (ERVKN)
ಯೆಹೋವನು ಆಜ್ಞಾಪಿಸಿದಂತೆಯೇ ದಾವೀದನು ಮಾಡಿದನು. ಅವನು ಫಿಲಿಷ್ಟಿಯರನ್ನು ಸೋಲಿಸಿ ಗೆಬದಿಂದ ಗೆಜೆರಿನವರೆಗೆ ಅವರನ್ನು ಅಟ್ಟಿಸಿಕೊಂಡು ಹೋಗಿ ದಾರಿಯುದ್ದಕ್ಕೂ ಅವರನ್ನು ಕೊಂದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25